Connect with us

Chikmagalur

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇ*ಣು ಬಿಗಿದುಕೊಂಡು ಆತ್ಮಹ*ತ್ಯೆ

Published

on

ಕೊಪ್ಪ: ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಪದ ಕೋಡ್ತಾಳ್‌ ನಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸುಶಾಂತ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಕೊಪ್ಪದ ಜಿಜೆಸಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಸುಶಾಂತ್‌ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನೂ ಈ ಸಂಬಂಧ ಹರಿಹರಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

Chikmagalur

ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ

Published

on

ಚಿಕ್ಕಮಗಳೂರು: ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ.

ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಮಾತ್ರ 60% ಸಬ್ಸಿಡಿ ನೀಡುತ್ತಿರುವುದು ಎಂದು ಸಚಿವರು ತಿಳಿಸಿದರು.

ರೈತರು ಬೆಳೆದ ಬೆಳೆಯನ್ನು ತಕ್ಷಣಕ್ಕೆ ಮಾರಾಟ ಮಾಡದೇ, ಅದನ್ನು ಸಂಸ್ಕರಣೆ ಮಾಡಿ, ಬ್ರ್ಯಾಂಡ್ ಮಾಡಿ, ವೈವಿಧ್ಯಮಯ ನಾವೀನ್ಯತೆಯ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ನೀಡಿದರೆ ಅಧಿಕ ಲಾಭ ಸಂಪಾದಿಸಬಹುದು. ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಪ್ರತಿಯೊಂದು ಕುಟುಂಬವೂ ಸ್ವಾವಲಂಬಿಯಾಗಿ ಬದುಕಬೇಕು ಎಂದು ತಿಳಿಸಿದರು.

ಇನ್ನೂ ಉದ್ಯಮಕ್ಕೆ ಅರ್ಜಿ ಸಲ್ಲಿಸುವವರಿಗೆ ಬ್ಯಾಂಕ್ ಸಿಬಿಇಲ್ (CBIL) ಹಾಗೂ ಯಾವುದೇ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಒತ್ತಡ ನೀಡದೇ ಸಾಲ ಸೌಲಭ್ಯ ನೀಡಬೇಕು. ಈ ಬಗ್ಗೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಗಮನಹರಿಸುವಂತೆ ಸಚಿವ ಚಲುವರಾಯಸ್ವಾಮಿಯವರು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಶೃಂಗೇರಿ ಶಾಸಕ ರಾಜೇಗೌಡ, ಕಡೂರು ಶಾಸಕ ಆನಂದ್, ವಿಧಾನಪರಿಷತ್ ಸದಸ್ಯ ಬೋಜೆಗೌಡ, ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

Continue Reading

Chikmagalur

ಮದ್ದೂರು ಗಲಾಟೆ ಪ್ರಕರಣ 21 ಜನರನ್ನ ಅರೆಸ್ಟ್ ಮಾಡಿದ್ದೇವೆ : ಸಚಿವ ಚಲುವರಾಯಸ್ವಾಮಿ

Published

on

ಚಿಕ್ಕಮಗಳೂರು : ಮಂಡ್ಯದ ಮದ್ದೂರಿನಲ್ಲಿ ನಡೆದ ಗಣಪತಿ ಗಲಾಟೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಂಡ್ಯ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ-ಜೆಡಿಎಸ್ ಮೇಲೆ ಕಿಡಿ ಕಾರಿದ್ದಾರೆ. ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ಅತಿ ಹೆಚ್ಚು 3-4-5 ಮಾತ್ರ ಇವೆ.

