Connect with us

Mysore

ಪಿಎಲ್‌ಡಿ ಬ್ಯಾಂಕ್ ರೈತ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಪೌರ ಕಾರ್ಮಿಕ ದಿನಾಚರಣೆ

Published

on

ಸಾಲಿಗ್ರಾಮ : ಸ್ವಚ್ಚತೆ ಮಾಡಲು ಸರ್ಕಾರ ನೀಡುವ ಸಲಕರಣೆಗಳನ್ನು ಬಳಸಿಕೊಂಡು ಪೌರ ಕಾರ್ಮಿಕರು ಕೆಲಸ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು, ಈ ಪುರಸಭೆಯನ್ನು ನಗರ ಸಭೆಯನ್ನಾಗಿ ಮೇಲ್ದೆರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಆನಂತರ ನಿಮ್ಮಗಳಿಗೆ ಇನ್ನಷ್ಟು ಸವಲತ್ತು ದೊರೆಯಲಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಪುರಸಭೆ ವತಿಯಿಂದ ಪಿಎಲ್‌ಡಿ ಬ್ಯಾಂಕ್ ರೈತ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಪೌರ ಕಾರ್ಮಿಕ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜೀವನ ನಿರ್ವಹಣೆಗಾಗಿ ಕೆಲಸ ಮಾಡುವ ನೀವುಗಳು ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಅದಕ್ಕಾಗಿ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ಶಾಸಕರ ಕಛೇರಿ ವತಿಯಿಂದ ಮೂರು ತಿಂಗಳಿಗೊಮ್ಮೆ ಪೌರ ಕಾರ್ಮಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲು ನಿರ್ಧರಿಸಲಾಗಿದ್ದು ಇದರ ಸದ್ಬಳಕೆಯನ್ನು ಕಾರ್ಮಿಕರು ಮಾಡಿಕೊಳ್ಳಬೇಕು ಎಂದು ಕೋರಿದ ಶಾಸಕರು ವಸತಿ ಯೋಜನೆ ಸೇರಿದಂತೆ ಇತರ ಸೌಲಭ್ಯಗಳನ್ನು ನೀಡುವ ಸಂದರ್ಭದಲ್ಲಿ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಟರ್ ಮ್ಯಾನ್ ಮತ್ತು ವಾಹನ ಚಾಲಕರನ್ನು ಖಾಯಂಗೊಳ್ಳಿಸಬೇಕು ಎಂದು ಪುರಸಭೆ ಆಡಳಿತ ಮಂಡಳಿ ಮನವಿ ಸಲ್ಲಿಸಿದ್ದು ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದು ನೌಕರರಿಗೆ ಅನುಕೂಲ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕರು ತಿಳಿಸಿದರು.

ಪೌರ ಕಾರ್ಮಿಕರಾದವರು ತಮ್ಮ ಮಕ್ಕಳನ್ನು ಇದೇ ವೃತ್ತಿಗೆ ದೂಡುವ ಬದಲು ಉತ್ತಮ ಶಿಕ್ಷಣ ಕೊಡಿಸಿ ಅವರುಗಳನ್ನು ಉನ್ನತ್ತ ಮಟ್ಟದ ಅಧಿಕಾರಿಗಳನ್ನಾಗಿ ಮಾಡಲು ಪ್ರಯತ್ನಿಸಬೇಕು ಇದಕ್ಕೆ ಕ್ಷೇತ್ರದ ಶಾಸಕನಾಗಿ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದಲ್ಲದೆ ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನು ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಮನವಿ ಮಾಡಿದರು.

