Hassan
ರಾಜ್ಯ ಬಜೆಟ್ ನಲ್ಲಿ ಸಕಲೇಶಪುರ ಕ್ಷೇತ್ರ ಕಡಗಣನೆ. ಶಾಸಕ ಸಿಮೆಂಟ್ ಮಂಜುನಾಥ್ ಅಸಮಾಧಾನ.

ಆಲೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿರುವ ಬಜೆಟ್ ಹಾಸನ ಜಿಲ್ಲೆಯ ಮತ್ತು ಸಕಲೇಶಪುರ ಕ್ಷೇತ್ರದ ರೈತ ವಿರೋಧಿ ಬಜೆಟ್ ಆಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದ್ದಾರೆ.
ಅಭಿವೃದ್ಧಿ ವಿಚಾರದ ಯಾವುದೇ ಅಂಶಯಿಲ್ಲ. ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಕ್ಕೆ ಈ ಬಜೆಟ್ ಮಾಡಿದ್ದಾರೆ. ಇವರು ಪ್ರಣಾಲಿಕೆಯಲ್ಲಿ ರೈತರ ಅಭಿವೃದ್ಧಿ ಬಗ್ಗೆ ಹೇಳಿದ್ರು.ಆದ್ರೆ ಇವತ್ತು ಆ ಮಾತೇ ಇಲ್ಲ.ನುಡಿದಂತೆ ನಡೆಯದ ಸರ್ಕಾರ ಇದು. ರೈತರಿಗೆ ಬಡವರಿಗೆ ಅನ್ಯಾಯ ಆಗಿರೋ ಬಜೆಟ್ ಇದಾಗಿದೆ.
ಮಲೆನಾಡು ಹಾಗೂ ಅರೆ ಮಲೆನಾಡು ಕ್ಷೇತ್ರವಾದ ಆಲೂರು ಸಕಲೇಶಪುರ ಕಟ್ಟಾಯ ವಿಧಾನ ಸಭಾ ಕ್ಷೇತ್ರವನ್ನು ಬಜೆಟ್ಟಿನಲ್ಲಿ ಕಡೆಗಣಿಸಲಾಗಿದೆ.
ಕ್ಷೇತ್ರದ ಕೆಲವು ಭಾಗದಲ್ಲಿ ಮೂರು ಜಲಾಶಯಗಳ ನೀರು ಹಾದು ಹೋಗಿದ್ದರೂ ಕೂಡ ರೈತರ ಕೃಷಿಗೆ ನೀರುಣಿಸಲು ಸಾದ್ಯವಾಗುತ್ತಿಲ್ಲ, ಕಾರಣ ನಾಲೆಗಳಲ್ಲಿ ಅಲ್ಲಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರು ಮುಂದಕ್ಕೆ ಹರಿಯದೇ ಪೋಲಾಗುತ್ತಿವೆ ಈ ನಾಲೆಗೆ ಯಾವುದೇ ಒಂದು ಉಪ ನಾಲೆಗಳಿಲ್ಲ ಇದರಿಂದ ರೈತರಿಗೆ ಉಪಯೋಗಕ್ಕೆ ಇಲ್ಲದಂತಾಗಿದೆ ಅದ್ದರಿಂದ ಸರ್ಕಾರ ಗ್ಯಾರಂಟಿಗಳಿಗೆ ಹಣ ನೀಡುವುದರ, ಬದಲು ನಾಲೆಗಳನ್ನು ದುರಸ್ತಿ ಪಡಿಸಿದರೇ ನಮ್ಮ ರೈತರು ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುತ್ತಿತ್ತು.
