Mandya
ಸಚಿವರ ವಿರುದ್ದ ಸುಳ್ಳು ಆರೋಪ ಮಾಡಲಾಗುತ್ತಿದೆ – ಶಿವನಂಜು ಖಂಡನೆ

ಮಂಡ್ಯ : ಕೃಷಿ ಹಾಗು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿರುದ್ದ ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಶಿವನಂಜು ತೀವ್ರವಾಗಿ ಖಂಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಅವರು ಇಡೀ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅದೇ ರೀತಿ ನಾಗಮಂಗಲದಲ್ಲಿಯೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ಇದನ್ನು ಸಹಿಸದ ಮಾಜಿ ಶಾಸಕ ಸುರೇಶ್ ಗೌಡ ಅವರು, ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಅವರು ಸಚಿವರನ್ನು ಏಕವಚನದಲ್ಲಿ ಮಾತನಾಡುತ್ತಿದ್ದು ಇದು ಸರಿಯಲ್ಲ. ನಮಗೂ ಕೂಡ ಮಾತನಾಡಲು ಗೊತ್ತಿದೆ. .ಆದರೆ ಅದು ನಮ್ಮ ಸಂಸ್ಕೃತಿಯಲ್ಲ ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಅಶೋಕ್ ಜೈರಾಮ್, ವಿವೇಕಾನಂದ ಹಾಗೂ ಸಿದ್ದರಾಜು ಅವರಿಗೆ ಎರಡು ಬಿ ಫಾರಂ ಮತ್ತು ಕಲ್ಪನಾ ಸಿದ್ದರಾಜು ಕೆಎನ್ ನಾಗೇಗೌಡರು ಸೇರಿದಂತೆ ಹಲವರಿಗೆ ಬಿ ಫಾರಂ ನೀಡಿ ಬಲಿ ಪಶು ಮಾಡಿದ್ದಾರೆ. ಇದು ಜೆಡಿಎಸ್ ವರಿಷ್ಠರ ಸಂಸ್ಕೃತಿಯಾಗಿದೆ ಎಂದರು.
ಹೆಚ್ಎಎಲ್ ಹೌಸ್ ಬಿಲ್ಡಿಂಗ್ ಆಪರೇಟಿವ್ ಸೊಸೈಟಿಯಲ್ಲಿ ಮಾಡಿರುವ ಹಗರಣ ನಾಗಮಂಗಲ ಜನತೆಗೆ ಗೊತ್ತಿದೆ. ಇನ್ನು ಮುಂದೆ ಇದೇ ರೀತಿ ವರ್ತಿಸಿದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

2018ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲಿ ಎಂಬ ಆಶಯದಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳನ್ನು ಜಿಲ್ಲೆಯ ಜನತೆ ಗೆಲ್ಲಿಸಿಕೊಟ್ಟಿದ್ದರು. ಆದರೆ ಕ್ಷೇತ್ರದ ಜನರ ಆಶಯದಂತೆ ಮುಖ್ಯಮಂತ್ರಿ ಆದ ಕುಮಾರಸ್ವಾಮಿ ಅವರು ನಿರೀಕ್ಷೆಯಂತ ಕೆಲಸ ಮಾಡಲಿಲ್ಲ. ಅವರಿಂದ ಜಿಲ್ಲೆಗೆ ಆದ ಪ್ರಯೋಜನವೇನು ಎಂದು ಅವರು ಪ್ರಶ್ನಿಸಿದರು.
ಅವರ ಅವಧಿಯಲ್ಲಿ ಉದ್ಯೋಗ ಸೃಷ್ಟಿ ಮಾಡುವ ಉದ್ಯಮವಾಗಲೀ, ಕಾರ್ಖಾನೆಯಾಗಲಿ ಬರಲಿಲ್ಲ. ಬದಲಿಗೆ ಮೈಶುಗರ್ ಕಾರ್ಖಾನೆಯು ಮುಚ್ಚಿ ಹೋಗಿತ್ತು. ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ 8,600 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದರು. ಆದರೆ ಆ ಹಣ ಬಿಡುಗಡೆಯಾಗಿದೆಯೇ ಎಂದು ಪ್ರಶ್ನಿಸಿದರು .

