Connect with us

Uncategorized

ವಿಜ್ಞಾನ ದಿವಸ್ ಕಾರ್ಯಕ್ರಮ

Published

on

ಯಳಂದೂರು ತಾಲೂಕಿನ ಯರಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲೆಯಲ್ಲಿ ವಿಜ್ಞಾನ ದಿವಸ್ ಕಾರ್ಯಕ್ರಮದ ಅಂಗವಾಗಿ ವಿಜ್ಞಾನ ಶಿಕ್ಷಕರಾದ ಅಸ್ಮಾ ರವರ ಮಾರ್ಗದರ್ಶನದಲ್ಲಿ 6,7, ಮತ್ತು 8ನೇ ತರಗತಿ ವಿದ್ಯಾರ್ಥಿಗಳು ವಿಜ್ಞಾನ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು.

ಇಲಾಖೆಯ ಅಧಿಕಾರಿಗಳಾದ ರಂಗಸ್ವಾಮಿ,ಬ್ಲಾಕ್ ಸಂಪನ್ಮೂಲ ಶಿಕ್ಷಕರಾದ ರಂಗಸ್ವಾಮಿ, ಶಶಿರೇಖಾ ರವರು ಉದ್ಘಾಟನೆ ಮಾಡಿ ಮಕ್ಕಳ ಪ್ರತಿಭೆಯನ್ನು ವೀಕ್ಷಣೆಮಾಡಿದರು.

ಮುಖ್ಯ ಶಿಕ್ಷಕರು ಯಶೋಧ ಮತ್ತು ಶಿಕ್ಷಕರಾದ ಮಂಜುಳಾ, ನಿರ್ಮಲರಾಣಿ,ಉಮ್ಮೆ ಅಸ್ಮಾ, ಮಮತಾ, ಸುರೇಶ್, ಬಸವಣ್ಣ, ಸೋನಿ, ಸುಮಲತಾ ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Uncategorized

ಬಿಜೆಪಿಗೆ ಚುನಾವಣಾ ಆಯೋಗದ ಸಹಾಯವಿಲ್ಲದೇ ಗೆಲುವು ಸಾಧ್ಯವಿಲ್ಲ: ಪ್ರಿಯಾಂಕಾ ಗಾಂಧಿ

Published

on

ನವದೆಹಲಿ: ಚುನಾವಣಾ ಆಯೋಗದ ಸಹಾಯ ಇಲ್ಲದೇ ಗೆಲುವು ಅವರಿಗೆ ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ  ವಾಗ್ದಾಳಿ ನಡೆಸಿದ್ದಾರೆ.

ವೋಟ್ ಚೋರ್ , ಗದ್ದಿ ಚೋಡ್ ಹೆಸರಿನಲ್ಲಿ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ನಾಯಕರಿಂದ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.

‌ಈ ಸಮಾವೇಶದಲ್ಲಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಸೇರಿದಂತೆ  ಅನೇಕ ರಾಷ್ಟ್ರೀಯ ನಾಯಕರು ಪಾಲ್ಗೊಂಡಿದ್ದರು.

ಇದೇ ವೇಳೆ ಪ್ರಿಯಾಂಕಾ ಗಾಂಧಿ ಮಾತನಾಡಿ, ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಲಾಯಿತು. ಕಾಂಗ್ರೆಸ್ ಬ್ಯಾಂಕ್ ಅಕೌಂಟ್ ಸೀಸ್ ಮಾಡಲಾಯಿತು. ನಮ್ಮ ನಾಯಕರ ಮೇಲೆ ಇ.ಡಿ, ಐಟಿ ದಾಳಿ ಮಾಡಿದರು. ಭ್ರಷ್ಟಾಚಾರದ ಆರೋಪ ಮಾಡಿದ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡರು. ವಾಷಿಂಗ್ ಮಷಿನ್‌ನಲ್ಲಿ ತೊಳೆದು ಶುದ್ಧ ಮಾಡಿದರು. ಮತಗಳವು, ಪರಿಷ್ಕರಣೆ ಮೇಲೆ ಚರ್ಚೆ ಆಗಬೇಕು ಎಂದು ನಾವು ಒತ್ತಾಯಿಸಿದೆವು. ಅವರು ವಂದೇ ಭಾರತ ಮೇಲೆ ಚರ್ಚೆ ಶುರು ಮಾಡಿದರು. ದೇಶ ದೊಡ್ಡ ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರ ಬಗ್ಗೆ ಚರ್ಚೆ ಮಾಡುವ ಧೈರ್ಯ ಇಲ್ಲ. ಯಾಕೆ ಧೈರ್ಯ ಇಲ್ಲ, ಇವರು ಅಸಲಿ ಚುನಾವಣೆ ಎದುರಿಸಬೇಕು. ಸರಿಯಾಗಿ ಚುನಾವಣೆ ನಡೆದರೆ ಬಿಜೆಪಿ ಒಂದು ಸ್ಥಾನ ಗೆಲುವುದಿಲ್ಲ ಎಂದು ದೂರಿದ್ದಾರೆ.

