Connect with us

Location

ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ*

Published

on

*ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ*

*ರಾಜ್ಯ ಸರ್ಕಾರ ಪಾಕ್ ಪರ ಘೋಷಿಣೆ ಕೂಗಿದವರ ರಕ್ಷಣೆ ಮಾಡಿ, ನೈತಿಕವಾಗಿ ದಿವಾಳಿಯಾಗಿದೆ: ಬಸವರಾಜ ಬೊಮ್ಮಾಯಿ*

ಬೆಂಗಳೂರು: ಪಾಕಿಸ್ತಾನ ಪರ ಹೇಳಿಕೆ ನೀಡಿರುವುದರ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ‌ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಮಂಡಿಸಿರುವ ಬಜೆಟ್ ಸತ್ಯಕ್ಕೆ ದೋರವಾಗಿದೆ. ಈಗ ಪಾಕಿಸ್ತಾನ‌ ಪರ ಘೋಷಣೆ ಕೂಗಿದವರ ರಕ್ಷಣೆ ಮಾತನಾಡುತ್ತ ನೈತಿಕವಾಗಿ ದಿವಾಳಿಯಾಗಿದ್ದಾರೆ. ಇವರು ಪ್ರಜಾಪ್ರಭುತ್ವ ಕ್ಕೆ ದಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ‌ ಎಂದು ಆರೋಪಿಸಿದರು.
ವಿಧಾನ ಸೌಧದಲ್ಲಿಯೇ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ದೇಶದ ರಕ್ಷಣೆಗೆ ಇದು ಆಪತ್ತು ಉಂಟು ಮಾಡಿದೆ. ಅಧಿವೇಶವನ ಮುಗಿದ ತಕ್ಷಣ ಇದೆಲ್ಲ ಮರೆತು ಹೋಗುತ್ತಾರೆ ಎಂದು ಕಾಂಗ್ರೆಸ್ ನವರು ಅಂದುಕೊಂಡಿದ್ದಾರೆ. ಆದರೆ, ಇದನ್ನು ರಾಜ್ಯದ ಜನರು ಮರೆಯುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.
ಪಾಕ್ ಪರವಾಗಿ ಸರ್ಕಾರ ನಿಲ್ಲುತ್ತದೆ ಅಂದರೆ, ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ಈ ಸರ್ಕಾರ ಎಷ್ಟು ಬೇಗ ತೊಲಗುತ್ತದೆ ರಾಜ್ಯಕ್ಕೆ ಅಷ್ಟು ಒಳ್ಳೆಯದಾಗುತ್ತದೆ.
ಪಾಕಿಸ್ತಾನದ ಪರ ಘೊಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ತೋರಿಸಲಾಗಿದೆ. ಇವರು ಎಫ್ ಎಸ್ ಎಲ್ ವರದಿ ಕತೆ ಏಕೆ ಹೇಳುತ್ತಿದ್ದಾರೆ. ಈ ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಘಟನೆ ನಡೆದು 48 ಗಂಟೆ ಕಳೆದರೂ ಯಾರನ್ನೂ ಬಂಧಿಸಿಲ್ಲ. ಬೇರೆ ಘಟನೆ ನಡೆದಾಗ ಎಫ್ ಎಸ್ ಎಲ್ ವರದಿಗಾಗಿ ಕಾಯದೇ ಮೊದಲು ಬಂಧಿಸುತ್ತಿದ್ದರು. ಇದರಲ್ಲಿ ಏನೂ ಇಲ್ಲ ಅಂದರೆ ಪೊಲಿಸರು ಏಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ರಾಜ್ಯದ ಜನರು ಪಾಕಿಸ್ತಾನ ಪರವಾದವನ್ನು ಆಯ್ಕೆ ಮಾಡಿಲ್ಲ. ಇದು ಕನ್ನಡಿಗರ ಹಾಗೂ ಭಾರತೀಯರ ಹಾಗೂ ಸಂವಿಧಾನ ವಿರೋಧಿ ಸರ್ಕಾರ ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹರಿಪ್ರಸಾದ್ ಹೇಳಿಕೆ ಕಾಂಗ್ರೆಸ್‌ನವರ ಆಂತರಿಕ ಮನಸ್ಥಿತಿ ಏನಿದೆ ಎನ್ನುವುದನ್ನು ತೋರಿಸುತ್ತದೆ. ಪಾಕಿಸ್ತಾನದ ಭಯೋತ್ಪಾದಕರು ಪ್ರತಿದಿನ ನಮ್ಮ ಸೈನಿಕರನ್ನು ಕೊಲ್ಲುತ್ತಾರೆ. ಅವರನ್ನು ನಮ್ಮ ಸ್ನೇಹಿತರು ಎಂದು ಹೇಳಿಕೊಳ್ಳಲಾಗುತ್ತದೆಯೇ, ಇವರ ಹೇಳಿಕೆಯನ್ನು ನೋಡಿದರೆ, ದೇಶದ್ರೋಹಿಗಳು ಎಂದು ಕರೆಯಬೇಕಾಗುತ್ತದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Kodagu

ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Published

on

ಮಡಿಕೇರಿ : ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ಸಂತ್ರಸ್ಥರ ಅಹವಾಲು ಆಲಿಸಿದರು.


ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು.


ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ‌ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು
ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.


ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.


ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

Continue Reading

Mandya

ಕೆ ಆರ್ ಎಸ್ ಜಲಾಶಯದಿಂದ ನದಿಗೆ ಅಧಿಕ ನೀರು ಬಿಡುಗಡೆ ಹಿನ್ನೆಲೆ ಡಿಸಿ ಪರಿಶೀಲನೆ

Published

on

ಶ್ರೀರಂಗಪಟ್ಟಣ : ತಾಲ್ಲೂಕಿನ ಕೆ.ಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಧಿಕ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನೆರೆ ಪರಿಸ್ಥಿತಿಯಿಂದ ಹಾನಿಯಾಗುವ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ;ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗೊಳ, ಪಶ್ಚಿಮ ವಾಹಿನಿ, ಬಲಮುರಿ, ಕರೇಕುರ, ಎಡಮುರಿ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಮುಂಜಾಗೃತಾ ಕ್ರಮವಾಗಿ ಕೈಗೊಂಡಿರುವ ಸಿದ್ದತೆಗಳ ಬಗ್ಗೆ ಅಧಿಕಾರಿಗಳು ಮಾಡಿಕೊಂಡಿರು ಸಿದ್ಧತೆ ಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈಗಾಗಲೇ ತಗ್ಗು ಪ್ರದೇಶದ ಜನತೆ ಎಚ್ಚರ ವಹಿಸುವಂತೆ ನೀರಾವರಿ ಇಲಾಖೆ ಎಚ್ಚರಿಕೆ ನೀಡಿದ್ದು, ಮುಳುಗಡೆಯಾಗುವ ಪ್ರದೇಶಗಳ ಬಗ್ಗೆ ಜಿಲ್ಲಾಡಳಿತ ಅಗತ್ಯ ಕ್ರಮಕ್ಕೆ ಮುಂದಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ‌ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ವಿದ್ಯಾರ್ಥಿಗಳು ಗುರಿ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಿ – ಶಾಸಕ ಹೆಚ್.ಟಿ.ಮಂಜು

Published

on

ಕೆ.ಆರ್.ಪೇಟೆ : ವಿದ್ಯಾರ್ಥಿಗಳು ಗುರಿ ಮತ್ತು ಶಿಸ್ತನ್ನು ಅಳವಡಿಸಿಕೊಂಡು ಸತತ ಪರಿಶ್ರಮ ಹಾಗೂ ಅಭ್ಯಾಸದ ಮೂಲಕ ಯಸಸ್ಸುಗಳಿಸಿಕೊಳ್ಳಬೇಕು ಎಂದು ಶಾಸಕ ಹೆಚ್.ಟಿ.ಮಂಜು ಕಿವಿ ಮಾತು ಹೇಳಿದರು.

