Hassan
ಇನ್ನು 15 ದಿನದಲ್ಲಿ ಎಲ್ಲಾ ಶಾಸಕರ ಜೊತೆ ವಿವಿ ಉಳಿಸಿ ಹೋರಾಟ ಸಮಿತಿಯಿಂದ ಸಿಎಂ ಭೇಟಿ: ಸಂಸದ ಶ್ರೇಯಸ್ ಪಟೇಲ್

ಹಾಸನ: ಪಕ್ಷ ಭೇದ ಮರೆತು ಪ್ರಾಮಾಣಿಕವಾಗಿ ನಿಮ್ಮ ಜೊತೆ ಹಾಸನ ವಿವಿ ಉಳಿಸುವ ಕೆಲಸವನ್ನು ಮಾಡಲಾಗುವುದು. ಎಲ್ಲಾ ಶಾಸಕರ ಒಟ್ಟುಗೂಡಿ, ನಮ್ಮ ಜೊತೆ ಸಮಿತಿಯಿಂದ 15 ಜನರ ತಂಡ ಈ ವಾರದಲ್ಲಿ ದಿನ ನಿಗಧಿ ಮಾಡಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡುವ ಕೆಲಸ ಮಾಡಿ ಗಮನ ಸೆಳೆಯಲಾಗುವುದು ಎಂದು ಸಂಸದ ಶ್ರೇಯಸ್. ಎಂ. ಪಟೇಲ್ ಭರವಸೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಾಸನ ವಿಶ್ವವಿದ್ಯಾಲಯ ಉಳಿಸಿ ಬೆಳೆಸಲು ಭಾನುವಾರ ಕರೆಯಲಾಗಿದ್ದ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸದ ಶ್ರೇಯಸ್.ಎಂ. ಪಟೇಲ್ ಮಾತನಾಡಿ, ವಿಶ್ವ ವಿದ್ಯಾಲಯದ ಕುರಿತು ದುಂಡು ಮೇಜಿನ ಸಭೆಯಲ್ಲಿ ಮೌಲ್ಯಾಧರಿತ ಚರ್ಚೆಗಳು ನಡೆದಿದ್ದು, ಅಭಿವೃದ್ಧಿ ಮತ್ತು ಯೋಗಕ್ಷೇಮ ಬಂದಾಗ ಪಕ್ಷ ಮರೆತು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕಾಗುತ್ತದೆ. ಎಲ್ಲಾರ ಪರ ನಿಂತು ಕೊಳ್ಳುವ ಕೆಲಸ ಮಾಡಲಾಗುವುದು ಎಂದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಲಾಗುವುದು. ಸಮಿತಿ ವರದಿ ಕೂಡ ಇಲ್ಲಿವರೆಗೂ ಬಂದಿರುವುದಿಲ್ಲ. ವಿಶ್ವವಿದ್ಯಾಲಯವನ್ನು ಮುಚ್ಚುವ ನಿರ್ಧಾರವನ್ನು ಇಲ್ಲಿವರೆಗೂ ತೆಗೆದುಕೊಂಡಿರುವುದಿಲ್ಲ. ಯಾರು ಗಾಬರಿ ಪಡಬಾರದೆಂದು ಶಿಕ್ಷಣ ಸಚಿವರು ಹೇಳಿದ್ದು, ಈಗ ಅಧಿವೇಶನ ನಡೆಯುತ್ತಿರುವುದರಿಂದ ಎಲ್ಲಾ ಶಾಸಕರು ಒಳಗೊಂಡಂತೆ ಸಮಿತಿ ರಚಿಸಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡಿ ಆಗಬಹುದಾದಂತಹ ಬೇಡಿಕೆಯನ್ನು ಮುಂದಿಟ್ಟು ಮನವಿಯನ್ನು ಮಾಡೋಣ ಎಂದರು.