ಹಾಸನ ಜಿಲ್ಲೆಯಂತೆ ಮಂಡ್ಯ ಜಿಲ್ಲೆ ಯಾವುದೇ ಅಭಿವೃದ್ಧಿ ಕಾಣಲಿಲ್ಲ ಎಂದು ದೂರಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಬಿ ಫಾರಂ ಗಾಗಿ ದೆಹಲಿಗೆ ಹಲವಾರು ಬಾರಿ ಭೇಟಿ ನೀಡಿದ್ದರು. ಒಮ್ಮೆಯಾದರೂ ಬರ ಪರಿಹಾರದ ಹಣ ಬಿಡುಗಡೆ, ಮೇಕೆದಾಟು ಯೋಜನೆ, ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿಲಿಲ್ಲವೇಕೆ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಕೀಲಾರಕೃಷ್ಣ , ನಗರಸಭೆಯ ಶ್ರೀಧರ್, ಶಿವಲಿಂಗು , ಸೋಮಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Mandya
ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಡಾ. ಕುಮಾರ
ಮಂಡ್ಯ : ಜಿಲ್ಲೆಯಲ್ಲಿ ಡಿಸೆಂಬರ್. 21ರಿಂದ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದ್ದು, ಸಾರ್ವಜನಿಕರಿಗೆ ಇದರ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಿಸೆಂಬರ್. 21 ರಿಂದ 24 ವರೆಗೆ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ಮಾಯೆಯ 21 ರಿಂದ 24 ವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಐದು ವರ್ಷ ಒಳಪಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಹೆಚ್ಚಿನ ಜನರಿಗೆ ಪಲ್ಸ್ ಪೋಲಿಯೋ ಲಸಿಕ ಕಾರ್ಯಕ್ರಮದ ಕುರಿತು ಮಾಹಿತಿ ಹಾಗೂ ಇದರ ಪ್ರಯೋಜನವನ್ನು ತಿಳಿಸಬೇಕು. ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳು ಗ್ರಾಮ ಪಂಚಾಯಿತಿ ತ್ಯಾಜ್ಯ ವಿಲೇವಾರಿ ವಾಹನಗಳ ಮೂಲಕ ಲಸಿಕಾ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಮಾಹಿತಿ ತಿಳಿಸಬೇಕು. ಅಂಗನವಾಡಿ ಹಾಗೂ ಖಾಸಗಿ ಎಲ್. ಕೆ.ಜಿ-ಯುಕೆಜಿ ಸಂಸ್ಥೆಗಳನ್ನು ಪಲ್ಸ್ ಪೋಲಿಯೋ ಲಸಿಕೆ ಕುರಿತು ಹೆಚ್ಚಿನ ಮಾಹಿತಿ ನೀಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಐದು ವರ್ಷ ಒಳಪಟ್ಟ ಸುಮಾರು ಒಂದು ಲಕ್ಷದ ಮೂರು ಸಾವಿರ ಮಕ್ಕಳು ಇದ್ದಾರೆ. ಐದು ವರ್ಷ ಒಳಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸಬೇಕು. ಚಲನಚಿತ್ರ ಮಂದಿರಗಳು ಹಾಗೂ ಎಲ್ ಇ ಡಿ ಜಾಹೀರಾತು ಪ್ರದರ್ಶನ ಮೂಲಕ ಜ್ಞಾಪಕ ಪ್ರಚಾರ ಕೈಗೊಳ್ಳಿ. ಬಸ್ ನಿಲ್ದಾಣ, ರೈಲ್ವ ನಿಲ್ದಾಣ ಹಾಗೂ ಜನರು ಹೆಚ್ಚು ಸೇರುವ ಜಾಗಗಳಲ್ಲಿ ಲಸಿಕಾ ಬೂತ್ ಗಳನ್ನು ಅಯೋಜಿಸಿ ಎಂದರು.
