Mysore
ಸಾಹಿತ್ಯ ಕ್ಷೇತ್ರವು ಸಮಾಜದ ಮೇಲೆ ಬಹಳ ಪ್ರಭಾವ ಬೀರುತ್ತದೆ – ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು : ಸಾಹಿತ್ಯ ಕ್ಷೇತ್ರವು ಸಮಾಜದ ಮೇಲೆ ಬಹಳ ಪ್ರಭಾವ ಬೀರುತ್ತದೆ. ಸಾಹಿತ್ಯಕ್ಕೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಶಕ್ತಿ ಇದೆ. ಈ ಹಿನ್ನೆಲೆ ಸಾಹಿತ್ಯದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.
ದಸರಾ ಮಹೋತ್ಸವದ ಅಂಗವಾಗಿ ಮಂಗಳವಾರ ಕಲಾಮಂದಿರಲ್ಲಿ ನಡೆದ ಕವಿಗೋಷ್ಠಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ನಾಲ್ವಡಿ ಕೃಷ್ಣರಾಜರವರ ಆಡಳಿತವು ಈಗಿನ ಸಾಹಿತ್ಯ ಚಳುವಳಿಗೆ ಪ್ರೇರಣೆಯಾಗಲಿ. ಈ ಕವಿಗೋಷ್ಠಿ ವೇದಿಕೆಯಲ್ಲಿ ಸಮಾಜದ ಎಲ್ಲಾ ಸಮಸ್ಯೆಗಳನ್ನು ಕುರಿತು ಸುದೀರ್ಘ ಚರ್ಚೆಯಾಗಲಿ ಎಂದು ಸಲಹೆ ನೀಡಿದರು.
ವಚನ ಸಾಹಿತ್ಯ ಚಳುವಳಿಯ ಮೂಲಕ ಸಮಾಜದಲ್ಲಿನ ಬದಲಾವಣೆಗಾಗಿ ಜಾಗೃತಿಯನ್ನು ಮೂಡಿಸಲಾಗಿದೆ. ಅದರಂತೆ ಪ್ರಸ್ತುತ ನಮ್ಮ ದೇಶದಲ್ಲಿ ನಡೆಯುತ್ತಿರುವ ಅಸ್ಪೃಶ್ಯತೆ ಆಚರಣೆ, ಮಾನವ ಹಕ್ಕುಗಳ ಉಲ್ಲಂಘನೆ, ಲಿಂಗ ತಾರತಮ್ಯ, ಜಾತಿ ಪ್ರಭಾವ, ಅಧರ್ಮದ ನಡೆ ಇವೆಲ್ಲವನ್ನೂ ತಿದ್ದಿ ಸರಿದಾರಿಗೆ ತರಬೇಕಿದೆ. ಅದರೊಂದಿಗೆ ನಮ್ಮ ವಾಕ್ ಸ್ವಾತಂತ್ರ್ಯದ ಮೂಲಕ ಪ್ರಜಾಪ್ರಭುತ್ವ ತಳಹದಿಯನ್ನು ಸದೃಢಪಡಿಸುವ ಕೆಲಸ ಸಾಹಿತ್ಯ ಕ್ಷೇತ್ರದಿಂದ ಆಗಬೇಕಿದೆ ಎಂದು ನುಡಿದರು.
ಮರ್ಯಾದೆ ಹತ್ಯೆಯಂತಹ ಪ್ರಕರಣ ಇಡೀ ಮಾನವ ಕುಲ ತಲೆತಗ್ಗಿಸುವಂತದ್ದು. ಇಂತಹ ಅನೇಕ ಅನಿಷ್ಟ ಪದ್ದತಿಗಳನ್ನು ಖಂಡಿಸುವ ಮೂಲಕ ನಿರ್ಮೂಲನೆ ಮಾಡಬೇಕು. ಸಾಹಿತ್ಯ ಎಲ್ಲಾ ಅನಿಷ್ಟ ಪದ್ಧತಿಗಳಿಗೆ ಹರಿತವಾದ ಬರವಣಿಗೆ ಮೂಲಕ ನಿರ್ಮೂಲನೆ ಮಾಡುವ ಪ್ರಯತ್ನ ಮಾಡಬೇಕು. ಮನುಷ್ಯರು ನೆಮ್ಮದಿಯಿಂದ ಬಾಳುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟರು.
