Mandya
ಮೈಮೇಲೆ ಸಗಣಿ ಸುರಿದುಕೊಂಡು ತಹಶೀಲ್ದಾರ್ ವಿರುದ್ಧ ಆಕ್ರೋಶ

ಮಂಡ್ಯ: ಬೂದನೂರು ನಿವೇಶನರಹಿತರಿಗೆ ಮಂಜೂರಾದ ಭೂಮಿಗೆ ಕೋಟ್೯ ವ್ಯಾಜ್ಯ ಬಗೆಹರಿಸುವ ಬದಲು ಭೂಗಳ್ಳರ ಜೊತೆ ಸೇರಿರುವ ತಹಶೀಲ್ದಾರ್ ಹಾಗೂ ಪ್ರಥಮ ದರ್ಜೆ ಸಹಾಯಕ ತಿಪ್ಪೇಸ್ವಾಮಿ ಅವರು ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಬೂದನೂರು ಸ್ವಂತಮನೆ ನಮ್ಮಹಕ್ಕು ಹೋರಾಟ ಸಮಿತಿ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಸಗಣಿ ಸುರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಅರಂಭವಾದ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡಿರುವ ಸದಸ್ಯರು ನ್ಯಾಯಾಲಯದ ವ್ಯಾಜ್ಯಗಳ ಕುರಿತು ತಪ್ಪು ಮಾಹಿತಿ ನೀಡಿರುವ ಭೂಗಳ್ಳರ ವಿರುದ್ದ ನ್ಯಾಯಾಲಯಕ್ಕೆ ಮನವರಿಕೆ ಮಾಡುವಂತೆ ಒತ್ತಾಯಿಸಿದರು.
ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸುಳ್ಳು ದಾವೆ ಹೂಡಿರುವ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗಲು ಮನವಿ ಮಾಡಿದರೂ ಭೂಗಳ್ಳರ ಪ್ರಭಾವ, ಅಮಿಷಕ್ಕೆ ಬಲಿಯಾಗಿದ್ದಾರೆ, ದಲಿತ ಕುಟುಂಬಗಳಿಗೆ ಭೂಮಿ ಸಿಗದಂತೆ ಸಂಚು ಮಾಡಿಕೊಂಡು ಹಕ್ಕುಪತ್ರ ಮಂಜೂರು ಮಾಡಿದರೂ ಭೂಮಿಗೆ ವಿವಿಧ ನ್ಯಾಯಾಲಯಗಳಲ್ಲಿ ದಾವೆ ಹೂಡಲು ತಹಶೀಲ್ದಾರ್ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ಷಪಡಿಸಿದರು.
ಬೂದನೂರು ಗ್ರಾಮ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಲಪಟಾಯಿಸಲು ಕೆಲವರು ವೇದಮೂರ್ತಿ ಎಂಬ ನಕಲಿ ತಹಶೀಲ್ದಾರ್ ಹೆಸರಿನಲ್ಲಿ ದಾಖಲೆ ಸೃಷ್ಟಿಸಿ ವಂಚಿಸುತ್ತಿದ್ದಾರೆ. ಅದಕ್ಕೆ ಅಧಿಕಾರಿಗಳು ಲಕ್ಷಾಂತರ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಗ್ರಾಪಂ ಮಾಜಿ ಸದಸ್ಯರಾದ ಕುಳ್ಳ, ಸಮಿತಿಯ ಸರೋಜಮ್ಮ, ಬೂಸ ಸತೀಶ, ವಿಜಯಾ, ಕನಕ, ಕರಿಯಪ್ಪ ಭಾಗವಹಿಸಿದ್ದರು.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State13 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu10 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Hassan8 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Hassan9 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports11 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್