ಸದರಿ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಗುಂಪುಗಳಿಂದ ನೆರವು ತೆಗೆದುಕೊಳ್ಳಿ. ವಲಸಿಗರು ಹಾಗೂ ಕಟ್ಟಡ ಕಾರ್ಮಿಕರ ಐದು ವರ್ಷ ಒಳಪಟ್ಟ ಮಕ್ಕಳನ್ನು ಗುರುತಿಸಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಎನ್ ಜಿ. ಓ ಗಳ ಸಹಕಾರ ಹಾಗೂ ಮೀಮ್ಸ್ ಕಾಲೇಜಿನ ವಿದ್ಯಾರ್ಥಿಗಳ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಕಾರ್ಯಕ್ರಮದ ಕುರಿತು ಪ್ರಚಾರ ನೀಡಿ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ ಮೋಹನ್. ಆರ್ ಸಿ ಎಚ್ ಅಧಿಕಾರಿ ಡಾ. ಕೆ.ಪಿ ಅಶ್ವಥ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ -1 ಶಿವಲಿಂಗಯ್ಯ, ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Mandya
ಪ್ರವಾಸಿ ತಾಣಗಳನ್ನು ಉತ್ತೇಜಿಸಲು ಪ್ರವಾಸಿ ಗೈಡ್, ಮ್ಯಾಪ್ ಹಾಗೂ ವೈಬ್ ಸೈಟ್ ಗಳನ್ನು ಸಿದ್ಧಪಡಿಸಿಲಾಗಿದೆ : ಡಾ. ಕುಮಾರ
ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು ಪ್ರವಾಸಿ ಗೈಡ್, ಮ್ಯಾಪ್ ಹಾಗೂ ವೈಬ್ ಸೈಟ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಕಾವೇರಿ ನದಿ ತೀರದಲ್ಲಿ ಒತ್ತುವರಿಯಾಗಿರುವ ಜಾಗಗಳನ್ನು ತೆರವುಗೊಳಿಸುವ ಸಂಬಂಧ ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ನೀತಿ 2024-29 ರಡಿ ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನು ಸರ್ಕಾರದಿಂದ ಅಧಿಕೃತವಾಗಿ ಗುರುತಿಸಲಾಗಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ರೀತಿಯ ವೆಬ್‌ಸೈಟ್ ಇರದ ಕಾರಣ ಪ್ರವಾಸೋದ್ಯಮ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾ ಪ್ರವಾಸೋದ್ಯಮದ ಕುರಿತು ವೆಬ್‌ಸೈಟ್ ನ್ನು ಸಾರ್ವಜನಿಕರ ಹಾಗೂ ಪ್ರವಾಸಿಗರ ಉಪಯೋಗಕ್ಕಾಗಿ ಸಿದ್ದಪಡಿಸಲಾಗಿದೆ. ಅಧಿಕೃತವಾಗಿ ಚಾಲನೆಯನ್ನು ಶೀಘ್ರದಲ್ಲೇ ನೀಡಲಾಗುವುದು ಎಂದರು.
ಮೇಲುಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಯಾತ್ರಿನಿವಾಸ ಕಟ್ಟಡವನ್ನು ನಿರ್ವಹಣೆಗಾಗಿ ವಹಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆಯಿಂದ ಕರೆಯಲಾಗಿದ್ದ ಇ-ಟೆಂಡರ್ ನಲ್ಲಿ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಕಟ್ಟಡವನ್ನು ಮೇಲುಕೋಟೆಯ ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಮರ್ಪಕವಾಗಿ ನಿರ್ವಹಿಸಲು ತಿಳಿಸಿದರು.

ಶ್ರೀರಂಗಪಟ್ಟಣದ ಕೋಟೆ ಪ್ರದೇಶದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅನುಷ್ಟಾನಗೊಳಿಸಿರುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ನಿರ್ವಹಣೆಗಾಗಿ ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಆಹ್ವಾನಿಸಲಾಗಿದ್ದ ಇ-ಟೆಂಡರ್ ನಲ್ಲಿ ಯಾವುದೇ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಸೌಲಭ್ಯವನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ವತಿಯಿಂದ ನಿರ್ವಹಿಸಲು ಸರ್ಕಾರದಿಂದ ಅನುದಾನ ಪಡೆಯಲು ಪ್ರಸ್ತಾವನೆ ಸಲ್ಲಿಸುಂತೆ ಸೂಚಿಸಿದರು.