ಖ್ಯಾತ ಸಾಹಿತಿ ಹಾಗೂ ಕವಿ ಜಯಂತ್ ಕಾಯ್ಕಿಣಿ ಅವರು ಮಾತನಾಡಿ, ಸಾಹಿತ್ಯ ಎಂಬುದು ವೈಚಾರಿಕತೆಯ ಹೊಸ ಬಾಗಿಲನ್ನು ತೆರೆಯುತ್ತದೆ. ಕನ್ನಡ ಪಾಠಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ತಮ್ಮ ಮಕ್ಕಳನ್ನು ಆಂಗ್ಲ ಪಾಠಶಾಲೆಗೆ ಸೇರಿಸುತ್ತಿರುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಕನ್ನಡ ಭಾಷೆ ಸಾಹಿತ್ಯದ ಕುರಿತು ಚಿಂತಿಸುವ ಅವಶ್ಯಕತೆ ನಿಜವಾಗಿಯೂ ನಮ್ಮ ಮುಂದಿದೆ ಎಂದು ಹೇಳಿದರು.
ಸಾಹಿತ್ಯ ಮಾರ್ಗದಲ್ಲಿ ಬದುಕಿನ ಕುರಿತು ಹೊಸತನ್ನು ಹುಡುಕುವುದು ಹಾಗೂ ವಿಕಾಸದ ಅನ್ವೇಷಣೆ ಮುಖ್ಯ. ಇದಕ್ಕೆ ಸಾಹಿತ್ಯ ಮೂಲಾಧಾರ. ಪ್ರಶಸ್ತಿಗಳ ಆಸೆಗಾಗಿ ಕವಿತೆ, ಸಾಹಿತ್ಯ ಬರೆಯುವುದಲ್ಲ. ಹೊಸ ತಲೆಮಾರು ಮೊದಲು ಓದುವುದನ್ನು ಮುಂದುವರಿಸಬೇಕು. ಏನನ್ನು ಓದದೇ ಹೊಸದನ್ನು ಬರೆಯಲು ಸಾಧ್ಯವಿಲ್ಲ ಎಂದು ಯುವ ಕವಿಗಳಿಗೆ ಕಿವಿಮಾತು ಹೇಳಿದರು.
ಖ್ಯಾತ ಕವಯಿತ್ರಿ ಮಾಲತಿ ಶೆಟ್ಟಿ ಅವರು ಮಾತನಾಡಿ, ವಿವಿಧ ವೇದಿಕೆಗಳಲ್ಲಿ ದಸರಾ ಕವಿಗೋಷ್ಠಿಗಳು ನಡೆಯಲಿದ್ದು, ದಸರಾ ವೇದಿಕೆಯು ಕವಿಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿವೆ. ಕನ್ನಡದ ಹಿರಿಯ ಕವಿಗಳು ಕನ್ನಡ ಸಾಹಿತ್ಯಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ. ಕವಿಯಾದವರಿಗೆ ಆಂತರಿಕ ಪ್ರತಿಭೆಯ ಜ್ಯೋತಿ ಇರುತ್ತದೆ. ಸಾಹಿತ್ಯದ ಸೃಷ್ಟಿಗೆ ನಿರಂತರ ಅಧ್ಯಯನದ ಅವಶ್ಯಕತೆ ಇದೆ. ಸಂತೋಷವಾದಾಗ ಅಥವಾ ದುಃಖವಾದಾಗ ಮನಸ್ಸು ನನ್ನನ್ನು ಕೊಂಡೊಯ್ಯುವುದು ಕವಿತೆಯೆಡೆಗೆ ಎಂದು ಸಾಹಿತ್ಯದ ಮೇಲಿನ ಒಲವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ವಿಧಾನ ಪರಿಷತ್ತಿನ ಸದಸ್ಯ ಹೆಚ್.ವಿಶ್ವನಾಥ್, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪ, ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕವಿಗೋಷ್ಠಿ ಉಪಸಮಿತಿಯ ಉಪ ವಿಶೇಷಾಧಿಕಾರಿ ಡಾ.ಎಂ.ದಾಸೇಗೌಡ, ಕಾರ್ಯಾಧ್ಯಕ್ಷರಾದ ಡಾ.ವಿಜಯಕುಮಾರಿ ಎಸ್. ಕರಿಕಲ್, ಕಾರ್ಯದರ್ಶಿ ಎಂ.ಎಸ್.ಗಿರಿಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Mysore
ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ, ಸಾಲ ಕೇಳಲು ಹೋದ ಮಹಿಳೆ ನಾಪತ್ತೆ
ನಂಜನಗೂಡು:ಆ.07
ಸಂಘವೊಂದರಲ್ಲಿ ಸಾಲ ಮಾಡಿಕೊಂಡಿದ್ದ ಮಹಿಳೆ, ಹತ್ತು ಜನಗಳ ಮಧ್ಯದಲ್ಲಿ ಹಣ ಕಟ್ಟಲ್ದೆ ಇದ್ದರೆ, ಅವಮಾನ ವಾಗುತ್ತದೆ ಎಂದು ಸಾಲ ಕೇಳಿ ಬರುತ್ತೇನೆ ಎಂದು ಹೇಳಿ ಹೋದ ಮಹಿಳೆ ನಾಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ.
ದೇವನೂರು ಗ್ರಾಮದ ಮಹದೇವಯ್ಯ ಎಂಬುವವರ ಪತ್ನಿ 55 ವರ್ಷದ ಮಹದೇವಮ್ಮ ಕಾಣೆಯಾದ ಮಹಿಳೆಯಾಗಿ ದ್ದಾಳೆ. ಸಂಘದಲ್ಲಿ ಸಾಲ ತೆಗೆದುಕೊಂಡಿದ್ದು, ಆ ಹಣವನ್ನು ಕಟ್ಟಲು ಹಣವಿಲ್ಲದೆ ಮತ್ತೊಬ್ಬರಲ್ಲಿ ಸಾಲ ಕೇಳಿ ಬರುತ್ತೇನೆ ಎಂದು ಆ.06 ರಂದು ಬೆಳಿಗ್ಗೆ ಮಹದೇವಮ್ಮ ಮನೆಯಿಂದ ಹೊರಗೆ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಈ ಬಗ್ಗೆ ನೆಂಟರಿಷ್ಟರು ಹಾಗೂ ಸ್ನೇಹಿತರ ಮನೆಯಲ್ಲಿ ಹುಡುಕಿದರೂ ಇವರ ಸುಳಿವು ಪತ್ತೆಯಾಗಿಲ್ಲ. ನನ್ನ ಪತ್ನಿಯನ್ನು ಹುಡುಕಿಕೊಡಿ ಎಂದು ಪತಿ ಮಹದೇವಯ್ಯ ಕವಲಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚಹರೆ ಹೀಗಿದ್ದು, 55 ವರ್ಷದ ಮಹದೇವಮ್ಮ, ಎಣ್ಣೆಗೆಂಪು ಮೈಬಣ್ಣ, ಸುಮಾರು 5 ಅಡಿ ಎತ್ತರ, ದುಂಡು ಮುಖ, ಕನ್ನಡ ಭಾಷೆ ಮಾತನಾಡುತ್ತಾರೆ. ಹೋಗುವಾಗ ಕಪ್ಪು ಬಣ್ಣದ ರವಿಕೆ, ನೀಲಿ ಮತ್ತು ಬಿಳಿ ಬಣ್ಣ ಮಿಶ್ರಿತ ಸೀರೆಯನ್ನು ಧರಿಸಿದ್ದಾರೆ ಇವರ ಸುಳಿವು ಸಿಕ್ಕಲ್ಲಿ ಕವಲಂದೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 9480805050 ಅಥವಾ 9900663539ಕ್ಕೆ ಕರೆ ಮಾಡುವಂತೆ ಪ್ರಕಟಣೆಯಲ್ಲಿ ಪೊಲೀಸರು ಕೋರಿದ್ದಾರೆ.
