Location
ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ*.

*ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ*.
*ಸಂವಿಧಾನದ ವಿರುದ್ಧದ ಅಪಪ್ರಚಾರವನ್ನು ಯಾರೂ ಸಹಿಸಬಾರದು*
*ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು*: *ಮುಖ್ಯಮಂತ್ರಿ ಸಿದ್ದರಾಮಯ್ಯ*
ಬೆಂಗಳೂರು, ಫೆಬ್ರವರಿ 24: ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಲೇಖಿಸಿದರು
ನಗರದ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು. 1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ ಈ ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ ಎಂದರು.
*ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ*
ದೇಶದಲ್ಲಿ ಅಸಮಾನತೆಯನ್ನು ತೊಲಗಿಸಬೇಕು. ನಾವು ವೈರುಧ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆಯುಳ್ಳ ಸಮಾಜದಲ್ಲಿ ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ. ಸಂವಿಧಾನ ಯಶಸ್ವಿಯಾಗಲು ಇದು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ
ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದರು.
ಸಂವಿಧಾನ ಜಾರಿಯಾದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಸಂವಿಧಾನದ ಪೀಠಿಕೆ, ಆಶಯಗಳನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕೆಂದು 2024 ಜನವರಿ 26 ರಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ. 31 ಜಿಲ್ಲೆಗಳಲ್ಲಿ ಸಂವಿಧಾನದ ಉದ್ದೇಶ, ಅಗತ್ಯ, ಅನಿವಾರ್ಯತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರೀಯ ಏಕತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
*ಶ್ರೇಷ್ಠ ಸಂವಿಧಾನ*
ಸಂವಿಧಾನವನ್ನು ಓದುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅನೇಕ ದೇಶಗಳ ಸಂವಿಧಾನ ಓದಿ ಅರ್ಥ ಮಾಡಿಕೊಂಡು ದೇಶದ ಸಮಸ್ಯೆಗಳಿಗೆ ಅಪರಿಹಾರ ಸೂಚಿಸುವ ರೀತಿಯಲ್ಲಿ ಸಂವಿಧಾನ ರಚಿಸಿದ್ದಾರೆ. ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳು ಅತ್ಯುತ್ತಮ ಚಟುವಟಿಕೆ ಆಯೋಜಿಸಿದ್ದ ತುಮಕೂರು ಜಿಲ್ಲೆ, ದಾವಣಗೆರೆ, ಮೈಸೂರು, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಬಹುಮಾನ ಹಾಗೂ ನೆನಪಿನ ಕಾಣಿಕೆ ವಿತರಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ , ಸಚಿವ ಪ್ರಿಯಾಂಕ ಖರ್ಗೆ ಶಾಸಕ ಸೋಮಶೇಖರ್,ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
Chamarajanagar
ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ ಸವಾರಿಗೆ ಗಾಯ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಬೆಟ್ಟದಮಾದಹಳ್ಳಿ ಹಾಗೂ ಭೋಗಯ್ಯನಹುಂಡಿಯ ಮುಖ್ಯ ರಸ್ತೆಯಲ್ಲಿ ಎರಡು ಸ್ಕೋಟರ್ ಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು.
ಗಾಯಾಳುಗಳಾದ ಭೋಗಯ್ಯನಹುಂಡಿ ಗ್ರಾಮದ ಸುನಿ ಹಾಗೂ ಬೆಟ್ಟದಮಾದಹಳ್ಳಿ ಗ್ರಾಮದ ರಂಗಸ್ವಾಮಿ ಎಂಬುವರ ಬೈಕ್ ಗಳ ನಡುವಿನ ಡಿಕ್ಕಿಯಾಗಿ ಇಬ್ಬರಿಗೂ ತಲೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
Mysore
ಮೇ.04ರಂದು ಭಗೀರಥ ಜಯಂತಿಯನ್ನು ಆಚರಣೆ

