Connect with us

Mandya

ತುಂಬಕೆರೆ ಗ್ರಾಮದ ಪ್ರಾಚೀನ ಶಾಂತೇಶ್ವರ ದೇವಾಲಯದ ಬಳಿ ಸಂರಕ್ಷಣಾ ಅಭಿಯಾನ

Published

on

ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಇಂದು ಇಂದು ಮಂಡ್ಯ ತಾಲೂಕಿನ ತುಂಬಕೆರೆ ಗ್ರಾಮದ ಪ್ರಾಚೀನ ಶಾಂತೇಶ್ವರ ದೇವಾಲಯದ ಬಳಿ ಸಂರಕ್ಷಣಾ ಅಭಿಯಾನದ ಅಂಗವಾಗಿ ಸ್ವಚ್ಛಗೊಳಿಸಲಾಯಿತು.

ನಮ್ಮ ಇತಿಹಾಸ ಗತವೈಭವವನ್ನು ಸಾರುವ ಇಂತಹ ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸಬೇಕು* ಎಂದು ಮಂಡ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳಾದ ಎಂ.ಎಸ್ ವೀಣಾ ಅವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಾದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮುಂದೆ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ನಮ್ಮ ನಡಿಗೆ ಪರಂಪರೆ ಎಡೆಗೆ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ನಡೆಸಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Mandya

ತಾರತಮ್ಯವಿಲ್ಲದೆ ಬರಗಾಲದ ಪರಿಹಾರ ವಿತರಣೆಯಾಗಲಿ – ಚಂದ್ರಶೇಖರ್ ಆಗ್ರಹ

Published

on

ಮಂಡ್ಯ: ಯಾವುದೇ ತಾರತಮ್ಯ ಮಾಡದೆ ರೈತರಿಗೆ ಪರಿಹಾರ ಹಣವನ್ನು ಹಂಚಿಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಇಂಡವಾಳು ಚಂದ್ರಶೇಖರ್ ಆಗ್ರಹ ಪಡಿಸಿದರು .

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರೈತರ ನೆರವಿಗೆ ನಿಲ್ಲಬೇಕಿದ್ದ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಮನ್ವಯ ಕೊರತೆಯಿಂದ ರೈತರಿಗೆ ಬರ ಪರಿಹಾರದ ಹಣ ಪಾವತಿಸಿಲ್ಲ. ಆದ್ದರಿಂದ ಕೂಡಲೇ ಯಾವುದೇ ತಾರತಮ್ಯ ಮಾಡದೆ ಪಾಳು ಬಿದ್ದ ಜಮೀನಿಗೂ ಎಕರೆಗೆ 25,000ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರೈತರು ಬೆಳೆದಿದ್ದ ಕಬ್ಬು ಬೆಳೆ ಒಣಗಿದ್ದು ಆದ್ದರಿಂದ ಈ ಹಂಗಾಮಿನ ಕಬ್ಬಿನ ಬೆಳೆಗೆ ಪ್ರತಿ ಎಕರೆಗೆ 50,000 ರೂಪಾಯಿ ನೀಡಬೇಕು, ತೆಂಗು, ಅಡಿಕೆ, ಮಾವು, ಸಪೋಟ ಸೇರಿದಂತೆ ಇನ್ನಿತರ ಬೆಳೆಗಳಿಗೂ ಜೀವಿತಾವಧಿಯ ಲೆಕ್ಕದಲ್ಲಿ ಒಂದು ಮರಕ್ಕೆ 25,000ರೂಪಾಯಿ ಪರಿಹಾರ ಕೊಡಬೇಕು ಎಂದು ತಾಕೀತು ಮಾಡಿದರು .

ಮುಂಗಾರು ಮಳೆ ಆರಂಭವಾಗಿದ್ದು,ಕೃಷಿಗೆ ಅನುಕೂಲವಾಗುವಂತೆ ಉಚಿತವಾಗಿ ಕಬ್ಬು ,ಭತ್ತ ,ರಾಗಿ, ದ್ವಿದಳ ಧಾನ್ಯಗಳ ಬಿತ್ತನೆ ಬೀಜಗಳನ್ನು ವಿತರಿಸಬೇಕು. ರೈತರಿಗೆ ಆರು ತಿಂಗಳಿನಿಂದ ಬಾಕಿಯಿರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು. ಪ್ರತಿ ಲೀಟರ್ ಹಾಲಿಗೆ ಹತ್ತು ರೂಪಾಯಿ ಹೆಚ್ಚಿಸಬೇಕು. ವಿಸಿ ನಾಲೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಕಾಲದಲ್ಲಿ ಬೆಳೆಗಳನ್ನು ಬೆಳೆಯಲು ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು .

