Manglore
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ
—
ಮಂಗಳೂರು :ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ ಆರ್.ಉಚ್ಚಿಲ್ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಶನಿವಾರ ಸಂಘದ ಕಛೇರಿಯಲ್ಲಿ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪುನರಾಯ್ಕೆ ಗೊಂಡರೆ, ರಾಘವ ಆರ್. ಉಚ್ಚಿಲ್ ಮೊದಲ ಬಾರಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣೆಯನ್ನು ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ನಡೆಸಿಕೊಟ್ಟರು.
ಜಗದೀಶ್ಚಂದ್ರ ಅಂಚನ್ ಕಳೆದ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ , 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ , ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಕಳೆದ ಹತ್ತು ವರ್ಷಗಳಿಂದ ನಿರ್ದೇಶಕರಾಗಿದ್ದು , ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
==
ಡಾ.ಎಂಎನ್ ಆರ್ ಅವರಿಗೆ ಕೃತಜ್ಞತೆ ಸಮರ್ಪಣೆ : ಸುಮಾರು 93 ವರ್ಷಗಳ ಇತಿಹಾಸವನ್ನು ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ನೌಕರರ ಏಕೈಕ ಸಹಕಾರಿ ಸಂಸ್ಥೆ ‘ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಇಂದು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮುಖ್ಯ ಕಾರಣಕರ್ತರಾಗಿದ್ದಾರೆ. ಅವರ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನದಿಂದಲೇ ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್ ನಲ್ಲಿ ಮೂರು ಅಂತಸ್ತಿನ ಸುಸಜ್ಜಿತ ಸ್ವಂತ ಕಟ್ಟಡವನ್ನು ಹೊಂದಲು ಸಾಧ್ಯವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಕೂಡ ಅವರ ಮಾರ್ಗದರ್ಶನದಲ್ಲೇ ನಡೆದು 15 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಇದೀಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಕೂಡ ಅವಿರೋಧವಾಗಿ ಆಯ್ಕೆಗೊಂಡಿದ್ದು, ಈ ಸಂದರ್ಭದಲ್ಲಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ನೂತನ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ಎಸ್.ಜಗದೀಶ್ಚಂದ್ರ ಅಂಚನ್ ಕೃತಜ್ಞತೆಯನ್ನು ಸಮರ್ಪಿಸಿದರು.
==
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ. ಕಾರ್ಕಳ, ವಿಶ್ವೇಶ್ವರ ಐತಾಳ್ ಎಸ್. ಕುಂದಾಪುರ, ಜಯಪ್ರಕಾಶ್ ರೈ ಸಿ. ಪುತ್ತೂರು, ವಿಶ್ವನಾಥ್ ಕೆ.ಟಿ. ಸುಳ್ಯ, ವಿಶ್ವನಾಥ್ ಎನ್. ಅಮೀನ್ ಉಡುಪಿ, ಶಿವಾನಂದ ಪಿ. ಬಂಟ್ವಾಳ, ಗಿರಿಧರ್ ಕೆ. ಬೆಳ್ತಂಗಡಿ, ಚಂದ್ರಕಲಾ ಕೆ. ಮಂಗಳೂರು, ಗೀತಾಕ್ಷಿ ಮಂಗಳೂರು, ಕಿರಣ್ ಕುಮಾರ್ ಶೆಟ್ಟಿ ಮಂಗಳೂರು, ನಿಶಿತಾ ಜಯರಾಮ್ ಮಂಗಳೂರು, ಮೋಹನ್ ಎಸ್. ಮಂಗಳೂರು, ಪ್ರೇಮರಾಜ್ ಭಂಡಾರಿ ಮಂಗಳೂರು ಹಾಗೂ ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.
Manglore
ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆಯೆಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಸುಳ್ಯ, ತೋಡಿಕಾನ ಗ್ರಾಮದ ಅಂಡ್ಯಡ್ಕ ನಿವಾಸಿ ರಾಜ(64) ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ.
