Mandya
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ SC, ST ಆಯೋಗದ ಅಧ್ಯಕ್ಷ ಡಾ. ಮೂರ್ತಿ
ಮದ್ದೂರು : ರಾಜ್ಯ ಎಸ್, ಎಸ್‌ಟಿ ಆಯೋಗದ ಅಧ್ಯಕ್ಷ ಡಾ. ಮೂರ್ತಿ ರವರು ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಂತರ ಅವರು ಮಾತನಾಡಿ ಆಯೋಗದಲ್ಲಿ ಈಗಾಗಲೇ ಸುಮಾರು 2,800 ಅರ್ಜಿಗಳು ದಾಖಲಾಗಿವೆ ಅವುಗಳಲ್ಲಿ ಸುಮಾರು 60 ರಿಂದ 70 ಅರ್ಜಿದಾರರ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.
ನಾನು ಆಯೋಗದ ಅಧ್ಯಕ್ಷನಾದ ಬಳಿಕ ಬಹಳಷ್ಟು ಅಹವಾಲುಗಳು ರಾಜ್ಯದ ಇತರೆಡೆಗಳಿಂದ ಬರುತ್ತಿದ್ದವು. ಹೀಗಾಗಿ ತಾಲೂಕು ಮಟ್ಟದಲ್ಲಿಯೇ ಸಭೆ ನಡೆಸಿದ್ದು, ಅರ್ಜಿ ಸ್ವೀಕರಿಸಿ ಅಲ್ಲಿಯೇ ಅಧಿಕಾರಿಗಳ ಸಭೆಯನ್ನೂ ನಡೆಸಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಇಂದು ನನ್ನ ಸ್ವಂತ ತಾಲೂಕಾದ ಮದ್ದೂರಿನಲ್ಲಿ ಸಭೆ ನಡೆಸಿದ್ದೇನೆ ಎಂದು ಹೇಳಿದರು.

ಇಂದು ಸಾರ್ವಜನಿಕವಾಗಿ ಒಟ್ಟು 26 ಅರ್ಜಿಗಳು ಸಲ್ಲಿಕೆಯಾಗಿದ್ದು ಇದರಲ್ಲಿ ಜಮೀನು, ದೌರ್ಜನ್ಯ, ಸುಳ್ಳು ಜಾತಿ ಸಲ್ಲಿಕೆ ವಿಚಾರಗಳು ಸೇರಿದಂತೆ ಸ್ಮಶಾನ ವಿವಾದಗಳಿಗೆ ಸಂಭಂಧಿಸಿದಂತೆ ಅರ್ಜಿಗಳನ್ನು ಪಡೆಯಲಾಗಿದೆ ಎಂದರು.
ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಶೀಘ್ರ ಬಗೆಹರಿಸಲು ಸೂಚಿಸಿದ್ದೇನೆ ಎಂದರು.

ಈ ವೇಳೆ ಮುಖಂಡರಾದ ಹಿಂದುಳಿದ ವರ್ಗದ ಮುಖಂಡರಾದ ಚಿದಂಬರ ಮೂರ್ತಿ, ಗುಡಿಗೆರೆ ಬಸವರಾಜು, ಕುಮಾರ್ ಕೊಪ್ಪ,ರಾಮಾನಂದ್, ಆಲೂರು ಬಸವರಾಜು, ಹಳ್ಳಿಕೆರೆ ಮಾದೇಶ್, ಆಲೂರು ಕುಮಾರ್, ಮಹದೇವಪ್ಪ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಸಮಾಜ ಕಲ್ಯಾಣಾಧಿಕಾರಿ ನಾಗರಾಜು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
Mandya
ಚಿರತೆ ದಾಳಿಗೆ 4 ಕುರಿ ಸಾ*ವು, 2 ಕುರಿಗೆ ತೀವ್ರ ಗಾಯ
ಮದ್ದೂರು: ಚಿರತೆ ದಾಳಿಗೆ 4 ಕುರಿಗಳು ಸಾವನ್ನಪ್ಪಿದ್ದು, 2 ಕುರಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.
ತಾಲೂಕಿನ ವಳಗೆರೆಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆಗೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ನುಗ್ಗಿರುವ ಚಿರತೆಯೊಂದು 18 ಕುರಿಗಳ ಪೈಕಿ 6 ಕುರಿಗಳ ಮೇಲೆ ದಾಳಿ ಮಾಡಿದೆ.