ರೈತ ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಮಂಜೇಶ್ ಗೌಡ ಮಾತನಾಡಿ, ನಮ್ಮಲ್ಲಿ ಕೆಲವರು ಫಸಲು ಮಾಡಿಲ್ಲ. ಭೂಮಿಯನ್ನು ತಕ್ಕಲು ಬಿಟ್ಟಿದ್ದಾರೆ. ಹಾಗಾಗಿ ಅವರಿಗೂ ಪರಿಹಾರ ನೀಡಬೇಕು. ಹಾಲು ಉತ್ಪಾದಕರಿಗೆ ಆರು ತಿಂಗಳಿನಿಂದ ನೀಡಬೇಕಿರುವ ಪ್ರೋತ್ಸಾಹ ಧನವನ್ನು ವಿತರಿಸಿ, ಪ್ರತಿ ಲೀಟರ್ ಹಾಲಿಗೆ ಹತ್ತು ರೂಪಾಯಿ ಹೆಚ್ಚಳ ಮಾಡಬೇಕು. ಹಾಗೂ ಹಳೆಯ ವಿದ್ಯುತ್ ಯೋಜನೆಯನ್ನು ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿದರು .

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಕೆ ನಾಗೇಂದ್ರ ಸ್ವಾಮಿ, ಶಿವಲಿಂಗಯ್ಯ, ವೆಂಕಟೇಶ್, ಕೆ ರಾಮಲಿಂಗೇಗೌಡ ಉಪಸ್ಥಿತರಿದ್ದರು.

Continue Reading

Mandya

ಮೇ.26 ರಂದು ವೈಶಾಖ ಬುದ್ದ ಪೂರ್ಣಿಮ

Published

on

ಮಂಡ್ಯ: ಇಂಗಳೇ ಫೌಂಡೇಶನ್, ಎವಿಎಸ್ ಎಸ್ ಮಂಡ್ಯ ತಾಲೂಕು ಶಾಖೆ ಹಾಗೂ ವಿಶ್ವಜ್ಞಾನಿ ನೌಕರರ ಅಭಿವೃದ್ಧಿ ಸಹಕಾರ ಸಂಘ ಇವರ ಆಶ್ರಯದಲ್ಲಿ 2568ನೇ ವೈಶಾಖ ಬುದ್ಧ ಪೂರ್ಣಿಮೆ ಕಾರ್ಯಕ್ರಮವನ್ನು ಇದೇ ಮೇ.26 ರಂದು ಬೆ. 10 ಗಂಟೆಗೆ ನಗರದ ಕೆವಿ ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷ ವಕೀಲ ಎಂ.ಬಿ ಹರಿಪ್ರಸಾದ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾನಾಡಿದ ಅವರು, ನಳಂದ ಬುದ್ಧ ವಿಹಾರದ ಬೋಧಿ ರತ್ನ ಬಂತೇಜಿ ಅವರ ದಿವ್ಯ ಸಾನಿಧ್ಯದಲ್ಲಿ ಅಂದು ನಡೆಯಲಿರುವ ಕಾರ್ಯಕ್ರಮವನ್ನು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ ಕೃಷ್ಣಮೂರ್ತಿ ಉದ್ಘಾಟಿಸಲಿದ್ದು ಕರ್ನಾಟಕ ಬೌದ್ಧ ಸಮಾಜದ ರಾಜ್ಯಾಧ್ಯಕ್ಷರು ರಾಜ್ಯಾಧ್ಯಕ್ಷ ಹ.ರ .ಮಹೇಶ್ ಹಾಗೂ ಎವಿಎಸ್ಎಸ್ ಸಂಘಟನೆಯ ರಾಜ್ಯಾಧ್ಯಕ್ಷ ತುಂಬಲ ರಾಮಣ್ಣ ಅವರು ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಅಧೀಕ್ಷಕ ಅಭಿಯಂತರ ಚಂದ್ರಹಾಸ್, ಜಿಲ್ಲಾ ಆಯುಷ್ ಅಧಿಕಾರಿ ಡಾಕ್ಟರ್ ಬಿ.ಎಸ್.ಸೀತಾಲಕ್ಷ್ಮೀ, ವಿಶ್ವಜ್ಞಾನಿ ನೌಕರರ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಭಾಗವಹಿಸಲಿದ್ದಾರೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಗೋಷ್ಠಿಯಲ್ಲಿ ಲಿಂಗರಾಜಮ್ಮ, ಗುರುಶಂಕರ್,ಎಂ.ಕುಮಾರ್, ರಾಜೇಶ್, ಜಯಶಂಕರ್, ಮುರುಗನ್ ಉಪಸ್ಥಿತರಿದ್ದರು.

Continue Reading

Mandya

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Published

on

ಮಂಡ್ಯ : ಮಹಿಳೆಯರ ಮೇಲೆ‌ ಲೈಂಗಿಕ ದೌರ್ಜನ್ಯ ಎಸಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿ ಮಹಿಳಾ ಕೃಷಿ ಕೂಲಿಕಾರರ ಉಪಸಮಿತಿ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ಪ್ರಜ್ವಲ್ ರೇವಣ್ಣರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಕಚೇರಿಗೆ ಮನವಿ ಸಲ್ಲಿಸಿದರು.