ಬಿಹಾರದಲ್ಲಿ, ಕರ್ನಾಟಕದಲ್ಲಿ, ಹರಿಯಾಣದಲ್ಲಿ ಮತಗಳವು ಮಾಡಿ ಗೆಲುವು ಸಾಧಿಸಿದೆ. ಚುನಾವಣೆ ಮುನ್ನ ಹತ್ತು ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಿದ್ದಾರೆ ಅವರನ್ನು ತಡೆಯುವರಿಲ್ಲ. ಸಂಸತ್‌ನಲ್ಲಿ ಆ ನಾಯಕರನ್ನು ನೋಡುತ್ತೇವೆ. ಅವರಲ್ಲಿ ಆತ್ಮ ವಿಶ್ವಾಸ ಕುಗ್ಗಿ ಹೋಗಿದೆ. ಕಣ್ಣಲ್ಲಿ ಕಣ್ಣಿಟ್ಟು ನೋಡಿದೆ, ತಲೆ ತಗ್ಗಿಸಿಕೊಂಡು ಹೋಗ್ತಾರೆ. ಚುನಾವಣಾ ಆಯೋಗದ ಸಹಾಯ ಇಲ್ಲದೇ ಗೆಲುವು ಅವರಿಗೆ (ಬಿಜೆಪಿ) ಸಾಧ್ಯವಿಲ್ಲ. ಆಯೋಗದ ಮೂವರು ಅಧಿಕಾರಿಗಳ ಹೆಸರು ನೆನಪಿಡಿ, ಅವರು ಪ್ರಜಾಪ್ರಭುತ್ವದ ಮೇಲೆ ಯುದ್ಧ ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಕುಗ್ಗಿಸಲಾಗಿದೆ. ಬಿಹಾರದಲ್ಲಿ ಎಸ್‌ಐಆರ್ ವಿರುದ್ಧ ಯಾತ್ರೆ ನಡೆಸಿದರು. ಈಗ ಉತ್ತರ ಪ್ರದೇಶದಲ್ಲಿ ಮತಗಳವು ಶುರುವಾಗಿದೆ. ಚುನಾವಣಾ ಆಯುಕ್ತರು ದೇಶದ ಜನರಿಗೆ ಉತ್ತರ ಕೊಡಬೇಕು. ನಮ್ಮ ಮತವನ್ನು ಹೇಗೆ ಕಳ್ಳತನ ಮಾಡಲಾಯಿತು. ರೂಪಾಯಿ ಮೌಲ್ಯ 90 ರೂಪಾಯಿಗೆ ಕುಸಿದಿದೆ. ಯಾರು ಇದರ ಬಗ್ಗೆ ಮಾತನಾಡುತ್ತಿಲ್ಲ. ವಿದೇಶಾಂಗ ನೀತಿ ನಾಶವಾಗಿದೆ. ಕಷ್ಟದಲ್ಲಿ ಯಾವ ದೇಶವೂ ಭಾರತದ ಪರವಾಗಿ ನಿಲ್ಲಲಿಲ್ಲ. ಅಂಬಾನಿ, ಅದಾನಿ ಕೈ ಹಿಡಿದು ಮೋದಿ ಹೊರಟಿದ್ದಾರೆ. ಬೆಟ್ಟಿಂಗ್ ಆ್ಯಪ್ ಎಲ್ಲಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಕಚೇರಿಯಲ್ಲಿರುವ ಒಬ್ಬ ವ್ಯಕ್ತಿಯಿಂದ ನಡೆಯುತ್ತಿದೆ. ಈ ಸರ್ಕಾರ ಮಹಿಳೆಯರ ಪರವಾಗಿ ಮಾತನಾಡಲಿಲ್ಲ. ನಿಮ್ಮ ಗಮನ ಬೇರೆಡೆ ಸೆಳೆಯಲು ಹೊಸ ಹೊಸ ವಿಷಯ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮತದ ಮೌಲ್ಯ ಏನು ಎಂದು ತಿಳಿದುಕೊಳ್ಳಬೇಕು. ಸ್ವಾತಂತ್ರ‍್ಯ ಭಾರತದಲ್ಲಿ ನೆಹರೂ ಬೇರೆ ಕಡೆ ಭೇಟಿ ನೀಡಿದಾಗ ಭಾರತ ಮಾತಾ ಕೀ ಜೈ ಎನ್ನುತ್ತಿದ್ದರು. ಅದಕ್ಕೆ ಭಾರತ ಅಂದರೇನು ಎಂದು ಕೇಳಿದರು. ದೇಶದ ನೈಸರ್ಗಿಕ ಸಂಪತ್ತು, ದೇಶದ ಜನರು ಭಾರತ ಮಾತಾ ಎಂದು ನೆಹರೂ ಹೇಳಿದ್ದರು. ಇಂತಹ ಭಾವನೆ ನಮ್ಮ ಸಂವಿಧಾನವಾಗಿದೆ. ಈ ಸಂವಿಧಾನ ನಮಗೆ ಮತದಾನದ ಹಕ್ಕು ನೀಡಿದೆ. ಪ್ರಜಾಪ್ರಭುತ್ವ ಪ್ರಬಲವಾಗಿಡಲು ಮತದಾನ ಹಕ್ಕು ನೀಡಲಾಯಿತು. ಸಾಂವಿಧಾನಿಕ ಸಂಸ್ಥೆಗಳು, ವಿಪಕ್ಷಗಳು ಸಂವಿಧಾನದ ಭಾಗ. ಜನರ ಹಿತಕ್ಕಾಗಿ ಇವುಗಳನ್ನು ರಚಿಸಲಾಯಿತು. ಆದರೆ ಇಂತಹ ಸಂಸ್ಥೆಗಳನ್ನು ಹಾಳು ಮಾಡಲಾಗುತ್ತಿದೆ. ಇದು ದೇಶದ ಪ್ರತಿಯೊಬ್ಬ ಜನರ ಮೇಲಿನ ದಾಳಿಯಾಗಿದೆ. ನ್ಯಾಯಾಂಗ ಮತ್ತು ಮಾಧ್ಯಮದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.

