Connect with us

Mandya

ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು: ಡಾ.ಕುಮಾರ

Published

on

ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಮೂರು ಸೆಂಟರ್‌ಗಳ ವಿರುದ್ಧ ದೂರು ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆ.ಆರ್.ಪೇಟೆ-1, ನಾಗಮಂಗಲ-2 ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಪ್ರಕರಣ ದಾಖಲಿಸಲಾಗಿದೆ, ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್‌, 32 ಲ್ಯಾಬ್, 130 ಕ್ಲಿನಿಕ್‌ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಾಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು ಎಂದು ಸೂಚಿಸಿದರು.

ಈಗಾಗಲೇ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅರಿವು ಕಾರ್ಯಕ್ರಮ ಇನ್ನೂ ಚುರುಕುಗೊಳ್ಳಬೇಕು. ಜಾಗೃತಿ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳನ್ನು ಹೆಚ್ಚು ತೊಡಗಿಸಿಕೊಳ್ಳಿ, ಗ್ರಾಮ ಮತ್ತು ವಾಡ್೯ ಸಭೆಗಳಲ್ಲಿ ಒಬ್ಬರೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಿ, ಸಭೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ ಎಂದರು.

ಡಿಎಚ್‌ಒ ಡಾ.ಕೆ.ಮೋಹನ್‌ ಮಾತನಾಡಿ, ಜನವರಿ ಮಾಹೆಯಿಂದ ಇಲ್ಲಿಯವರೆಗೆ 12 ವಾರಕ್ಕೂ ಮೇಲ್ಪಟ್ಟು ಗರ್ಭಪಾತವಾಗಿರುವ ಪ್ರಕರಣಗಳ ಮಾಹಿತಿ ಪಡೆದು ಅವುಗಳನ್ನು‌ ಪರಿಶೀಲಿಸಿ ಅದು ವೃದ್ಯಕೀಯ ಹಿನ್ನಲೆಯಲ್ಲಿ ವೈದ್ಯರ ಅಭಿಪ್ರಾಯದ ಮೇಲೆ ಆಗಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಮುಖಂಡರಾದ ಸುನಂದ ಜಯರಾಂ, ದೇವಿ, ಸಿ.ಕುಮಾರಿ, ವಿಮೋಚನ ಸಂಸ್ಥೆಯ ಮುಖ್ಯಸ್ಥ ಜನಾರ್ಧನ್ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!