Politics
ಪ್ರಧಾನಿ ಮೋದಿ, ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದಂತೆ ಕೇಳುವ ಪರಿಸ್ಥಿತಿ ಬಂದಿದೆ: ಸಂತೋಷ್ ಲಾಡ್
ಹುಬ್ಬಳ್ಳಿ: ಭಾರತ ಮತ್ತು ಅಮೆರಿಕಾ ನಡುವಿನ ವ್ಯಾಪಾರ ಒಪ್ಪಂದ ವಿಚಾರದಲ್ಲಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದಂತೆ ಕೇಳುವ ಪರಿಸ್ಥಿತಿ ಬಂದಿದೆ. ಟ್ರಂಪ್ ಬಾಬಾ ಹೇಳಿದ್ದನ್ನು ಮೋದಿ ಬಾಬಾ ಕೇಳಬೇಕೆನ್ನುವ ಪರಿಸ್ಥಿತಿ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವ್ಯಂಗ್ಯ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಮೆರಿಕಾದಿಂದ ಯಾವುದೇ ವಸ್ತು ಬಂದರೆ ತೆರಿಗೆ ಇಲ್ಲ. ಆದರೆ ನಮ್ಮ ರೈತರ ಉತ್ಪನ್ನಗಳಿಗೆ ತೆರಿಗೆ ಹಾಕುತ್ತಾರೆ. ಕೇಂದ್ರದ ಈ ತೀರ್ಮಾನದಿಂದ ರೈತರಿಗೆ ತೊಂದರೆ ಆಗಲಿದೆ. ಅಮೆರಿಕಾ ಭಾರತ ನಡುವಿನ ಒಪ್ಪಂದದಿಂದ ಯಾರಿಗೆ ಲಾಭ ಆಗುತ್ತದೆ. ಟ್ರಂಪ್ ಬಾಬಾ ಹೇಳಿದ್ದನ್ನು ಮೋದಿ ಬಾಬಾ ಕೇಳಬೇಕು ಎಂದು ಟೀಕಿಸಿದ್ದಾರೆ.

ಇದೇ ಸಂದರ್ಭದಲ್ಲಿ ಭಾರತ್ ಪಾಕ್ ಯುದ್ದ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಹೇಳುತ್ತಾರೆ ಟ್ರಂಪ್ ಹೇಳಿಕೆ ವಿಚಾರವಾಗಿ ಬಿಜೆಪಿಯ ಒಬ್ಬರೂ ಸಹ ಮಾತನಾಡಲ್ಲ. ಬಾಂಗ್ಲಾ ವಲಸಿಗರ ವಿಚಾರದಲ್ಲಿ ಮಾತನಾಡುತ್ತಾರೆ ಎಷ್ಟು ಬಾಂಗ್ಲಾ ವಲಸಿಗರನ್ನು ದೇಶದಿಂದ ಗಡಿಪಾರು ಮಾಡಿದ್ದಾರೆ. ದೇಶದ ಗಡಿಗಳನ್ನು ಕಾಪಾಡೋದು ರಾಜ್ಯಗಳಲ್ಲ ಕೇಂದ್ರ ಸರ್ಕಾರ. ಆದರೆ ಅವರೇ ಬಾಂಗ್ಲಾ ವಲಸಿಗರು ಒಳಗೆ ಬರ್ತಾರೆ ಅಂತಾರೆ ಹಾಗಾದರೆ ಇದರ ಹೊಣೆ ಹೊತ್ತು ಯಾರು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
Politics
ಬೆಂಗಳೂರು- ಪುಣೆ- ಮುಂಬೈ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್| ಎಚ್‌ಡಿಕೆ, ಜೋಶಿ ಸ್ಪಂದನೆ: ಎಂ.ಬಿ.ಪಾಟೀಲ್
ಬೆಂಗಳೂರು: ಕೇಂದ್ರ ಬಜೆಟ್ ಮಂಡನೆಯಾದ ತಕ್ಷಣ ನಾನು ಬೆಂಗಳೂರು- ಪುಣೆ- ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಅಗತ್ಯವಾಗಿದೆ ಎಂದು ಹೇಳಿದ್ದೆ. ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರೊಂದಿಗೆ ಚರ್ಚಿಸಿರುವುದಕ್ಕೆ ಧನ್ಯವಾದ ಹೇಳುತ್ತೇನೆ. ಇದರಲ್ಲಿ ರಾಜಕೀಯವೇನೂ ಇಲ್ಲ. ಇದು ಕೇವಲ ಭೇಟಿಗೆ ಮಾತ್ರ ನಿಲ್ಲದೆ, ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು ಎಂದು ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಹಾಗೂ ಆರ್ಥಿಕ ರಾಜಧಾನಿ ಮುಂಬಯಿ ನಡುವೆ ಅತ್ಯುತ್ತಮ ಸಂಪರ್ಕ ವ್ಯವಸ್ಥೆ ಬರಬೇಕು. ಇದರಿಂದ ಮಧ್ಯ ಮತ್ತು ಉತ್ತರ ಕರ್ನಾಟಕ ಹಾಗೂ ಪಶ್ಚಿಮ ಮಹಾರಾಷ್ಟ್ರದ ಭಾಗಗಳಿಗೆ ಅಪಾರ ಲಾಭವಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರದ ಬಜೆಟ್ ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ್ನೈ ಸೇರಿದಂತೆ 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಿಸಿದ್ದಾರೆ. ಇದು ಸ್ವಾಗತಾರ್ಹ. ಆದರೆ ಈ ಎರಡೂ ಯೋಜನೆಗಳಿಂದ ರಾಜ್ಯಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ಬೆಂಗಳೂರು-ಪುಣೆ-ಮುಂಬೈ ಮಧ್ಯೆ ಇಂತಹ ಯೋಜನೆ ಬಂದರೆ ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಸಾಂಗ್ಲಿ, ಕೊಲ್ಲಾಪುರ ಹೀಗೆ ಹಲವು ಪ್ರದೇಶಗಳಿಗೆ ಪ್ರಯೋಜನವಾಗಿ, ಆರ್ಥಿಕ ಮತ್ತು ಕೈಗಾರಿಕಾ ಪ್ರಗತಿ ಸಾಧ್ಯವಾಗಲಿದೆ ಎಂದು ಬಜೆಟ್ ದಿನವೇ ಹೇಳಿದ್ದೆ. ಈಗ ಆ ನಿಟ್ಟಿನಲ್ಲಿ ಇಬ್ಬರೂ ಕೇಂದ್ರ ಸಚಿವರು ಕಾರ್ಯಪ್ರವೃತ್ತರಾಗಿರುವುದು ಸ್ವಾಗತಾರ್ಹ ಕ್ರಮ ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಮತ್ತು ಜೋಶಿ ಈ ವಿಚಾರದ ಬಗ್ಗೆ ಗಮನ ಹರಿಸಿರುವುದು ಒಳ್ಳೆಯದು. ಇಂತಹ ವಿಚಾರಗಳಲ್ಲಿ ನಾವು ರಾಜಕೀಯ ಮಾಡಬಾರದು. ಯೋಜನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್, ರೈಲು ಸಚಿವ ಅಶ್ವಿನಿ ವೈಷ್ಣವ್, ವಿ.ಸೋಮಣ್ಣ ಅವರಿಗೆ ಪತ್ರ ಬರೆಯಲಾಗಿದೆ ಎಂದು ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ನಾಲ್ಕು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿರುವ ಲಿಂಗಾಯತ ಶಾಸಕರ ಸಭೆ ನಡೆದಿದ್ದು ಇದು ಶಕ್ತಿ ಪ್ರದರ್ಶನವೇನೂ ಅಲ್ಲ. ಅಶೋಕ ಪಟ್ಟಣ ಹಾಗೂ ಬಿ.ಆರ್. ಪಾಟೀಲ್ ಈ ಸಭೆ ಕರೆದಿದ್ದರು. ಸಮುದಾಯದ ಹಿತಾಸಕ್ತಿ ಬಗ್ಗೆ ಅಲ್ಲಿ ಚರ್ಚೆ ನಡೆಯಿತಷ್ಟೆ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾವು ಆಗಿಂದಾಗ್ಗೆ ಹೀಗೆ ಸಭೆ ಸೇರುತ್ತಲೇ ಇರುತ್ತೇವೆ. ಬೇರೆಬೇರೆ ಸಮುದಾಯಗಳ ಶಾಸಕರೂ ಸಭೆ ಮಾಡುತ್ತಾರೆ. ಆದರೆ ನಮ್ಮ ಸಭೆಯನ್ನು ಮಾತ್ರ ಲಿಂಗಾಯತರ ಶಕ್ತಿ ಪ್ರದರ್ಶನ ಎಂದು ಬಿಂಬಿಸುವುದು ಸರಿಯಲ್ಲ ಎಂದು ಪ್ರತಿಪಾದಿಸಿದ್ದಾರೆ.
