Connect with us

State

ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್‌!!!

Published

on

School Holidays: ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಶಾಲಾ ಕಾಲೇಜುಗಳಿಗೆ ಕೆಲವು ಸಾರ್ವಜನಿಕ ರಜೆಗಳಿವೆ. ಅವುಗಳು ಎಷ್ಟಿವೆ ಎಂದು ನೋಡೋಣ.

ಬಿಡುವಿಲ್ಲದ ಕೆಲಸದ ನಡುವೆ ರಜೆ ದಿನಗಳಲ್ಲಿ ವಿಶ್ರಾಂತಿ ಪಡೆಯುವುದು ಸಾಮಾನ್ಯವಾಗಿದ್ದು. ಈ ಕಾರಣಕ್ಕಾಗಿಯೇ ಶಾಲೆ ಕಾಲೇಜುಗಳಿಗೆ ಹೋಗುವವರು ಹಾಗೂ ಕಂಪನಿಗಳಿಗೆ ಹೋಗುವವರು ರಜೆ ದಿನಗಳಿಗಾಗಿ ಕಾಯುತ್ತ ಕೂರುವುದುಂಟು. ಜನವರಿ ತಿಂಗಳ ಅಂತ್ಯದೊಂದಿಗೆ ರಜೆಗಳ ಸೀಸನ್ ಕೂಡ ಮುಗಿದು ಹೋಗುತ್ತದೆ. ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿ ಸಂಕ್ರಾತಿ, ರಿಪಬ್ಲಿಕ್ ಡೇ ಇತರೆ ಹಬ್ಬಗಳಿಗೆ ರಜೆಯು ಸಿಕ್ಕಿತ್ತು. ಜನವರಿಯಂತೆ ಫೆಬ್ರವರಿ ತಿಂಗಳಲ್ಲಿಯೂ ರಜೆ ದಿನಗಳಿವೆ. ಒಟ್ಟು ಎಷ್ಟು ರಜೆ ದಿನಗಳಿವೆ ಎಂದು ನೋಡೋಣ.

ಫೆಬ್ರವರಿ ತಿಂಗಳಲ್ಲಿ ಭಾನುವಾರಗಳ ಜೊತೆಗೆ ಇನ್ನು ಹಲವು ರಜೆ ದಿನಗಳಿವೆ. ಫೆ.14 ರಂದು ಸರಸ್ಪತಿ ಪೂಜೆ, ವಸಂತ ಪಂಚಮಿ, ನಂತರ ಫೆ.19 ರಂದು ಶಿವಾಜಿ ಜಯಂತಿ ಇದೆ. ಗುರು ರವಿದಾಸ್ ನಿಮಿತ್ತ ಫೆ.24 ರಂದು ಶಾಲಾ ಕಾಲೇಜುಗಳಿಗೆ ರಜೆ ಇರುತ್ತದೆ. ಗಮನಿಸಬೇಕಾದ ಅಂಶವೆಂದರೆ ಈ ರಜೆ ದಿನಗಳು ದೇಶಾದ್ಯಂತ ಎಲ್ಲ ಶಾಲಾ ಕಾಲೇಜುಗಳಿಗೂ ಅನ್ವಯವಾಗುವುದಿಲ್ಲ. ಈ ಹಬ್ಬಗಳ ಆಚರಣೆಯನ್ನು ಮಾಡುವ ಪ್ರದೇಶಗಳಲ್ಲಿ ಮಾತ್ರ ಅನ್ವಯವಾಗುತ್ತವೆ.

ವಸಂತ ಪಂಚಮಿ: ಈ ಹಬ್ಬವು ಸಾಮಾನ್ಯವಾಗಿ ಫೆಬ್ರವರಿಯಲ್ಲಿ ಬರುವ ಹಬ್ಬವಾಗಿದೆ. ಈ ಹಬ್ಬವನ್ನು ಸರಸ್ಪತಿ ಹಬ್ಬ ಎಂತಲೂ ಕರೆಯುತ್ತಾರೆ. ಹಿಂದೂಗಳ ಮಹೋನ್ನತ ಹಬ್ಬಗಳಲ್ಲಿ ಇದು ಒಂದಾಗಿದೆ. ಶಿಕ್ಷಣ, ಜ್ಞಾನ, ಸಂಗೀತದ ಪ್ರತಿ ರುಪವಾಗಿರುವ ಶಾರದೆಯ ಆಶೀರ್ವಾದವನ್ನು ಪಡೆಯಲು ಈ ಹಬ್ಬವನ್ನು ಆಚರಿಸುತ್ತೇವೆ .