ಅವರು ತಾಲ್ಲೂಕಿನ ಶೀಳನೆರೆ ಗ್ರಾಮದಲ್ಲಿ ನಿರಂತರ ಫೌಂಡೇಶನ್ ಸಂಸ್ಥೆಯ ವತಿಯಿಂದ ಪ್ರೌಡಶಾಲೆ ಹಾಗೂ ಕಾಲೇಜಿಗೆ ಕಂಪ್ಯೂಟರ್ ಹಾಗೂ ಎರಡು ಪ್ರಜೆಕ್ಟರ್ ಸಾಮಗ್ರಿಗಳನ್ನು ಹಸ್ತಾಂತರಿಸಿ ಮಾತನಾಡಿ, ನಿರಂತರ ಸಂಸ್ಥೆ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸಹಕಾರ ನೀಡುತ್ತಾ ಬರುತ್ತಿದೆ. ಒಂದು ಸರ್ಕಾರ ಮಾಡಲಾಗದ ಕೆಲಸವನ್ನು ಸ್ವಯಂ ಸೇವಾ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಹಾಗೂ ಸಂತಸದ ವಿಷಯ. ಅವರ ಸೇವೆ ನಿರಂತರವಾಗಿ ಹೀಗೆ ಮುಂದುವರೆಯಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅಶ್ವತ್ಥರಗಳನ್ನ ಈಡೇರಿಸುತ್ತಿರುವ ನಿರಂತರ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ ಎಂದು ಶುಭ ಕೋರಿದರುಕಾಲೇಜು ಕಟ್ಟಡಕ್ಕೆ ಮೇಲ್ಛಾವಣಿ ಹಾಗೂ ತುರ್ತು ರಿಪೇರಿ ಕೆಲಸ ಮಾಡಿಸಿ ಕೊಡಲಾಗುವುದು.

ನಿರಂತರ ಸಂಸ್ಥೆಯ ಶಿವಕುಮಾರ್ ಮಾತನಾಡಿ 2006-07 ಸಾಲಿನಲ್ಲಿ ಆರಂಭವಾದ ನಿರಂತರ ಫೌಂಡೇಶನ್ ಸಂಸ್ಥೆ ಹಲವಾರು ವ್ಯಕ್ತಿಗಳ ದುಡಿಮೆಯ ಶ್ರಮದ ಪ್ರತಿಫಲದಿಂದ ಕಟ್ಟಿದ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿಕ್ಷಣ, ಆಹಾರ, ಚಿಗುರು, ವಸ್ತ್ರ ಮುಂತಾದ ಹೆಸರಿನಲ್ಲಿ ಸಾಕಷ್ಟು ಕೆಲಸಗಳನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ನಿರಂತರ ಸಂಸ್ಥೆಯ ಜಗದೀಶ್. ರಾಜ್ಯ ಮಾರಾಟ ಮಹಾ ಮಂಡಳಿಯ ನಿರ್ದೇಶಕ ಎಸ್.ಎಲ್.ಮೋಹನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾದ್ಯಕ್ಷ ಪ್ರಸನ್ನ, ಗ್ರಾಪಂ ಸದಸ್ಯ ಸಿದ್ದೇಶ್, ಕಾಲೇಜಿನ ಪ್ರಾಂಶುಪಾಲ ಎಂ.ಕೆ.ವಾಸು, ತಾಲ್ಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ನೀಲಮ್ಮ, ಎಸ್.ಡಿ.ಎಂಸಿ ಅಧ್ಯಕ್ಷ ಶಿವರಾಮು, ಎಂಡಿಸಿಸಿ ಬ್ಯಾಂಕ್ ಉದ್ಯೊಗಿ ಸೋಮಣ್ಣ, ಪ್ರಕಾಶ್ ಹಾಗೂ ಕಾಲೇಜಿನ ಉಪನ್ಯಾಸಕರು, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Trending

error: Content is protected !!