ಮಹದೇವಸ್ವಾಮಿ ಪಟೇಲ್
ನಂಜನಗೂಡು : ಮೇ ನಾಲ್ಕರಂದು ಸಾಂಕೇತಿಕವಾಗಿ ಭಗೀರಥ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ನಂಜನಗೂಡು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಬಳಿಕ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಅವರನ್ನು ಆಹ್ವಾನ ಮಾಡಿ ಅದ್ದೂರಿಯಾಗಿ ಭಗಿರಥ ಜಯಂತಿಯನ್ನು ನಡೆಸಲು ಸಮಾಜದ ಮುಖಂಡರು ಸಲಹೆ ನೀಡಿದ್ದೀರಿ. ಇಂದು ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುತ್ತೇನೆ. ಮುಖ್ಯಮಂತ್ರಿಗಳು ದಿನಾಂಕ ಸೂಚಿಸಿದ ಬಳಿಕ, ಕಾರ್ಯಕ್ರಮ ರೂಪ ರೇಷೆ ಬಗ್ಗೆ ಮತ್ತೊಂದು ಸಭೆಯನ್ನು ಕರೆದು ತೀರ್ಮಾನ ಮಾಡೋಣ. ಕಳೆದ ಬಾರಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಚರ್ಚಾ ಸ್ಪರ್ಧೆ ಮಾಡಿ ಅರ್ಥಪೂರ್ಣ ಜಯಂತಿಯನ್ನು ಆಚರಿಸಲಾಗಿತ್ತು. ಅದೇ ಮಾದರಿಯಲ್ಲಿ ಜಯಂತಿ ನಡೆಸೋಣ ಎಂದರು. ಜಿಲ್ಲಾ ಮಟ್ಟಕ್ಕಿಂತ ತಾಲೂಕು ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಜಯಂತಿ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷದ ಮಾಜಿ ತಾಲೂಕು ಅಧ್ಯಕ್ಷ ಮೂಗಶಟ್ಟಿ ಮಾತನಾಡಿ ನಿಮ್ಮ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಕರೆಸಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು. ಜನರನ್ನು ಸೇರಿಸುವ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ ಎಂದರು
ನಂತರ ಹೆಮ್ಮರಗಾಲ ಸೋಮಣ್ಣ ಮಾತನಾಡಿ, ಭಗೀರಥ ಜಯಂತಿ ಆಚರಣೆ ಮಾಡಿ ಮೂರು ವರ್ಷಗಳಾಗಿವೆ. ಮುಖ್ಯಮಂತ್ರಿ ಅವರನ್ನು ಕರೆಸಿ, ನಂಜನಗೂಡು ಶಾಸಕರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ಜಯಂತಿ ಆಚರಿಸಲು ಸಮಾಜದ ಮುಖಂಡರು ತೀರ್ಮಾನಿಸಿದ್ದಾರೆ. ಸಭೆಗೆ ಸಮಾಜದ 10,000ಕ್ಕೂ ಹೆಚ್ಚು ಜನರ ಸೇರುವ ನಿರೀಕ್ಷೆ ಇದೆ ಎಂದರು.
ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮೂಗ ಶೆಟ್ಟಿ, ಹೆಮ್ಮರಗಾಲ ಸೋಮಣ್ಣ, ಹಾಡ್ಯ ರಂಗಸ್ವಾಮಿ, ಹೆಡತಲೆ ದೊರೆಸ್ವಾಮಿ ನಾಯಕ, ಲತಾ ಸಿದ್ದಶೆಟ್ಟಿ, ಕರಳಪುರ ನಾಗರಾಜು, ಟಿಪಿ ಶಿವಣ್ಣ, ಗೋವಿಂದರಾಜು, ಮಹದೇವ್, ಮುದ್ದು ಮಾದ ಶೆಟ್ಟಿ, ಸಿದ್ದರಾಜು, ನಾಗಮಣಿ ಶಂಕ್ರಪ್ಪ, ಬಾಲಚಂದ್ರ, ಕಲ್ಲಂಗಡಿ ಮಹದೇವಸ್ವಾಮಿ, ತರದಲೆ ಮಹದೇವು, ಶ್ರೀನಿವಾಸ್, ಸಿದ್ಧ ಶೆಟ್ಟಿ ಸೇರಿದಂತೆ ಇತರರು ಹಾಜರಿದ್ದರು.
Chamarajanagar
ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ

ಹನೂರು : ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ..
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ನಿವಾಸಿ ಪರಶುರಾಮ್( 32) ಮೃತಪಟ್ಟ ದುರ್ದೈವಿ.
ಕಳೆದ 9 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಕಳೆದ 2 ವರ್ಷಗಳಿಂದ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಶನಿವಾರ ಬೆಳಿಗ್ಗೆ ಕುಸಿದು ಬಿದಿದ್ದು ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ, ಮೃತ ವ್ಯಕ್ತಿಯು ರಾಯಚೂರು ಜಿಲ್ಲೆಯವರಾಗಿದ್ದು ಕುಟುಂಸ್ಥರಿಗೆ ರಾಮಾಪುರ ಪೊಲೀಸರು ಮಾಹಿತಿ ನೀಡಿ ಮೃತ ವ್ಯಕ್ತಿಯ ಶವವನ್ನು ಚಾಮರಾಜನಗರದ ಸೀಮ್ಸ್ ಆಸ್ಪತ್ರೆ ಇರಿಸಲಾಗಿದ್ದು, ಕುಟುಂಬಸ್ಥರು ಬಂದಾಗ ಅವರಿಗೆ ಹಸ್ತಾಂತರಿಸಲಾಗುವುದು ಎನ್ನಲಾಗಿದೆ..
ಸಂತಾಪ : ಮೃತ ಪರುಶುರಾಮ್ ಅವರಿಗೆ ಸಾವಿನ ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಡಿವೈಎಸ್ಪಿ ಧರ್ಮೇಂದ್ರ, ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ರಾಮಾಪುರ ಠಾಣೆಯ ಸಿಬ್ಬಂದಿ ಮೃತ ವ್ಯಕ್ತಿಗೆ ಸಂತಾಪ ಸೂಚಿಸಿದ್ದಾರೆ…
-
State10 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized7 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Mysore10 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Mysore12 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Hassan3 hours ago
ಜಮೀನು ವಿಚಾಕ್ಕೆ ಕೊಲೆ
-
Hassan6 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Kodagu6 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