ಕುರಿಗಳ ಚೀರಾಟದಿಂದ ಕೊಟ್ಟಿಗೆಗೆ ಬಂದ ಶ್ರೀನಿವಾಸ್ ಚಿರತೆ ದಾಳಿ ಮಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಆತಂಕಗೊಂಡು ಶ್ರೀನಿವಾಸ್ ಕೂಗಾಟ ಚೀರಾಟ ನಡೆಸಿದ ಪರಿಣಾಮ ಚಿರತೆ ಅಲ್ಲಿಂದ ಪರಾರಿಯಾಗಿದೆ. ಆದರೆ, ಅಷ್ಟರಲ್ಲಿ 4 ಕುರಿಗಳು ಸಾವನ್ನಪ್ಪಿದ್ದು, 2 ಕುರಿಗಳು ಗಾಯಗೊಂಡಿವೆ.

ತಾಲೂಕಿನಾದ್ಯಂತ ಚಿರತೆಗಳ ಉಪಟಳ ಹೆಚ್ಚಾಗಿದ್ದು, ಇದರಿಂದ ರಾತ್ರಿಯ ವೇಳೆ ರೈತರು ಜಮೀನುಗಳಿಗೆ ಹೋಗಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ ಹಾಗೂ ಕೆಲವು ಗ್ರಾಮಗಳಲ್ಲಿ ಬೆಳಗಿನ ವೇಳೆಯೇ ಚಿರತೆಗಳು ಕಂಡು ಬರುತ್ತಿದೆ. ಆದ್ದರಿಂದ, ಅರಣ್ಯ ಅಧಿಕಾರಿಗಳು ಚಿರತೆ ಉಪಟಳ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಗವಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಚಿರತೆ ಸೆರೆಗೆ ಅಗತ್ಯವಿರುವ ಕಡೆಗಳಲ್ಲಿ ಈಗಾಗಲೆ ಹಲವಾರು ಗ್ರಾಮಗಳಲ್ಲಿ ಬೋನನ್ನು ಇರಿಸಲಾಗಿದ್ದು, ಹಲವಾರು ಚಿರತೆಗಳನ್ನು ಸೆರೆಹಿಡಿದು ಮೇಲಾಧಿಕಾರಿಗಳ ಆದೇಶದ ಮೇರೆಗೆ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಇಲಾಖೆ ವತಿಯಿಂದ ಚಿರತೆ ಸೆರೆ ಹಿಡಿಯಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಭರವಸೆ ನೀಡಿದರು.
Mandya
ಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
ಮಂಡ್ಯ: ಮಳವಳ್ಳಿ ಪಟ್ಟಣದಲ್ಲಿ ನಡೆಯುತ್ತಿರುವ ಸುತ್ತೂರಿನ ಶಿವರಾತ್ರಿ ಶಿವಯೋಗಿಗಳರವರ 1066 ನೇ ಜಯಂತಿ ಮಹೋತ್ಸವ ಉದ್ಘಾಟನೆಗೆ ಡಿ.17 ರಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮಿಸುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ವೇದಿಕೆ ಹಾಗೂ ಇತರೆ ಸ್ಥಳಗಳನ್ನು ಇಂದು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಟ್ಟಣದ ಹೊರ ಭಾಗದ ಮಾರೇಹಳ್ಳಿ ಬಳಿ ನಿರ್ಮಿಸುತ್ತಿರುವ ಹೆಲಿಪ್ಯಾಡ್‌ಗೆ ತೆರಳಿ ಗ್ರೀನ್ ರೂಂ ನಿರ್ಮಾಣ, ವಿದ್ಯುತ್ ಕಂಬಗಳ ತೆರವು, ಜಾಗ ಸಮತಟ್ಟಾಗಿಸುವುದು, ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳನ್ನು ತೆರಳುವ ಮಾರ್ಗ, ಮೂಲಭೂತ ಸೌಲಭ್ಯಗಳ ಅಳವಡಿಕೆ ಕುರಿತು ತೆಗೆದುಕೊಂಡಿರುವ ಕ್ರಮಗಳ ಚರ್ಚೆ ನಡೆಸಿದರು.

