Mandya
ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ
ಮಂಡ್ಯ: ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೆಹರು ನಗರ, ಮಂಡ್ಯ, ಈ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯರವರ ಅಧ್ಯಕ್ಷತೆಯಲ್ಲಿ ಜರುಗಿತು.
ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ. ಚಂದ್ರಶೇಖರ್ ರವರು ಬಹುಮಾನವನ್ನು ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ನ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಶ್ರೀ ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷರಾದ ಎಮ್.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.

ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
Mandya
14 ಮಂದಿ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಿಸಿದ ಎಂ.ಎ.ಹಾಲಪ್ಪ
ಮದ್ದೂರು: ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ 14 ಮಂದಿ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು ಎಂದು ಯೋಜನಾಧಿಕಾರಿ ಎಂ.ಎ.ಹಾಲಪ್ಪ ತಿಳಿಸಿದರು.
ತಾಲೂಕಿನ ಆತಗೂರು ಹೋಬಳಿಯ ಯರಗನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ಗಳನ್ನು ವಿತರಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರಹೆಗ್ಗಡೆ ದಂಪತಿ ಆಶಯದಂತೆ ಆಸಹಾಯಕ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು 1 ಸಾವಿರದಿಂದ 3 ಸಾವಿರದವರೆಗೆ ಮಾಶಾಸನ ನೀಡಲಾಗುತ್ತಿದೆ ಎಂದರು.
ಇದೇ ರೀತಿ ಮೂಲ ಸೌಕರ್ಯಗಳಿಂದ ವಂಚಿತರಾದ ಕುಟುಂಬಗಳಿಗೆ ವಾತ್ಸಲ್ಯ ಮನೆ, ಶೌಚಾಗೃಹ, ಸ್ನಾನಗೃಹ, ಮನೆ ರಿಪೇರಿ, ಸೋಲಾರ್ ವ್ಯವಸ್ಥೆ ಇತ್ಯಾದಿ ವ್ಯವಸ್ಥೆಗಳನ್ನು ಶ್ರೀ ಕ್ಷೇತ್ರದ ವತಿಯಿಂದ ಒದಗಿಸಿಕೊಡಲಾಗುತ್ತಿದೆ. ತಾಲೂಕಿನಲ್ಲಿ 81 ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡಲಾಗುತ್ತಿದೆ ಎಂದ ಅವರು, ರಾಜ್ಯದಾದ್ಯಂತ ಒಂದೇ ದಿನ ವಾತ್ಸಲ್ಯ ಕಿಟ್ ವಿತರಣೆ ನಡೆಯಿತು ಎಂದು ಹೇಳಿದರು.

ಮುಖಂಡರಾದ ರಾಮಕೃಷ್ಣ ಯರಗನಹಳ್ಳಿ, ಸಚಿನ್ ಯರಗನಹಳ್ಳಿ, ಪ್ರೀತಂ ಕದಲೂರು, ಮಂಜು ತಗ್ಗಳ್ಳಿ, ಸುಕನ್ಯಾ ಹೊಸಳ್ಳಿ, ಕೃಷ್ಣ ಕಿಳಘಟ್ಟ, ನಾಗರಾಜ್ ದೊಡ್ಡರಸಿನಕೆರೆ, ಚಿಕ್ಕೋನು ದೊಡ್ಡರಸಿನಕೆರೆ, ವೆಂಕಟೇಶ್ ಇದ್ದರು.
Mandya
ಅರ್ಹ ಮಕ್ಕಳು ಜಂತು ನಿವಾರಕ ಮಾತ್ರೆಯಿಂದ ವಂಚಿತರಾಗದಿರಲಿ: ಡಾ. ಶ್ರೀಧರ್
ಶ್ರೀರಂಗಪಟ್ಟಣ: ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದಡಿಯಲ್ಲಿ ಯಾವುದೇ ಮಗು ಜಂತು ನಿವಾರಕ ಮಾತ್ರೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕೆಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ್ ಸಿ ಎಂ ಹೇಳಿದರು.
ಅವರು ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದ ಅಂಗವಾಗಿ ಅಧಿಕಾರಿಗಳಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳು ಮತ್ತು ಹದಿಹರೆಯದವರಲ್ಲಿ ಕಂಡುಬರುವ ಜಂತು ಬಾಧೆ, ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟುವ ಸಲುವಾಗಿ ರಾಜ್ಯಾದ್ಯಂತ ಫೆ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣ ದಿನ ಹಮ್ಮಿಕೊಳ್ಳಲಾಗಿದ್ದು 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತು ನಿವಾರಣ ಅಲ್ಬಂಡಾಜೋಲ್ ಮಾತ್ರೆಗಳನ್ನು ಅಂಗನವಾಡಿ ಕೇಂದ್ರದ ಮಕ್ಕಳಿಗೆ,ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತಪ್ಪದೆ ನೀಡಬೇಕು ಜತೆಗೆ ಈ ಬಗ್ಗೆ ಪೋಷಕರಿಗೆ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಂತುಹುಳು ನಿವಾರಣ ಕಾರ್ಯಕ್ರಮದ ಬಿತ್ತಿ ಪತ್ರ ಬಿಡುಗಡೆಗೊಳಿಸಿದರು. ತರಬೇತಿ ಕಾರ್ಯಗಾರದಲ್ಲಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್,ಜಿ ಬಿ ಹೇಮಣ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯರಾಮ್ ಟಿ ಬಿ,ಚಿಕ್ಕ ಬೋರಯ್ಯ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್,ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪುಣ್ಯವತಿ, ಶಾಂತರಾಮ,ನರ್ಸಿಂಗ್ ಅಧಿಕಾರಿ ಕುಸುಮ,ವಸತಿ ಶಾಲಾ ನರ್ಸಿಂಗ್ ಅಧಿಕಾರಿ ಶಿವಮ್ಮ,ತ್ರಿವೇಣಿ,ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತಾ,ಲಲಿತಾ ಹಾಗೂ ಎಲ್ಲಾ ಶಾಲೆಯ ವಿಜ್ಞಾನ ಶಿಕ್ಷಕರು,ಕ್ಷೇತ್ರ ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು.
