Education
ಪದವೀಧರರಿಗೆ ಗುಡ್ ನ್ಯೂಸ್ : 8283 ಹುದ್ದೆಗಳ ನೇಮಕಾತಿಗೆ SBI ಅರ್ಜಿ ಆಹ್ವಾನ.
ನವಂಬರ್ 17 2023 ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ನೇಮಕಾತಿ 2023 ಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ.
ಕ್ಲರಿಕಲ್ ಕೆಡರ್ ನಲ್ಲಿ ಜೂನಿಯರ್ ಅಸೋಸಿಯೇಟ್ (ಗ್ರಾಹಕರ ಬೆಂಬಲ ಮತ್ತು ಮಾರಾಟ) ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಬಿ ಐ ನ ಅಧಿಕೃತ ವೆಬ್ಸೈಟ್ sbi.co ಗಮನಿಸಬಹುದು.
ಈ ನೇಮಕಾತಿ ಡ್ರೈವ್ ಕ್ಲೆರಿಕಲ್ ಕೇಡರ್ ನಲ್ಲಿ ಜೂನಿಯರ್ ಅಸೋಸಿಯೇಟ್ 8283 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ನೋಂದಣಿ ಪ್ರಕ್ರಿಯೆ ನವೆಂಬರ್ 17ರಂದು ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 7.2023 ರಂದು ಕೊನೆಗೊಳ್ಳುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿಯ ಆರಂಭಿಕ ದಿನಾಂಕ ನವೆಂಬರ್ 17-2023
ಅಪ್ಲಿಕೇಶನ್ ಕೊನೆಯ ದಿನಾಂಕ ಡಿಸೆಂಬರ್ 07-2023
ಪೂರ್ವಭಾವಿ ಪರೀಕ್ಷೆ ಜನವರಿ 23
ಮುಖ್ಯ ಪರೀಕ್ಷೆ ಫೆಬ್ರವರಿ 2024
ಅರ್ಹತೆಯ ಮಾನದಂಡ
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ ಇಂಟಿಗ್ರೇಟೆಡ್ ಡಿಗ್ರಿ (IDD) ಪ್ರಮಾಣ ಪತ್ರವನ್ನು ಹೊಂದಿರುವ ಅಭ್ಯರ್ಥಿಗಳು ಐಡಿಡಿ ಪಾಸ್ ಮಾಡುವ ದಿನಾಂಕ ಡಿಸೆಂಬರ್ 31-2023 ರಂದು ಅಥವಾ ಅದಕ್ಕಿಂತ ಮೊದಲು ಎಂದು ಖಚಿತ ಪಡಿಸಿಕೊಳ್ಳಬೇಕು ವಯಸ್ಸಿನ ಮಿತಿ 20 ವರ್ಷದಿಂದ 28 ವರ್ಷಗಳ ನಡುವೆ ಇರಬೇಕು.
ಆಯ್ಕೆ ಪ್ರಕ್ರಿಯೆ
ಆಯ್ಕೆ ಪ್ರಕ್ರಿಯೆ ಆನ್ಲೈನ್ ಪರೀಕ್ಷೆ (ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ) ಮತ್ತು ನಿರ್ದಿಷ್ಟ ಪಡಿಸಿದ ಸ್ಥಳೀಯ ಭಾಷೆಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ನೂರು ಅಂಕಗಳಿಗೆ ಆಬ್ಜೆಕ್ಟಿವ್ ಪರೀಕ್ಷೆಗಳನ್ನು ಒಳಗೊಂಡಿರುವ ಆನ್ಲೈನ್ ಪೂರ್ವಭಾವಿ ಪರೀಕ್ಷೆಯನ್ನು ಆನ್ಲೈನ್ ನಲ್ಲಿ ನಡೆಸಲಾಗುತ್ತದೆ. ಈ ಪರೀಕ್ಷೆಯು ಒಂದು ಗಂಟೆ ಅವಧಿಯ ಮೂರು ವಿಭಾಗಗಳನ್ನು ಒಳಗೊಂಡಿರುತ್ತದೆ, ಇಂಗ್ಲಿಷ್ ಭಾಷೆ ಸಂಖ್ಯಾತ್ಮಕ ಸಾಮರ್ಥ್ಯ ಮತ್ತು ತಾರ್ಕಿಕ ಸಾಮರ್ಥ್ಯ.
ಅರ್ಜಿ ಶುಲ್ಕ
ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ 750ರೂ. OBC/EWS ವರ್ಗಕ್ಕೆ, SC/ ST / PwBD / ESM / DESM ಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ
Education
ಕರ್ನಾಟಕ ಸಿಇಟಿ ರಿಸಲ್ಟ್ ಯಾವಾಗ? ಇಲ್ಲಿದೆ ಸ್ಪಷ್ಟನೆ
ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಇದೀಗ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ) ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರತಿಕ್ರಿಯಿಸಿದ್ದು, ದ್ವಿತೀಯ P U ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಇಂದು ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರತಿಕ್ರಿಯಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದುದು. ದ್ವಿತೀಯ P U ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.