ಯಗಚಿ, ವಾಟೆಹೊಳೆಯ ನೀರು ಹರಿಯುವ ಕಾಲುವೆಗಳನ್ನು ದುರಸ್ತಿಗೊಳಿಸುವಂತೆ ಪ್ರಸಕ್ತ ಅಧಿ ವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರು ನಾಲೆಗಳ ದುರಸ್ತಿಗೆ ಬಿಡಿಗಾಸು ನೀಡದೆ ರೈತರನ್ನು ವಂಚಿಸಲಾಗಿದೆ. ಕಾಡಾನೆ ಹಾವಳಿಯಿಂದ ಈಗಾಗಲೇ ಕ್ಷೇತ್ರದ ರೈತರು, ಬೆಳೆಗಾರರು ನಲುಗಿ ಹೋಗಿದ್ದಾರೆ ಕಾಡಾನೆ ನಿಯಂತ್ರಣಕ್ಕೆ ಈ ಸರ್ಕಾರದಿಂದ ಯಾವುದೇ ಹಣ ಬಿಡುಗಡೆ ಮಾಡದಿರುವುದು ನೋಡಿದರೆ ರೈತರು ಹಾಗೂ ಕಾಫಿಬೆಳೆ ಗಾರರ ಮೇಲೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ ಎಂದೇನಿಸಿದೆ.
ಕಾಫಿ ಬೆಳೆಗಾರರ ಬಹುದಿನಗಳ ಬೇಡಿಕೆಯಾದ ವಿದ್ಯುತ್ ಶುಲ್ಕದ ಮೇಲಿರುವ ಬಡ್ಡಿಯನ್ನು ಮನ್ನಾ ಮಾಡುವಂತೆ ಹಲವಾರು ಬಾರಿ ಸರ್ಕಾರವನ್ನು ಒತ್ತಾಯಿಸಿದರು ಪ್ರಯೋಜನವಾಗಿಲ್ಲ ಒಟ್ಟಾರೆಯಾಗಿ ಈ ಬಾರಿಯ ಬಜೆಟ್ ನಿಂದ ಜಿಲ್ಲೆಯ ಹಾಗೂ ಕ್ಷೇತ್ರದ ಜನರಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.
ವರದಿ: ಸತೀಶ್ ಚಿಕ್ಕಕಣಗಾಲು
Hassan
ಫೆ.15 ಮತ್ತು 16 ರಂದು ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ಜಾತ್ರೆ

ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ಎರಡು ಹೋಬಳಿಗಳ ಧಾರ್ಮಿಕ ಸಂಬಂಧ ಬೆಸೆಯುವ ಪುರಾಣ ಪ್ರಸಿದ್ಧ ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ದೇವರ ಐತಿಹಾಸಿಕ ಜಾತ್ರೆ ಫೆ.೧೫ ಮತ್ತು ೧೬ ರಂದು ನಡೆಯಲಿದೆ.
ದೇವಸ್ಥಾನದಲ್ಲಿ ಫೆ.೮ ರಿಂದ ೧೭ ರವರೆಗೆ ಉತ್ಸವಗಳು ಮತ್ತು ಅನ್ನ ಸಂತರ್ಪಣೆ ನಡೆಯುತ್ತದೆ. ಇತಿಹಾಸ ಹೇಳುವಂತೆ ಒಬ್ಬ ಕೊರಮನು ಬುಟ್ಟಿ ಹೆಣೆಯಲು ಬಿದಿರು ತರಲು ಹೋಗಿದ್ದನು. ಬಿದಿರು ಮೆಣೆ (ಗುಂಪೊದಕ್ಕೆ) ಕತ್ತಿಯನ್ನು ಹೊಡೆಯುವಾಗ ಆಯತಪ್ಪಿ ಏಟು ಒಂದು ಬಂಡೆಗೆ ತಾಗುತ್ತದೆ. ಆ ಬಂಡೆಯಿಂದ ಒಂದು ಬದಿಯಲ್ಲಿ ಹಾಲು ಮತ್ತೊಂದು ಬದಿಯಲ್ಲಿ ರಕ್ತ ಬರುತ್ತದೆ ಇದರಿಂದ ಗಾಬರಿಯಾದ ಅವನು ಪ್ರಜ್ಞೆ ತಪ್ಪಿ ಬೀಳುವನು. ಮನೆಗೆ ವಾಪಾಸು ಬಾರದ ಈತನನ್ನು ಮನೆಯವರು ಹುಡುಕಿಕೊಂಡು ಹೋದರು. ಪ್ರಜ್ಞೆಬಂದ ವ್ಯಕ್ತಿಯು ನಡೆದ ವಿಷಯವನ್ನು ತಿಳಿಸುತ್ತಾನೆ.
