Connect with us

Mysore

ಅಂಬೇಡ್ಕರ್ ಪ್ರತಿಮೆಗೆ ಅವಮಾನ, ಖಂಡಿಸಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ

Published

on

ಸಾಲಿಗ್ರಾಮ ಪಟ್ಟಣದ ತಾಲೂಕು ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕಳ್ಳಿಮುದ್ದನಹಳ್ಳಿ ಚಂದ್ರು ಮತ್ತು  ಎಸ್ ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂಠಿ ಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸಿ, ತಾಲೂಕು  ಕಚೇರಿ ಶಿರಸ್ಡೆದಾರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಸಂಚಾಲಕ  ಚಂದ್ರು ಮಾತನಾಡಿ ಕಲ್ಬುರ್ಗಿಯ ಕೋಟನೂರು ಮಠದ ಹತ್ತಿರವಿರುವ  ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳಿಗೆ  ಜೀವಾವಧಿ ಶಿಕ್ಷೆ ನೀಡಬೇಕು. ಪದೇ ಪದೇ ಅವಮಾನಗಳು, ದೌರ್ಜನ್ಯ ಗಳು, ದಾಳಿಗಳು ನಿರಂತರವಾಗಿ ನಡೆಯುತ್ತಲೇ ಬಂದಿವೆ. ಸರ್ಕಾರ  ಯಾವುದೇ ರೀತಿಯಲ್ಲೂ  ಮೃದು ದೋರಣೆ  ತಾಳದೆ ಇಂತಹ ದುಷ್ಟರ್ಮಿ ಗಳಿಗೆ  ಕಟ್ಟು ನಿಟ್ಟಿನ ಕ್ರಮವಹಿಸಿ ಶಿಕ್ಷೆ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದರು

ಎಸ್ ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂಠಿ ಕುಮಾರ್ ಮಾತನಾಡಿ ಈ ದೇಶಕ್ಕೆ ಅತ್ಯದ್ಭುತವಾದ ಸಂವಿಧಾ ನವನ್ನು ಸಮರ್ಪಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಯನ್ನು ಅಪಮಾನಗೊಳಿಸುವುದರ ಮುಖಾಂತರ ತಮ್ಮ ವಿಕೃತಿ ಮೆರೆದಿರುವುದನ್ನು ಖಂಡಿಸುತ್ತೇವೆ, ಇಡೀ ವಿಶ್ವವೇ ಮೆಚ್ಚುವಂತಹ ಇಂತಹ ನಾಯಕರ ಪ್ರತಿಮೆಗೆ ಅವಮಾನ ಮಾಡಿರುತ್ತಾರೆ. ಇಂತಹ ಕಿಡಿಗೇಡಿಗಳಿಗೆ, ಯಾವುದೇ ಕ್ಷಮೆಗೆ ಅವಕಾಶ ವಾಗದೆ,  ಇವರಿಗೆ ಜೀವಾವಧಿ ಶಿಕ್ಷೆಯಾಗುವಂತೆ ಸರ್ಕಾರ ಕ್ರಮ ಕೈ ಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.

ದ ಸಂ ಸ  ಜಿಲ್ಲಾ ಸಮಿತಿ ಸದಸ್ಯ ಲಕ್ಕಿಕುಪ್ಪೆ ರಮೇಶ್, ಪದಾಧಿಕಾರಿಗಳಾದ ಸೀಗಾವಳು ಸುಧಾಕರ್, ಎಲೆಮುದ್ದನ ಹಳ್ಳಿ ಪ್ರಭಾಕರ್, ಮಹೇಶ್,  ಬಿ ಎಲ್ ಗುರು, ಗಾಯನಹಳ್ಳಿ ಶಂಕರ್, ಕರ್ಪೂರವಳ್ಳಿ ಸ್ವಾಮಿ, ಲಕ್ಷ್ಮೀಪುರ ಮಾಂತೇಶ, ಕುಪ್ಪಳ್ಳಿ ಪುರುಷೋತ್ತಮ್, ಮನುಗನಹಳ್ಳಿ ನಾಗರಾಜು, ದೊಡ್ಡಕೊಪ್ಪಲು ಕಾಂತರಾಜ್, ಪಶುಪತಿ ಸೋಮಶೇಖರ್, ಹರದನಹಳ್ಳಿ ಯೋಗೀಶ್, ಅಂಕನಲ್ಲಿ ಸುನೀಲ್, ಸಾಮಾಜಿಕ ಕಾರ್ಯಕರ್ತ ಭೇರ್ಯ ಡಿ. ಕೃಷ್ಣ, ಹಳೆಯೂರು ಸತೀಶ್, ಹೊನ್ನೇನಹಳ್ಳಿ ಜವರಯ್ಯ, ಫಿಶ್ ಶಿವು ಇನ್ನಿತರರು ಇದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mysore