Mandya
ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ : ಡಾ.ಕುಮಾರ
ಮಂಡ್ಯ: ಸ್ವಚ್ಛ ಸರ್ವೇಕ್ಷಣ ಅಭಿಯಾನ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಪ್ರತಿಯೊಬ್ಬ ನಾಗರಿಕನು ಕೂಡ ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು.
ನಗರದ ಶ್ರೀ ಶಿವಕುಮಾರ ಸ್ವಾಮೀಜಿಯವರ ಜ್ಞಾನ ಕೇಂದ್ರ ಶಾಲೆಯ ಪಾರ್ಕ್ ಮುಂಭಾಗ ನಗರ ಸಭೆ ವತಿಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿಲಾಗಿದೆ. ಸ್ವಚ್ಛ ಸರ್ವೇಕ್ಷಣ ಅಭಿಯಾನದ ಬಗ್ಗೆ ತರಬೇತಿಯನ್ನು ನೀಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸ್ವಚ್ಛತೆಯ ಬಗ್ಗೆ ಎಲ್ಲಾ ಅಧಿಕಾರಿಗಳು ಸಕ್ರಿಯವಾಗಿ ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ ಚಿತ್ರಗಳನ್ನು ಬರೆದು ಅರಿವು ಮೂಡಿಸಿದ್ದಾರೆ.
ಮನಸ್ಸು ಶುದ್ಧವಾಗಿದ್ದರೆ ಮಾತ್ರ ಸಮಾಜವನ್ನು ಶುದ್ಧವಾಗಿಸಲು ಸಾಧ್ಯ. ಕಸವನ್ನು ರಸ್ತೆಯ ಬದಿ ಹಾಕಬಾರದು ಮನೆಗಳಲ್ಲಿ ಹಸಿ ಕಸ ಒಣ ಕಸವನ್ನು ವಿಂಗಡಿಸಬೇಕು ಮತ್ತು ಬಹಳ ಮುಖ್ಯವಾಗಿ ಪ್ಲಾಸ್ಟಿಕ್ ಅನ್ನು ಬಳಸಬಾರದು ಮನೆಯ ಮುಂಭಾಗದಲ್ಲಿ ಗಿಡಮರಗಳನ್ನು ಬಳಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರು ಪಂಪಶ್ರೀ, ನಗರಾಭಿವೃದ್ಥಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
-
National - International21 hours agoನಾಳೆಯಿಂದ T-20 World Cup| 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ: ವೇಳಾಪಟ್ಟಿ ಏನು?
-
Mysore24 hours agoವಿಶ್ವಕರ್ಮ ಯೋಜನೆಯಡಿ ವಸ್ತು ಪ್ರದರ್ಶನ
-
State23 hours agoಬಿಗ್ ಬಾಸ್-12 ವಿನ್ನರ್ ಗಿಲ್ಲಿನಟ ವಿರುದ್ದ ಫಿಲ್ಮ್ ಚೇಂಬರ್ಗೆ ದೂರು
-
Chamarajanagar3 hours agoಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ: ಹನೂರಿನ ಶಾಲೆಗಳಲ್ಲಿ ಅರಿವು ಮೂಡಿಸಿದ ರೈತ ದಂಪತಿ
-
State43 minutes agoಉಳಿತಾಯದ ಹೂಡಿಕೆಗಳು MSIL ಸಂಸ್ಥೆಯಲ್ಲಿ ಸುಭದ್ರ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
-
National21 hours agoU-19 World Cup| ವೈಭವ್ನ ಶತಕ: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ
-
Hassan5 hours agoಸದನದಲ್ಲಿ ನಾನು ಆವೇಶಭರಿತನಾಗಿ ಮಾತನಾಡುವುದಕ್ಕೆ ಬಿಜೆಪಿಯವರ ಪ್ರಚೋದನೆಯೇ ಕಾರಣ : ಕೆ.ಎಂ. ಶಿವಲಿಂಗೇಗೌಡ
-
State3 hours agoಜಿಬಿಎ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ: ಬಿ.ವೈ.ವಿಜಯೇಂದ್ರ
