Chamarajanagar
ವಿವಿಧ ಕ್ಷೇತ್ರಗಳ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ : ಅರ್ಜಿ ಆಹ್ವಾನ
ಚಾಮರಾಜನಗರ, ಅ. 22 :- ಕನ್ನಡ ರಾಜ್ಯೋತ್ಸವ-2024ರ ಅಂಗವಾಗಿ ಜಿಲ್ಲಾ ವ್ಯಾಪ್ತಿಗೆ ಒಳಪಡುವ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ನೀಡಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲಾಡಳಿತವು ಅರ್ಜಿ ಆಹ್ವಾನಿಸಿದೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಚಾಮರಾಜನಗರ ಜಿಲ್ಲೆಯ ಸಾಧಕರನ್ನು ಗುರುತಿಸಿ ನವೆಂಬರ್ 1ರಂದು ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಜಾನಪದ ಕಲೆ, ಸಾಹಿತ್ಯ, ಜಾನಪದ ವೈದ್ಯ, ಕನ್ನಡ ಸಾಹಿತ್ಯ ಸೇವೆ, ಕನ್ನಡಪರ ಹೋರಾಟ, ವೈದ್ಯಕೀಯ ಸೇವೆ, ಸೈನಿಕ ಸೇವೆ, ಸಿನಿಮಾ, ಸಂಗೀತ, ನಾಟಕ, ಗಾಯನ, ಗಮಕ, ಕನ್ನಡ ಭಾಷೆ ಮತ್ತು ಲಿಪಿ ಬಳಕೆ, ಗಡಿನಾಡ ಸೇವೆ, ಮಕ್ಕಳ ಸಾಹಸ ಮತ್ತು ರಕ್ಷಣೆ, ಸಮಾಜಸೇವೆ, ಪತ್ರಿಕೋದ್ಯಮ, ಮಹಿಳಾ ಸಬಲೀಕರಣ, ಇತರ ಅರ್ಹ ಸೇವೆ ಸಲ್ಲಿಸಿರುವ ಸಾಧಕರಿಗೆ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ.

ಅಸಕ್ತರು ತಮ್ಮ ಹೆಸರು, ವಿಳಾಸ (ಆಧಾರ್ ಕಾರ್ಡ್ ಲಗತ್ತಿಸಬೇಕು), ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ಪಡೆದಿರುವ ಪ್ರಶಸ್ತಿಗಳ ವಿವರ, ತೊಡಗಿಸಿಕೊಂಡಿರುವ ಸೇವಾ ವಿವರಗಳನ್ನೊಳಗೊಂಡ ಅರ್ಜಿಯನ್ನು ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ : 218, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಚಾಮರಾಜನಗರ ಇವರಿಗೆ ಖುದ್ದಾಗಿ ಅಥವಾ ಇ-ಮೇಲ್ ವಿಳಾಸ [email protected] ಗೆ ಅಕ್ಟೋಬರ್ 27ರೊಳಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಡಿ. 9, 10 ರಂದು ನಗರದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಡಿ.9 ಮತ್ತು 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಘನ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ.ಮಾದೇಗೌಡ, ಕೆ. ವಿವೇಕಾನಂದ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Chamarajanagar
ಮಹಾಪರಿನಿರ್ವಾಣ ದಿನ: ಮೊಂಬತ್ತಿ ಮೆರವಣಿಗೆ
ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮೊಂಬತ್ತಿ ಮೆರವಣಿಗೆ ನಡೆಯಿತು.
ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ರಾಜಗಿರಿ ಬುದ್ಧವಿಹಾರ, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಸಹಯೋಗದಲ್ಲಿ ಹಾಗೂ ಗ್ರಾಮದ ಯಜಮಾನರುಗಳ ಮಾರ್ಗದರ್ಶನದಲ್ಲಿ ಇಂದು ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇಣದ ಬತ್ತಿ ಮೆರವಣಿಗೆ ನಡೆಸಲಾಯಿತು.

ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೊಂಬತ್ತಿ ಮೆರವಣಿಗೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮ ಪಂಚಾಯಿತಿ ಸದಸ್ಯರು, ರಾಜಗಿರಿ ಬೌದ್ಧವಿಹಾರದ ಉಪಾಸಕರು, ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.
Chamarajanagar
ಅಪರಿಚಿತ ಶವ : ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ
ಚಾಮರಾಜನಗರ: ಬೇಡರಪುರ ಗ್ರಾಮದ ಬಳಿಯಿರುವ ಪ್ರೇಸ್ಟೀಜ್ ಫ್ಯಾಕ್ಟರಿಯ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ವಾರಸುದಾರರ ಸುಳಿವಿಗೆ ಸಹಕರಿಸಲು ಕೋರಲಾಗಿದೆ.
ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, 158 ಸೆಂ.ಮೀ ಎತ್ತರ, ಕೋಲು ಮುಖ, ತೆಳ್ಳನೆ ಶರೀರ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ, ಕಪ್ಪು ಮೀಸೆ ಹಾಗೂ ಕಪ್ಪು, ಬಿಳಿ ಮಿಶ್ರಿತ ತಲೆ ಕೂದಲು ಇರುತ್ತದೆ. ಕಪ್ಪು, ಹಸಿರು ಮತ್ತು ಬಿಳಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದು, ಎದೆಯ ಭಾಗದಲ್ಲಿ ಎಸು ಎಂಬ ಹಚ್ಚೆ ಇರುತ್ತದೆ.

ಇವರ ವಾರಸದಾರರು ಇದ್ದಲ್ಲಿ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
-
Hassan22 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Mandya21 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Hassan23 hours agoಹಾಸನದಲ್ಲಿ ಸರ್ಕಾರಿ ಸೇವೆಗಳ ಸಮರ್ಪಕ ಸಮರ್ಪಣಾ ಸಮಾವೇಶ ಹಿನ್ನೆಲೆ
-
Mysore20 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Hassan23 hours agoಹಾಸನಕ್ಕೆ ಆಗಮಿಸಿದ ಸಿಎಂ ಮತ್ತು ಡಿಸಿಎಂ
-
Kodagu19 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
-
Chamarajanagar24 hours agoನಗರದಲ್ಲಿ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನ
-
Chamarajanagar19 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
