Connect with us

Mandya

ಹೊಸ ಆನಂದೂರು ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮ

Published

on

ಶ್ರೀರಂಗಪಟ್ಟಣ : ಮಳೆಗಾಲದ ಸಮಯದಲ್ಲಿ ನೀರಿನಿಂದ ಹರಡುವ ರೋಗಗಳ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು.

ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ “ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕ್ರಮ ಕುರಿತು” ಏರ್ಪಡಿಸಿದ ಅರಿವು ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬೇಸಿಗೆ ಧಗೆಯಿಂದ ಕಂಗೆಟ್ಟವರಿಗೆಲ್ಲ ಮಳೆ ತಂಪು, ಆನಂದ ತರುತ್ತದೆ. ಆದರೆ ಅನೇಕ ಕಾಯಿಲೆಗಳನ್ನು ಜೊತೆಗೆ ತರುತ್ತದೆ. ಮಳೆಗಾಲದ ಆರಂಭದಲ್ಲಿ ನೆಗಡಿ, ಕೆಮ್ಮು ,ಜ್ವರ ಇವೆಲ್ಲ ಕಾಮನ್ ಆದರೆ ಈ ಸಮಯದಲ್ಲಿ ಕಲುಷಿತ ನೀರಿನಿಂದ ಉಂಟಾಗುವ ರೋಗಗಳ ಅಪಾಯ ಹೆಚ್ಚು. ಅದರಲ್ಲೂ ಕಲುಷಿತ ನೀರಿನಿಂದ ಹರಡುವ ರೋಗಗಳಲ್ಲಿ ಕಾಲರಾ, ಟೈಫಾಯಿಡ್ ಜ್ವರ,ವಾಂತಿ ಭೇದಿ, ಕಾಮಾಲೆ ರೋಗಗಳು ಹೆಚ್ಚು ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರಿನ ಶುದ್ಧತೆ ಬಗ್ಗೆ ಎಚ್ಚರವಹಿಸಿ ಚೆನ್ನಾಗಿ ಕುದಿಸಿ ಆರಿಸಿದ ನೀರು

ಕುಡಿಯಬೇಕು. ಸೊಪ್ಪು ತರಕಾರಿಗಳನ್ನು ಶುದ್ಧವಾದ ನೀರಿನಿಂದ ಸ್ವಚ್ಛಗೊಳಿಸಿ ಬಳಿಕ ಸೇವಿಸಬೇಕು. ಶೌಚಾಲಯವನ್ನು ಬಳಸಿದ ನಂತರ ಹಾಗೂ ಆಹಾರ ಸೇವಿಸುವ ಮೊದಲು ಸಾಬೂನಿನಿಂದ ಕೈಗಳನ್ನು ಚೆನ್ನಾಗಿ ತೊಳೆಯಬೇಕು. ಹೊರಗಿನ ಆಹಾರವನ್ನು ಸೇವಿಸುವ ಮುನ್ನ ಎಚ್ಚರಿಕೆ ವಹಿಸಬೇಕು.

ದೇಹದಲ್ಲಿ ಬಳಲಿಕೆ ಕಂಡು ಬಂದರೆ ಓ ಆರ್ ಎಸ್, ಉಪ್ಪು ಬೆರೆಸಿದ ನಿಂಬೆ ಪಾನಕ, ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕು. ನಿರಂತರ ಅತಿಸಾರ ವಾಂತಿ, ಹೊಟ್ಟೆ ನೋವು, ಜ್ವರ ಇತರೆ ಅಸಾಮಾನ್ಯ ರೋಗ ಲಕ್ಷಣ ಕಂಡರೆ ತಕ್ಷಣವೇ ಸಮೀಪದ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕೆಂದು ಅವರು ತಿಳಿಸಿದರು. ಜೊತೆಗೆ ಈ ಮೇಲ್ಕಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿಮ್ಮ ಪಾಲಕರಿಗೆ ತಿಳಿಸಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಇದೆ ವೇಳೆ ಓ ಆರ್ ಎಸ್ ಪಾನಕ ತಯಾರಿಸುವ ಹಾಗೂ ಕೈ ತೊಳೆಯುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ತಿಳುವಳಿಕೆ ನಿಡಲಾಯಿತು.
ಈ ವೇಳೆ ಶಾಲಾ ಶಿಕ್ಷಕರಾದ ಅನ್ನಪೂರ್ಣಮ್ಮ,ಕೆ ಯೋಗೇಂದ್ರ, ರೇಷ್ಮಾ ಸಿ ಹಾಗೂ ಆಶಾ ಕಾರ್ಯಕರ್ತೆ ಸುವರ್ಣ, ಪಲ್ಲವಿ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*

Published

on

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*

ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.

ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.

ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್‌ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.

Continue Reading

Mandya

ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Published

on

ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಶಸ್ತಿ ನೀಡಿ ಗೌರವಿಸಿದರು

Continue Reading

Mandya

ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ

Published

on

ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.

ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.

ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.

Continue Reading

Trending

error: Content is protected !!