ಶಾಸಕ ಎ. ಮಂಜು ಮಾತನಾಡಿ, ವಿಶ್ವವಿದ್ಯಾಲಯ ಇಲ್ಲೆ ಉಳಿಸುವ ನಿಟ್ಟಿನಲ್ಲಿ ಆಗಬೇಕಾದ ಕೆಲಸ ತಡವಾಗಿದೆ ಎಂಬುದು ನನ್ನ ಭಾವನೆ. ಕಾಲೇಜುಗಳನ್ನು ಯಾವ ಸರಕಾರ ಬಂದರೂ ಮುಚ್ಚುವುದಕ್ಕೆ ಆಗುವುದಿಲ್ಲ. ಆದರೇ ವಿಲೀನಗೊಳಿಸಲಾಗುತ್ತದೆ. ಹಳ್ಳಿ ಸೇರಿದಂತೆ ಎಲ್ಲಾ ಮಕ್ಕಳಿಗೂ ವಿಧ್ಯೆ ಸಿಗಬೇಕಾದರೇ ವಿವಿಗಳು ಆಯಾ ಜಿಲ್ಲೆ ಇರಬೇಕು. ಆಗ ಮಾತ್ರ ಹೆಚ್ಚಿನ ಅವಕಾಶಗಳು ದೊರೆಯುತ್ತದೆ. ವಿಶ್ವವಿದ್ಯಾಲಯದ ಅಭಿವೃದ್ಧಿ ಆಗಬೇಕು. ಹೆಚ್ಚಿನ ಹೋರಾಟಕ್ಕೆ ಮುಂದಾದ ಜಿಲ್ಲೆ ಇದ್ದರೇ ಹಾಸನ. ಈ ಹೋರಾಟದಲ್ಲಿ ಯಾವ ರಾಜಕಾರಣ ಆಗಬಾರದು. ವಿವಿ ರಾಜ್ಯ ಸರಕಾರದಿಂದ ಮಾತ್ರ ನಡೆಯುವುದಿಲ್ಲ. ಕೇಂದ್ರದ ಯುಜಿಸಿ ಸ್ಕೇಲ್ ಕೂಡ ಇದೆ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ ಮಾತನಾಡಿ, ವಿದ್ಯಾರ್ಥಿಗಳ ಮೊದಲ ಆಯ್ಕೆ ಸರಕಾರ ಶಿಕ್ಷಣ ಸಂಸ್ಥೆಗಳು. ಇಂಜಿನಿಯರ್, ವೈದ್ಯಕೀಯ ಯಾವುದೇ ಆಗಿರಲಿ ಸರಕಾರಿ ಸಂಸ್ಥೆಗಳಿಗೆ ಬರಲು ಮುಂದಾಗುತ್ತಾರೆ. ಸೀಟು ಇಲ್ಲದಾಗ ಅನಿವಾರ್ಯವಾಗಿ ಖಾಸಗೀ ಕಡೆ ಹೋಗುತ್ತಾರೆ. ಏನಾದರೂ ಈ ರೀತಿ ತಾತ್ಸರ ಮಾಡಿದರೇ ಮುಂದಿನ ದಿನಗಳಲ್ಲಿ ಖಾಸಗೀ ಶಿಕ್ಷಣ ಸಂಸ್ಥೆಯವರು ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಮುಂದಾದರೇ ಆ ಖಾಸಗೀಯವರು ಮಾಡಿದ ನಿರ್ಣಯದಂತೆ ಉನ್ನತ ಶಿಕ್ಷಣ ಸಾಗುತ್ತದೆ ಎಂದು ಎಚ್ಚರಿಸಿದರು.
ಇದರಿಂದ ಯಾವ ಯಾವ ಸಂಸ್ಥೆ ಯಾವ ಯಾವ ಮೌಲ್ಯವನ್ನು ಭಿತ್ತಬಹುದು. ಸರಕಾರದವರು ಹೀಗೆ ಮುಂದುವರೆದರೇ ಬಂಡವಾಳ ಶಾಹಿಗಳು ತಮಗೆ ಬೇಕಾದ ಮೌಲ್ಯಗಳನ್ನು ಯುವ ತಲೆಮಾರಿಗೆ ಬಿತ್ತುತ್ತಾರೆ. ಇದುಉನ್ನತ ಶಿಕ್ಷಣದ ದೊಡ್ಡ ದುರಂತದ ಸಂಗತಿ ಆಗಿತು ಎಂದು ಬೇಸರವ್ಯಕ್ತಪಡಿಸಿದರು.
