Mysore
ರಾಜ್ಯದ ಪ್ರತಿಯೊಬ್ಬರು ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕೆಂಬ ದೃಷ್ಟಿಯಿಂದ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,
ಹನೂರು: ರಾಜ್ಯದ ಪ್ರತಿಯೊಬ್ಬರು ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕೆಂಬ ದೃಷ್ಟಿಯಿಂದ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ದೇಶದ ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹಾದೇವಪ್ಪ ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ತಿಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಪ್ರತಿನಿತ್ಯ ಸಂವಿಧಾನ ಪೀಠಿಕೆ ಓದುವುದು ಹಾಗೂ ಸಂವಿಧಾನದ ಬಗ್ಗೆ ಚರ್ಚೆಗಳು ನಡೆದಾಗ ಇದರ ಮೂಲ ಉದ್ದೇಶ ತಿಳಿಯುತ್ತದೆ ಎಂಬ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ನಾವು ಸಂವಿಧಾನ ರಕ್ಷಣೆ ಮಾಡಿದರೆ ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತದೆ. ರಾಜ್ಯದಲ್ಲಿ ಮಹಿಳೆಯರಿಗೆ ನಿರ್ದಿಷ್ಟವಾದ ಆದಾಯ ಇಲ್ಲದೆ ಇರುವುದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಒಂದು ಕೋಟಿ 32 ಲಕ್ಷ ಜನರಿಗೆ 2 ಸಾವಿರ ನೀಡಲಾಗುತ್ತಿದೆ. ಸರ್ಕಾರದ 5 ಯೋಜನೆಗಳಿಂದ ಸುಮಾರು ಐದೂ ಸಾವಿರದ ವರೆಗೆ ಗ್ಯಾರಂಟಿ ಆದಾಯ ಸಿಗುತ್ತಿದೆ ಇದರಿಂದ ಬದುಕಿಗೆ ಭರವಸೆ ಬಂದಿದೆ. ಪ್ರತಿಯೊಬ್ಬರಿಗೂ ಸಮಾನತೆ, ಸಮಾನ ಅವಕಾಶ ಕೊಡುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಸಂವಿಧಾನದ ಆಶಯದಂತೆ ಗ್ಯಾರಂಟಿ ಯೋಜನೆಗಳು ಬದುಕುವುದಕ್ಕೆ ಅನುಕೂಲ ಕಲ್ಪಿಸಲಾಗಿದೆ. ನಾವು ಸಂವಿಧಾನವನ್ನು ಉಳಿಸಿಕೊಳ್ಳದಿದ್ದರೆ ಭಾರತ ಇನ್ನೆಂದು ಸ್ವಾತಂತ್ರವಾಗಲಾರದು ಸ್ವಾತಂತ್ರದ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಕೋಮು ಸೌಹಾರ್ದತೆ ಎಲ್ಲ ಧರ್ಮದವರು ಸಾಮರಸ್ಯಯಿಂದ ಅಸ್ಪೃಶ್ಯತೆ ನಿವಾರಣೆಯಾಗಬೇಕು, ಸಮೃದ್ಧ ಭಾರತ ನಿರ್ಮಾಣವಾಗಬೇಕು ಕೃಷಿ ಮತ್ತು ಕೃಷಿ ಆಧಾರಿತ ಬದುಕು ಅಭಿವೃದ್ಧಿಯಾಗಬೇಕು ಈ ಉದ್ದೇಶವನ್ನು ಸಂವಿಧಾನದಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿಯವರು ಒಂದು ಧರ್ಮದ ದೇಶ ಕಟ್ಟಬೇಕು ಒಂದು ಮತ ಒಂದು ಚುನಾವಣೆ ಒಂದು ರಾಷ್ಟ್ರ ಎಂದು ಹೇಳಲು ಹೊರಟಿದ್ದಾರೆ. ವ್ಯಕ್ತಿ ಪೂಜೆ ಮಾಡಬೇಡಿ ಎಂದು ಹೇಳುತ್ತಾರೆ. ದೇಶದಲ್ಲಿ ಸರ್ವಾಧಿಕಾರ ಆಡಳಿತ ಬಂದರೆ ಜನರ ಜೊತೆ ಬೆರೆಯುವುದು ಜನಸಾಮಾನ್ಯರ ನೋವು ಸಮಸ್ಯೆ ಕೇಳದಿದ್ದರೆ ಪರಿಹಾರ ಹೇಗೆ ಸಾಧ್ಯ ಜನರ ಪರವಾಗಿ ನ್ಯಾಯ ಕೊಡಿಸುವವರು ಯಾರು ಎಂದು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಬಿಜೆಪಿಯವರು ಸಂವಿಧಾನ ರಕ್ಷಣೆ ಮಾಡುವ ಬದಲು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ದೇಶದ ಜನ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಆದ್ದರಿಂದ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯು ಎಚ್ಚೆತ್ತುಕೊಳ್ಳಬೇಕು ಎಂದರು.