1989ರಲ್ಲಿ ಲಿಂಗಾಯತರ ಬೆಂಬಲದಿಂದ ಕಾಂಗ್ರೆಸ್ 178 ಕಡೆ ಗೆದ್ದು, ಐತಿಹಾಸಿಕ ಸಾಧನೆ ಮಾಡಿತ್ತು. ಈಗಲೂ ಕಾಂಗ್ರೆಸ್ ನಲ್ಲಿ 34 ಲಿಂಗಾಯತ ಶಾಸಕರಿದ್ದೇವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಕಾಂಗ್ರೆಸ್ಸಿಗೆ ವೋಟ್ ಹಾಕಿದೆ. ಹೀಗಾಗಿ ಸರಕಾರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಬೇಕು ಎನ್ನುವುದರಲ್ಲಿ ತಪ್ಪೇನಿಲ್ಲ. ಆದರೆ ನಾವು ಇನ್ನೊಂದು ಸಮುದಾಯದ ಪಾಲನ್ನು ಕಿತ್ತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮನರೇಗಾ ಯೋಜನೆಯನ್ನು ಬಿಜೆಪಿ ನಾಯಕರಾದ ಆಡ್ವಾಣಿ, ನಿತಿನ್ ಗಡ್ಕರಿ ಮತ್ತು ನಿರ್ಮಲಾ ಸೀತಾರಾಮನ್ ಅವರೇ ಹೊಗಳಿದ್ದರು. ಈಗ ಮೋದಿ ಸರ್ಕಾರ ಇದನ್ನು ಹಾಳು ಮಾಡಿದ್ದು, ಯೋಜನೆಯ ಹೆಸರನ್ನು ವಿಬಿ-ಜಿ ರಾಮ್ ಜಿ ಎಂದು ಬದಲಿಸಿದೆ. ಬಿಜೆಪಿ ಸಂಸದರೇ ಈ ಬಗ್ಗೆ ಧ್ವನಿ ಎತ್ತಿ, ತಮ್ಮ ಬೆಲೆ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
National
ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಕೇಂದ್ರಕ್ಕೆ ಎಚ್‌ಡಿಡಿ ಮನವಿ
ನವದೆಹಲಿ: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ರಾಜ್ಯಸಭೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.

ಈ ವೇಳೆ ರಾಜ್ಯದ ಹಲವು ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರ್ಕಾರಕ್ಕೆ ಕೈಮುಗಿದು ವಿನಂತಿ ಮಾಡಿಕೊಂಡಿದ್ದಾರೆ.
ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜೊತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದ್ದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಗಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜೊತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜೊತೆಗೇ ಇರುತ್ತೇವೆ. ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ಹೇಳಿದ್ದಾರೆ.
ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜೊತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಉಲ್ಲೇಖ ಮಾಡಿದ್ದಾರೆ.
ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಹೇಳಿದ್ದಾರೆ.
Politics
ಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
ಬೆಂಗಳೂರು: ವಿಧಾನ ಪರಿಷತ್ ಕಲಾಪ ಇಂದು ಸಹ ಆಡಳಿತ ಮತ್ತು ವಿರೋಧ ಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾಗಿದ್ದು, ಬಿಜೆಪಿ ಎಂಎಲ್‌ಸಿ ಡಾ. ಸಿ.ಟಿ. ರವಿ ವಿಷಾದ ವ್ಯಕ್ತಪಡಿಸಬೇಕು ಎಂಬ ವಿಚಾರ ಇಂದು ಕಲಾಪದಲ್ಲಿ ಸದ್ದು ಮಾಡಿತು. ಹಾಗಾಗಿ ಆಡಳಿತ-ವಿಪಕ್ಷಗಳ ನಡುವೆ ಗಲಾಟೆ ಆಗಿ ಕಲಾಪ ಮುಂದೂಡುವ ಪರಿಸ್ಥಿತಿ ಬಂದಿತ್ತು.