ಪತಿ – ಪತ್ನಿ ಇಬ್ಬರೂ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅಲೆಕ್ಕಿ ಎಂಬಲ್ಲಿನ ಧರ್ಣಪ್ಪ ಗೌಡರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಅವರ ತೋಟದ ಮನೆಯಲ್ಲಿ ದಂಪತಿ ವಾಸ್ತವ್ಯವಿದ್ದರು. ಪತಿ ರಾಜ ಮದ್ಯವ್ಯಸನಿಯಾಗಿದ್ದು, ಸದಾ ಪತ್ನಿ ಕಮಲಾರೊಂದಿಗೆ ಜಗಳವಾಡುತ್ತಿದ್ದ. 2022ರ ಸೆಪ್ಟೆಂಬರ್ 6ರಂದು ರಾಜ ಪತ್ನಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದಿದ್ದಾನೆ. ರಾತ್ರಿ 8ಗಂಟೆ ರಾಜ ಕೋಪದಿಂದ ಪತ್ನಿಯ ಕುತ್ತಿಗೆ ಹಿಡಿದಿದ್ದಾನೆ. ಆಗ ಆಕೆ ಕೆಳಕ್ಕೆ ನೆಲಕ್ಕೆ ಬಿದ್ದಿದ್ದು, ಈ ವೇಳೆ ಆತ ಕಮಲಾರವರ ತಲೆಯನ್ನು ನೆಲಕ್ಕೆ ಜೋರಾಗಿ ಗುದ್ದಿ ಬಳಿಕ ತನ್ನ ಲುಂಗಿಯನ್ನು ಹರಿದು ಹಗ್ಗದ ರೀತಿ ಮಾಡಿ ಅದರಿಂದ ಕಮಲಾರವರ ಕುತ್ತಿಗೆಗೆ ಬಿಗಿದಿದ್ದಾನೆ. ಪರಿಣಾಮ ಅವರು ಮೃತಪಟ್ಟಿದ್ದಾರೆ.
ಬಳಿಕ ಆತ ಕಮಲಾರವರು ಆತ್ಮಹತ್ಯೆ ಮಾಡಿಕೊಂಡಿರುವ ರೀತಿ ಸೃಷ್ಟಿಸಿ ಜಾಗದ ಮಾಲಕ ಧರ್ಣಪ್ಪ ಗೌಡರ ಪುತ್ರ ಪ್ರಮೋದ್‌ರವರಿಗೆ ತಿಳಿಸಿದ್ದಾನೆ. ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿತ್ರು. ಆದರೆ ಮೃತರ ಶವಪರೀಕ್ಷೆ ನಡೆಸಿದಾಗ ಆತ್ಮಹತ್ಯೆಯಲ್ಲ ಕೊಲೆಯೆಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಬಗ್ಗೆ ಆರೋಪಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ಪ್ರಾಥಮಿಕ ತನಿಖೆಯನ್ನು ಅಂದಿನ ಪೊಲೀಸ್ ಉಪ ನಿರೀಕ್ಷಕ ನಂದ ಕುಮಾರ್ ಎಮ್.ಎಮ್ ನಡೆಸಿದ್ದರು. ಪೂರ್ಣ ಪ್ರಮಾಣದ ತನಿಖೆಯನ್ನು ಬಳಿಕದ ಬೆಳ್ತಂಗಡಿ ಪೊಲೀಸ್ ಠಾಣೆಯ ನಿರೀಕ್ಷಕ ಶಿವ ಕುಮಾರ್ ಬಿ.ರವರು ಪೂರ್ಣಗೊಳಿಸಿ ಆರೋಪಿ ವಿರುದ್ಧ ದೋಷಾರೋಪಣೆ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಅಭಿಯೋಜನೆ ಪರ ಒಟ್ಟು 17ಸಾಕ್ಷಿದಾರರನ್ನು ವಿಚಾರಿಸಲಾಗಿರುತ್ತದೆ. ಈ ಪ್ರಕರಣದ ಸಾಕ್ಷ್ಯ, ದಾಖಲೆಗಳು ಹಾಗೂ ಪೂರಕ ಸಾಕ್ಷ್ಯವನ್ನು ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿಯ ವಿರುದ್ಧ ಅಪರಾಧವು ಸಾಬೀತಾಗಿದೆ ಎಂದು ತೀರ್ಮಾನಿಸಿ ನ್ಯಾಯಾಧೀಶೆ ಸಂಧ್ಯಾ ಎಸ್. ರವರು ಆರೋಪಿಗೆ ಐಪಿಸಿ ಕಲಂ: 302ಕ್ಕೆ ಜೀವಾವಧಿ ಶಿಕ್ಷೆ ಮತ್ತು 15,000 ರೂ. ದಂಡ ವಿಧಿಸಿದ್ದಾರೆ. ಮಾನ್ಯ ನ್ಯಾಯಾಲಯವು ಮೃತರ ಮೂರು ಮಕ್ಕಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರಕ್ಕೆ ಆದೇಶಿಸಿದ್ದಾರೆ.