ಮಾಜಿ ಶಾಸಕ ಆರ್ ನರೇಂದ್ರ ಮಾತನಾಡಿ ಸಂವಿಧಾನ ಹಾಗೂ ಸ್ವಾತಂತ್ರ್ಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು. ಚುನಾವಣಾ ಪೂರ್ವದಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಬಿಜೆಪಿಯವರು ಹಾಸ್ಯ ಮಾಡಿದರು. ನೀವು ಯಾವ ಕಾರಣಕ್ಕೂ ಗ್ಯಾರಂಟಿ ಅನುಷ್ಠಾನ ಮಾಡಲು ಸಾಧ್ಯವೇ ಇಲ್ಲ ರಾಜ್ಯ ದೀವಾಳಿಯಾಗುತ್ತದೆ ಎಂದಿದ್ದರು, ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗ್ಯಾಸ್ ಹಾಗೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾದಾಗ ರಸ್ತೆಯಲ್ಲಿ ಒಲೆ ಇಟ್ಟು ಪ್ರತಿಭಟನೆ ನಡೆಸಿದ್ದರು .ಇಂದು ಪ್ರತಿಯೊಂದು ಬೆಲೆ ಏರಿಕೆಯಾಗಿದ್ದರು ಯಾರೊಬ್ಬರು ಮಾತನಾಡದೆ ಇರುವುದು ವಿಪರ್ಯಾಸ, ಕಾಂಗ್ರೆಸ್ ಪಕ್ಷದವರು ನಿಯತ್ತಾಗಿ ಗೆಯ್ಯುವ ಎತ್ತುಗಳು, ಬಿಜೆಪಿಯವರು ಹೋರಿಗಳು ಎಂದು ಬಿಜೆಪಿಯವರ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ಕೋಟೆ ಶಿವಣ್ಣ ಮಾತನಾಡಿ ಬಿಜೆಪಿಯಲ್ಲಿ ಉಸಿರು ಗಟ್ಟುವ ವಾತಾವರಣ ಇದ್ದಿದ್ದರಿಂದ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ. ಸಿದ್ದರಾಮಯ್ಯನವರು ನೀಡಿರುವ ಐದು ಭರವಸೆಗಳಿಂದ ಬಡವರು ಮಹಿಳೆಯರು ರೈತಾಪಿ ವರ್ಗದವರಿಗೆ ತುಂಬಾ ಅನುಕೂಲವಾಗಿದೆ. ದೇಶದಲ್ಲಿ ಸಂವಿಧಾನ ಉಳಿಸಲು ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮುಕುಂದ ವರ್ಮ, ಈಶ್ವರ್, ಕೆಪಿಸಿಸಿ ಉಪಾಧ್ಯಕ್ಷ ಜಿ ಎನ್ ನಂಜುಂಡಸ್ವಾಮಿ, ಪಟ್ಟಣ ಪಂಚಾಯತಿ ಸದಸ್ಯ ಗಿರೀಶ್, ಹರೀಶ್, ಸಂಪತ್, ಮುಖಂಡರಾದ ರಾಮಪುರ ಬಸವರಾಜು, ವಿಷ್ಣುಕುಮಾರ್, ಮದುವನಹಳ್ಳಿ ಶಿವಕುಮಾರ್ ಪಾಳ್ಯ ಕೃಷ್ಣ ಮಂಗಲ ಪುಟ್ಟರಾಜು, ಮಾದೇಶ್, ಅಶ್ವಿನ್ ಉದ್ಯಮಿ ರಂಗಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.
