Mysore
3 ಕೋಟಿ ರೂಪಾಯಿ ವೆಚ್ಚದಲ್ಲಿ ಖರ್ಚುಮಾಡಿ ನಿರ್ಮಿಸಿದ ರಸ್ತೆ ಇದೀಗ ಹದಗೆಟ್ಟು ಹೋಗುತ್ತಿದೆ.

ಸಾಲಿಗ್ರಾಮ : ರಸ್ತೆ ಅಭಿವೃದ್ದಿ ಪಡಿಸಿ ಅದನ್ನು ನಿರ್ವಹಣೆ ಮಾಡದೇ ನಿರ್ಲಕ್ಷ ವಹಿಸಿರುವ ಪರಿಣಾಮವಾಗಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ಖರ್ಚುಮಾಡಿ ನಿರ್ಮಿಸಿದ ರಸ್ತೆ ಇದೀಗ ಹದಗೆಟ್ಟು ಹೋಗುತ್ತಿದ್ದರು ಅಧಿಕಾರಿಗಳು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ( ಪಿ.ಎಂ.ಜಿ.ಎಸ್.ವೈ) ಅಧಿಕಾರಿಗಳ ಅಸಡ್ಡೆಯಿಂದ ಸಾಲಿಗ್ರಾಮ ತಾಲೂಕಿನ ಹಳಿಯೂರು ಗ್ರಾಮದಿಂದ ಅಂಕನಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಇದೀಗ ಗುಂಡಿಗಳು ಬಿದ್ದು ರಸ್ತೆ ಹದಗೆಟ್ಟು ಹೋಗುತ್ತಿದ್ದು, ಪ್ರಯಾಣಿಕರು ನರಕಯಾಚನೆ ಅನುಭವಿಸುವಂತೆ ಆಗಿದೆ.
ನಮ್ಮ ಗ್ರಾಮ – ನಮ್ಮ ರಸ್ತೆ ಯೋಜನೆಯಡಿ ಸುಮಾರು 3 ವರ್ಷಗಳ ಹಿಂದೆ ನಿರ್ಮಿಸಿದ ಈ ರಸ್ತೆ ಸೂಕ್ತ ನಿರ್ವಹಣೆ ಇಲ್ಲದೇ ರಸ್ತೆ ಅಭಿವೃದ್ದಿಗೆ ಹಾಕಿದ್ದ ಕಲ್ಲುಗಳು ಕಿತ್ತು ಬಂದು, ಬಿದ್ದ ಗುಂಡಿಗಳು ಮತ್ತಷ್ಟು ದೊಡ್ಡದಾಗುತ್ತಿದ್ದರು ಅದನ್ನು ಮುಚ್ಚ ಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಪರಿಣಾಮವಾಗಿ ರಸ್ತೆ ಇನ್ನಷ್ಟು ಹದಗೆಟ್ಟು ಹೋಗುತ್ತಿದೆ.
ಇದರಿಂದ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದು ಮಾತ್ರವಲ್ಲದೇ ಕೆಲವು ಕಡೆ ಡಾಂಬರು ಸಂಪೂರ್ಣವಾಗಿ ಕಿತ್ತು ಬಂದು ರಸ್ತೆ ತನ್ನ ಸ್ವರೂಪವನ್ನು ಕಳೆದು ಕೊಳ್ಳುತ್ತಿದ್ದು, ಇದರಿಂದ ಅಂಕನಹಳ್ಳಿ,ಗುಡಗನಹಳ್ಳಿ,ಬೆಣಗನಹಳ್ಳಿಗೆ ತೆರಳುವ ವಾಹನ ಸವಾರರು ಬಿದ್ದು-ಏಳುವುದು ಸಾಮಾನ್ಯವಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ರಸ್ತೆ ಕಾಮಗಾರಿ ಮಾಡಿದ ನಂತರ 5 ವರ್ಷಗಳ ಕಾಲ ಇದರ ನಿರ್ವಹಣೆ ಮಾಡಬೇಕೆಂಬ ನಿಯಮವನ್ನು ರೂಪಿಸಿ ಗುತ್ತಿಗೆದಾರನಿಗೆ ಕಾಮಗಾರಿ ಮಾಡಲು ಅವಕಾಶ ಮಾಡಿ ಕೊಡಲಾಗಿದೆ. ಅದರೆ ಕಾಮಗಾರಿ ಮುಗಿಸಿ ಹೋದ ಗುತ್ತಿಗೆದಾರ ಮತ್ತೆ ಈ ರಸ್ತೆ ಮರೆತ ಪರಿಣಾಮವಾಗಿ ಈ ರಸ್ತೆಗೆ ಈ ದುಸ್ಥಿತಿ ನಿರ್ಮಾಣ ವಾಗಿದೆ.
ಈಗಲಾದರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ( ಪಿ.ಎಂ.ಜಿ.ಎಸ್.ವೈ) ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಿಸಿ ದಿನದಿಂದ ದಿನಕ್ಕೆ ಹದಗೆಟ್ಟು ಹೋಗುತ್ತಿರುವ ಹಳಿಯೂರು-ಅಂಕನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ ಕೈಗೊಳ್ಳುವರೇ ಎಂಬುವುದನ್ನು ಕಾದು ನೋಡಬೇಕಿದೆ.
ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
Mysore
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.
ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ ಧರಣಪ್ಪಗೌಡ, ಕರ್ಪೂರವಳ್ಳಿ ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Crime
ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆ; ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಪತಿ

ನಂಜನಗೂಡು: ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಪತಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 39 ವರ್ಷದ ಮಹದೇವಸ್ವಾಮಿ ಮೃತ ದುರ್ಧೈವಿಯಾಗಿದ್ದಾನೆ. 40 ವರ್ಷದ ಸೋಮಯ್ಯ ಎಂಬುವವರ ಪತ್ನಿ ಜೊತೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿಯನ್ನು ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಸೋಮಯ್ಯ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್ ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
ರೈತರು ಹೈನುಗಾರಿಕೆಗೆ ಒತ್ತು ನೀಡಿ ಶಾಸಕ ಡಿ. ರವಿಶಂಕರ್





-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Mysore6 days ago
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
-
Hassan2 hours ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