ಸ್ಥಳವನ್ನು ಗಮನಿಸಿದಾಗ ಬ್ರಹ್ಮದೇವನ ವಿಗ್ರಹ ಪತ್ತೆಯಾಗುತ್ತದೆ.ಆ ಉದ್ಭವ ಮೂರ್ತಿಯನ್ನು ಪಾಳೆಗಾರರಿಂದ ರಕ್ಷಿಸಲೆಂದು ವಿಷ್ಣುವರ್ಧನ ರಾಜನು ದೇವಾಲಯವನ್ನು ನಿರ್ಮಾಣ ಮಾಡಿಸುತ್ತಾನೆ. ಹೊಯ್ಸಳ ದೊರೆ ವಿಷ್ಣುವರ್ಧನ ಜೈನ ಧರ್ಮದಿಂದ ವೈಷ್ಣವ ಧರ್ಮಕ್ಕೆ ಮತಾಂತರ ಹೊಂದಿದ್ದರಿಂದ ಬ್ರಹ್ಮದೇವನನ್ನು ರಂಗನಾಥನೆಂಬ ಹೆಸರಿನಿಂದ ಕರೆಯಲಾರಂಭಿಸಿದರು.
ಕೆಂಚಮ್ಮನ ಹೊಸಕೋಟೆ ಮತ್ತು ಕುಂದೂರು ಹೋಬಳಿಗೆ ಸೇರಿದ ಸುಮಾರು ೪೮ ಹಳ್ಳಿಗಳಿಗೆ ಸಂಬಂಧಿಸಿದ ಈ ಜಾತ್ರೆ ಸಂಕ್ರಾಂತಿ ಹಬ್ಬದ ದಿನದಂದು ಕುಂದೂರು ಹೋಬಳಿ ವ್ಯಾಪ್ತಿಗೊಳಪುಡುವ ಸುಮಾರು ೨೦ ಗ್ರಾಮಗಳಿಗೆ ಅಡ್ಡೆ ದೇವರು ಹೋಗುತ್ತದೆ. ಉತ್ಸವ ಮುಗಿದ ನಂತರ ಜಾತ್ರೆ ನಡೆಯುವ ಏಳು ದಿನಗಳ ಮೊದಲು ಬೆಟ್ಟದಲ್ಲಿರುವ ದೇವಾಲಯಕ್ಕೆ ಕರೆತರಲಾಗುತ್ತದೆ.
ಮೊದಲ ದಿನ ಶನಿವಾರ ದೊಡ್ಡ ಹರಿಸೇವೆ. ಭಾನುವಾರ, ಸೋಮವಾರ ಹಕ್ಕಿನ ಉತ್ಸವ ನಡೆಯುತ್ತದೆ. ಮಂಗಳವಾರ ಬಿಂದಿಗಮ್ಮ ಕಳಸ ಹೊರುವ ಪೂಜಾರಿಯವರಿಗೆ ತಲೆ ಬೋಳಿಸಿ, ಹಸೆ ಹಾಕಿ ಕಾಸೆ ವೇಷದೊಂದಿಗೆ ದೇವಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ. ಇವರು ಜಾತ್ರಾ ಮಹೋತ್ಸವ ಮುಗಿಯುವವರೆಗೂ ಹಣ್ಣ-ಹಂಪಲು ಬಿಟ್ಟರೆ ಬೇರೆನನ್ನೂ ಸೇವಿಸದೆ ಪೂಜಾ ಕೈಂಕರ್ಯದಲ್ಲಿ ತೊಡಗುತ್ತಾರೆ. ಶ್ರೀ ರಂಗನಾಥಸ್ವಾಮಿಗೂ ಬಿಂದಿಗಮ್ಮನಿಗೂ ಮದುವೆ ಮಾಡಿ ಆ ವೈಭವವನ್ನು ಆನಂದಿಸುವುದು ಈ ಜಾತ್ರೆಯ ವಿಶೇಷವಾಗಿದೆ.