ಜೆಕೆವಿಕೆಯ ಪ್ರಾಯೋಗಿಕ ಪರೀಕ್ಷೆ ಮೇ 25ರಂದು ನಡೆಯಲಿದ್ದು, ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ. ಇನ್ನು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ ಮೇ 30ರಂದು ಪ್ರಕಟವಾಗುವ ಸಾಧ್ಯತೆಗಳಿವೆ. ಇದಾದ ಬಳಿಕ ಸಿಇಟಿ ರಿಸಲ್ಟ್ ಪ್ರಕಟವಾಗಲಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದಿದ್ದಾರ ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳ ಎಡವಟ್ಟಿನಿಂದ ಫಲಿತಾಂಶ ವಿಳಂಬವಾಗಿದೆ ಎಂಬ ದೂರುಗಳೂ ಕೇಳಿ ಬರುತ್ತಿವೆ.
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.
Education
ಎಸ್‌ಎಸ್‌ಎಲ್‌ಸಿ. PUC ವಿದ್ಯಾರ್ಥಿಗಳ ʼMarks Card’ ನಲ್ಲಿ ಮಹತ್ವದ ಬದಲಾವಣೆ
SSLC Marks Card: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಮಾರ್ಕ್ಸ್ ಕಾರ್ಡ್ ನಲ್ಲಿ ಮಹತ್ವದ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷೆಯನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರ್ ಪರೀಕ್ಷೆ ಇರಲಿದೆ. ಆದರೆ ಮಾರ್ಕ್ಸ್ ನೀಡುವಾಗ ಸಪ್ಲಿಮೆಂಟರ್ ಎಂದು ನಮೂದಿಸುವುದಿಲ್ಲ ಎಂದು ಹೇಳಿದ್ದಾರೆ.
ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ ನೀಡಲಾಗುವುದು. ವಾರದಲ್ಲಿ ಆರು ದಿನ ಕ್ಷೀರ ಭಾಗ್ಯದ ಹಾಲು ನೀಡುವ ಕ್ರಮ ಕೈಗೊಂಡಿರುವುದಾಗಿಯೂ, ಮೂರು ದಿನ ಹಾಲಿಗೆ ರಾಗಿ ಮಾಲ್ಟ್ ಮಿಕ್ಸ್ ಮಾಡಿ ಕೊಡಲಾಗುತ್ತದೆ. ಜೊತೆಗೆ ಶಾಲಾ ಬ್ಯಾಗ್ ಹೊರೆ ಕೂಡಾ ಕಡಿಮೆ ಮಾಡಲಾಗುತ್ತದೆ. ಸರಕಾರಿ ಶಾಲೆಗಳನ್ನು ಉನ್ನತೀರಕರಣ ಮಾಡುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದ ಎಂದು ಅವರು ಮಾಧ್ಯಮದವರಿಗೆ ಹೇಳಿದ್ದಾರೆ.
Education
11,894 ಶಿಕ್ಷಕರ ನೇಮಕಾತಿ; ರಾಜ್ಯಸರಕಾರದಿಂದ ಮಹತ್ವದ ಘೋಷಣೆ
ಬೆಂಗಳೂರು: 2022 ಹಾಗೂ 2023 ನೇ ಸಾಲಿನಲ್ಲಿ ನಡೆಸಿದ 11,894 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
11,894 ಶಿಕ್ಷಕರ ನೇಮಕಾತಿ ಗೆ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ಈ ನೇಮಕಾತಿಯ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಟ್ಟಿದೆ.
ಈ ವಿಚಾರವಾಗಿ ತಂದೆ ಅಥವಾ ಗಂಡನ ಆದಾಯ ಪ್ರಮಾಣ ಪತ್ರವನ್ನು ಪರಿಶೀಲಿಸಬೇಕಾ ಎಂಬುದರ ಕುರಿತ ತೀರ್ಪು ಸುಪ್ರೀಂ ಕೋರ್ಟ್ ನಿಂದ ಹೊರ ಬರಲಿದ್ದು. ಅಲ್ಲಿಯವರೆಗೆ ನೇಮಕಾತಿಗೆ ತಡೆ ನೀಡಿದೆ.
ರಾಜ್ಯ ಸರ್ಕಾರದ ಕೋರಿಕೆಯನ್ನು ಕೇಳಿರುವ ಸುಪ್ರೀಂಕೋರ್ಟ್ ತನ್ನ ತೀರ್ಪಿಗೆ ಬದ್ಧವಾಗಿ ನೇಮಕಗೊಂಡ ಶಿಕ್ಷಕರು ಪಠ್ಯ ಚಟುವಟಿಕೆ ಮುಂದುವರೆಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಿದೆ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.