ಶಿವಾಜಿ ಜಯಂತಿ:
ಮರಾಠರು ಎಂದಾಗ ತಕ್ಷಣ ನೆನಪಾಗುವುದು ಶಿವಾಜಿ. ಮರಾಠರಿಗೆ ಶಿವಾಜಿಯ ದೈವ. ಶಿವಾಜಿಯು 17 ವರ್ಷದವನಾಗಿದ್ದಾಗಲೆ ಕತ್ತಿ ಹಿಡಿದು ಹೊರಡಿದವನು ಶಿವಾಜಿ. ಬಿಜಾಪುರ ಸಾಮ್ರಾಜ್ಯದ ಟೋರ್ನಾ ಕೋಟೆಯನ್ನು ವಶಪಡಿಸಿಕೊಂಡಿದ್ದರು. ಬಳಿಕ ಕೊಂಡಾಣ ಮತ್ತು ರಾಯಘಡ ಕೋಟೆಗಳನ್ನು ಸ್ವಾಧೀನಪಡಿಸಿಕೊಂಡರು. ನಂತರ ಪುಣೆಯ ಸಂಪೂರ್ಣ ಪ್ರದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

ತಮ್ಮದೇ ವಿಶೇಷವಾದ ಯುದ್ಧ ತಂತ್ರಗಳನ್ನು ಅಳವಡಿಸಿಕೊಂಡು ಶತ್ರುಗಳಿಗೆ ಸಿಂಹ ಸ್ವಪ್ನವಾಗಿತ್ತಿದ್ದರು. ಗೆರಿಲ್ಲಾ ಯುದ್ಧವನ್ನು ಜಗತ್ತಿಗೆ ಮೊದಲು ಪರಿಚಯಿಸಿದ್ದು ಶಿವಾಜಿ. ಈ ಕಾರಣಕ್ಕೆ ಫೆಬ್ರವರಿ 19 ರಂದು ಮಹಾರಾಷ್ಟ್ರ ಮತ್ತು ಇತರ ಹಲವು ಸ್ಥಳಗಳಲ್ಲಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಗಳು ನಡೆಯುತ್ತವೆ. ಈ ಕಾರಣಕ್ಕಾಗಿ ರಜೆಯನ್ನು ಘೋಷಿಸಲಾಗುತ್ತದೆ.

ಗುರು ಗೋವಿಂದ ಜಯಂತಿ;:
ಫೆ.24 ರ ಮಾಘ ಪೂರ್ಣಿಮ ದಂದು ಗುರು ಗೋವಿಂದ ಜಯಂತಿಯನ್ನು ಆಚರಿಸಲಾಗುತ್ತದೆ. ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ, ಉತ್ತರ ಪ್ರದೇಶ ಗಳಲ್ಲಿ ಬಹು ಅದ್ಧೂರಿಯಿಂದ ಆಚರಿಸಲಾಗುತ್ತದೆ. ಗುರು ಗೋವಿಂದರು ಜಾತಿ ವ್ಯವಸ್ಥೆಯ ವಿರುದ್ದ ಹೋರಾಡಿದವರು. ಇವರು ಮಾನವ ಕುಲಕ್ಕೆ ನೀಡಿದ ಬೋಧನೆ ಹಾಗೂ ತತ್ವಗಳನ್ನು ಜನ್ಮದಿದಂದು ನೆನಪಿಸಿ ಕೊಳ್ಳಲಾಗುತ್ತದೆ .

ಇವುಗಳು ಪ್ರಮುಖವಾದ ರಜೆ ದಿನಗಳು ಇವುಗಳನ್ನು ಬಿಟ್ಟು ಫೆಬ್ರವರಿಯಲ್ಲಿ ಸಿಬಿಎಸ್ಸಿಯ 10 ಮತ್ತು 12 ನೇ ತರಗತಿಗಳಿಗೆ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಉತ್ತಮ ಪಡಿಸಿಕೊಳ್ಳಬೇಕು. ಈ ರಜೆ ದಿನಗಳು ರೆಸ್ಟ್ ಮಾಡಲು ಅನುಕೂಲವಾಗುತ್ತವೆ. ಇವುಗಳನ್ನು ಬಿಟ್ಟು ಎರಡನೇ ಮತ್ತು ನಾಲ್ಕನೇ ಶನಿವಾರದ ಜೊತೆಗೆ ಭಾನುವಾರ ರಜೆಗಳಿವೆ.

Continue Reading
Click to comment

Leave a Reply

Your email address will not be published. Required fields are marked *

State

ಕೊಡಗು, ಬೆಂಗಳೂರು, , ಶಿವಮೊಗ್ಗ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 23ರವರೆಗೆ ಮಹಾ ಮಳೆ ಸಾಧ್ಯತೆ…..