ದೇವಾಲಯದಲ್ಲಿ ಗುರುವಾರ ರಾತ್ರಿ ಬಿಂದಿಗಮ್ಮನವರಿಗೆ ಹಸೆ ಹಾಕುವ ವಿಶೇಷ ಪೂಜೆ ಇರುತ್ತದೆ. ಶುಕ್ರವಾರ ರಾತ್ರಿ ಗಂಡನ ಕಡೆ ಊರಾದ ಭರತೂರಿನ ಹೊಳೆ ದಡಕ್ಕೆ ಉತ್ಸವ ಮೂರ್ತಿಯೊಂದಿಗೆ ಬಿಂದಿಗಮ್ಮನವರನ್ನು ಕರೆ ತರಲಾಗುವುದು. ಶನಿವಾರ ಹೊಳೆ ದಡದಲ್ಲಿ ಜಾತ್ರೆ ನಡೆಯುತ್ತದೆ. ಸಂಜೆ ಬಿಂದಿಗಮ್ಮನವರನ್ನು ಗಂಡನ ಮನೆಗೆ ಅಂದರೆ ರಂಗನಾಥಸ್ವಾಮಿ ದೇವಾಲಯಕ್ಕೆ ಕಳುಹಿಸುವ ಸಂದರ್ಭ ನೋಡಲೇಬೇಕಾದುದು. ಕಳಸ ಹೊರಡುವ ಮುನ್ನ ಕುಂದೂರಿನ ಗ್ರಾಮಸ್ಥರನ್ನು ಭರತೂರು ಗ್ರಾಮಸ್ಥರು ಬರಮಾಡಿಕೊಂಡು ವಿಶೇಷ ಆತಿಥ್ಯ ನೀಡಿ ಗೌರವಿಸುತ್ತಾರೆ.
ಹೂವು ತುಳಸಿಯಿಂದ ಅಲಂಕೃತವಾದ ಹರಿವಾಣದಲ್ಲಿ ಬಿಂದಿಗಮ್ಮನವರ ಕಳಸವನ್ನು ತಲೆ ಬೋಳಿಸಿದ್ದ ಪೂಜಾರಿ ತಲೆ ಮೇಲೆ ಇಡಲಾಗುತ್ತದೆ. ಸ್ವಲ್ಪ ದೂರ ನಿಧಾನವಾಗಿ ನಡೆದು ಹೋಗುತ್ತಿದ್ದ ಕಳಸ ಹೊತ್ತವರು, ನಂತರದಲ್ಲಿ ತಲೆ ಮೇಲಿರುವ ಕಳಸವನ್ನು ಕೈಯಲ್ಲಿ ಹಿಡಿಯದೆ ಓಡಲು ಪ್ರಾರಂಭ ಮಾಡುತ್ತಾರೆ. ಹೊಳೆಯಿಂದ ಸುಮಾರು ೧೦ ಕಿ. ಮೀ. ದೂರದ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಏಳು ಊರು ಬಾಗಿಲಗಳನ್ನು ದಾಟಿಕೊಂಡು ಕೇವಲ ಮುಕ್ಕಾಲು ಗಂಟೆಯಲ್ಲಿ ತಲುಪುತ್ತದೆ.
ಊರು ಬಾಗಿಲಲ್ಲಿ ಅಕ್ಕಿ ಹಸೆ ಬರೆದು ಹಣ ಹಾಕಿರುತ್ತಾರೆ. ಬಾಗಿಲು ದಾಟುವ ಸಂದರ್ಭದಲ್ಲಿ ಕಳಸ ಹೊತ್ತವರು ತನ್ನ ಗದ್ದದಿಂದ ನೆಲದ ಮೇಲಿಟ್ಟ ಹಣವನ್ನು ಮುಟ್ಟುತ್ತಾರೆೆ. ಕಳಸ ಮುಂದೆ ಹೋದ ಕೂಡಲೆ ನೆರೆದಿದ್ದವರು ಹಸೆ ಅಕ್ಕಿಯನ್ನು ಮುಗಿಬಿದ್ದು ತೆಗೆದುಕೊಳ್ಳುತ್ತಾರೆ. ಈ ಸಂದರ್ಭ ನೋಡಲು ಅತ್ಯಂತ ಕುತೂಹಲಕಾರಿಯಾಗಿರುತ್ತದೆ.
