Connect with us

Mandya

ಶಾಲಾ ಜಾಗ ಖಾಸಗಿ ವ್ಯಕ್ತಿಯ ಹೆಸರಿಗೆ : ಬಿಇಓ ರಿಂದ ಸ್ಥಳ ಪರಿಶೀಲನೆ

Published

on

ಶ್ರೀರಂಗಪಟ್ಟಣ : ತಾಲೂಕಿನ ಹುಲಿಕೆರೆ ಗ್ರಾಮದ ಸರ್ವೆ ನಂ 101/16 ರ 1 ಎಕರೆ ಶಾಲಾ ಜಾಗವು ಖಾಸಗಿ ವ್ಯಕ್ತಿಯ ಹೆಸರಿಗೆ ವರ್ಗಾವಣೆಗೊಂಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ಶಾಲಾ ಜಾಗವನ್ನು ಬದಲಾವಣೆ ಮಾಡಿ ಖಾಸಗಿ ವ್ಯಕ್ತಿ ಹೆಸರಿಗೆ ವರ್ಗಾಯಿಸಿರುವ ಕುರಿತು ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳ ಆದೇಶದನ್ವಯ ಕ್ಷೇತ್ರ ಶಿಕ್ಷಣಾಧಿಕಾರಿ ಗ್ರಾಮಕ್ಕೆ ತೆರಳಿ ಪರಿಶೀಲಿಸಿದರು.

1956 ರಲ್ಲಿ ಹುಲಿಕೆರೆ ಗ್ರಾಮದ ಪಟೇಲ್ ದಾಸೇಗೌಡ ಎಂಬುವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 1 ಎಕರೆ ಜಾಗವನ್ನು ನೀಡಿ ಖಾತೆ ಮಾಡಿಸಿದ್ದರು. 2022ರ ತನಕ ಈ ಜಾಗವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸರಿನಲ್ಲಿ ಖಾತೆ ಹೊಂದಿದ್ದು, 2023 ರಲ್ಲಿ ಏಕಾಏಕಿ ಖಾಸಗಿ ವ್ಯಕ್ತಿ ಹೆಸರಿಗೆ ಖಾತೆ ಮಾಡಲಾಗಿದೆ. ಈ ಕುರಿತು ಹುಲಿಕೆರೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದಾಖಲೆಗಳ ಸಮೇತ ದೂರು ನೀಡಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಈ ಕುರಿತು ತನಿಖೆ ನಡೆಸಿ ಸ್ಥಳ ಪರಿಶೀಲನೆ ಮಾಡಿ ವರದಿ ನೀಡಲು ತಹಶೀಲ್ದಾರ್ ಗೆ ಆದೇಶ ಮಾಡಿದ್ದರು. ಈ ಹಿನ್ನಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ನೇತೃತ್ವದಲ್ಲಿ , ಭೂಪನ ಇಲಾಖೆಯ ಎ.ಡಿ.ಎಲ್ ಮೇಘಾ, ಕಂದಾಯ ಇಲಾಖೆಯ ರಾಜಸ್ವ ನೀರಿಕ್ಷಕ ಪ್ರಸನ್ನ ಒಳಗೊಂಡ ತಂಡ ಸ್ಥಳ ಪರಿಶೀಲನೆ ನಡೆಸಿ, ಸ್ಥಳಿಯರಿಂದ ಮಾಹಿತಿ ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎ.ಡಿ.ಎಲ್.ಆರ್ ಮೇಘಾ ಈಗಲೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸರಲ್ಲಿ ಒಂದು ಎಕರೆ ಜಾಗದ ಖಾತೆ ಹೊಂದಿದೆ. ಆತಂಕ ಬೇಡ ಜಿಲ್ಲಾಧಿಕಾರಿಗಳ ಆದೇಶದಂತೆ ತಹಶೀಲ್ದಾರ್ ಮಾರ್ಗದರ್ಶನದಲ್ಲಿ ಸರ್ವೇ ನಡೆಸಿ ವರದಿ ನೀಡಲಾಗುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ, ಶಾಲೆಗೆ ಸೇರಿದ ಜಾಗ ಸರ್ಕಾರದ ಆಸ್ತಿಯಾಗಿದೆ. ಅತಿಕ್ರಮಣ ಹಾಗೂ ವರ್ಗಾವಣೆ ಕಾನೂನು ಬಾಹಿರವಾಗಿ ನಡೆಸಿದ್ದು, ಸರ್ವೇ ನಂತರ ತಿಳಿಯಲಿದೆ. ಈಗಿರುವ ಜಾಗದಲ್ಲಿ ಯಾರು ಅತಿಕ್ರಮ ಮಾಡದಂತೆ ಸೂಚಿಲಾಗುತ್ತದೆ ಎಂದರು.

