Mysore
ಸಾಲಿಗ್ರಾಮ ಮುಖ್ಯ ರಸ್ತೆಯ ಬಳಿ ಬಿದ್ದಿರುವ ಬೈಕ್

ಸಾಲಿಗ್ರಾಮ ಮುಖ್ಯ ರಸ್ತೆಯ ಬಳಿ ಬಿದ್ದಿರುವ ಬೈಕ್, ಹಲವು ಅನುಮಾ ನಗಳು ಉಂಟಾಗಿದೆ ಭೇರ್ಯ -ಸಾಲಿಗ್ರಾಮ ಮುಖ್ಯ ರಸ್ತೆ ಮಾರ್ಗದ ಹತ್ತಿರ ಟ್ಯಾಂಕ್ ಬಳಿ ಬೈಕ್ ಅನಾಥವಾಗಿ ಹಳ್ಳದಲ್ಲಿ ಬಿದ್ದಿರುವುದು ನಾನಾ ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. KA-09, EL-9217 ಪ್ಲಾಟಿನ ಈ ನಂಬರಿನ ದ್ವಿ ಚಕ್ರ ವಾಹನವು ಬಿದ್ದು, ಇದರ ಬೈಕ್ ಸವಾರ ಇಲ್ಲದೇ ಇರುವುದು ಸಂಶಯ ಉಂಟಾಗುತ್ತಿದೆ, ಸ್ಥಳೀಯರ ಮಾಹಿತಿಯಿಂದ ಭೇರ್ಯ ಠಾಣೆಯ ಪೊಲೀಸ್ ರವರು ಬೈಕ್ ವಶ ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈ ಗೊಂಡಿರುತ್ತಾರೆ. ಇದರ ಸತ್ಯಾಸತ್ಯತೆ ತನಿಖೆಯಿಂದ ಗೊತ್ತಾಗಲಿದೆಯಾ ನೋಡಬೇಕಾಗಿದೆ.
ವರದಿ :ಎಸ್ ಬಿ ಹರೀಶ್
Mysore
ವಾಜಮಂಗಲ ಗ್ರಾಮದಲ್ಲಿ ಅಂಬೇಡ್ಕರ್ ಬ್ಯಾನರ್ ಹರಿದ ಕಿಡಿಗೇಡಿಗಳು

ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಹರಿದ ಕಿಡಿಗೇಡಿಗಳು
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಅನ್ನು ಕತ್ತರಿಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ನಡೆದಿದೆ.
ವಾಜಮಂಗಲದಲ್ಲಿ ಗ್ರಾಮದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ವೇಳೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಕಿಡಿಗೇಡಿಗಳು ಶುಕ್ರವಾರ ರಾತ್ರಿ ವೇಳೆಯಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಗಳನ್ನು ಹರಿದು ಅವಮಾನ ಮಾಡಿದ್ದಾರೆ.
ಅಂಬೇಡ್ಕರ್ ಅವರ ನಾಮ ಫಲಕದ ಮೇಲೆ ಚಪಲ್ಲಿ ನೇತು ಹಾಕಿ ಅಪಮಾನ ಮಾಡಿದ್ದಾರೆ.
ಗ್ರಾಮಸ್ಥರು ಸ್ಥಳದಲ್ಲೇ ಕುಳಿತು ಪ್ರತಿಭಟನೆ ಮಾಡಿದರು.
ಘಟನೆಯ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮಾತನಾಡಿ, ಈ ಘಟನೆಗೆ ಕಾರಣರಾದವರಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು.
ಜಿಲ್ಲೆಯ ಬೇರೆ ಯಾವ ಕಡೆಯೂ ಸಹ ಈ ರೀತಿಯ ಘಟನೆ ಯಾಗದಂತೆ ಮುಂಜಾಗ್ರತಾ ಕ್ರಮ ವಹಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ದನ್, ತಹಶೀಲ್ದಾರ್ ಮಹೇಶ್ ಹಾಜರಿದ್ದರು.
Mysore
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.
ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.
ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mysore
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರು: ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಮಲ ನೆನಪು ಸಮಾರಂಭದಲ್ಲಿ ಆರ್. ರಘು ಕೌಟಿಲ್ಯ ಅವರ ಭೂಮಿ ಪುತ್ರಿ, ಅಂಕಣಗಳ ಬೆಳಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ರಂಗಭೂಮಿ ಕಲಾವಿದೆ ಪದ್ಮಶ್ರೀ ಬಿ.ಜಯಶ್ರೀ ಅವರು ಭೂಮಿಪುತ್ರಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪುರುಷ ಸಮಾಜ ಹೆಣ್ಣನ್ನು ಪ್ರೀತಿಯಿಂದ ನೋಡುವುದಿಲ್ಲ. ನಿರ್ಲಕ್ಷ್ಯ ವಹಿಸುತ್ತಾರೆ. ಈ ಪುಸ್ತಕ ಓದಿದಾಗ ಪುರುಷ ಸಮಾಜಕ್ಕೆ ಹೆಂಡತಿಯನ್ನು ಪ್ರೀತಿಸಬೇಕು ಅನಿಸುತ್ತದೆ ಎಂದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ವೃತ್ತಿ ಹಾಗೂ ಸಮಾಜಸೇವೆಯಲ್ಲೂ ರಘು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಣ್ಣ ಸಮುದಾಯದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.
ಇಡೀ ರಾಜ್ಯದಲ್ಲಿ ಒಬಿಸಿ ಸಮುದಾಯದ ಜನಸಂಖ್ಯೆಯೇ ಬಹಳ ದೊಡ್ಡದಿದೆ. ನಮ್ಮ ರಾಜ್ಯದಲ್ಲಿ ಸಣ್ಣ ಪುಟ್ಟ ಸಮುದಾಯಗಳು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರುತ್ತವೆ. ಪ್ರಬಲ ಸಮುದಾಯಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಒಬಿಸಿ ಸಮುದಾಯದ ಸಂಖ್ಯೆಯೇ ದೊಡ್ಡದಿದೆ. ಸಣ್ಣ ಸಣ್ಣ ಸಮುದಾಯಗಳನ್ನು ಒಟ್ಟಾಗಿ ಸೇರಿಸಿದರೆ ಒಬಿಸಿ ಸಮುದಾಯಗಳ ಸಂಖ್ಯೆಯೇ ಹೆಚ್ಚಾಗಿದೆ. ನಾನು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವನಾಗಿದ್ದೇನೆ. ಸಣ್ಣ ಸಣ್ಣ ಒಬಿಸಿ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
.
ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಗಾಯಕಿ ಸಂಗೀತಾ ಕಟ್ಟಿ, ಕೋಮಲ ಹರ್ಷಕುಮಾರ ಗೌಡ, ಮಡ್ಡೀಕೆರೆ ಗೋಪಾಲ, ಮಾಜಿ ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur24 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Hassan24 hours ago
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