ಭಾನುವಾರ ಬೆಟ್ಟದ ಮೇಲೆ ಹಗಲು ಜಾತ್ರೆ ನಡೆಯುತ್ತದೆ. ಸೋಮವಾರ ಹೇಮಾವತಿ ನದಿ ನೀರಿನಿಂದ ಅಭಿಷೇಕದೊಂದಿಗೆ ಜಾತ್ರಾ ವಿಶೇಷ ಪೂಜಾ ಕಾರ್ಯಕ್ಕೆ ನಾಂದಿ ಹಾಡಲಾಗುತ್ತದೆ. ನಂತರ ಯುಗಾದಿ ಹಬ್ಬದ ಸಂದರ್ಭದಲ್ಲಿ ಭರತೂರು ಕಡೆಗೆ ಸೇರುವ ಸುಮಾರು ೧೦ ಗ್ರಾಮಗಳಲ್ಲಿ ಅಡ್ಡೆ ಉತ್ಸವ ನಡೆಯುತ್ತದೆ ಮುಜರಾಯಿ ಇಲಾಖೆಗೆ ಸೇರಿದ ಅಡಿಬೈಲು ಶ್ರೀ ರಂಗನಾಥಸ್ವಾಮಿ ದೇವರ ಜಾತ್ರೆ ಫೆ. ೧೫ ರಂದು ಭರತೂರು ಗ್ರಾಮ ಹೇಮಾವತಿ ಹಿನ್ನಿರು ಬದಿಯಲ್ಲಿ ಮತ್ತು ೧೬ ರಂದು ರಂಗನಬೆಟ್ಟದ ಮೇಲೆ ನಡೆಯುತ್ತದೆ ಆಲೂರಿನಿಂದ ೧೮ ಕಿ. ಮೀ. ಮಗ್ಗೆ-ರಾಯರಕೊಪ್ಪಲು ಮಾರ್ಗವಾಗಿ ಪ್ರತಿದಿನ ಸಾರಿಗೆ ಬಸ್ ವ್ಯವಸ್ಥೆ ಇರುತ್ತದೆ ಭಕ್ತರು ಸ್ವಚ್ಚತೆಯನ್ನು ಕಾಪಾಡಬೇಕು ಎನ್ನುತ್ತಾರೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಿ. ಉಮೇಶ್.
Hassan
ಅರಕಲಗೂಡು: ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟ ಮುಷ್ಕರ

ವರದಿ:-ರಾಜೇಂದ್ರ ಸುಹಾಸ್
ಅರಕಲಗೂಡು: ತಾಲೂಕು ಕಛೇರಿಯ ಆವರಣದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆಗೆ ಮುಂದಾಗಿದ್ದಾರೆ.
ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ತಾಲೂಕು ಗ್ರಾಮ ಆಡಳಿತ ಅದಿಕಾರಿಗಳ ಸಂಘದ ಪ್ರದೀಪ್ ಮಾತನಾಡಿ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದು, ಇದರ ಬಗ್ಗೆ ಹಿಂದೆ ಪ್ರತಿಭಟನೆಯ ಮೂಲಕವೇ ರಾಜ್ಯ ಸರ್ಕಾರದ ಗಮನವನ್ನ ಸೆಳೆಯಲಾಗಿತ್ತಾದರೂ ನಮ್ಮ ಬೇಡಿಕೆಗಳು ಈಡೇರಿಲ್ಲ. ಸರ್ಕಾರ ರಾಜ್ಯದ ಅಭಿವೃದ್ದಿಗೆ ಹಗಲಿರುಳು ನಮ್ಮನ್ನ ಬಳಸಿಕೊಳ್ಳುತ್ತದೆ. ಆದರೆ ನಮ್ಮಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮೀನಾಮೇಷ ಎಣಿಸುತ್ತಿದೆ. ಈ ಬಾರೀ ನಮ್ಮಗಳ ಬೇಡಿಕೆಯನ್ನ ಈಡೇರಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ತಾಲೂಕು ಕಛೇರಿ ಆವರಣದಲ್ಲಿ ಪ್ರತಿಭಟನಕಾರರು, ತಹಸಿಲ್ದಾರ್ ಮಲ್ಲಿಕಾರ್ಜುನ್ ರವರಿಗೆ ಮನವಿ ಪತ್ರ ಸಲ್ಲಿಸಿದರು.
