Connect with us

Chikmagalur

ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್

Published

on

ಚಿಕ್ಕಮಗಳೂರು: ಫೆ. ೧೫: ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು ಎಂದು ನಗರ ಸಭೆ ಅಧ್ಯಕ್ಷ್ಷೆ ಸುಜಾತ ಶಿವಕುಮಾರ್ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂತ ಸೇವಾಲಾಲರು ಈಗಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ ಜನಿಸಿದರು. ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನ ಪಡೆದಿದ್ದಾರೆ, ಜೀವನದುದ್ದಕ್ಕೂ ಬ್ರಹ್ಮಚಾರಿಯಾಗಿಯೇ ಉಳಿದವರು ಎಂದ ಅವರು ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದ ಮಹಾಪುರುಷ ಎಂದು ಹೇಳಿದರು.

ಬೇಲೂರು ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಕೆ. ಶ್ರೀನಿವಾಸ್ ಉಪನ್ಯಾಸ ನೀಡಿ ಮಾನವ ಜನ್ಮ ಪವಿತ್ರವಾದದ್ದು, ಇದನ್ನು ಹಾಳು ಮಾಡಿಕೊಳ್ಳಬಾರದು, ವ್ಯಸನಗಳಿಂದ ದೂರವಿರಬೇಕು. ಹರಿಷಡ್ ವರ್ಗಗಳನ್ನು ಸುಟ್ಟು ಹಾಕಿ ಪ್ರಾಮಾಣಿಕರಾಗಿ ಜೀವಿಸಿ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂದು ಸಾರಿದವರು ಸಂತ ಸೇವಾ ಲಾಲ್. ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರಿಗೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರಲ್ಲದೆ ಸೇವಾಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಿಸಲು ಪ್ರೇರೇಪಿಸಿದರು ಎಂದರು.

ಮಹಾನೀಯರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನಡೆದಾಗ ಮಾತ್ರ ನಾವು ಇತರರಿಗೆ ಮಾದರಿಯಾಗಲು ಸಾಧ್ಯ, ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ, ಜನದಂಬೆಯ ಆರಾಧಕರಾಗಿ ಇಡೀ ಜೀವಮಾನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾಲರು, ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ. ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದಾರೆ. ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಮತ್ತು ಗ್ರಾಮೀಣ ಜೀವನಗಳಿಂದ ದೂರವಿದ್ದು, ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಇವರಲ್ಲಿನ ಅಜ್ಞಾನ ಅಂಧಕಾರಗಳನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದ ಸೇವಾಲಾಲರನ್ನು ಬಂಜಾರರು ಮೋತಿವಾಳು ಅಥವಾ ಲಾಲ ಮೋತಿ ಎಂದು ಕರೆಯುತ್ತಿದ್ದರು. ಮುಂಬೈಯ ಸ್ಮಿತ್ ಭಾವುಚಾ ಎಂಬಲ್ಲಿ ಪೋರ್ಚುಗೀಸರ ಹಡಗು ಸಿಕ್ಕಿಹಾಕಿಕೊಂಡಾಗ ಅದನ್ನು ತಮ್ಮ ಜಾಣತನದಿಂದ ದಡ ಸೇರಿಸಿದ ಸೇವಾಲಾಲರಿಗೆ ಪೋರ್ಚುಗೀಸರು ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಆದ್ದರಿಂದಲೇ ಇವರನ್ನು ಮೋತಿವಾಳೋ ಎಂದು ಕರೆಯುತ್ತಿದ್ದರು ಎಂದು ಹೇಳಿದರು
ಉಪತಹಶಿಲ್ದಾರ್ ರಾಮ್ ರಾವ್ ದೇಸಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸೇವಾಲಾಲ್ ಒಬ್ಬ ದನಕಾಯುವ ಗೋಪಾಲಕನಾಗಿ ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದವರು ಎಂದು ತಿಳಿಸಿದರು.
ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರು. ಸೇವಾ ಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೇಪಿಸಿದರು. ತನ್ನ ಸಮಾಜದ ಜನರ ಕಷ್ಟಕ್ಕಾಗಿ ತಮ್ಮ ಪ್ರಾಣಾರ್ಪಣೆಗೂ ಸಿದ್ದರಾಗಿದ್ದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್,ಎಲ್ಲರನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಲಲಿತಾ ರವಿನಾಯ್ಕ್, ಸಂತ ನೇವಾಲಾಲ್ ಬಂಜಾರ ಅಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ್ ನಾಯ್ಕ್, ಶ್ರೀ ರಾಮ್ ನಾಯ್ಕ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಸಮಿತಿ ಸದಸ್ಯ ಲಕ್ಷ್ಮಣ್ ಹೆಚ್,ಎಸ್,ಬಂಜಾರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Continue Reading

Chikmagalur

ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನ ಕಟ್ಟಡ

Published

on

ಚಿಕ್ಕಮಗಳೂರು: ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಜಿಲ್ಲಾ ಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಹೇಳಿದರು.

ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು.ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.

ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಎಂಎಲ್ಸಿ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು, ಮುಂತಾದವರು ಉಪಸ್ಥಿತರಿದ್ದರು

Continue Reading

Chikmagalur

ಚಿಕ್ಕಮಗಳೂರಿನಲ್ಲಿ ಮನಸ್ಮಿತಾ ಅವರಿಗೆ ಗೌರವ ಸಮರ್ಪಣೆ

Published

on

ರಾಷ್ಟ್ರ ಪ್ರಶಸ್ತಿ ವಿಜೇತೆ ಮನಸ್ಮಿತಾ ಅವರನ್ನು ಗೌರವಿಸಿದ ಜಿಲ್ಲಾ ಒಕ್ಕಲಿಗ ಸಂಘ
ಚಿಕ್ಕಮಗಳೂರು: ಪುಟ್ಟ ವಯಸ್ಸಿನಲ್ಲಿಯೇ ತನ್ನ ಅಸಾಮಾನ್ಯ ಬುದ್ಧಿಶಕ್ತಿಯಿಂದ 4 ಗ್ಲೋಬಲ್ ಅವಾರ್ಡ್ಗಳು ಮತ್ತು ಒಂದು ರಾಷ್ಟ್ರ ಪ್ರಶಸ್ತಿ ಹಾಗೂ 4 ರಾಜ್ಯ ಪ್ರಶಸ್ತಿಗಳನ್ನು ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಮಳಲೂರಿನ ಕಂಬಿಹಳ್ಳಿ ಗ್ರಾಮದ ಮನಸ್ಮಿತಾ ಅವರನ್ನು ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ವತಿಯಿಂದ ಗೌರವಿಸಲಾಯಿತು.

ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಹುಲಿಯಪ್ಪ ಗೌಡ ಮತ್ತು ಧನಲಕ್ಷ್ಮಿ ಕುಮಾರಿ ಡಿ.ಎಂ ದಂಪತಿ ಪುತ್ರಿ ಎರಡು ವರ್ಷದ ಮನಸ್ಮಿತಾ ಅವರಿಗೆ ಚಿಕ್ಕಮಗಳೂರಿನ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ನೆಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ವತಿಯಿಂದ ಗೌರವ ಸಮರ್ಪಣೆ ಮಾಡಿದ್ದಾರೆ.

ಈ ಕಾರ್ಯಕ್ರಮವನ್ನು ಸಾಮಾಜಿಕ ವಾಣಿಜ್ಯೋದ್ಯಮಿ ಪಲ್ಲವಿ ಸಿ.ಟಿ. ರವಿ ಉದ್ಘಾಟನೆ ಮಾಡಿದರು. ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ ಅಧ್ಯಕ್ಷರಾದ ರೀನಾಸುಜೇಂದ್ರ, ಮೈಸೂರು ಜಿಲ್ಲಾ ಹಾಲು ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ಜಂಟಿ ನಿರ್ದೇಶಕರಾದ ಬಿ.ಎಲ್ ಶ್ವೇತ, ಟಿ. ರಾಜಶೇಖರ್, ಟಿ.ಡಿ. ಮಲ್ಲೇಶ್, ಎಂ.ಎಸ್. ಪ್ರದೀಪ್‌ಕುಮಾರ್, ಎ. ಪೂರ್ಣೇಶ್ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Continue Reading

Chikmagalur

ಪರೀಕ್ಷಾ ಪಾವಿತ್ರ್ಯತೆಯನ್ನು ಕಡ್ಡಾಯವಾಗಿ ಪಾಲಿಸಿ: ಮೀನಾ ನಾಗರಾಜ್

Published

on

ಚಿಕ್ಕಮಗಳೂರು: ಪರೀಕ್ಷಾ ಪಾವಿತ್ರ್ಯತೆಯನ್ನು ಕಡ್ಡಾಯವಾಗಿ ಪಾಲಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚನೆ ನೀಡಿದರು.

ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಿನ್ನೆ ಎಸ್.ಎಸ್.ಎಲ್.ಸಿ ಪರೀಕ್ಷೆ-೧ರ ಸಿದ್ದತೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ ೨೧ ರಿಂದ ಪ್ರಾರಂಭವಾಗಿ ಏಪ್ರಿಲ್ ೦೪ರ ವರೆಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಶಿಸ್ತು ಕ್ರಮಕ್ಕೆ ಒಳಪಡಿಸಲಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು. ಬಿಸಿಲಿನ ತಾಪ ಹೆಚ್ಚು ಇರುವುದರಿಂದ ಪ್ರಥಮ ಚಿಕಿತ್ಸಾ ವ್ಯವಸ್ಥೆಯೊಂದಿಗೆ ಹಾಜರಾಗುವಂತೆ ತಿಳಿಸಿದ ಅವರು. ಪರೀಕ್ಷೆಯು ವೆಬ್ ಕಾಸ್ಟಿಂಗ್ ಮೂಲಕ ನಡೆಯುತ್ತಿರುವುದರಿಂದ ನಿರಂತರ ವಿದ್ಯುತ್ ವ್ಯವಸ್ಥೆಗೆ ಕೆ.ಇ.ಬಿ.ಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಯು.ಪಿ.ಎಸ್ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲು ತಿಳಿಸಿದರು.

ಪರೀಕ್ಷಾ ಪೂರ್ವದಲ್ಲಿ, ಪರೀಕ್ಷೆಯಲ್ಲಿ ಜಿಲ್ಲೆಯ ಬಗ್ಗೆ ವ್ಯತಿರಿಕ್ತ ವರದಿ ಬರಬಾರದು. ಗುಣಮಟ್ದ ಫಲಿತಾಂಶದ ಮೂಲಕ ಜಿಲ್ಲೆಯು ಸುದ್ದಿಯಾಗಬೇಕು ಎಂದು ಹೇಳಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಪರೀಕ್ಷಾ ಕಾರ್ಯ ಪೂರ್ಣಗೊಳ್ಳುವವರೆಗೂ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ಪರೀಕ್ಷಾ ಪಾವಿತ್ರ್ಯತೆಯನ್ನು ಪಾಲಿಸಬೇಕು. ಜೊತೆಗೆ ಉಪನಿರ್ದೇಶಕರು[ಆಡಳಿತ] ಮತ್ತು ಉಪನಿರ್ದೇಶಕರು[ಅಭಿವೃದ್ದಿ] ರವರು ಪರೀಕ್ಷಾ ಕಾರ್ಯ ಸುವ್ಯವಸ್ಥಿತವಾಗಿ ನಿರ್ವಹಿಸಿ, ಪಾರದರ್ಶಕತೆ ಕಾಯ್ದಕೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ನಾಗರಾಜು ರವರು ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರದಲ್ಲಿ ಒಂದು ಕೊಠಡಿಗೆ ತಲಾ ೨೪ರಂತೆ, ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಚೇತನ ಮಕ್ಕಳಿಗೆ ಕೆಳಹಂತದ ಪರೀಕ್ಷಾ ಕೊಠಡಿಗಳನ್ನು ಮೀಸಲಿಡಬೇಕು. ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಕಲ್ಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ವೇಗದ ಇಂಟರ್ ನೆಟ್ ವ್ಯವಸ್ಥೆ, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ತಮ್ಮ ಲಾಗಿನ್ ನಲ್ಲಿಯೇ ಗೈರು ಹಾಜರಿ ಮಾಹಿತಿಯನ್ನು ಮತ್ತು ನಮೂನೆಯನ್ನು ಭರ್ತಿ ಮಾಡುವ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಉಪನಿರ್ದೆಶಕರು[ಆಡಳಿತ], ಉಪನಿರ್ದೇಶಕರು[ಅಭಿವೃದ್ದಿ] ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್‌ನ ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು, ಕ್ಷೇತ್ರ ಸಮನ್ವಯಾಧಿಕಾರಿಗಳು, ಬ್ಲಾಕಿನ ನೋಡಲ್ ಅಧಿಕಾರಿಗಳು,ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಕಸ್ಪೋಡಿಯನ್ನರು, ಕೆ.ಎಸ್.ಆರ್.ಟಿ.ಸಿ ವಿಭಾಗ, ಪೊಲೀಸ್ ವಿಭಾಗದ ಅಧಿಕಾರಿಗಳು ಪಾಲ್ಗೊಂಡಿದ್ದರು.

Continue Reading

Trending

error: Content is protected !!