Published

on

ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಕೊಡಗು, ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ 23ರವರೆಗೆ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮೇ 20ರಂದು ಕೂಡ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೇಗೂರು, ಯಲ್ಲಾಪುರ, ಶ್ರವಣಬೆಳಗೊಳ, ಚನ್ನರಾಯಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮದ್ದೂರು, ಚಿಕ್ಕಮಗಳೂರು,ಬಂಡೀಪುರ, ತುಮಕೂರು, ಕೂಡಲಸಂಗಮ, ಪೊನ್ನಂಪೇಟೆ, ವಿರಾಜಪೇಟೆ, ಶಿವಮೊಗ್ಗ, ಹೊಸದುರ್ಗ, ಹೊಸಕೋಟೆ, ಮಂಗಳೂರು, ಕಮ್ಮರಡಿ, ರಾಣೆಬೆನ್ನೂರು, ಮಂಡ್ಯ, ಕೃಷ್ಣರಾಜಪೇಟೆ, ಯುಗಟಿ, ಸಕಲೇಶಪುರ, ಮೂರ್ನಾಡು, ಧಾರವಾಡ, ಮಧುಗಿರಿ, ನಾಪೋಕ್ಲು, ಬಾಗಲಕೋಟೆ, ನಾಗಮಂಗಲ, ಕೊಪ್ಪ, ಚಿತ್ರದುರ್ಗ, ಮೈಸೂರು, ಸರಗೂರು, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

Continue Reading

Hassan

ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು

Published

on

||ರಾಜ್ಯ ಸರಕಾರ ವಿರುದ್ಧ ಜೆಡಿಎಸ್ ನೇರ ಆರೋಪ||

||ಡಿಕೆಶಿ ಸ್ಲೀಪರ್ ಸೆಲ್ ನಿಂದ 4 ಸಂಚು||

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ಅಲ್ಲದೆ; ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದಿರುವ ಜೆಡಿಎಸ್; ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುರುತರ ಆರೋಪಗಳನ್ನು ಮಾಡಿದೆ.

ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.


ಕಳಚಿ ಬಿದ್ದ ಕಾಂಗ್ರೆಸ್ ಅಸಲಿ ಮುಖ:

ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ… ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CDಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.


ಡಿಕೆಶಿಯಿಂದ ನಾಲ್ಕು ಸಂಚು:

CDಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ ಎಂದಿರುವ ಜೆಡಿಎಸ್, ಡಿ.ಕೆ.ಶಿವಕುಮಾರ್ ಹೂಡಿರುವ ಸಂಚುಗಳನ್ನು ಪಟ್ಟಿ ಮಾಡಿದೆ.

•ಸಂಚು ನಂ.1: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು.
•ಸಂಚು ನಂ.2: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.
•ಸಂಚು ನಂ.3: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು.
•ಸಂಚು ನಂ.4: ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು.

ಡಿಕೆಶಿ ಸ್ಲೀಪರ್ ಸೆಲ್ ಟೂಲ್ ಕಿಟ್ ಏನು?


ಈ ಸಂಚು ಜಾರಿಗೆ CDಶಿವಕುಮಾರ್ ಸ್ಲೀಪರ್ ಸೆಲ್ ನ ಟೂಲ್ ಕಿಟ್ ವ್ಯವಹಾರದ ಬಗ್ಗೆ ಜೆಡಿಎಸ್ ಎಳೆಎಳೆಯಾಗಿ ವಿವರಿಸಿದೆ.

•ಈ ಮಹಾಸಂಚು ಸಾಕಾರಕ್ಕೆ CDಶಿವಕುಮಾರ್ ಹೂಡಲಿದ್ದ ಬಂಡವಾಳ ಬರೋಬ್ಬರಿ ₹100 ಕೋಟಿ!!
•ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ ₹100 ಕೋಟಿ ಆಫರ್!!
•ಅಡ್ವಾನ್ಸ್ ಆಗಿ ₹5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನೆ.
•ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರೆಡಿ ಮಾಡಿದ್ದೇ CDಶಿವಕುಮಾರ್.
•ಮೋದಿ, ಕುಮಾರಸ್ವಾಮಿ ಅವರುಗಳ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ CDಶಿವಕುಮಾರ್.
•ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ನ ಮಹಾನ್ ಟಾರ್ಗೆಟ್!!

ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ಜೆಡಿಎಸ್ ಕಿಡಿಕಾರಿದೆ.

ಅಲ್ಲದೆ; ನೂರುಕೋಟಿ CDಶಿವಕುಮಾರ್, CDಶಿವಕುಮಾರ್, ಪೆನ್ ಡ್ರೈವ್ ಗ್ಯಾಂಗ್, CDಶಿವಕುಮಾರ್ ಸ್ಲೀಪರ್ ಸೆಲ್, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದೆಲ್ಲಾ ಡಿಕೆಶಿಯನ್ನು ಕುಟುಕಿದೆ ಜೆಡಿಎಸ್.

Continue Reading

State

ಸರ್ಕಾರಿ ಶಾಲೆಯಲ್ಲಿ ಓದಿ SSLC ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಅಂಕಿತಾ 5 ಲಕ್ಷ, 3ನೇ ಸ್ಥಾನ ಪಡೆದ ನವನೀತ್ ಗೆ 2 ಲಕ್ಷ ರೂ. ಉಡುಗೊರೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು, ಮೇ 14:

ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3 ನೇ ರಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು.

ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್ ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10 ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ.

ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ ಎಂದರು.

ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

Continue Reading

Trending

error: Content is protected !!