Hassan
ಅರಕಲಗೂಡು: ಪಟ್ಟಣ ಪಂಚಾಯತಿ ಬಜೆಟ್ ಮಂಡನೆ

ವರದಿ: ರಾಜೇಂದ್ರ ಸುಹಾಸ್
ಅರಕಲಗೂಡು: ಪಟ್ಟಣದ ಸಮಗ್ರ ಅಭಿವೃದ್ದಿಗಾಗಿ 2025-26 ನೇ ಸಾಲಿನ ಆಯವ್ಯಯದಲ್ಲಿ ಆಧ್ಯತೆ ನೀಡಲಾಗಿದೆ ಎಂದು ಪಪಂಚಾಯಿತಿ ಅಧ್ಯಕ್ಷ ಪ್ರದೀಪ್‌ಕುಮಾರ್ ಆಯವ್ಯಯ ಮಂಡಿಸಿ ಸಭೆಗೆ ತಿಳಿಸಿದರು.
ಪ.ಪಂಚಾಯಿತಿ ಸಭಾಂಗಣದಲ್ಲಿ ಇಂದು ಪಪಂಚಾಯಿತಿ ಅಧ್ಯಕ್ಷ ಪ್ರದೀಪ್‌ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2025-26 ನೇ ಸಾಲಿನ ಆಯವ್ಯಯವನ್ನ ಮಂಡಿಸಿದ ಅವರು ಪ್ರಾರಂಭ ಶುಲ್ಕ 1,24,37,294 ಸೇರಿಕೊಂಡಂತೆ ಈ ವರ್ಷದ ನಿರೀಕ್ಷಿತ ಆಧಾಯ 18 ಕೋಟಿ 18 ಲಕ್ಷ 26 ಸಾವಿರದ 567 ರೂ.ಗಳು ಸೇರಿ ಒಟ್ಟು 19 ಕೋಟಿ 42 ಲಕ್ಷದ 61 ಸಾವಿರದ 861 ರೂ.ಗಳು ನಿರೀಕ್ಷೆಯಲ್ಲಿದ್ದು, ಖರ್ಚು 19 ಕೋಟಿ 32 ಲಕ್ಷದ 88 ಸಾವಿರದ 295 ನ್ನು ಅಂದಾಜಿಸಿದ್ದು, ಉಳಿತಾಯ 9 ಲಕ್ಷದ 73 ಸಾವಿರದ 566 ರೂಗಳನ್ನ ನಿರೀಕ್ಷಿಸುವ ಮೂಲಕ ಈ ವರ್ಷದ ಪಪಂಚಾಯಿತಿ ಅಯವ್ಯಯ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಸಭೆಗೆ ಅಧ್ಯಕ್ಷರು ಮಂಡಿಸಿದರು. ಆಗ ಸಭೆ ಸರ್ವಾನುಮತದಿಂದ ಅನುಮೋದಿಸಿತು.
ಆಯವ್ಯಯದ ಮುಖ್ಯಾಂಶಗಳು: ಪಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದನ್ನ ಗಮನದಲ್ಲಿಟ್ಟುಕೊಂಡು ರಸ್ತೆ, ಶುದ್ದಕುಡಿಯುವ ನೀರು, ಚಿರಂಡಿ, ಉಧ್ಯಾನವನ ಅಭಿವೃದ್ದಿ, ಬೀದಿ ದೀಪ ಹಾಗೂ ಸ್ವಚ್ಚತೆ ಮತ್ತು ಸ್ಮಶಾಣದ ಅಭಿವೃದ್ದಿಗೆ ಹೆಚ್ಚು ಆಧ್ಯತೆಯನ್ನ ನೀಡಲಾಗಿದೆ. ಈ ಬಾರೀ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುಧಾನವನ್ನ ಹೆಚ್ಚು ನಿರೀಕ್ಷಿಸಲಾಗಿದ್ದು, ಇದನ್ನ ಹೊರತುಪಡಿಸಿದರೆ ಪಪಂಚಾಯಿತಿಯ ಮಳಿಗೆಗಳ ಆಧಾಯದ ಮೇಲೆ ಹೆಚ್ಚು ಕಣ್ಣಿರಿಸಲಾಗಿದೆ.