Continue Reading

Uncategorized

ಓರ್ವ ವ್ಯಕ್ತಿ ಮೇಲೆ ಬಿದ್ದ ಬೊಲೆರೋ ಪಿಕಪ್ ವಾಹನ: ಸ್ಥಳದಲ್ಲೇ ಸಾ*ವು

Published

on

ಹಾಸನ : ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಿನ್ನೆ ರಾತ್ರಿ ಡೈರಿಗೆ ಹಾಲು ಹಾಕಲು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ  ಬೊಲೆರೋ ಪಿಕಪ್ ವಾಹನ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೇಲೂರಿನ ಜೈಭೀಮ್ ನಗರದ‌  ಲೋಕೇಶ್ (30) ಮೃತ ವ್ಯಕ್ತಿ.

ಲೋಕೇಶ್, ಬೇಲೂರಿನಿಂದ ಮುದಿಗೆರೆಗೆ ಹಾಲು ಹಾಕಲು ಹೋಗುತ್ತಿದ್ದನು. ಬೊಲೆರೋ ಪಿಕಪ್ ವಾಹನ, ರಸ್ತೆ ಬದಿ ನಿಲ್ಲಿಸಿದ್ದ ಲಾರಿ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಸಿಗದೆ ಗುದ್ದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಲೋಕೇಶ್ ವಾಹನದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನೂಈ ಘಟನೆ ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

 

Continue Reading

Uncategorized

ಮರಳಾಗಾಲ ಗ್ರಾಮದ ಜಗಧೀಶ್(53) ನಿಧನ

Published

on

ಶ್ರೀರಂಗಪಟ್ಟಣ : ತಾಲ್ಲೂಕಿನ ಮರಳಾಗಾಲ ಗ್ರಾಮದ ದಿ.ಮಹದೇವು ರವರ ಮಗ ಎಂ ಜಗದೀಶ್(53) ರವರು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದು, ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಪ್ರಮಾಣದ ಬಂಧು-ಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಕ್ರಿಯೆಯನ್ನು ಅವರ ಸ್ವ-ಗ್ರಾಮ ಮರಳಾಗಾಲದಲ್ಲಿ ಮದ್ಯಾಹ್ನ ನೆರವೇರಿಸುವುದಾಗಿ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

Continue Reading

Trending

error: Content is protected !!