ನಂತರ ಪ್ರವಾಸಿ ಮಂದಿರ, ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಆಡಳಿತಾಧೀಕಾರಿಗಳ ಜೊತೆಗೆ ಚರ್ಚೆ ನಡೆಸಿ ದಿನದ 24 ಗಂಟೆಗಳಲ್ಲಿಯೂ ಆರೋಗ್ಯ ಸಿಬ್ಬಂದಿಗಳು ಲಭ್ಯವಾಗಿರಬೇಕು. ತುರ್ತು ಚಿಕಿತ್ಸೆಗೆ ಬೇಕಾದ ಆಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಾ.ಸಂಜಯ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಅವರಿಗೆ ಸೂಚನೆ ನೀಡಿದರು.
ಡಿ. 17 ರಿಂದ 22 ರವರಗೆ ನಡೆಯಲಿರುವ ಜಯಂತೋತ್ಸವಕ್ಕೆ ರಾಷಪತಿಗಳು, ಮುಖ್ಯಮಂತ್ರಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಗಣ್ಯ ವ್ಯಕ್ತಿಗಳ ವಾಸ್ತವ್ಯಕ್ಕೆ ತಾಲೂಕು ವ್ಯಾಪ್ತಿಯ ಎಲ್ಲಾ ಲಾಡ್ಜ್, ಕಲ್ಯಾಣ ಮಂಟಪಗಳ, ರೆಸಾರ್ಟ್ಸ್ ಗಳ, ರೂಮುಗಳನ್ನು ಕಾಯ್ದಿರಿಸುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರದಂತೆ ಫ್ಲೆಕ್ಸ್ ಬ್ಯಾನರ್ ಅಳವಡಿಕೆ, ಸೂಕ್ತ ಪೊಲೀಸ್ ಬಂದೋಬಸ್ ವ್ಯವಸ್ಥೆ ಕುರಿತು ಎಚ್ಚರಿಕೆ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸುತ್ತೂರು ಜಯಂತಿ ನಡೆಯುವ ವೇದಿಕೆ ಬಳಿ ಪರಿಶೀಲನೆ ನಡೆಸಿ ವೇದಿಕೆ ಅಳತೆ, ಗಣ್ಯರ ಆಗಮನದ ಮುಖ್ಯದ್ವಾರ, ಪಾರ್ಕಿಂಗ್, ಊಟದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ , ಎ.ಸಿ.ಶಿವಮೂರ್ತಿ ತಹಸಿಲ್ದಾರ್ ಲೋಕೇಶ್, ಪುರಸಭೆ ಮುಖ್ಯ ಅಧಿಕಾರಿ ನಾಗರತ್ನ, ಲೋಕೋಪಯೋಗಿ ಇಂಜಿನಿಯರ್ ಸೋಮಶೇಖರ್ , ಸಿಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರೇಮ್ ಕುಮಾರ್, ಗ್ರಾಮಾಂತರ ವೃತ್ತ ನಿರೀಕ್ಷಕ ಶ್ರೀಧರ್, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ,ಜಯಂತಿ ಮಹೋತ್ಸವದ ವಿದ್ಯಾ ಪೀಠದ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ನಕಲಿ ಜನನ ಮತ್ತು ಮರಣ ಪತ್ರ ನೀಡಿವವರ ವಿರುದ್ಧ ಕ್ರಮ: ಡಾ.ಕುಮಾರ
ಮಂಡ್ಯ : ಜಿಲ್ಲೆಯಲ್ಲಿ ನಕಲಿ ಜನನ ಮತ್ತು ಮರಣ ಪತ್ರ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಜನನ ಮತ್ತು ಮರಣ ಸಮನ್ವ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಬೆಳೆ ಕಟಾವು ಪ್ರಯೋಗ ಹಾಗೂ ಕೃಷಿ ಅಂಕಿ ಅಂಶ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನನ ಮತ್ತು ಮರಣ ವನ್ನು ನೊಂದಣಿ ಮಾಡಲು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳಿಗೆ ಅಧಿಕಾರಿಯನ್ನು ನೀಡಲಾಗಿದೆ. ಜನನ ಹಾಗೂ ಮರಣ ಸಂಭವಿಸಿದ 30 ದಿನಗಳೊಳಗಾಗಿ ಜನನ ಮತ್ತು ಮರಣ ಪತ್ರ ಮಾಡಿಸಿಕೊಳತಕ್ಕದ್ದು. ಇಲ್ಲವಾದಲ್ಲಿ 30 ದಿನಗಳು ಮೀರಿದರೆ ತಹಶೀಲ್ದಾರ್ ಬಳಿ ತೆರಳಬೇಕು. 1 ವರ್ಷ ಮೀರಿದರೆ ಕೋರ್ಟ್ ನ ಮೂಲಕ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಬೇಕಾಗಿರುತ್ತದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಕುರಿತು ಅರಿವು ಇರುವುದಿಲ್ಲ. ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಇದರ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಜನನ ಪತ್ರ ನೀಡಲು ಆಸ್ಪತ್ರೆಗಳಲ್ಲಿ ವಿಳಂಬವಾಗುತ್ತಿದೆ. ಸದರಿ ವರ್ಷ ಜಿಲ್ಲೆಯಲ್ಲಿ 1 ವರ್ಷ ಮೇಲ್ಪಟ್ಟ 30 ಮಕ್ಕಳಿಗೆ ಜನನ ಪ್ರಮಾಣ ಪತ್ರ ನೊಂದಣಿ ಆಗಿಲ್ಲ. ಯಾವುದೇ ಕಾರಣಕ್ಕೂ ಜನನ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗಬಾರದು, ಜನನ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಮಗುವಿನ ತಂದೆ ತಾಯಿ ಹೆಸರು ಹಾಗೂ ವಿಳಾಸವನ್ನು ಖಾತ್ರಿ ಪಡಿಸಿಕೊಂಡು ನೊಂದಣಿ ಮಾಡಬೇಕು ಎಂದು ಸೂಚಿಸಿದರು.