ಹಸಿರುಭೂಮಿ ಪ್ರತಿಷ್ಠಾನದ ಬಿ.ಕೆ. ಮಂಜುನಾಥ್ ಮಾತನಾಡಿ, ಸರಕಾರದಲ್ಲಿ ಗೊಂದಲವಿದ್ದು, ಜನರಲ್ಲಿ ವಿಶ್ವವಿದ್ಯಾಲಯ ಉಳಿಯುತ್ತದೆಯೂ ಇಲ್ಲವೊ ಎಂಬುದು ಬೇರೂರಿದೆ. ಈ ಕಮಿಟಿ ಶಾಸಕರು. ಸಂಸದರು ಎಲ್ಲಾ ಸೇರಿ ಸಭೆ ಮಾಡಿ ದೃಢವಾದ ನಿಲುವು ತೆಗೆದುಕೊಂಡರೇ ಖಂಡಿತ ಸರಕಾರ ಒಪ್ಪಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ಡಾ. ವೈ.ಎಸ್. ವೀರಭದ್ರಪ್ಪ, ಆರ್.ಪಿ. ವೆಂಕಟೇಶ್ ಮೂರ್ತಿ, ಧರ್ಮೇಶ್, ಹೆಚ್.ಕೆ. ಸಂದೇಶ್, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಹೆಚ್.ಪಿ. ಮೋಹನ್, ಹಿರಿಯ ಪತ್ರಕರ್ತ ವೆಂಕಟೇಶ್, ಹೆಚ್.ಆರ್. ನವೀನ್ ಕುಮಾರ್, ಎಂ.ಜಿ. ಪೃಥ್ವಿ, ಸಾಹಿತಿ ರೂಪ ಹಾಸನ್, ತಾರಾಚಂದನ್, ರಮೇಶ್, ಎಣ.ಬಿ. ಪುಷ್ಪ, ಸಮೀರ್ ಅಹಮದ್ ಇತರರು ಉಪಸ್ಥಿತರಿದ್ದರು.
Hassan
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್‌ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪ ತಹಶೀಲ್ದಾರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.
ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.
Hassan
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ

ಹಾಸನ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕೈಗೆ ಹಾಕಿದ್ದ ಕಾಶೀ ದಾರವನ್ನು ತೆಗೆದು ಹಾಕಲು ಹೇಳಿದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಬ್ರಾಹ್ಮಣ ಸಂಘದ ಸದಸ್ಯ ವೇಣುಗೋಪಾಲ್ ಬೇಸರವ್ಯಕ್ತಪಡಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವರ ಅವರ ಧರ್ಮದ ಆಚರಣೆಗಳನ್ನು, ಇನ್ನೊಬ್ಬರಿಗೆ ತೊಂದರೆ ಆಗದಂತೆ, ಪಾಲಿಸುವ ಅವಕಾಶ ನೀಡಿದೆ. ಹೀಗಿರುವಾಗ ಸಾಮಾನ್ಯ ನಾಗರೀಕನ ಹಕ್ಕನ್ನು ಮೋಟಕುಗೊಳಿಸುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ನೆಪದಲ್ಲಿ ಬ್ರಾಹ್ಮಣ ಸಮಾಜದ ಧಾರ್ಮಿಕ ಆಚರಣೆಗಳನ್ನು ತಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
Hassan
ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ಹಲವು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಚರ್ಚ್‌ಗಳಲ್ಲಿ ಮೇಣದ ಬತ್ತಿ ಹಿಡಿದು ಪ್ರಾರ್ಥನೆ ಸಲ್ಲಿದ ದೃಶ್ಯ ಕಂಡು ಬಂತು.
ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದ ಸಂತ ಜೋಸೆಫರ ಚರ್ಚ್‌ನಲ್ಲಿ ಹಾಗೂ ಮಗ್ಗೆ ಗ್ರಾಮದಲ್ಲಿರುವ ಸೆಂಟ್ ಫ್ರಾನ್ಸಿಸ್ ಕ್ಷವಿಯರ್ ಚರ್ಚ್‌ನಲ್ಲಿ ಯೇಸು ಕ್ರಿಸ್ತನು ಬಂಧನಕ್ಕೆ ಒಳಗಾಗುವುದರಿಂದ ಹಿಡಿದು ಶಿಲುಬೆಯ ಮೇಲೆ ಮರಣ ಹೊಂದುವ ತನಕದ ವಿವಿಧ ಘಟನೆಗಳನ್ನು ನೆನಪಿಸುವ ಪ್ರದರ್ಶನದ ಮೂಲಕ ಜನರಿಗೆ ಏಸು ಕ್ರಿಸ್ತನ ಕುರಿತ ಸಂದೇಶ ಸಾರಲಾಯಿತು. ನಂತರ ಯೇಸು ಕ್ರಿಸ್ತನು ಆಡಿದ ಮಹತ್ವದ ಏಳು ಮಾತುಗಳ ಕುರಿತು ಪ್ರವಚನ ನೀಡಲಾಯಿತು.
ಜೋಸೆಫ್ ನಗರದಲ್ಲಿರುವ ಜೋಸೆಫರ ಚರ್ಚ್ ನ ಧರ್ಮ ಗುರುಗಳಾದ ಒಂದನೆಯ ಫಾದರ್ ಆಲ್ವಿನ್ ಡಿಸೋಜಾ ಮಾತನಾಡಿ, ಕ್ರಿಶ್ಚಿಯನ್ ಧರ್ಮದಲ್ಲಿ ಮಹತ್ವದ ತಿರುವು ಪಡೆದ ಯೇಸುಕ್ರಿಸ್ತನ ಶಿಲುಬೆಗೇರಿಸುವಿಕೆಯ ಸನ್ನಿವೇಶವು ಗುಡ್ ಪ್ರೈಡೇಗೆ ಅಡಿಪಾಯವನ್ನು ಹಾಕಿದೆ. ಯೇಸುಕ್ರಿಸ್ತನು 2000 ಸಾವಿರ ವರ್ಷಗಳ ಹಿಂದೆ ಭೂಲೋಕಕ್ಕೆ ಮನುಷ್ಯ ಅವತಾರ ತಾಳಿ ಬಂದನು. ಮನುಷ್ಯನಂತೆ ಲೋಕದಲ್ಲಿ ಜೀವಿಸಿದನು. ಆದರೆ, ಪಾಪ ಮಾತ್ರ ಮಾಡಲಿಲ್ಲ. ಆದರೂ ಆಗಿನ ರೋಮ್ ಸಾಮ್ರಾಜ್ಯದಲ್ಲಿ ಯೆಹೂದ್ಯರು ಆತನನ್ನು ಶಿಲುಬೆಯ ಮರಣಕ್ಕೆ ಒಪ್ಪಿಸಿದರು. ಆದರೆ, ಆತನು ಮೂರು ದಿನಗಳ ನಂತರ ಪುನರುತ್ಥಾನವಾದನು. ಹೀಗಾಗಿ ಕ್ರೈಸ್ತರು ಕೂಡ ಲೋಕದಲ್ಲಿ ಇರುವಾಗ ಕ್ರಿಸ್ತನಿಗೆ ವಿರುದ್ಧವಾದ ಕೆಲಸಗಳನ್ನು ಮಾಡಬಾರದು. ಕ್ರಿಸ್ತನಂತೆ ಜೀವನ ಮಾಡಬೇಕು ಎಂದು ಸಂದೇಶ ನೀಡಿದರು.
ಪೋಟೋ ಕ್ಯಾಪ್ಶನ್: ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಚರ್ಚ್ ನಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.
-
Mandya21 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Kodagu17 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar21 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Chamarajanagar21 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu14 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar12 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur15 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Chikmagalur14 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.