Mysore
ಹುಲಿ ದಾಳಿಗೆ ಹಸು ಬಲಿ : ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರಿಂದ ಪ್ರತಿಭಟನೆ
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಂಗಲ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದ್ದು, ಹುಲಿ ಸೆರೆ ಹಿಡಿಯುವಂತೆ ಮುತ್ತುರಾಯನ ಹೊಸಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಗ್ರಾಮಸ್ಥರು, ಎಲ್ಲಿಯ ತನಕ ಹೋರಾಟ ಹುಲಿ ಹಿಡಿಯುವ ತನಕ ಹೋರಾಟ ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಹಿಡಿಯುವಂತೆ ಗ್ರಾಮದ ಮುಖ್ಯರಸ್ತೆಯಲ್ಲಿ ವಾಹನ ತಡೆದು, ಟೈರಿಗೆ ಬೆಂಕಿ ಹಚ್ಚಿ ಧರಣಿ ಮಾಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವರಾಜ್, ಜಗದೀಶ್, ಪ್ರಸನ್ನ, ರಾಜಶೇಖರ, ರಾಜನಾಯಕ, ಶ್ರಿನಿವಾಸ, ಕುಮಾರ, ವಿಶ್ವನಾಥ್, ವೇಣು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Mysore
ಗ್ರಾ.ಪಂ.ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ: ಡಾ.ಮಲ್ಲಿಕಾರ್ಜುನಸ್ವಾಮಿ
ತಿ.ನರಸೀಪುರ: ತಾಲೂಕಿನ ಟಿ.ದೊಡ್ಡಪುರ ಗ್ರಾಮ ಪಂಚಾಯಿತಿಯಲ್ಲಿ 2024-25ನೇ ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನೆಯನ್ನು ನಡೆಸಲಾಯಿತು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಪುಟ್ಟಸ್ವಾಮಿ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಲೆಕ್ಕ ಪರಿಶೋಧಕ ರಂಗರಾಜು 2024-25ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯ 34,94,332 ರೂ.ಗಳ ವೆಚ್ಚದಲ್ಲಿ ನಡೆಸಿದ 12 ಕಾಮಗಾರಿಗಳು ಮತ್ತು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 1,27,10,624 ರೂ.ಗಳ ವೆಚ್ಚದಲ್ಲಿ ಕೈಗೊಂಡ 116 ಕಾಮಗಾರಿಗಳ ಲೆಕ್ಕವನ್ನು ಸಭೆಯಲ್ಲಿ ಮಂಡಿಸಿದರು.

ಸಭೆಯನ್ನು ಉದ್ದೇಶಿಸಿ ನೋಡಲ್ ಅಧಿಕಾರಿ ಡಾ.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ಗ್ರಾಮ ಪಂಚಾಯಿತಿಯು ಸ್ಥಳೀಯ ಆಡಳಿತ ಸಂಸ್ಥೆಯಾಗಿದ್ದು, ಇದು ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ. ಸಾರ್ವಜನಿಕರು ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಪಡೆಯುವುದರ ಜೊತೆ-ಜೊತೆಗೆ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕು ಎಂದರು.