ಜನನ ಮತ್ತು ಮರಣ ಸಂಭವಿಸಿದ 30 ದಿನಗಳೊಳಗಾಗಿ ಪ್ರಮಾಣ ಪತ್ರ ಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯ ಮೂಲಕ ಜನರಿಗೆ ಜಾಗೃತಿ ಮೂಡಿಸಿ ಎಂದರು.
ಹೆಚ್ಚು ಇಳುವರಿ ಕೊಡುವ ನೂತನ ತಳಿಗಳ ಕುರಿತು ರೈತರಿಗೆ ಅರಿವು ಮೂಡಿಸಿ
ಜಿಲ್ಲೆಯ ರೈತರು ಸಾಂಪ್ರದಾಯಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ. ಸಾಂಪ್ರದಾಯಕ ಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕುಸಿಯುತ್ತದೆ. ರೈತರು ಮಿಶ್ರ ಬೆಳೆ ಮತ್ತು ಪರ್ಯಾಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಿಶ್ರಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ರೈತರಿಗೆ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಅರಿವು ಮೂಡಿಸಿ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕೆಲವು ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನು ತಪ್ಪಾಗಿ ನಮೂದಿಸಲಾಗಿದೆ. ಅಧಿಕಾರಿಗಳು ಸಭೆ ನಡೆಸಿ ತಪ್ಪಾಗಿರುವ ಮಾಹಿತಿಯನ್ನು ತತ್ರಾಂಶದಿಂದ ತೆಗೆದುಹಾಕಿ. ಹಾಗೂ ಬೆಳೆ ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ಸಲ್ಲಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಬೆಳೆ ಕಟಾವಿಗೆ ಸೂಕ್ತ ದರ ನಿಗಧಿ
ಭತ್ತ ಮತ್ತು ರಾಗಿ ಬೆಳೆ ಕಟಾವಿನ ವಿಚಾರದಲ್ಲಿ ದಲ್ಲಾಳಿಗಳು ಮನಸ್ಸು ಇಚ್ಛೆ ಧರ ನಿಗದಿ ಪಡಿಸಿ ರೈತರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ ಭತ್ತ ಮತ್ತು ರಾಗಿ ಕಟಾವಿಗೆ ಸೂಕ್ತ ದರ ನಿಗದಿಪಡಿಸಬೇಕು. ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರ ವಿಧಿಸುವ ಬೇಳೆ ಕಟಾವು ಯಂತ್ರಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಅಪರ ಪೊಲೀಸ್ ಅಧಿಕ ತಿಮ್ಮಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ರೂಪಶ್ರೀ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
-
Mandya8 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Hassan4 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Special22 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
Mandya59 minutes agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Kodagu5 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Hassan3 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Mysore10 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
-
Chamarajanagar23 hours agoಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