ಹುಲಿಕರೆ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಚೆಲವರಾಜು, ಮುಖಂಡ ಶ್ರೀನಿವಾಸ ಅಧಿಕಾರಿಗಳಿಗೆ ದಾಖಲೆ ಸಮೇತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಸದಸ್ಯೆ ರೇಶ್ಮಾಬಾನು ಸ್ಥಳಕ್ಕಾಗಮಿಸಿ ನಮ್ಮ ಮುಸ್ಲಿಂ ಸಮುದಾಯಕ್ಕೆ ಸೇರಿದ ಜಾಗ ಕೂಡ ಖಾಸಗಿ ವ್ಯಕ್ತಿಯ ಹೆಸರಿಗೆ ಮಾಡಿರುವುದು ಕಂಡು ಬಂದಿದೆ ಎಂದು ದೂರಿದರು.

ರಾಜ ಸ್ವ ನೀರಿಕ್ಷಕ ಪ್ರಸನ್ನ, ಗ್ರಾಮ ಲೆಕ್ಕಾಧಿಕಾರಿ ರಘು ಸೇರಿದಂತೆ, ಹುಲಿಕರೆ ಗ್ರಾಮಸ್ಥರು, ಮುಖಂಡರು ಇತರರು ಇದ್ದರು.

Continue Reading

Mandya

ಎನ್‌. ಚಲುವರಾಯಸ್ವಾಮಿ ಜನ್ಮದಿನ ಅಂಗವಾಗಿ ಬೃಹತ್ ಆರೋಗ್ಯ ಶಿಬಿರ ಆಚರಣೆ

Published

on

ಮದ್ದೂರು, ಜೂನ್ 1: ರಾಜ್ಯ ಕೃಷಿ ಸಚಿವರಾಗಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಚಿವ ಎನ್. ಚಲುವರಾಯಸ್ವಾಮಿ ಅವರು ರೈತರ ಹಿತಕ್ಕಾಗಿ ಹಲವು ಯೋಜನೆಗಳನ್ನು ರೂಪಿಸುವುದರ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಶ್ರೀ ಪಟ್ಟಲದಮ್ಮ ದೇವಸ್ಥಾನ ಆವರಣದಲ್ಲಿ ಕೊಪ್ಪ 1 ಹಾಗೂ 2ನೇ ವೃತ್ತದ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಆಯೋಜಿಸಿದ್ದ ಚಲುವರಾಯಸ್ವಾಮಿ ಅವರ 66ನೇ ಜನ್ಮದಿನದ ಅಂಗವಾಗಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಆರೋಗ್ಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2023ರಲ್ಲಿ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನ, ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆ ಸೇರಿದಂತೆ ಹಲವು ರೈತಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದು ಜಿಲ್ಲೆಯ ಜನತೆಗೆ ತಿಳಿದ ವಿಷಯವಾಗಿದೆ ಎಂದು ಹೇಳಿದರು. ರಾಜ್ಯದ ರೈತರಿಗೆ ಅನುಕೂಲವಾಗುವ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತಪರ ಸರ್ಕಾರ ಎಂಬುದನ್ನು ಸಾಬೀತುಪಡಿಸಿದೆ ಎಂದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಸತ್ಕೀರ್ತಿನಾಥ ಸ್ವಾಮೀಜಿ ಮಾತನಾಡಿ, ಜನ್ಮದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರದಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ದಿವಾಕರ್ ಮಾತನಾಡಿ, ಚಲುವರಾಯಸ್ವಾಮಿ ಅವರು ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ್ದು, ಪ್ರತಿ ಹಳ್ಳಿಯ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರು ಭಾಗವಹಿಸಿ ಪ್ರಯೋಜನ ಪಡೆದರು. ಆರೋಗ್ಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಸಂಜೆ ರಸಸಂಜೆ ಕಾರ್ಯಕ್ರಮವೂ ನಡೆಯಿತು.

