Location
ಸೇವಾ ವಲಯದ ಸಿಬ್ಬಂಧಿಗಳ ಮತದಾನ ಪರಿಶೀಲನೆ*
*ಸೇವಾ ವಲಯದ ಸಿಬ್ಬಂಧಿಗಳ ಮತದಾನ ಪರಿಶೀಲನೆ*
ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಅಗತ್ಯ ಸೇವಾ ವಲಯದಡಿ ಕಾರ್ಯನಿರ್ವಹಿಸುತ್ತಿರುವ 1,022 ಸಿಬ್ಬಂದಿಗಳಿಗೆ ಮತದಾನದ ವ್ಯವಸ್ಥೆಯನ್ನು ಮಂಡ್ಯ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಪಿ.ವಿ.ಸಿ ಕೇಂದ್ರ ತೆರೆದು ನಿರ್ವಹಿಸಲಾಗುತ್ತಿದೆ.
ಅಂಚೆ ಮತದಾನವು ಏಪ್ರಿಲ್ 19, 20 ಹಾಗೂ 21 ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಉಪವಿಭಾಗಾಧಿಕಾರಿ ಮಹೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Hassan
ಸರ್ಕಾರವು ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವಂತೆ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳಿಂದ ಮನವಿ
ಆಲೂರು: ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಹೆಚ್ಚು ಸೇವೆಗಳನ್ನು ನಿರ್ವಹಿಸುವ ಕಾರ್ಯವಹಿಸಿದ್ದು, ಕೆಲಸ ನಿರ್ವಹಿಸಲು ನಮಗೆ ಸಾಧ್ಯವಾಗುತ್ತಿಲ್ಲ ಆದ್ದರಿಂದ ಹೆಚ್ಚುವರಿ ಭತ್ಯೆ ಹಾಗೂ ಆಧುನಿಕ ಯಂತ್ರೋಪಕರಣಗಳನ್ನು ನೀಡಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳು ತಹಸೀಲ್ದಾರ್ ನಂದಕುಮಾರ್ ಗೆ ಮನವಿ ಸಲ್ಲಿಸಿದರು.
ಆಲೂರು ಪಟ್ಟಣದ ಕಂದಾಯ ಇಲಾಖೆಗೆ ಭೇಟಿ ನೀಡಿದ ಗ್ರಾಮ ಆಡಳಿತ ಅಧಿಕಾರಿಗಳು ಮಾನ್ಯ ಘನ ಸರ್ಕಾರವು ರೈತಪರ/ ಸಮಾಜಮುಖಿ ಕೆಲಸಗಳಾದ ನಮೂನೆ 1 ರಿಂದ 5 (ದುರಸ್ಥಿ) ಇ_ ಅಫೀಸ್, ಪಹಣಿಗೆ ಆಧಾರ್ ಜೋಡಣೆ, ಲ್ಯಾಂಡ್ ಬೀಟ್ ಆಫ್ ಸಂಯೋಜನೆ, ನವೋದಯ, ಗರುಡ ಆಫ್, ಇ ಜನ್ಮ ತಂತ್ರಾಂಶಗಳ ಮೂಲಕ ಬಗರ್ ಹುಕುಂ, ಹಕ್ಕುಪತ್ರ, ಬೆಳೆ ಸಂರಕ್ಷಣೆ, ( ಬೆಳೆ ಕಟಾವ್, ಮೊಬೈಲ್ ಆಪ್) ಪಿ.ಎಂ. ಕಿಸಾನ್ ವೆಬ್ ಆಪ್, ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್, ಸಿ- ವಿಜಯ್, ಹಾಗೂ ಇನ್ನೂ ಹತ್ತು ಹಲವಾರು ಕೆಲಸಗಳನ್ನು ಮೊಬೈಲ್ ಹಾಗೂ ಕಂಪ್ಯೂಟರ್ ಮೂಲಕ ಕೆಲಸ ನಿರ್ವಹಿಸಬೇಕಾದ ಅವಶ್ಯಕತೆಯಿರುತ್ತದೆ ಆದ್ದರಿಂದ ಸದರಿ ಕೆಲಸ ನಿರ್ವಹಿಸಲು ಯಾವುದೇ ಮೂಲಭೂತ ಸೌಕರ್ಯಗಳನ್ನು ನೀಡದಿರುವುದು ಪ್ರಗತಿ ಹಿನ್ನೆಡೆಗೆ ಕಾರಣವಾಗಿದೆ. ಆದ್ದರಿಂದ ಈ ಎಲ್ಲಾ ಕೆಲಸಗಳ ನಿರ್ವಹಣೆಗೆ ಮೊಬೈಲ್, ಸಿಮ್, ಹಾಗೂ ದಿನ ಬಳಕೆಗೆ ಮೊಬೈಲ್, ಡಾಟಾ, ಲ್ಯಾಪ್ ಟಾಪ್, ಪ್ರಿಂಟಿಂಗ್, ಸ್ಕ್ಯಾನರ್ ಸೌಲಭ್ಯ ೀ ಹಲವು ಕೆಲಸ ನಿರ್ವಹಣೆಗೆ ಮಾಸಿಕ ಹೆಚ್ಚುವರಿ ಭತ್ಯೆ 5000 ರೂಗಳನ್ನು ನೀಡಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತೇವೆ.
ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಎಂ ಡಿ ಅಭಿಷೇಕ್, ಉಪಾಧ್ಯಕ್ಷ ಸಂಜೀವ್ ಚೌಹಣ್, ಕಾರ್ಯದರ್ಶಿ ದೇವೆಂದ್ರಪ್ಪ ಪೂಜಾರಿ, ಖಜಾಂಚಿ ರಾಘವೇಂದ್ರ ಭಂಡಾರಿ,ಗ್ರಾಮ ಆಡಳಿತ ಅಧಿಕಾರಿಗಳಾದ ರವಿ ನಾಯ್ಕ್. ಗೀತಾ. ಚಂದ್ರಶೇಖರ್ ಬಿ.ಎಸ್ ಹೇಮರಾಜ್, ಮನು, ಚಂದ್ರೇಶೇಖರ್, ರಂಗಸ್ವಾಮಿ ಕರಿಬಸವರಾಜು, ಮುಂತಾದವರು ಉಪಸ್ಥಿತರಿದ್ದರು.
ವರದಿ ಸತೀಶ್ ಚಿಕ್ಕಕಣಗಾಲು
Chamarajanagar
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ
ಗುಂಡ್ಲುಪೇಟೆಯಲ್ಲಿ ಇಂದು ಇಂದು ಹಿಂದೂ ಕಾರ್ಯಕರ್ತರು . ದೇವರಾಜ ಅರಸು ಕ್ರೀಡಾಂಗಣದಿಂದ ಗುಂಡ್ಲುಪೇಟೆ ಮುಖ್ಯರಸ್ತೆ ಯಲ್ಲಿ ಮೆರವಣಿಗೆ ಮುಖಾಂತರ ಬಂದು ಗುಂಡ್ಲುಪೇಟೆ ತಾಲೂಕು ಕಚೇರಿ ಮುಂದೆ ಮಾನವ ಸರಪಳಿ ಮುಖಾಂತರ ಪ್ರತಿಭಟನೆ ನಡೆಸಲಾಯಿತು ಈ ಪ್ರತಿಭಟನೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ಎಲ್ಲಾ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮತ್ತು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ ಇನ್ನೂ ಹಲವು ಹಿಂದೂಪರ ಸಂಘಟನೆಗಳು ಪಾಲ್ಗೊಂಡಿದ್ದವು.
ಹಿತರಕ್ಷಣ ಸಮಿತಿ ವತಿಯಿಂದ ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬಾಂಗ್ಲಾದೇಶದ ಹಿಂದೂಗಳ ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜನ ಜಾಗೃತಿಗೋಸ್ಕರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಲಾಯಿತು
Mysore
ಈ ಬಾರಿ ವಿಜೃಂಭಣೆಯಿಂದ ದಸರಾ ನಾಡಹಬ್ಬ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕಳೆದ ಬಾರಿ ಬರಗಾಲದ ಕಾರಣ ಅದ್ದೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ಮಾಡಲು ತೀರ್ಮಾನಿಸಲಾಗಿದೆ ಎಂದರು.
ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂಪಾಯಿ ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕು ಎಂದು ಸೂಚಿಸಲಾಗಿದೆ.
ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ ಎಂದರು.
ಆಗಸ್ಟ್ 21 ರಂದು ಬೆಳಿಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್ 3 ರಿಂದ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪ್ರವಾಸಿಗರ ಅನುಕೂಲಕ್ಕಾಗಿ ದೀಪಾಲಂಕಾರವನ್ನು ಕಳೆದ ಬಾರಿ ಒಂದು ವಾರ ವಿಸ್ತರಣೆ ಮಾಡಲಾಗಿತ್ತು. ಈ ಬಾರಿಯೂ ದಸರಾ ನಂತರವೂ ದೀಪಾಲಂಕಾರ ಅವಧಿಯನ್ನು ವಿಸ್ತರಿಸಿ 21 ದಿನಗಳ ಕಾಲ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ ಎಂದರು.
ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್ ಮಿತ್ರ ಮತ್ತು ಹೋಂ ಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಲಾಗುವುದು. ಪಾರ್ಕಿಂಗ್, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಿದ್ದತೆಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೈಸೂರನ್ನು ಕೇಂದ್ರವಾಗಿರಿಸಿಕೊಂಡು KSRTC ಸಹಯೋಗದೊಂದಿಗೆ ಪ್ರವಾಸಿ ಸರ್ಕ್ಯುಟ್ ರೂಪಿಸಲಾಗುವುದು ಎಂದು ಹೇಳಿದರು.
ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯರಿಗೆ ಪ್ರೋತ್ಸಾಹ ಕೊಡಬೇಕಾಗಿರುವುದರಿಂದ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ದೊರಕಿಸಬೇಕು. ಇದೇ ವೇಳೆ ದಸರಾಕ್ಕೆ ಹೊಸ ರೂಪು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ತೀರ್ಮಾನಕ್ಕೆ ಸಭೆ ನೀಡಿದೆ ಎಂದು ಹೇಳಿದರು
-
Mysore4 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan4 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.