ಬ್ಯಾಳಾರು ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನಾಚರಣೆ

Published

on

ವರದಿ: ಮಹದೇವಸ್ವಾಮಿ ಪಟೇಲ್

ನಂಜನಗೂಡು: ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಲಾಗುತ್ತದೆ ಇದನ್ನು ತಡೆಗಟ್ಟಲು ಸಂಘಟನೆ ಬಹು ಮುಖ್ಯ ಪಾತ್ರವಹಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್ ಹೇಳಿದರು.

ನಂಜನಗೂಡು ತಾಲೂಕಿನ ಬ್ಯಾಳಾರು ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇವರ ವತಿಯಿಂದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ದಲಿತರ ಬೀದಿಗಳಲ್ಲಿ ಹಬ್ಬ ಹರಿ ದಿನಗಳು, ಜಾತ್ರೆಗಳು ಹೆಚ್ಚಾಗಿ ನಡೆಯುತ್ತಿವೆ. ಇದರಿಂದ ಕೋಮುವಾದ ಮನೆ ಮನಗಳಿಗೆ ಹೋಗುತ್ತಿದೆ. ಬಾಬಾ ಸಾಹೇಬರು ಹೇಳಿರುವ ಹಾಗೆ ನಮ್ಮ ಮಕ್ಕಳಿಗೆ ಶಿಕ್ಷಣ ನೀಡಿ, ವೈಚಾರಿಕ ಮನೋಭಾವನೆಯನ್ನು ಬೆಳೆಸಬೇಕು. ಆದರೆ ಮೂಢನಂಬಿಕೆ ಕಡೆ ನಾವು ಸಾಗುತ್ತಿದ್ದೇವೆ ಎಂದರು.

ಅಂಬೇಡ್ಕರ್ ಅವರಿಗೆ ನಾವು ದ್ರೋಹ ಮಾಡುತ್ತಿದ್ದೇವೆ. ನಾವು ಇಂದು ಬದುಕುತ್ತಿರುವ ಹೈಟೆಕ್ ಜೀವನ ಅಂಬೇಡ್ಕರ್ ಅವರ ಶ್ರಮ ಮತ್ತು ಅವರ ಮಕ್ಕಳ ಸಮಾಧಿಗಳ ಮೇಲೆ ನಾವು ಸುಂದರವಾದ ಬದುಕನ್ನು ಕಟ್ಟಿಕೊಂಡಿದ್ದೇವೆ ಹೊರತು ನಮ್ಮ ಶ್ರಮದಿಂದಲ್ಲ. ಅಂಬೇಡ್ಕರ್ ರವರ ಋಣದಲ್ಲಿ ಪ್ರತಿಯೊಂದು ಸಮಾಜವು ಬದುಕುತ್ತಿದೆ. ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆಯುತ್ತಿದ್ದರು ಶೋಷಿತರಿಗೆ ಉದ್ಯೋಗ, ಶಿಕ್ಷಣ ಗುಣಮಟ್ಟ ಸುಧಾರಣೆ ಕಂಡಿಲ್ಲ. ಈ ದೇಶದ ಸಂವಿಧಾನವನ್ನು ನಾಶ ಮಾಡುವ ಹುನ್ನಾರ ನಡೆಯುತ್ತಿದೆ. ಮೂರ್ತಿಗಳಿಂದ ಅಂಬೇಡ್ಕರ್ ಅವರು ಜೀವಂತವಾಗಿದ್ದಾರೆ. ನಮಗೆ ಅವರು ಸ್ಪೂರ್ತಿಯಾಗಬೇಕು ಎಂದು ತಿಳಿಸಿದರು.