ಪ್ರಜ್ವಲ್ ರೇವಣ್ಣ ನಡೆಸಿರುವ ವಿಕೃತ ಲೈಂಗಿಕ ಹಗರಣವನ್ನು ಕಂಡು ಇಡೀ ನಾಗರೀಕ ಸಮಾಜವೇ ತಲೆ ತಗ್ಗಿಸುವಂತಾಗಿದ್ದು, ಪ್ರಜ್ವಲ್ ರೇವಣ್ಣ ಲೈಂಗಿಕ ಕ್ರಿಯೆಗಳನ್ನು ನಡೆಸಿರುವ ಸುಮಾರು 2900 ವೀಡಿಯೋಗಳನ್ನು ಮತ್ತು ಪೋಟೋಗಳನ್ನು ಸೆರೆ ಹಿಡಿದಿಟ್ಟುಕೊಂಡಿರುವುದಂತೂ ಅತ್ಯಂತ ಖಂಡನೀಯ ಎಂದು ಆಕ್ರೋಷ ವ್ಯಕ್ತಪಡಿಸಿದರು.

ಸಂತ್ರಸ್ತರು ದೂರು ನೀಡದಂತೆ ಬೆದರಿಸುವುದು, ಅಪಹರಿಸುವುದು, ಆನೇಕ ವರ್ಷಗಳಿಂದ ಮುಚ್ಚಿಟ್ಟಿರುವುದು ಘನ ಘೋರ ಅಪರಾಧವಾಗಿದೆ. ಇಂತಹ ದುಸ್ಸಾಹಸವನ್ನು ಪ್ರೋತ್ಸಾಹಿಸಿರುವ ಶಾಸಕ ಹೆಚ್.ಡಿ.ರೇವಣ್ಣ ಸಹ ಅಷ್ಟೇ ಅಪರಾಧಿಯಾಗಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಜಗತ್ತಿನಲ್ಲಿ ಹಿಂದೆಂದೂ ಕೇಳರಿಯದಂತಹ ಈ ಹಗರಣವನ್ನು ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗೆ ಬಳಸಿರುವುದು ಮತ್ತಷ್ಟು ಆಘಾತಕಾರಿಯಾಗಿದೆ. ಈ ಕೃತ್ಯದ ಬಗ್ಗೆ ತಿಳಿದೂ ತಿಳಿದು ಇವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿರುವ ಬಿಜೆಪಿ ರಾಜಕೀಯವಾಗಿ ದಿವಾಳಿಯಾಗಿದೆ.

ಕೂಡಲೇ ಪ್ರಜ್ವಲ್ ರೇವಣ್ಣನನ್ನು ಪತ್ತೆ ಮಾಡಿ ತಕ್ಷಣ ಬಂಧಿಸಬೇಕು. ಐಪಿಸಿ ಹಾಗೂ ಯುಎಪಿಎ ಕಾಯಿದೆಯಡಿ ಪ್ರಕರಣ ದಾಖಲಿಸಿ ಮೊಕದ್ದಮೆ ಹೂಡಬೇಕು. ಸಂತ್ರಸ್ತ ಮಹಿಳೆಯರನ್ನು ರಕ್ಷಿಸಬೇಕು ಮತ್ತು ಅವರ ಕುಟುಂಬದವರಿಗೆ ಕಿರುಕುಳ, ಪ್ರಾಣಭಯ, ತೊಂದರೆ ನೀಡುವವರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್‌ಐಟಿ ತನಿಖೆ ಕಾಯಿದೆಯ ಅನುಸಾರ ಕಾಲ ಮಿತಿಯೊಳಗೆ ನಡೆಯಬೇಕು. ದೇಶ ಬಿಟ್ಟು ಪರಾರಿಯಾಗಲು ಅವಕಾಶ ಕಲ್ಪಿಸಿರುವ ಕೇಂದ್ರ ಗೃಹ ಇಲಾಖೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇದರ ಹೊಣೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಹೊರಬೇಕು. ದೇಶದ ಜನರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಾಂತ ಕೃಷಿ ಕೂಲಿಕಾರ ಸಂಘಟನೆ ರಾಜ್ಯಾಧ್ಯಕ್ಷ ಎಂ. ಪುಟ್ಟಮಾದು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಸುರೇಂದ್ರ, ತಳಗವಾದಿ ರಾಮಣ್ಣ, ಅಮಾಸಯ್ಯ, ಅಬ್ದುಲ್ಲಾ ಮತ್ತಿತರರಿದ್ದರು.

Continue Reading

Trending

error: Content is protected !!