ಸಭೆಯಲ್ಲಿ ಉಪಾಧ್ಯಕ್ಷೆ ಮಂಜುಳಾ, ಸದಸ್ಯರಾದ ಆರ್.ಮಾದೇಶ್, ಜಯಬಸವಣ್ಣ,ರಾಜೇಶ್, ಮಹದೇವಮ್ಮ,ಚಿಕ್ಕತಾಯಮ್ಮ, ಬಸಮ್ಮಣ್ಣಿ,ಆರ್.ಭಾರತಿ,ರಾಜಮ್ಮ, ಸುಕನ್ಯಾ ಮಹೇಶ್,ಪಿಡಿಓ ದಯಾನಂದ,ಕೃಷಿ ಇಲಾಖೆಯ ವಿಶಾಲು,ಕಾರ್ಯದರ್ಶಿ ಪುರುಷೋತ್ತಮ್,ರೇಷ್ಮೆ ಇಲಾಖೆ ಈಶ್ವರ್,ಬಿಲ್ ಕಲೆಕ್ಟರ್ ಸಂಕೇಶ್, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.
Mysore
ಸಿಸಿಬಿ ಪೊಲೀಸರ ಕಾರ್ಯಾಚರಣೆ: 17 ಲಕ್ಷ ರೂ. ಮೌಲ್ಯದ ಗಾಂಜಾ ವಶ, 2 ಆರೋಪಿ ಅರೆಸ್ಟ್
ಮೈಸೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 17 ಲಕ್ಷ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶ ಪಡೆದು, ಇಬ್ಬರು ಆರೊಪಿಗಳನ್ನು ಬಂಧಿಸಿದ್ದಾರೆ.
ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ನಾಯ್ಡುನಗರದಲ್ಲಿ ಸಿಸಿಬಿ ಪೊಲೀಸರು ದಿಢೀರ್ ದಾಳಿ ಮಾಡಿ ಸುಮಾರು 17 ಲಕ್ಷ ರೂ. ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಹೈಡ್ರೋ ಗಾಂಜಾ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬುವರ ಬಂಧನವಾಗಿದೆ.
ಇನ್ನೂ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್. ಆರ್. ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ 1989ರ ಅಡಿಯಲ್ಲಿ FIR ದಾಖಲಾಗಿದೆ.
-
Hassan18 hours agoಸರ್ಕಾರಿ ಆದೇಶ ಉಲ್ಲಂಘಿಸಿ ಕ್ರಿಸ್ಮಸ್ ರಜೆ ದುರುಪಯೋಗ : ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ
-
Hassan15 hours agoಡಿ.14 ರಿಂದ ಜ.4 ರವರೆಗೂ ಬಾಳ್ಳುಪೇಟೆಯಲ್ಲಿ ಯೋಗ, ಧ್ಯಾನ ಶಿಬಿರ
-
Kodagu17 hours agoಏ.24 ರಿಂದ 28ರ ವರೆಗೆ ಮೇಕೇರಿ ಮಸೀದಿಯ ಮಖಾಂ ಉರೂಸ್
-
Hassan13 hours agoಡಿ. 16ಕ್ಕೆ ಖಾಸಗಿ ವಿದ್ಯಾಸಂಸ್ಥೆ ವಿರುದ್ಧ ಪ್ರತಿಭಟನೆ : ಎಂ.ಡಿ.ಬಾಲರಾಜು ಆಗ್ರಹ
-
Chamarajanagar14 hours agoರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ವಿದ್ಯುಕ್ತ ಚಾಲನೆ
-
Mysore16 hours agoಗ್ರಾ.ಪಂ.ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ: ಡಾ.ಮಲ್ಲಿಕಾರ್ಜುನಸ್ವಾಮಿ
-
Mandya17 hours agoಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ: ಎಸಿ ಚೇತನಾ ಯಾದವ್ ಕರೆ
-
Hassan15 hours agoನೂತನ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದ ಸಿಮೆಂಟ್ ಮಂಜು