ನಂಜನಗೂಡು ಮಹದೇವಸ್ವಾಮಿಪಟೇಲ್.
Mysore
ನೇಗಿಲಯೋಗಿ ಉದ್ಯಮಿ ಹಾಗೂ ವೃತ್ತಿಪರರ ಸಮ್ಮಿಲನ
ರಾಜಕಾರಣವನ್ನು ಉದ್ಯೋಗ ಮಾಡಿಕೊಳ್ಳುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಇದು ಆರೋಗ್ಯಕರ ಸಮಾಜದ ನಿರ್ಮಾಣದ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಆತಂಕ ವ್ಯಕ್ತಪಡಿಸಿದರು.
ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ನ ವತಿಯಿಂದ ನಗರದ ರುಚಿ ದಿ ಪ್ರಿನ್ಸ್ ಹೋಟೆಲ್ ನಲ್ಲಿ ಸೋಮವಾರ ಏರ್ಪಡಿಸಿದ್ದ ನೇಗಿಲಯೋಗಿ ಉದ್ಯಮಿ ಹಾಗೂ ವೃತ್ತಿಪರರ ಸಮ್ಮಿಲನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉದ್ಯೋಗ ಮತ್ತು ರಾಜಕಾರಣವನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡಬೇಕಾದ ಅವಶ್ಯಕತೆ ಇದೆ. ರಾಜಕಾರಣಿಗಳು ಜೀವನೋಪಾಯಕ್ಕೆ ಒಂದು ಉದ್ಯೋಗವನ್ನು ಆಶ್ರಯಿಸಿ ಇದರಿಂದ ಪ್ರತ್ಯೇಕವಾಗಿ ರಾಜಕಾರಣ ಮಾಡುವುದನ್ನು ಒಂದು ಸೇವೆಯನ್ನಾಗಿ ರೂಢಿ ಮಾಡಿಕೊಳ್ಳಬೇಕು. ಆದರೆ ಬಹಳಷ್ಟು ಜನರು ರಾಜಕಾರಣವನ್ನೇ ತಮ್ಮ ಉದ್ಯೋಗ ವನ್ನಾಗಿ ಮಾಡಿಕೊಂಡು ಅದನ್ನೇ ತಮ್ಮ ಸಂಪಾದನೆಯ ಮಾರ್ಗವನ್ನಾಗಿಸಿಕೊಂಡು ಅಮಾಯಕರನ್ನು ಶೋಷಿಸುತ್ತಾ ಸಮಾಜಕ್ಕೆ ಕಂಟಕರಾಗುತ್ತಿದ್ದಾರೆ. ಇದರಿಂದಾಗಿ ಸಾಮಾನ್ಯ ಜನರಲ್ಲಿ ರಾಜಕಾರಣಿಗಳ ಬಗ್ಗೆ ಅಸಹನೆಯ ಭಾವನೆ ಹೆಚ್ಚಾಗುತ್ತಿದೆ ಎಂದು ಅವರು ವಿಷಾಧಿಸಿದರು.
ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಸಮಾಜದ ಬಾಂಧವರ ಕಲ್ಯಾಣಕ್ಕಾಗಿ ಹಾಗೂ ಸಾಮರಸ್ಯ ಸಮುದಾಯದ ನಿರ್ಮಾಣಕ್ಕಾಗಿ ಸಾಕಷ್ಟು ಶ್ರಮಿಸುತ್ತಿದೆ. ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡು ಅವುಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಮೂಲಕ ಸಮಾಜದ ಎಲ್ಲ ವರ್ಗಗಳ ಜನರಿಗೆ ಸೇವೆ ನೀಡುತ್ತಿದೆ. ಮೈಸೂರು ಮಾತ್ರವಲ್ಲದೆ ಮಂಡ್ಯ ಬೆಂಗಳೂರು ರಾಮನಗರ ಹಾಸನ ಮತ್ತಿತರ ಜಿಲ್ಲೆಗಳಲ್ಲಿಯೂ ಶಾಖೆಗಳನ್ನು ತೆರೆಯುವ ಮೂಲಕ ಸಮುದಾಯದ ಒಳಿತಿಗೆ ಶ್ರಮಿಸುತ್ತಿದೆ. ಹಿಂದಿನಿಂದಲೂ ಸಂಸ್ಥೆಯ ಎಲ್ಲಾ ಉತ್ತಮ ಕಾರ್ಯಗಳಿಗೆ ಸಹಕಾರ ನೀಡುತ್ತಾ ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿಯೂ ಸಂಸ್ಥೆ ಹಮ್ಮಿಕೊಳ್ಳುವ ಎಲ್ಲಾ ರಚನಾತ್ಮಕ ಕಾರ್ಯಗಳಿಗೆ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.
ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಮಾತನಾಡಿ ನಮ್ಮ ಸಮುದಾಯದ ಯುವಕರು ಸರ್ಕಾರದ ನೌಕರಿಗಾಗಿ ಕಾಯ್ದು ಕುಳಿತುಕೊಳ್ಳದೆ ತಮ್ಮನ್ನು ವೈವಿಧ್ಯಮಯ ಉದ್ಯಮಗಳಲ್ಲಿ ತೊಡಗಿಸಿಕೊಳ್ಳಬೇಕು. ಉದ್ಯೋಗ ಪಡೆಯಲು ಹಪಹಪಿಸುವ ಬದಲಿಗೆ ಹತ್ತಾರು ಜನರಿಗೆ ಉದ್ಯೋಗದಾತರಾಗಿ ಸಮಾಜದ ಪ್ರಗತಿಗೆ ಕೈಜೋಡಿಸಬೇಕು. ಒಂದೇ ಬಗೆಯ ಉದ್ಯಮವನ್ನು ಎಲ್ಲರೂ ಸ್ಥಾಪಿಸುವ ಬದಲಾಗಿ ಭಿನ್ನ-ಭಿನ್ನ ಉದ್ಯಮಗಳನ್ನು ಆರಂಭಿಸಬೇಕು. ಈ ನಿಟ್ಟಿನಲ್ಲಿ ಮುಂದೆ ಬರುವ ಯುವಕರಿಗೆ ಎಲ್ಲ ಬಗೆಯ ನೆರವನ್ನು ಒದಗಿಸುವ ಮೂಲಕ ಯುವಕರ ಶಕ್ತಿ ಸಾಮರ್ಥ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವತ್ತ ನಮ್ಮ ಸಮುದಾಯ ಹೆಚ್ಚು ಗಮನ ನೀಡಬೇಕು ಎಂದರು.
ನೇಗಿಲಯೋಗಿ ಅಧ್ಯಕ್ಷರಾದ ಡಿ.ರವಿಕುಮಾರ್ ಪ್ರಾಸ್ತಾವಿಕ ನುಡಿಗಳಾಡಿ ನಮ್ಮ ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಶಿಕ್ಷಣ ಉದ್ಯೋಗ ತರಬೇತಿ ಮತ್ತಿತರ ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆಯ ಮೂಲಕ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಆಯೋಜಿಸುತ್ತಾ ಬಂದಿದ್ದು ನಮ್ಮ ಈ ಕಾರ್ಯಕ್ಕೆ ಅನೇಕ ಮಹನೀಯರು ದಾನಿಗಳು ಬೆಂಬಲ ನೀಡುತ್ತಾ ಬಂದಿದ್ದಾರೆ. ಅವರೆಲ್ಲರಿಗೂ ಸಂಸ್ಥೆ ಆಭಾರಿಯಾಗಿರುತ್ತದೆ. ಮುಂದಿನ ದಿನಗಳಲ್ಲಿ ಎಫ್ ಪಿ ಓ ಗಳ ಸ್ಥಾಪನೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಸ್ತುತ ಆಯೋಜಿಸಿರುವ ಉದ್ದಿಮೆ ಮತ್ತು ವೃತ್ತಿಪರರ ಸಮ್ಮಿಲನದ ಮೂಲಕ ಜೀವಿಗಳ ನಡುವೆ ಸಂಪರ್ಕ ಸೇತುಗಾಗಿ ಸಂಸ್ಥೆ ಕಾರ್ಯನಿರ್ವಹಿಸಲಿದೆ. ಸಮುದಾಯದ ಯುವ ಜನರ ಅನುಕೂಲಕ್ಕಾಗಿ ಹೆಚ್ಚಿನ ಸಹಕಾರ ನೀಡಬೇಕೆಂದು ಅವರು ಕೋರಿದರು.