ನಂತರ ದಸಂಸ ತಾಲ್ಲೂಕು ಸಂಚಾಲಕ ಗಟ್ಟವಾಡಿ ಮಹೇಶ್ ಮಾತನಾಡಿ, ಅಂಬೇಡ್ಕರ್ ಅವರ ಹೆಸರು ಹೇಳುವುದೇ ರೋಮಾಂಚನ ಉಂಟು ಮಾಡುತ್ತದೆ. ಸಮಾನತೆ ದೃಷ್ಟಿಯಲ್ಲಿ ಸಂವಿಧಾನ ರಚಿಸಿದ ಮಹಾನ್ ಚೇತನ. ನಾವೆಲ್ಲರೂ ಜೀವನದಲ್ಲಿ ಅವರ ಚಿಂತನೆ ಅಳವಡಿಸಿಕೊಳ್ಳಬೇಕಿದೆ.ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು. ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದು ಹೇಳಿದರು.


ಇನ್ನೂ ದಸಂಸ ಅಂಬೇಡ್ಕರ್ ವಾದ ಸಂಘಟನೆಗೆ ನೊಂದಣಿ ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್, ತಾಲ್ಲೂಕು ಸಂಚಾಲಕ ಗಟ್ಟವಾಡಿ ಮಹೇಶ್, ಉಪವಿಭಾಗೀಯ ಸಂಚಾಲಕ ಸಿದ್ದರಾಜು, ಕ್ರಾಂತಿಕಾರಿ ಹೋರಾಟಗಾರ ಮೂಡಹಳ್ಳಿ ಪ್ರಸಾದ್, ಮಲ್ಲಹಳ್ಳಿ ಆದರ್ಶ್, ಬಸವಟ್ಟಿಗೆ ಕೃಷ್ಣಮೂರ್ತಿ, ಹೂವಯ್ಯ, ಸುರೇಶ್, ಬ್ಯಾಳಾರು ಆನಂದ್, ಅನಿಲ್, ನಾರಾಯಣ ಸ್ವಾಮಿ, ಬಸವರಾಜು, ಶಾಂತಮ್ಮ, ಕಾವೇರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading

Mysore

ಅದ್ದೂರಿಯಾಗಿ ಜರುಗಿದ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ತೆಪ್ಪೋತ್ಸವ

Published

on

ನಂಜನಗೂಡು: ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಡಿ. 4 ರಂದು ಗುರುವಾರ ನಡೆದ ಚಿಕ್ಕ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಶನಿವಾರ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ತೆಪ್ಪೋತ್ಸವವು ಸಂಜೆ ಕಪಿಲಾ ನದಿಯಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ದಾ ಭಕ್ತಿಯಿಂದ ನಡೆಯಿತು.

ಬಣ್ಣ ಬಣ್ಣದ ಹೂವು ಹಾಗೂ ಚಿನ್ನ ವಜ್ರಾಭರಣಗಳಿಂದ ಅಲಂಕೃತಗೊಂಡ ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಕಪಿಲಾ ನದಿ ತೀರದ ಸ್ನಾನ ಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬಳಿಕ ಮಂಗಳವಾದ್ಯಗಳೊಂದಿಗೆ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ತೇಲುವ ದೇವಾಲಯದ ಮಾದರಿಯಲ್ಲಿ ನಿರ್ಮಿಸಲಾದ ಯಾಂತ್ರಿಕ ದೋಣಿಯಲ್ಲಿ ಕೂರಿಸಿ ತೆಪ್ಪೋತ್ಸವ ನಡೆಸಲಾಯಿತು.

ಕಪಿಲಾ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಚಲಿಸುವ ಮೂಲಕ ಭಕ್ತರಿಗೆ ದರ್ಶನ ನೀಡಿ ಭಕ್ತರ ಮನಸೂರೆಗೊಂಡಿತು. ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ಕಾರ್ಯಗಳು ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರ ಆಚಾರ್ಯತ್ವದಲ್ಲಿ ನಡೆಯಿತು.

ನಂಜನಗೂಡು ನಗರವು ಸೇರಿದಂತೆ ವಿವಿಧ ಕಡೆಯಿಂದ ಬಂದ ಸಾವಿರಾರು ಭಕ್ತರು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ತಮ್ಮ ಭಕ್ತಿ ನಮನ ಸಲ್ಲಿಸಿದರು.

ನಂತರ ತಪೋತ್ಸವದಿಂದ ಹೊರ ತಂದ ಶ್ರೀ ಅವರ ಉತ್ಸವ ಮೂರ್ತಿಯನ್ನು ಸಣ್ಣ ರಥದಲ್ಲಿ ಕೂರಿಸಿ ಪಟ್ಟಣದ ರಥ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸೇರಿದಂತೆ ದೇವಾಲಯದ ಅರ್ಚಕ ವೃಂದದವರು ಉಪಸ್ಥಿತರಿದ್ದರು.