ಕಲಾಪ ಆರಂಭ ಆದ ತಕ್ಷಣ ಶೂನ್ಯ ವೇಳೆ ಕಲಾಪಗಳು ನಡೆದವು. ಶೂನ್ಯ ವೇಳೆ ಮುಗಿದ ಕೂಡಲೇ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಮಾತಾಡಿ, ನಿನ್ನೆ ನಮ್ಮ ಸದಸ್ಯರು ಪ್ರಧಾನಿ ಮೋದಿ ಅವರ ಬಗ್ಗೆ ಮಾತಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅದರಂತೆ ಸಿ.ಟಿ.ರವಿ ಪಾಕಿಸ್ತಾನದ ನಾಲಿಗೆ ಅಂದಿದ್ದಕ್ಕೆ ವಿಷಾದ ವ್ಯಕ್ತಪಡಿಸಬೇಕೆಂದು ಆಗ್ರಹಿಸಿ ಸಭಾಪತಿಗಳ ಪೀಠ ಮನವಿ ಮಾಡಿದರು. ಆದರೆ ವಿಷಾದ ವ್ಯಕ್ತಪಡಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಲೀಂ ಅಹಮದ್ ಮಾತಿಗೆ ಸಚಿವ ಹೆಚ್.ಕೆ.ಪಾಟೀಲ್ ಸೇರಿ ಕಾಂಗ್ರೆಸ್ ಸದಸ್ಯರು ಧ್ವನಿಗೂಡಿಸಿದರು. ಸಿಟಿ ರವಿ ವಿಷಾದ ವ್ಯಕ್ತಪಡಿಸಬೇಕು. ಇಲ್ಲ ಅಂದರೆ ಸದನದಿಂದ ಹೊರಗೆ ಹಾಕಬೇಕು ಅಂತ ಅಡಳಿತ ಪಕ್ಷದ ಸದಸ್ಯರು ಒತ್ತಾಯಿಸಿದರು. ಇದಕ್ಕೆ ಕೌಂಟರ್ ನೀಡಿದ ವಿಪಕ್ಷ ಸದಸ್ಯರು ಸಿ.ಟಿ.ರವಿ ಪರ ಬ್ಯಾಟಿಂಗ್ ಮಾಡಿದರು.
ಇನ್ನೂ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತಾಡಿ, ಸಿ.ಟಿ. ರವಿ ಯಾರ ಹೆಸರು ಉಲ್ಲೇಖ ಮಾಡಿಲ್ಲ. ರವಿ ಯಾವುದೇ ತಪ್ಪು ಮಾಡಿಲ್ಲ. ಅವರು ಕ್ಷಮೆ ಕೇಳೋ ಅವಶ್ಯಕತೆ ಇಲ್ಲ. ಕೇಳೋದು ಇಲ್ಲ ಎಂದು ತಿಳಿಸಿದರು.
ಛಲವಾದಿ ನಾರಾಯಣಸ್ವಾಮಿ ಮಾತಿಗೆ ಬಿಜೆಪಿ-ಜೆಡಿಎಸ್ ಸದಸ್ಯರು ಧ್ವನಿಗೂಡಿಸಿದರು. ಇದೇ ವೇಳೆ ಮಾತಾಡಿದ ಆಡಳಿತ-ವಿಪಕ್ಷಗಳ ನಡುವೆ ವಿಷಾದದ ಪಟ್ಟು ಜೋರಾಗಿ ನಡೆದು, ಮಾತಿನ ಸಮರಗಳು ನಡೆಯಿತು. ಸಭಾಪತಿ ಪೀಠವೂ ಯಾವುದೇ ನಿರ್ಧಾರ ಮಾಡಲು ಆಗದೇ ಕಲಾಪವನ್ನು ಊಟಕ್ಕೆ ಮುಂದೂಡಿಕೆ ಮಾಡಿದರು.
-
National - International18 hours agoನಾಳೆಯಿಂದ T-20 World Cup| 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ: ವೇಳಾಪಟ್ಟಿ ಏನು?
-
State21 hours agoನಮ್ಮ ಪಕ್ಷದ ಹೈಕಮಾಂಡ್ ಡಾ.ಯತೀಂದ್ರ ಅವರೇ: ಡಿಸಿಎಂ ಡಿಕೆಶಿ ಟಾಂಗ್
-
Mysore20 hours agoವಿಶ್ವಕರ್ಮ ಯೋಜನೆಯಡಿ ವಸ್ತು ಪ್ರದರ್ಶನ
-
State19 hours agoಬಿಗ್ ಬಾಸ್-12 ವಿನ್ನರ್ ಗಿಲ್ಲಿನಟ ವಿರುದ್ದ ಫಿಲ್ಮ್ ಚೇಂಬರ್ಗೆ ದೂರು
-
National18 hours agoU-19 World Cup| ವೈಭವ್ನ ಶತಕ: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ
-
National22 hours agoಮಹಿಳೆಯ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ನ್ಯಾಯಾಂಗ ಆಗ್ರಹಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್
-
Mysore22 hours agoವಕೀಲರ ಸಂಘದ ಅಧ್ಯಕ್ಷರ ಮೇಲೆ ಪ್ರಕರಣ: ವಕೀಲ ಸಂಘದಿಂದ ಪ್ರತಿಭಟನೆ
-
Mysore22 hours agoಐದು ವರ್ಷವೂ ನಮ್ಮ ತಂದೆಯವರೇ ಸಿಎಂ: ಡಾ.ಯತೀಂದ್ರ ಸಿದ್ದರಾಮಯ್ಯ ಪುನರ್ ಉಚ್ಛಾರ