೨೩ ವಾರ್ಡ್ಗಳ ಸುತ್ತ ಹೊಸ ಬಡಾವಣೆಗಳು ನಿರ್ಮಾಣವಾಗುತ್ತಿದ್ದು ನಗರದ ಸೌಲಭ್ಯ ಪಡೆಯಲು ಮತ್ತು ದಾಖಲಾತಿಗಾಗಿ ಸಾರ್ವಜನಿಕರು ಪುರಸಭೆಗೆ ಅಲೆಯುತ್ತಿದ್ದಾರೆ ಈ ಬಗ್ಗೆ ಮುಖ್ಯಾಧಿಕಾರಿಗಳು ಗಮನ ಹರಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ ಶಾಸಕ ಡಿ.ರವಿಶಂಕರ್ ಸಾರ್ವಜನಿಕರಿಂದ ಅಧಿಕಾರಿಗಳು ಲಂಚ ಪಡೆಯಲು ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಕಾರ್ಮಿಕರನ್ನು ಸನ್ಮಾನಿಸಲಾಯಿತು. ದಿನಾಚರಣೆ ಅಂಗವಾಗಿ ನಡೆದ ಆಟೋಟ ಸ್ಪರ್ದೆಯಲ್ಲಿ ವಿಜೇತ ಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್, ಸದಸ್ಯರಾದ ಕೋಳಿಪ್ರಕಾಶ್, ಶಿವಕುಮಾರ್, ಸೌಮ್ಯಲೋಕೇಶ್, ಅಶ್ವಿನಿಪುಟ್ಟರಾಜು, ಉಮೇಶ್, ಶಂಕರ್, ನಟರಾಜು, ಸರೋಜಮಹದೇವ್, ವಸಂತಮ್ಮ, ಮಂಜುಳಚಿಕ್ಕವೀರು, ಇಂಜಿನಿಯರ್ ಚಂದ್ರಶೇಖರ್, ನೌಕರರಾದ ಲೋಕೇಶ್, ಗಣೇಶ್, ರಾಜೇಂದ್ರ, ರೀತುಸಿಂಗ್, ಮಂಡ್ಯರಮೇಶ್, ಯೋಗೇಶ್‌ಕುಮಾರ್ ಮತ್ತಿತರರು ಹಾಜರಿದ್ದರು.

 

  • ವರದಿ : ಹರೀಶ್ ಸಾಲಿಗ್ರಾಮ
Continue Reading
Click to comment

Leave a Reply

Your email address will not be published. Required fields are marked *

Mysore

ಪಿರಿಯಾಪಟ್ಟಣ ತಾಲೂಕಿನ ಮಾಜಿ ಶಾಸಕರಾದ ಕೆ.ಮಹದೇವ್ ಅವರ ಮನವಿ ಮೇರೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದು

Published

on

ಪಿರಿಯಾಪಟ್ಟಣ ತಾಲೂಕಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿ ಉಂಟಾಗಿರುವ ಪ್ರದೇಶಗಳಿಗೆ ಮೇ.22 ರ ಬುಧವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಭೇಟಿ ನೀಡಲಿದ್ದಾರೆ.


ಪಿರಿಯಾಪಟ್ಟಣ ತಾಲೂಕಿನ ಮಾಜಿ ಶಾಸಕರಾದ ಕೆ.ಮಹದೇವ್ ಅವರ ಮನವಿ ಮೇರೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದು

ಬೆಳಿಗ್ಗೆ 11 ಗಂಟೆಗೆ ಚಪ್ಪರದಹಳ್ಳಿ ಹಾರನಹಳ್ಳಿ ಅಂಬಲಾರೆ ಮಾರ್ಗವಾಗಿ ಮಳೆಯಿಂದ ಹಾನಿ ಉಂಟಾದ ಸ್ಥಳಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ, ಅವರೊಟ್ಟಿಗೆ ಶಾಸಕರಾದ ಜಿ.ಟಿ ದೇವೇಗೌಡ, ಮಾಜಿ ಸಚಿವರಾದ ಸಾ.ರಾ ಮಹೇಶ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಆಗಮಿಸಲಿದ್ದಾರೆ.

Continue Reading

Mysore

ಶಾಲೆಗಳಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ನಿಲಯಗಳಿಗೆ ಸಲ್ಲಿಸಲು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕೋರಿದ್ದಾರೆ.