ಕಾರ್ಯಕ್ರಮದಲ್ಲಿ ಕೊಪ್ಪ ಹೋಬಳಿಯ ಆರೋಗ್ಯ ಶೃಶ್ರೂಕಿಯರು ಹಾಗೂ ಅಂಗನವಾಡಿ ಕಾರ್ಯಕತರ್ೆಯರನ್ನು ಅಭಿನಂದಿಸಲಾಯಿತು, ಸಂಜೆ 6.30 ರ ನಂತರ ರಸಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವೇದಿಕೆಯಲ್ಲಿ ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಎನ್ ದಿವಾಕರ್, ಎಂ.ಡಿ.ಸಿ.ಸಿ.ಬ್ಯಾಂಕ್ ನಿದರ್ೇಶಕ ಕೆ.ಸಿ.ಜೋಗೀಗೌಡ, ಮನ್ ಮುಲ್ ಮಾಜಿ ನಿದರ್ೇಶಕ ಕುಮಾರ್ ಕೊಪ್ಪ, ತಾ.ಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ರಘು, ಮಾಜಿ ಸದಸ್ಯ ತೋಯಜಾಕ್ಷ,ಗ್ರಾ. ಪಂ ಮಾಜಿ ಅಧ್ಯಕ್ಷ ವಿಜಯ್ ಗೌಡ, ವಿ.ಎಸ್.ಎಸ್.ಎನ್.ಬಿ. ಅಧ್ಯಕ್ಷ ಶಿವಲಿಂಗಯ್ಯ, ಗ್ರಾಪಂ ಮಾಜಿ ಸದಸ್ಯರಾದ ರಮೇಶ್ ಗೌಡ,ಪವರ್ೀಜ್ ಅಹಮ್ಮದ್,ಗಿರೀಶ್, ನವೀನ್ ಕುಮಾರ್,ಸಂತೋಷ್ ಕೊಟ್ಟಿಗೆಯಾರ್, ಸುರೇಶ್, ರುದ್ರೇಶ್, ಕಿರಂಗೂರು ಅಪ್ಪಾಜಪ್ಪ ಸೇರಿದಂತೆ ಹಲವರು ಹಾಜರಿದ್ದರು.

Continue Reading

Mandya

ಮದ್ದೂರಿನಲ್ಲಿ ಶಾಸಕ ಕೆ.ಎಂ. ಉದಯ್ ಅವರ 52ನೇ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ

Published

on

ಮದ್ದೂರು: ಶಾಸಕ ಕೆ.ಎಂ.ಉದಯ್ ಅವರ 52 ನೇ ಹುಟ್ಟುಹಬ್ಬದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ನಗರ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ ಕೆ.ಎಂ.ಉದಯ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಹಮ್ಮಿಕೊಂಡು ಭಕ್ತಾಧಿಗಳಿಗೆ ಪ್ರಸಾದ (ಉಪಹಾರ) ಹಾಗೂ ಸಿಹಿ ವಿತರಣೆ ಮಾಡಲಾಯಿತು.


ನಂತರ ನಗರದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಒಗ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬಾದಾಯಿ ಹಾಲು ವಿತರಿಸಲಾಯಿತು. ತಾಲೂಕಿನ ನಿಡಘಟ್ಟದಲ್ಲಿರುವ ಶ್ರೀ ಗುರುದತ್ತ ಆಶ್ರಮ ಬಾಲಕರ ಬಾಲ ಮಂದಿರದ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಬಾದಾಮಿ ವಿತರಣೆ ಸೇರಿದಂತೆ ಇನ್ನಿತರ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶಾಸಕರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ನವ ಮದ್ದೂರು ನಿಮರ್ಾಣದ ಕನಸುಗಾರರಾಗಿ ಹಗಲಿರಳು ಶ್ರಮಿಸುತ್ತಿದ್ದಾರೆ. ಶಾಸಕರಾದ ಮೂರೇ ವರ್ಷದಲ್ಲಿ 2 ಸಾವಿರ ಕೋಟಿಗೂ ಅಧಿಕ ಅನುದಾನ ತಂದು ತಾಲೂಕಿನಲ್ಲಿ ಅಭಿವೃದ್ಧಿ ಪರ್ವ ಆರಂಭಿಸಿರುವುದನ್ನು ಕ್ಷೇತ್ರ ಜನರು ನೋಡುತ್ತಿದ್ದಾರೆ. ಮುಂದೆಯೂ ಮತ್ತಷ್ಟು ಅನುದಾನ ತಂದು ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿ ಮಾಡಲಿದ್ದಾರೆಂದು ಭರವಸೆ ವ್ಯಕ್ತಪಡಿಸಿದರು.