ಸಂಸ್ಥೆಯ ಟ್ರಷ್ಟಿ ಇಂಜಿನಿಯರ್ ಇಂದ್ರೇಶ್ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರತಿನಿಧಿಗಳಿಗೆ ಕಾರ್ಯಕ್ರಮದ ವಿವರಗಳನ್ನು ಪರಿಚಯಿಸಿದರು.
ಮೈಸೂರು ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷ ಪಿ ವಿಶ್ವನಾಥ್, ಮೈಸೂರು ಮೂಡ ಮಾಜಿ ಅಧ್ಯಕ್ಷ ಯಶಸ್ವಿನಿ ಸೋಮಶೇಖರ್ ,ಕೆ ಎ ಎಸ್ ಎಸ್ ಎಫ್ ಐ ಜಂಟಿ ನಿರ್ದೇಶಕ ಸತೀಶ್ ,ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಮಂಜೇಗೌಡ ,ಗಂಗಾಧರ ಗೌಡ , ಡಾ.ಮೀನಾಕುಮಾರಿ ,ಡಾ. ಎಸ್ ಯಶಸ್ವಿನಿ , ಮಂಜುನಾಥ್ , ನಿಂಗರಾಜು , ಶಿವಶಂಕರ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಂಡ್ಯ, ರಾಮನಗರ ,ಬೆಂಗಳೂರು ,ಪಾಂಡವಪುರ , ಚನ್ನಪಟ್ಟಣ , ಕನಕಪುರ ,ಮಾಗಡಿ ,ಕೃಷ್ಣರಾಜಪೇಟೆ ಮತ್ತಿತರ ಸ್ಥಳಗಳಿಂದ ಉದ್ಯಮಿಗಳು ಆಗಮಿಸಿದ್ದರು ಸಾಹಿತಿ ಡಾ ಬಲ್ಲೇನಹಳ್ಳಿ ವಿಜಯಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಶೋಭ ರಮೇಶ್ ವಂದಿಸಿದರು .
Mysore
ಮೈವಿವಿ ಕ್ರಾಫರ್ಡ್ ಹಾಲ್ ಮುಂದೆ ಅಹೋ ರಾತ್ರಿಯ ಧರಣಿ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯು ಆ.06 ರಿಂದ ವಿಷಯವಾರು ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎನ್ನುವ ಆದೇಶ ಹೊರಡಿಸಿದ್ದು, ಈ ಆದೇಶದ ವಿರುದ್ಧ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರಗಳಿಗೆ ಕಳೆದ ಶೈಕ್ಷಣಿಕ ವರ್ಷದಂತೆ ಮುಂದುವರಿಸಬೇಕೆಂದು ಅತಿಥಿ ಉಪನ್ಯಾಸಕರು ಮೈವಿವಿ ಕ್ರಾಫರ್ಡ್ ಭವನದ ಗೇಟಿನ ಮುಂದೆ ಅಹೋ ರಾತ್ರಿಯ ಧರಣಿ ಪ್ರಾರಂಭಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಘಟಕ ಕಾಲೇಜುಗಳ ಮತ್ತು ಸ್ನಾತಕೋತರ ಅಧ್ಯಯನ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರು ಭಾಗಿಯಾಗಿದ್ದರು.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.