Published

on

ಪಿರಿಯಾಪಟ್ಟಣ ತಾಲೂಕು ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಪ್ರವೇಶಾತಿ ಸಂಬಂಧ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು ಪ್ರವೇಶಾತಿ ಅರ್ಜಿಗಳನ್ನು ನಿಲಯ/ ಆಶ್ರಮ ಶಾಲೆಗಳಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ನಿಲಯಗಳಿಗೆ ಸಲ್ಲಿಸಲು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕೋರಿದ್ದಾರೆ.

ಪಿರಿಯಾಪಟ್ಟಣ ಟೌನ್ ಬೈಲಕುಪ್ಪೆ ಪಂಚವಳ್ಳಿ ರಾವಂದೂರು ಗ್ರಾಮಗಳಲ್ಲಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 5 ರಿಂದ 10ನೇ ತರಗತಿಯವರೆಗೆ ಹಾಗು ಅಬ್ಬಳತಿ ಮುತ್ತೂರು ಕಾಲೋನಿ ಮತ್ತು ದೊಡ್ಡ ಹೊಸೂರು ಗ್ರಾಮಗಳಲ್ಲಿನ ಪರಿಶಿಷ್ಟ ವರ್ಗದ ಆಶ್ರಮ ಶಾಲೆಗಳಲ್ಲಿ 1 ರಿಂದ 7 ನೇ

ತರಗತಿಯವರೆಗೆ ಮತ್ತು ಪಿರಿಯಾಪಟ್ಟಣ ಟೌನ್ ನಲ್ಲಿರುವ ಮೆಟ್ರಿಕ್ ನಂತರದ ನಂತರದ ಬಾಲಕರ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯುಸಿ ಐಟಿಐ ಪದವಿ ತರಗತಿಗಳಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಪಿರಿಯಾಪಟ್ಟಣ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಾಗು ಬಿ.ಟಿ ಮಹದೇವ 9449131475, ಜೂಲಿಯಟ್ 7892693275, ಲಲಿತಾ 9886368125, ದೇವಿ 7760456705, ಯಶೋಧ 9972593675 ಸಂಪರ್ಕಿಸುವಂತೆ ಕೋರಿದ್ದಾರೆ.

Continue Reading

Mysore

ಕಲುಷಿತ ನೀರಿನ ಪ್ರಕರಣ: ಆರೋಗ್ಯಾಧಿಕಾರಿಗಳ ಅಮಾನತು ಮಾಡುವಂತೆ ಕೆಆರ್ ಎಸ್ ಪಕ್ಷ ಆಗ್ರಹ

Published

on

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣ ಆರೋಗ್ಯ ಕಾರ್ಯಕ್ರಮವನ್ನು ಸರಿಯಾಗಿ ಕಾರ್ಯ ನಿರ್ವಹಿಸದೆ ನಿರ್ಲಕ್ಷ್ಯಮಾಡಿ, ಪರೋಕ್ಷವಾಗಿ ಜನಸಾಮಾನ್ಯರ ಸಾವಿಗೆ ಕಾರಣವಾಗಿರುವ ಜಿಲ್ಲಾ ಆರೋಗ್ಯ ಅಧಿಕಾರಿ, ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ಎಂ. ರವಿಕುಮಾರ್ ಆಗ್ರಹಿಸಿದ್ದಾರೆ.

ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಾಜೀನಾಮೆ ನೀಡಬೇಕು. ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಒಬ್ಬ ಬಡ ಯುವಕ ನೀರನ್ನು ಕುಡಿದು ಸಾವನ್ನಪ್ಪಿದ್ದಾನೆ. ಹಾಗೂ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ 114ಕ್ಕೂ ಹೆಚ್ಚು ಸಾರ್ವಜನಿಕರು ಕಲುಷಿತ ನೀರನ್ನು ಕುಡಿದು ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಯೋಗ್ಯ ಅಧಿಕಾರಿಗಳನ್ನು ನೇಮಿಸಿಕೊಂಡಿರುವ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸರಿಯಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡದೆ ಮತ್ತು ನೀರನ್ನು ಸಂಗ್ರಹಿಸುವ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸದೆ ಕಲುಷಿತ ನೀರನ್ನು ಜನರಿಗೆ ಕುಡಿಯಲು ಸರಬರಾಜು ಮಾಡಿರುವುದರಿಂದ ಈ ಅನಾಹುತಗಳು ಇದಕ್ಕೆ ಮೂಲ ಕಾರಣವಾಗಿದೆ.

ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕುಮಾರಸ್ವಾಮಿ ಗ್ರಾಮೀಣ ಆರೋಗ್ಯ ಕಾರ್ಯಕ್ರಮದ ಬಗ್ಗೆ ಅಸಡ್ಡೆ ತೋರಿಸುವುದು ಮತ್ತು ಸ್ಥಳೀಯ ಅಧಿಕಾರಿಗಳ ಕಾರ್ಯವೈಖರಿಯನ್ನ ಮೇಲ್ವಿಚಾರಣೆ ಮಾಡದೇ ಕಛೇರಿಯಲ್ಲೇ ಕುಳಿತು ಸರ್ಕಾರದ ಸವಲತ್ತುಗಳನ್ನು ಅನುಭವಿಸುತ್ತಾ ಇರುವುದು. ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಗ್ರಾಮೀಣ ಪ್ರದೇಶಗಳಿಗೆ ಹೋಗಿ ಮೇಲ್ವಿಚಾರಣೆ ಮಾಡದೇ ಇರುವುದೇ ಕಾರಣವಾಗಿದೆ. ಆದ್ದರಿಂದ ನಿಷ್ಪಕ್ಷವಾದ ತನಿಖೆ ಮಾಡಬೇಕು. ತಕ್ಷಣವೇ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕುಮಾರಸ್ವಾಮಿಯವರನ್ನ ಕರ್ತವದಿಂದ ಅಮಾನತು ಮಾಡಬೇಕು. ಈ ದುರ್ಘಟನೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮಳೆಗಾಲದಲ್ಲಿ ಇದು ಸರ್ವೇಸಾಮಾನ್ಯ ಇಂತಹ ಸಾವು ನೋವುಗಳು ಆಗುತ್ತವೆ ಎಂಬ ಮಾತಿನಲ್ಲಿ ಹೇಳಿರುವುದು ಆತನ ದುರಾಂಕಾರಿ ವರ್ತನೆಯಾಗಿದ್ದು, ಆತನು ಆ ಹುದ್ದೆಯಲ್ಲಿ ಹೊಂದಿರುದಕ್ಕೆ ಲಾಯಕ್ ಇಲ್ಲದ ಅಯೋಗ್ಯ ಎಂದು ಕಿಡಿಕಾರಿದ್ದಾರೆ.

ಜನಸಾಮಾನ್ಯರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಈತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತಿಯ ಪಿಡಿಒ ಕೂಡ ಇದಕ್ಕೆ ನೇರ ಹೊಣೆಯಾಗಿದ್ದಾರೆ ಅವರನ್ನು ಕೂಡ ಸೇವೆಯಿಂದ ಅಮಾನತು ಪಡಿಸಬೇಕು. ಸಾವಿಗಿಡಾಗಿರುವ ಕನಕರಾಜು ಕುಟುಂಬಕ್ಕೆ 50 ಲಕ್ಷ ಪರಿಹಾರವನ್ನು ಕೂಡಲೇ ಕೊಡಬೇಕು. ಆತನ ಸಾವಿಗೆ ಕಾರಣವಾಗಿರುವ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಒಂದು ವೇಳೆ ಇದನ್ನು ನಿರ್ಲಕ್ಷ್ಯ ಮಾಡಿದ್ದಲ್ಲಿ, ಜಿಲ್ಲಾಧಿಕಾರಿಗಳೇ ಇದರ ಹೊಣೆಯನ್ನು ಹೊರಬೇಕಾಗುತ್ತದೆ. ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮತ್ತು ಉಸ್ತುವಾರಿ ಸಚಿವರ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

Continue Reading

Trending

error: Content is protected !!