ಶಾಸಕರ ಹುಟ್ಟು ಹಬ್ಬದ ಅಂಗವಾಗಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ದೇವರು ಅವರಿಗೆ ಆಯಸ್ಸು, ಆರೋಗ್ಯ, ಐಶ್ವರ್ಯ ಹಾಗೂ ರಾಜಕೀಯದಲ್ಲಿ ಉನ್ನತ ಸ್ಥಾನ, ಮಾನಗಳನ್ನು ಕಲ್ಪಿಸಲಿ ಎಂದು ಹಾರೈಸಿದರು.

ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಕೆ.ಎಂ.ರವಿ, ಸಿಪಾಯಿ ಶ್ರೀನಿವಾಸ್,
ಮನ್ಮುಲ್ ನಿದರ್ೇಶಕ ಹರೀಶ್ಬಾಬು, ಡಿಸಿಸಿ ಬ್ಯಾಂಕ್ ನಿದರ್ೇಶಕ ಪಿ.ಸಂದರ್ಶ, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್, ಮಾಜಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಮಾಜಿ ಸದಸ್ಯರಾದ ಸರ್ವಮಂಗಳ, ಬಸವರಾಜು, ಸಿದ್ದರಾಜು, ಗ್ರಾಪಂ ಮಾಜಿ ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಮಮತಾಶಂಕರೇಗೌಡ, ದೇಶಹಳ್ಳಿ ಮೋಹನ್ಕುಮಾರ್, ಮಹದೇವಯ್ಯ, ಶರತ್, ಮನು, ಹೊಂಬಯ್ಯ, ಫೈರೋಜ್, ರಾಜೇಶ್, ಯತೀಶ್ ಸೇರಿದಂತೆ ಇತರರು ಇದ್ದರು.

Continue Reading

Mandya

ಪ್ರವರ್ಗ-1 ರ ಅಡಿಯಲ್ಲಿನ ನಾಯಕರಿಗೆ ಉನ್ನತ ಸ್ಥಾನ ನೀಡಿ : ನಾಗರತ್ನ

Published

on

ಮಂಡ್ಯ: ರಾಜ್ಯದಲ್ಲಿ ಪ್ರವರ್ಗ-೧ರ ಅಡಿಯಲ್ಲಿನ ನಾಯಕರಿಗೆ ಸಚಿವ ಹಾಗೂ ವಿಧಾನಪರಿಷತ್ ಸ್ಥಾನಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಪ್ರವರ್ಗ-೧ರ ಜಾತಿಗಳ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗರತ್ನ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವರ್ಗ-೧ರ ಅಡಿಯಲ್ಲಿ ೯೫ ಜಾತಿಗಳು, ೩೯೦ಕ್ಕೂ ಹೆಚ್ಚು ಉಪಜಾತಿಗಳಿವೆ. ಅವುಗಳಲ್ಲಿ ಯಾದವ, ಉಪ್ಪಾರ ಹಾಗೂ ಗಂಗಮತ ಪ್ರಮುಖರಾಗಿದ್ದಾರೆ ಎಂದರು.

ಹಿಂದುಳಿದ ಸಮುದಾಯದ ಹೆಚ್ಚು ಜನರು ಕಡು ಬಡತನದಿಂದ ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದ್ದು, ಯಾದವ ಸಮುದಾಯದ ಡಿ.ಟಿ.ಶ್ರೀನಿವಾಸ್, ಹಾಗೂ ಉಪ್ಪಾರ ಸಮುದಾಯದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಹಾಗೂ ಗಂಗಾಮತ ಸಮುದಾಯದ ತಿಮ್ಮಪ್ಪಣ್ಣ ಕುಮಕನೂರ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮುದುವರೆಸುವಂತೆ ಆಗ್ರಹಿಸಿದರು.

ಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಲಿಂಗಯ್ಯ, ಉಪಾಧ್ಯಕ್ಷ ಪ್ರಕಾಶ್, ನಿರ್ದೇಶಕ ಸಿದ್ದರಾಜು ಇದ್ದರು.

Continue Reading

Trending

error: Content is protected !!