ಮದ್ದೂರು ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಪ್ರವಾಸಿ ತಾಣದಲ್ಲಿ ನಿರ್ಮಿಸಿರುವ ಇಂಟರ್‌ಪ್ರಿಟೇಷನ್ ಸೆಂಟರ್ ಸೌಲಭ್ಯದ ನಿರ್ವಹಣೆಗಾಗಿ ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಆಹ್ವಾನಿಸಲಾಗಿದ್ದ ಇ-ಟೆಂಡರ್ ನಲ್ಲಿ ಯಾವುದೇ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಸೌಲಭ್ಯವನ್ನು “WWF India” ಸಂಸ್ಥೆಯಿಂದ ನಿರ್ವಹಿಸಲು ಸರ್ಕಾರದಿಂದ ಸೂಕ್ತ ಸ್ಪಷ್ಟೀಕರಣ ಡೆಯಬೇಕು ಎಂದು ಹೇಳಿದರು.
ನಾಗಮಂಗಲ ತಾಲ್ಲೂಕಿನ ಮುಳುಕಟ್ಟಮ್ಮ ದೇವಾಲಯದ ಬಳಿ ನಿರ್ಮಿಸಿರುವ ಯಾತ್ರಿನಿವಾಸ ಕಟ್ಟಡವನ್ನು ನಿರ್ವಹಣೆಗಾಗಿ ವಹಿಸುವ ಸಂಬೌಧ ಪ್ರವಾಸೋದ್ಯಮ ಇಲಾಖೆಯಿಂದ ಕರೆಯಲಾಗಿದ್ದ ಇ-ಟೆಂಡರ್ ನಲ್ಲಿ ಇಬ್ಬರು ಬಿಡ್ಡುದಾರರು ಭಾಗವಹಿಸಿದ್ದು, ಸದರಿಯವರ ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಇರುವ ಹಿನ್ನೆಲೆಯಲ್ಲಿ, ತಾಂತ್ರಿಕವಾಗಿ ಬಿಡ್ ಗಳು ಅನರ್ಹವಾಗಿದ್ದು, ಸದರಿ ಟೆಂಡರ್ ನ್ನು ರದ್ದುಪಡಿಸಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ವತಿಯಿಂದ ನಿರ್ವಹಿಸಲು ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಹೊಸದಾಗಿ ಮರು ಟೆಂಡರ್ ಆಹ್ವಾನಿಸಿ ಎಂದು ಹೇಳಿದರು.
ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯ ಬಳಿ ನಿರ್ಮಿಸಲಾಗಿರುವ ಎರಡು ಹೋಂ ಸ್ಟೇಗಳು ರಂಗನತಿಟ್ಟು ಪಕ್ಷಿಧಾಮ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರಲಿದ್ದು. ಹಿಂದೆ ನೀಡಿದ್ದ ಎರಡು ಹೋಂ ಸ್ಟೇಗಳನ್ನು ರದ್ದು ಪಡಿಸಿ ನೊಂದಣಿಯನ್ನು ಹಿಂಪಡೆಯುವಂತೆ ಸಭೆಯಲ್ಲಿ ಸೂಚಿಸಿದರು.
ನಿರ್ಮಾಣ ಮಾಡಲು ಅನುಮತಿ ನೀಡಿದ ಅಧಿಕಾರಿಗಳು ಹಾಗೂ ಹೋಂ ಸ್ಟೇ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಮಂಡ್ಯ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ಒಟ್ಟು ರೂ.3672.41 ಲಕ್ಷಗಳ 41 ಮುಂದುವರೆದ ಪ್ರವಾಸಿ ಮೂಲಸೌಕರ್ಯ ಅಭಿವೃದ್ದಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗುತ್ತಿದ್ದೆ. ಸದರಿ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ತಿಳಿಸಿದರು.
ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಗಂಗಾಧರ ಸ್ವಾಮಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ -1 ಶಿವಲಿಂಗಯ್ಯ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ನಿರ್ದೇಶಕಿ ಗೀತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Mandya
ಮುತುವರ್ಜಿ ವಹಿಸಿ ಹಾಸ್ಟೆಲ್ ಹಾಗೂ ಅಂಗನವಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಡಾ.ಕುಮಾರ
ಮಂಡ್ಯ: ಅಧಿಕಾರಿಗಳು ಹಾಸ್ಟೆಲ್ ಹಾಗೂ ಅಂಗನವಾಡಿ ಕಾಮಗಾರಿಗಳನ್ನು ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸೂಚಿಸಿದರು.
ಮುಖ್ಯಮಂತ್ರಿಗಳ ಸಭೆಯಲ್ಲಿ ನೀಡಿದ ಸೂಚನೆಯಂತೆ ವಿವಿಧ ಇಲಾಖೆಗಳ ಕಾಮಗಾರಿ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಇಲಾಖೆಯ 30 ವಿವಿಧ ಕಾಮಗಾರಿಗಳು ಬಾಕಿ ಇದ್ದು ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಹೇಳಿದರು.
ಹಾಸ್ಟೆಲ್ ರಿಪೇರಿ ಕಾಮಗಾರಿಗಳು ನೂತನ ಹಾಸ್ಟೆಲ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ತೆಗೆದುಕೊಂಡು ಕಾರ್ಯನಿರ್ವಹಿಸಿ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿದಾಗ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು.
ಗುತ್ತಿಗೆದಾರರು ನಿಗದಿತ ಅವಧಿ ಒಳಗೆ ಕಾಮಗಾರಿಗಳನ್ನು ಮುಗಿಸಬೇಕು. ನಿಗದಿತ ಅವಧಿಗಿಂತ ಹೆಚ್ಚು ಸಮಯ ತೆಗೆದುಕೊಂಡರೆ ಗುತ್ತಿಗೆದಾರರೇ ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಅಂಗನವಾಡಿ ಕೇಂದ್ರಗಳು ಅತಿ ಮುಖ್ಯ, ಅಂಗನವಾಡಿ ಕೇಂದ್ರಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನು ವಿಳಂಬ ಮಾಡಲೇ ಶೀಘ್ರವಾಗಿ ಮುಗಿಸಿ
ಎಂದು ಎಚ್ಚರಿಸಿದ್ದರು.

ಮಿನ್ಸ್ ಕ್ಯಾನ್ಸರ್ ಕೇರ್ ಸೆಂಟರ್ ಈಗಾಗಲೇ ನಿರ್ಮಾಣಗೊಂಡಿದ್ದು ಶೀಘ್ರವಾಗಿ ಉದ್ಘಾಟನೆ ಮಾಡಲಾಗುವುದು. ಸಂಬಂಧಪಟ್ಟ ವಿವಿಧ ಕಾಮಗಾರಿಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಭೆ ಆಯೋಜಿಸಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಬೇಕು ಎಂದು ಹೇಳಿದರು.
ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ 166 ಕೊಠಡಿಗಳ ಕಾಮಗಾರಿಗಳು ಇದ್ದು ಈಗಾಗಲೇ 154 ಕೊಠಡಿಗಳ ಕಾಮಗಾರಿಗಳನ್ನು ಮುಗಿಸಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸುಸರ್ಜಿತವಾದ ಕೊಠಡಿಗಳನ್ನು ನಿರ್ಮಾಣ ಮಾಡಿ ಎಂದು ಹೇಳಿದರು.
ಸರ್ಕಾರದ ವಿವಿಧ ಕಾಮಗಾರಿಗಳನ್ನು ಸಂಬಂಧಪಟ್ಟ ಇಲಾಖೆಯವರು ವಿಶೇಷ ಆಸಕ್ತಿ ವಹಿಸಿ ಗುತ್ತಿಗೆದಾರರೊಂದಿಗೆ ಸಮನ್ವಯ ಸಾಧಿಸಿ ನಿರ್ದಿಷ್ಟ ಅವಧಿಯೊಳಗೆ ಪೂರ್ಣಗೊಳಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಶಿವಲಿಂಗಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಆಶಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
-
Mandya21 hours agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Mysore19 hours agoಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
-
Hassan24 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Hassan23 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Mysore49 minutes agoಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು
-
Mandya2 hours agoಮುತುವರ್ಜಿ ವಹಿಸಿ ಹಾಸ್ಟೆಲ್ ಹಾಗೂ ಅಂಗನವಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಡಾ.ಕುಮಾರ
-
Hassan5 hours agoವಾಲಿಬಾಲ್ ಪಂದ್ಯಾವಳಿಯಲ್ಲಿ ಜಗ್ಗಿಬಾಯ್ಸ್ ಪ್ರಥಮ ಸ್ಥಾನ
-
Hassan19 hours agoಡಿ.21ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಬಹಿರಂಗ ಸಭೆ: ಎಸ್.ವರಲಕ್ಷ್ಮೀ