Manglore
28 ಫಲಾನುಭವಿಗಳಿಗೆ ಅಗತ್ಯ ಸಲಕರಣೆ ವಿತರಿಸಿದ ಮೇಯರ್ ಮನೋಜ್ ಕುಮಾರ್

ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಶೇ 24.10, ಶೇ. 7.25 ಮತ್ತು ಶೇ. 5 ನಿಧಿಯಡಿ ಮಹಾನಗರಪಾಲಿಕೆ ವ್ಯಾಪ್ತಿಯ ಸುಮಾರು 28 ಫಲಾನುಭವಿಗಳಿಗೆ ಮೇಯರ್ ಮನೋಜ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ರೂ 10,13,190/- ಮೊತ್ತದ ಚೆಕ್ ಮತ್ತು ಸಲಕರಣೆಗಳನ್ನು ವಿತರಿಸಲಾಯಿತು.
ಪಾಲಿಕೆಯ ಮೇಯರ್ ರವರ ಕೊಠಡಿಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಶೇ 24.10 ಯೋಜನೆಯಡಿ ಬರುವ ಪರಿಶಿಷ್ಟ ಜಾತಿ ಮತ್ತು ಪಂಗಡದ 5 ಫಲಾನುಭವಿಗಳಿಗೆ ತಾಳಿಭಾಗ್ಯಕ್ಕೆ ಸಹಾಯಧನ, ಶೇ 7.25 ರ ನಿಧಿಯಡಿ ಹಿಂದುಳಿದ ವಗ೯ದ 12 ಫಲಾನುಭವಿಗಳಿಗೆ ಶಸ್ತ್ರಾ ಚಿಕಿತ್ಸ ವೆಚ್ಚ, ಶೌಚಾಲಯ ವೆಚ್ಚ, ನಳ್ಳಿ ನೀರಿನ ಸೌಲಭ್ಯ ಮತ್ತು ಪಕ್ಕಾ ಮನೆ ಹಾಗೆಯೆ ಶೇ 5% ರ ನಿಧಿಯಡಿ ಅಂಗವಿಕಲರಿಗೆ ಪಕ್ಕಾ ಮನೆ, ಕೃತಕ ಕಾಲು, ಶ್ರವಣ ಸಾಧನ, ವೀಲ್ ಚೇರ್, ವಾಕರ್, ವಾಕಿಂಗ್ ಸ್ಟಿಕ್ ಸಲಕರಣೆಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಉಪಮೇಯರ್ ಭಾನುಮತಿ, ಅಧ್ಯಕ್ಷರಾದ ಸುಮಿತ್ರ ಕರಿಯ, ಸರಿತಾ ಶಶಿಧರ್, ವೀಣಾ ಮಂಗಳ, ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಸದಸ್ಯರಾದ ವರುಣ್ ಚೌಟ, ನಯನ ಆರ್ ಕೋಟ್ಯಾನ್, ಅಬ್ದುಲ್ ಲತೀಫ್, ಕಾವ್ಯ ನಟರಾಜ್ ಆಳ್ವ, ಪಾಲಿಕೆಯ ಸಮುದಾಯ ಸಂಘಟನಾಧಿಕಾರಿ ಮಾಲಿನಿ ರೋಡ್ರಿಗಸ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
Manglore
ಪ್ರಯಾಗ್ ರಾಜ್: ವಿಧ್ಯಾದೀಶ ತೀರ್ಥ ಸ್ವಾಮಿ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ.

ಮಂಗಳೂರು: ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ಶ್ರೀ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಕೇಂದ್ರೀಯ ಸಮಿತಿಯ ತಂಡವನ್ನು ಪೂಜ್ಯ ಸ್ವಾಮೀಜಿಯವರ ಶಿಷ್ಯ ವೃಂದದವರು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಊಟ ಫಲಹಾರಗಳನ್ನು ನೀಡಿ ಸತ್ಕರಿಸಿದರು. ಹಾಗೂ ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ
ನೇತೃತ್ವದಲ್ಲಿ ನೆರವೇರಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ ಸಿಎ ಸುರೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ತಂಡದಲ್ಲಿದ್ದರು.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports9 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan6 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