Connect with us

Hassan

ಮುಖ್ಯ ಅತಿಥಿಗಳ ಗೈರು, ಹಾಸನಾಂಬ ಕಲಾಕ್ಷೇತ್ರದ ಸೀಟು ಖಾಲಿ ಖಾಲಿ

Published

on

ಸವಿತಾ ಮಹರ್ಷಿ ಜಯಂತಿಯಲ್ಲಿ ರವಿಕುಮಾರ್ ಬೇಸರ

ಹಾಸನ: ಆಹ್ವಾನ ಪತ್ರಿಕೆಯಲ್ಲಿ ರಾಜಕಾರಣಿಗಳು, ಅಧಿಕಾರಿಗಳ ಹೆಸರು ಇದ್ದರೂ ಅವರ ಗೈರು ಇರುವುದರ ಜೊತೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಅಲ್ಪವೇ ಜನರು ಇರುವುದಕ್ಕೆ ಸವಿತಾ ಸಮಾಜದ ಅಧ್ಯಕ್ಷ ರವಿಕುಮಾರ್ ಬೇಸರವ್ಯಕ್ತಪಡಿಸಿದರು.

ನಗರದ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರದಂದು ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಆಹ್ವಾನ ಪತ್ರಿಕೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ತಾಲೂಕಿನ ಶಾಸಕರು, ಎಂ.ಎಲ್.ಸಿ. ಹಾಗೂ ಸಂಸದರ ಹೆಸರು ನಮೋದಿಸಲಾಗಿದೆ. ಇವರೆಲ್ಲಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೇ ನಾವು ಹೇಳುವುದೆ ಬೇಡ ಜನರು ಕಲಾಭವನದಲ್ಲಿ ಹೆಚ್ಚು ಸೇರುತ್ತಾರೆ. ರಾಜಕೀಯಕ್ಕೂ ಇದು ನೆಂಟು ಇದೆಯಾ ಗೊತ್ತಿಲ್ಲ. ಪತ್ರಿಕೆಯಲ್ಲಿ ಮಾತ್ರ ರಾಜಕಾರಣಿಯವರ ಹೆಸರು ಹಾಕಲಾಗಿದೆ. ಆದರೇ ಇಲ್ಲಿ ಯಾರು ಕಾರ್ಯಕ್ರಮಕ್ಕೆ ಬರುವುದಿಲ್ಲ. ನಮ್ಮ ಗೋಳನ್ನು ಯಾರ ಬಳಿ ಹೇಳಿಕೊಳ್ಳುವುದು. ಅಧಿಕಾರಿಗಳ ಬಳಿ ಹೇಳಿಕೊಂಡರೆ ಸ್ಪಂದನೆ ಕೊಡುತ್ತಾರೆ. ಆದ್ರೆ ರಾಜಕಾರಣಿಯಿಂದಲೇ ಸಮಾಜಕ್ಕೆ ಅನುಕೂಲ, ಸೌಲಭ್ಯ ಇರಬಹುದು ಎಲ್ಲಾ ಕೆಲಸ ಆಗಬೇಕಾಗಿರುವುದು ಎಂದರು. ಇಂತಹ ಜಯಂತಿ ಕಾರ್ಯಕ್ರಮದಲ್ಲಿ ರಾಜಕಾರಣಿಗಳು ಭಾಗವಹಿಸಿದರೇ ನಮ್ಮ ಸಮಸ್ಯೆಯನ್ನು ಅವರ ಬಳಿ ತೋಡಿಕೊಳ್ಳಲು ಅವಕಾಶ ದೊರಕುತ್ತದೆ. ಇದು ನಮ್ಮ ದುರದೃಷ್ಟ ಏನು ಇದೆ ವೇಳೆ ವಿಧಾನಸಭಾದ ಸಭೆ ಬರುತ್ತದೆ. ಇದರಿಂದ ರಾಜಕಾರಣಿಗಳಿಗೆ ಒತ್ತಡ ಹಾಕಲು ಆಗುವುದಿಲ್ಲ. ಸೆಷನ್ ಮುಗಿದ ಮೇಲೆ ಈ ಜಯಂತಿ ಮುಂದಕ್ಕೆ ಹಾಕೋಣ ಎಂದು ಅಧಿಕಾರಿಗಳ ಬಳಿ ಹೇಳಿಕೊಂಡಿದ್ದರೂ ಜಯಂತಿ ಇರುವ ದಿನದಲ್ಲೆ ಆಚರಿಸಿದರೇ ಸೂಕ್ತ ಎಂದು ಅಧಿಕರಿಗಳು ಸಲಹೆ ನೀಡಿದ್ದರು. ಅವರ ಸೂಚನೆಯಂತೆ ಆಚರಿಸಲಾಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಸಮಾಜ ಚಿಂತಕರು ಕೆ.ವಿ ಮೋಹನ್ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಪುರಾಣ ಗ್ರಂಥಗಳ ಪ್ರಕಾರ ಸವಿತಾ ಮಹರ್ಷಿ ದೇವ ದೇವತೆಗಳ ಆಯುಷ್ಕರ್ಮ ಸೇವೆಯನ್ನು ಮಾಡುತ್ತಿದ್ದಾರೆಂದು ಕಾಶಿ ಕ್ಷೇತ್ರದಳ್ಲಿ ದೊರೆತ ಮಹಾಗ್ರಂಥದಲ್ಲಿ ಉಲ್ಲೇಖಿಸಲಾಗಿದೆ. ಸವಿತಾ ಮಹರ್ಷಿಯು ರಥಸಮ್ತಿಯ ದಿನ ಮಾಘ ಮಾಸದ ಶುಕ್ಲ ಪಕ್ಷದಲ್ಲಿ ಜನಿಸಿದರು. ಧಾರ್ಮಿಕವಾಗಿ ಶಿವನ ಎಡಗಣ್ಣನ್ನು ಚಂದ್ರನಿಗೆ ಬಲಗಣ್ಣನ್ನು ಸೂರ್ಯನಿಗೆ ಹೊಲಿಸಲಾಗುತ್ತದೆ. ಶಿವನ ಬಲಗಣ್ಣಿನಿಂದ ಜನಿಸಿದವನೇ ಸವಿತಾ ಮಹರ್ಷಿ ಎಂದು ಪ್ರತಿತಿಯಿದೆ. ಅಪಾರ ಜ್ಷಾನಭಂಡಾರ ಹೊಂದಿದ ಸವಿತಾ ಮಹರ್ಷಿಗಳು ನಾಲ್ಕನೇ ವೇದವಾದ ಸಾಮವೇದ ಕೃತಿ ರಚಿಸಿದ್ದಾರೆ ಎಂದರು. ಸವಿತಾ ಸಮಾಜ ಒಗ್ಗಟ್ಟಾಗಿ ಶೈಕ್ಷಣಿಕವಾಗಿ, ಆರ್ಥಿವಾಗಿ, ಸಾಮಾಜಿಕವಾಗಿ ಇತರರಿಗೆ ಆದರ್ಶ ಪ್ರಾಯರಾಗಿ ಬೆಳೆಯಬೇಕು. ತತ್ವ ಸಂದೇಶಗಳನ್ನು ಸರ್ವಕಾಲಿಕವಾಗಿದ್ದು ಅದರ ಹಲವು ಭಾಗವನ್ನಾದರೂ ಜನರು ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣದೊಂದಿಗೆ ಸದೃಢ ಭಾರತ ಹೊರಹೊಮ್ಮಲು ಸಾಧ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಧಿಕಾರಿಗಳ ಕಚೇರಿ ಸಹಾಯಕರಾದ ಎಲ್.ಎಸ್. ರಮೇಶ್, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ, ಸವಿತಾ ಸಮಾಜ ತಾಲ್ಲೂಕು ಅಧ್ಯಕ್ಷರು ಜಿ. ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಡಾ.ಹೆಚ್.ಪಿ. ತಾರಾನಾಥ್, ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್‌ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾ‌ರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪ ತಹಶೀಲ್ದಾ‌ರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.

ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.

Continue Reading

Hassan

ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ

Published

on

ಹಾಸನ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕೈಗೆ ಹಾಕಿದ್ದ ಕಾಶೀ ದಾರವನ್ನು ತೆಗೆದು ಹಾಕಲು ಹೇಳಿದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಬ್ರಾಹ್ಮಣ ಸಂಘದ ಸದಸ್ಯ ವೇಣುಗೋಪಾಲ್ ಬೇಸರವ್ಯಕ್ತಪಡಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವರ ಅವರ ಧರ್ಮದ ಆಚರಣೆಗಳನ್ನು, ಇನ್ನೊಬ್ಬರಿಗೆ ತೊಂದರೆ ಆಗದಂತೆ, ಪಾಲಿಸುವ ಅವಕಾಶ ನೀಡಿದೆ. ಹೀಗಿರುವಾಗ ಸಾಮಾನ್ಯ ನಾಗರೀಕನ ಹಕ್ಕನ್ನು ಮೋಟಕುಗೊಳಿಸುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ನೆಪದಲ್ಲಿ ಬ್ರಾಹ್ಮಣ ಸಮಾಜದ ಧಾರ್ಮಿಕ ಆಚರಣೆಗಳನ್ನು ತಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Continue Reading

Hassan

ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ಹಲವು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಚರ್ಚ್‌ಗಳಲ್ಲಿ ಮೇಣದ ಬತ್ತಿ ಹಿಡಿದು ಪ್ರಾರ್ಥನೆ ಸಲ್ಲಿದ ದೃಶ್ಯ ಕಂಡು ಬಂತು.

ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದ ಸಂತ ಜೋಸೆಫರ ಚರ್ಚ್‌ನಲ್ಲಿ ಹಾಗೂ ಮಗ್ಗೆ ಗ್ರಾಮದಲ್ಲಿರುವ ಸೆಂಟ್ ಫ್ರಾನ್ಸಿಸ್ ಕ್ಷವಿಯರ್ ಚರ್ಚ್‌ನಲ್ಲಿ ಯೇಸು ಕ್ರಿಸ್ತನು ಬಂಧನಕ್ಕೆ ಒಳಗಾಗುವುದರಿಂದ ಹಿಡಿದು ಶಿಲುಬೆಯ ಮೇಲೆ ಮರಣ ಹೊಂದುವ ತನಕದ ವಿವಿಧ ಘಟನೆಗಳನ್ನು ನೆನಪಿಸುವ ಪ್ರದರ್ಶನದ ಮೂಲಕ ಜನರಿಗೆ ಏಸು ಕ್ರಿಸ್ತನ ಕುರಿತ ಸಂದೇಶ ಸಾರಲಾಯಿತು. ನಂತರ ಯೇಸು ಕ್ರಿಸ್ತನು ಆಡಿದ ಮಹತ್ವದ ಏಳು ಮಾತುಗಳ ಕುರಿತು ಪ್ರವಚನ ನೀಡಲಾಯಿತು.

ಜೋಸೆಫ್ ನಗರದಲ್ಲಿರುವ ಜೋಸೆಫರ ಚರ್ಚ್ ನ ಧರ್ಮ ಗುರುಗಳಾದ ಒಂದನೆಯ ಫಾದರ್ ಆಲ್ವಿನ್ ಡಿಸೋಜಾ ಮಾತನಾಡಿ, ಕ್ರಿಶ್ಚಿಯನ್‌ ಧರ್ಮದಲ್ಲಿ ಮಹತ್ವದ ತಿರುವು ಪಡೆದ ಯೇಸುಕ್ರಿಸ್ತನ ಶಿಲುಬೆಗೇರಿಸುವಿಕೆಯ ಸನ್ನಿವೇಶವು ಗುಡ್ ಪ್ರೈಡೇಗೆ ಅಡಿಪಾಯವನ್ನು ಹಾಕಿದೆ. ಯೇಸುಕ್ರಿಸ್ತನು 2000 ಸಾವಿರ ವರ್ಷಗಳ ಹಿಂದೆ ಭೂಲೋಕಕ್ಕೆ ಮನುಷ್ಯ ಅವತಾರ ತಾಳಿ ಬಂದನು. ಮನುಷ್ಯನಂತೆ ಲೋಕದಲ್ಲಿ ಜೀವಿಸಿದನು. ಆದರೆ, ಪಾಪ ಮಾತ್ರ ಮಾಡಲಿಲ್ಲ. ಆದರೂ ಆಗಿನ ರೋಮ್ ಸಾಮ್ರಾಜ್ಯದಲ್ಲಿ ಯೆಹೂದ್ಯರು ಆತನನ್ನು ಶಿಲುಬೆಯ ಮರಣಕ್ಕೆ ಒಪ್ಪಿಸಿದರು. ಆದರೆ, ಆತನು ಮೂರು ದಿನಗಳ ನಂತರ ಪುನರುತ್ಥಾನವಾದನು. ಹೀಗಾಗಿ ಕ್ರೈಸ್ತರು ಕೂಡ ಲೋಕದಲ್ಲಿ ಇರುವಾಗ ಕ್ರಿಸ್ತನಿಗೆ ವಿರುದ್ಧವಾದ ಕೆಲಸಗಳನ್ನು ಮಾಡಬಾರದು. ಕ್ರಿಸ್ತನಂತೆ ಜೀವನ ಮಾಡಬೇಕು ಎಂದು ಸಂದೇಶ ನೀಡಿದರು.

ಪೋಟೋ ಕ್ಯಾಪ್ಶನ್: ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಚರ್ಚ್ ನಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.

Continue Reading

Trending

error: Content is protected !!