Continue Reading

Mysore

ಕಳಲೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

Published

on

ವರದಿ: ಮಹದೇವಸ್ವಾಮಿ ಪಟೇಲ್

ನಂಜನಗೂಡು:  ತಾಲೂಕಿನ ಕಳಲೆ ಗ್ರಾಮದಲ್ಲಿ 75 ಲಕ್ಷ  ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗ್ರಾಮ ಪಂಚಾಯತಿ ಕಾರ್ಯಾಲಯವನ್ನು ಇಂದು ಶಾಸಕ ದರ್ಶನ್ ಧ್ರುವನಾರಾಯಣ್ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ದಾರೆ.

ನಂತರ ಶಾಸಕರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಮೊದಲ ಬಾರಿಗೆ ಕ್ಷೇತ್ರಕ್ಕೆ ಬಂದಾಗ ಕಳಲೆ ಗ್ರಾಮದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ಗ್ರಾಮದ ಅಭಿವೃದ್ಧಿಗೆ ಎರಡು ಕೋಟಿ ರೂ. ಅನುದಾನವನ್ನು ನೀಡಿದ್ದರು.

ಈ ಗ್ರಾಮದಲ್ಲಿ ಹತ್ತು ಸಾವಿರ ಜನರು ವಾಸ ಇದ್ದೀರಾ. ಮೂಲಸೌಕರ್ಗಳನ್ನು ಆಗಬೇಕಾಗಿರುವುದನ್ನು ತಿಳಿಸಿದ್ದೀರಾ , ಹಂತ ಹಂತವಾಗಿ ಕೆಲಸಗಳನ್ನು ಮಾಡುತ್ತೇನೆ ಸಹಕಾರ ಕೊಡಿ ಅಂತ ತಿಳಿಸಿದರು.

ಗ್ರಾಮದಲ್ಲಿ ಗರಡಿ ಮನೆ ಪೂಜೆಯಾಗಿ ಕೆಲಸ ಪ್ರಾರಂಭ ಆಗಿಲ್ಲ ಅಂತ ತಿಳಿಸಿದ್ದೀರಾ, ಈಗಾಗಲೇ ಅಧ್ಯಕ್ಷರು ನನ್ನ ಬಳಿ ಮಾತನಾಡಿ ಗ್ರಾಮದ ಯಜಮಾನರು ಒಪ್ಪುತ್ತಿಲ್ಲ ಆದ್ದರಿಂದ ಲೇಟಾಗಿದೆ ಅಂತ ತಿಳಿಸಿದ್ರು, ಅಧ್ಯಕ್ಷರು ಒಂದು ವಾರ ಗಡುವು ಸಮಯ ತೆಗೆದುಕೊಂಡಿದ್ದಾರೆ. ಒಂದು ವಾರ ನಂತರ ಕೆಲಸ ಪ್ರಾರಂಭವಾಗಲಿಲ್ಲ ಅಂದರೆ ನನಗೆ ಫೋನ್ ಮಾಡಿ ಎಂದು ಕ್ರೀಡಾ ಪೈಲ್ವಾನ್ಗಳಿಗೆ ಕಿವಿ ಮಾತು ಹೇಳಿದರು.

ಗ್ರಾಮದಲ್ಲಿ ದೇವಸ್ಥಾನದ ಅಭಿವೃದ್ಧಿ, ಮತ್ತು ರಸ್ತೆ ಅಭಿವೃದ್ಧಿಗಳು, ವೈದ್ಯರ ಸಮಸ್ಯೆ , ಇತರೆ ಮೂಲ ಸೌಕರ್ಸೌಯ ಲಭ್ಯಗಳ ಬಗ್ಗೆ ತಿಳಿಸಿದ್ದೀರಾ. ಇವೆಲ್ಲ ಕೆಲಸಗಳನ್ನು ಮಾಡಿಸಿಕೊಡುತ್ತೇನೆ ಸಹಕಾರ ಸಮಯ ಕೊಡಿ ಎಂದರು.

ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಕ್ಷೇತ್ರಕ್ಕೆ 50 ಕೋಟಿ ನೀಡುತ್ತಾರೆ. ನಿಮ್ಮ ಗ್ರಾಮಕ್ಕೂ ಅನುದಾನ ನೀಡಿ ಹಂತ ಹಂತವಾಗಿ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಕಳಲೆ ಗ್ರಾಮ ಒಂದು ಇತಿಹಾಸ ಇದೆ. ಶ್ರೀಕಂಠೇಶ್ವರ ಸ್ವಾಮಿಯ ದೇವಸ್ಥಾನಕ್ಕಿಂತ ಮುಂಚೆ ಕಳಲೆ ಗ್ರಾಮದಲ್ಲಿ ಚೋಳರ ಕಾಲದಲ್ಲಿ ದೇವಸ್ಥಾನ ಸ್ಥಾಪನೆಯಾಗಿದ್ದು, ಕಡಲೆಪುರಿ, ಮತ್ತು ಹಳೆಯ ಹೆಸರು ವೇಣುಪುರಿ ಎಂದು ಕರೆಯುತ್ತಿದ್ದರು. ಈ ಗ್ರಾಮದಲ್ಲಿ 19 ಸಮುದಾಯದ ಜನಾಂಗ ಸಮರಸ್ಯದಿಂದ ಇದ್ದಾರೆ. ಈ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಎರಡು ಕೋಟಿ ಅನುದಾನವನ್ನು ನೀಡಿದ್ದರೂ. ಅದರಲ್ಲಿ ಹಲವು ರಸ್ತೆಗಳು ಪೂರ್ಣಗೊಂಡಿವೆ. ಇನ್ನು ಅಭಿವೃದ್ಧಿ ಆಗುವ ಕೆಲಸಗಳನ್ನು ಮುಂದಿನ ತಿಂಗಳು ಜನವರಿ 26ರಂದು ಪಂಚಾಯಿತಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಿ ಕೆಲವು ಅಭಿವೃದ್ಧಿಗಳಿಗೆ ಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಗಿದೆ ಅಂತ ಭರವಸೆ ನೀಡಿದರು.

 

ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಮಾತನಾಡಿ, ಈ ದಿವಸ ನಮ್ಮ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಾರ್ಯಾಲಯ ಉದ್ಘಾಟನೆ ಆಗಿರೋದು ತುಂಬಾ ಸಂತೋಷಕರ ವಿಷಯವಾಗಿದೆ. ಹಿಂದೆ ಕಟ್ಟಡ ಇಲ್ಲದೆ ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ನಮ್ಮ ಪಕ್ಷದ ಯುವ ಶಾಸಕರ ಬಳಿ ಹೇಳಿದ ಮೇಲೆ 75 ಲಕ್ಷ ಅನುದಾನ ನೀಡಿದರು. ಈ ಕೆಲಸ ಆರೇ ತಿಂಗಳಲ್ಲಿ ಪೂರ್ಣಗೊಳಿಸಿ ಶಾಸಕ ಉದ್ಘಾಟನೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮದ ಎಲ್ಲಾ ಕೆಲಸಗಳಿಗೂ ಸ್ಪಂದಿಸುತ್ತಾರೆ ಸಹಕಾರ ನೀಡಿ ಎಂದರು.

ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲತಾ ಡಿ. ಮಹೇಶ್ , ಉಪಾಧ್ಯಕ್ಷರಾದ ಹರೀಶ್ , ಇಒ ಜೆರಾಲ್ಡ್ ರಾಜೇಶ್ , ಸದಸ್ಯರಾದ ಮಹೇಶ್, ಶಿವಣ್ಣ , ಸುಮಾ, ಲಕ್ಷ್ಮೀ , ಶಿವಕುಮಾರಿ, ರಾಜಮ್ಮ , ವಿಶಾಲಾಕ್ಷಮ್ಮ , ಶಾಂತಮ್ಮ , ರತ್ನಮ್ಮ, ಗೀತಾ, ಶಿವರಾಮ್, ಶಿವಕುಮಾರ್, ಮುಖಂಡರಾದ ಎನ್ ಮಹದೇವು, ಬೈರ ನಾಯಕ, ಕೆ. ಡಿ ಮಂಜು ರವರು, ದೊರೆಸ್ವಾಮಿ ನಾಯಕ , ಮಂಜುನಾಥ್, ಪ್ರದೀಪ್, ರಾಚ ನಾಯಕ, ಕಳಲೆ ರಾಜೇಶ್, ಸೇರಿದಂತೆ ಹಲವು ಮುಖಂಡರು, ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.

Continue Reading

Trending

error: Content is protected !!