ವಿರೋದ ಪಕ್ಷದ ಸಧಸ್ಯರಿಂದ ಶ್ಲಾಘನೆ: ಪ.ಪಂಚಾಯಿತಿಯ ಆಯವ್ಯಯ ಮಂಡಿಸಿದ ನಂತರ ಬಿ.ಜೆ.ಪಿ. ಸಧಸ್ಯೆ ರಶ್ಮಿ ಸಭೆಯನ್ನ ಉದ್ದೇಶಿಸಿ ಮಾತನಾಡಿ ಪ್ರತೀ ವರ್ಷಗಳಿಗಿಂತಲೂ ಈ ವರ್ಷ ಉತ್ತಮ ಆಯವ್ಯಯವನ್ನ ಮಂಡಿಸಿದ್ದೀರಿ, ನಿಮಗೆ ಶುಭವಾಗಲೀ, ಪಟ್ಟಣದಲ್ಲಿ ಫುಡ್‌ಕೋರ್ಟ್ ನಿರ್ಮಾಣಕ್ಕೆ ಆಧ್ಯತೆ ನೀಡಬೇಕಿತ್ತು ಎಂದು ಸಭೆಯಲ್ಲಿ ತಿಳಿಸಿದಾಗ ಅಧ್ಯಕ್ಷರು ತಮ್ಮ ನಿರೀಕ್ಷೆಯಂತೆ ಫುಡ್‌ಕೋರ್ಟ್ ನಿರ್ಮಾಣಕ್ಕೆ ಈಗಾಗಲೇ ಅಂದಾಜು ವೆಚ್ಚವನ್ನ ತಯಾರಿಸಿ ಕಾಮಗಾರಿ ಟೆಂಡರ್ ಹಂತಕ್ಕೆ ತಲುಪಿದೆ, ಶೀಘ್ರದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಪರ್ತಕರ್ತರ ಆರೋಗ್ಯ ನಿಧಿ ಸ್ಥಾಪನೆ: ಇದೇ ಪ್ರಪ್ರಥಮ ಭಾರಿಗೆ ಪಪಂಚಾಯಿತಿಯ ಆಯವ್ಯಯದಲ್ಲಿ ಪತ್ರಕರ್ತರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಪತ್ರಕರ್ತರ ಆರೋಗ್ಯ ನಿಧಿ ಸ್ಥಾಪಿಸಿ ನಿಧಿಗೆ ೫೦ ಸಾವಿರ ಹಣವನ್ನ ಮೀಸಲಿರಿಸಿದ್ದಾರೆ.
ಇಂದಿನ ಆಯವ್ಯಯದಲ್ಲಿ ಪತ್ರಕರ್ತರಿಗೆ ನೀಡಿದ ಸಹಾಯ ಹಸ್ತಕ್ಕೆ ಪತ್ರಕರ್ತರು ಪಪಂಚಾಯಿತಿ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ಸಭೆಯಲ್ಲಿ ಪಪಂಚಾಯಿತಿ ಮುಖ್ಯಾಧಿಕಾರಿ ಬಸವರಾಜು ಠಾಕಪ್ಪ ಶಿಗ್ಗಾವಿ, ಉಪಾಧ್ಯಕ್ಷ ಸುಭಾನ್ ಷರೀಫ್, ಉಪಸ್ಥಿತರಿದ್ದರು. ಅಕೌಂಟೆಂಟ್ ವಿಮಲಶಂಕರ್ ಸಭೆಯಲ್ಲಿ ಸ್ವಾಗತ ಮಾಡಿದರು.
-
Kodagu13 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu13 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Kodagu16 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Hassan21 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Mysore21 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan17 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State14 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan21 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