ಆದರೆ ಅದನ್ನು ನೂರಕ್ಕೂ ಹೆಚ್ಚು ಅಂತ ತೋರಿಸುವ ಯತ್ನ ನಡೆಯುತ್ತಿದೆ. ಬೆಂಗಳೂರಿನಿಂದಲೂ ಗಣಪತಿ ಖರೀದಿಸಿ ಸಂಖ್ಯೆಯನ್ನು ಜಾಸ್ತಿ ಮಾಡ್ತಿದ್ದಾರೆ. ಬಿಜೆಪಿ-ಜೆಡಿಎಸ್ ಈ ನಂಬ‌ರ್ ಗೇಮ್‌ಗಾಗಿ ಒತ್ತಡ ಹಾಕ್ತಿದ್ದಾರೆ ಎಂದು ಅವರು ಆರೋಪಿಸಿದರು. ಇದೇ ವೇಳೆ, ಗಲಾಟೆ ಮಾಡಿದವರ ವಿರುದ್ಧವೇ ಕ್ರಮ ಕೈಗೊಳ್ಳಲಾಗಿದೆ. ಹಿಂದೂಗಳನ್ನು ಬಂಧಿಸಿಲ್ಲ, ಯಾರ ಮೇಲೂ ಎಫ್‌ಐಆ‌ರ್ ಆಗಿಲ್ಲ. ಗಲಾಟೆಯ ಮೂಲ ಸಂಪೂರ್ಣವಾಗಿ ಮುಸ್ಲಿಂ ಸಮುದಾಯದಿಂದಲೇ ಆಗಿದೆ. ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆಯ ಬಳಿಕ ಸಭೆ ಮಾಡಿ ರಾಜಕೀಯ ಮಾಡ್ತಿರುವುದು ಬಿಜೆಪಿಯ ನಿಲುವನ್ನು ತೋರಿಸುತ್ತದೆ ಎಂದು ಸಚಿವರು ಹೇಳಿದರು. ಬಿಜೆಪಿಯನ್ನು ಟೀಕಿಸಿದ ಅವರು, ಕಾನೂನು ಸುವ್ಯವಸ್ಥೆ ಹಾಳಾಗಿದೆ ಅಂತ ಕೇಂದ್ರ ಗೃಹಮಂತ್ರಿಗೆ ಪತ್ರ ಬರೆಯುವುದು ನಾಚಿಕೆಗೇಡು. ಅವರ ಆಡಳಿತದಲ್ಲೂ ಇಂಥ ಅನೇಕ ಘಟನೆಗಳು ನಡೆದಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮಾತ್ರ ಸಮಸ್ಯೆಗಳು ಉಂಟಾಗುತ್ತವೆ ಅನ್ನೋದು ಸುಳ್ಳು ಎಂದು ವಾಗ್ದಾಳಿ ನಡೆಸಿದರು. ತನಿಖೆ ಪ್ರಗತಿ ಬಗ್ಗೆ ಮಾತನಾಡಿದ ಅವರು ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರು, ಉಳಿದವರು ಮದ್ದೂರಿನವರೇ. ನಿನ್ನೆ ತನಿಖೆ ಶುರುವಾಗಿದೆ.

ನಾಳೆ ಅಥವಾ ನಾಡಿದ್ದು ತನಿಖಾ ವರದಿ ನೋಡುತ್ತೇನೆ. ತನಿಖೆ ಮುಗಿಯುವವರೆಗೂ ಹೆಚ್ಚಿನ ವಿವರ ಹೇಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Continue Reading

Chikmagalur

ವಸತಿ, ನಿವೇಶನ ರಹಿತರ ಜನಾಂದೋಲನಕ್ಕೆ ನಿರ್ಧಾರ: ಕಮ್ಯುನಿಸ್ಟ್‌ ಪಕ್ಷ

Published

on

ಚಿಕ್ಕಮಗಳೂರು: ದೆಹಲಿಯಲ್ಲಿ ನಡೆದ ರೈತ ಚಳವಳಿ ಮಾದರಿಯಲ್ಲಿ ನಿವೇಶನ ಮತ್ತು ವಸತಿ ರಹಿತರ ರಾಜ್ಯಮಟ್ಟದ ಜನಾಂದೋಲನ ರೂಪಿಸಲು ಭಾರತ ಕಮ್ಯುನಿಸ್ಟ್ ಪಕ್ಷ ನಿರ್ಧರಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಈ ಮಾಹಿತಿ ನೀಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ರಾಜ್ಯದಲ್ಲಿ 7 ಲಕ್ಷ ಜನ ನಿವೇಶನ ರಹಿತರು ಹಾಗೂ 26 ಲಕ್ಷ ಜನ ವಸತಿ ರಹಿತರು ಇದ್ದಾರೆ ಎಂದರು.

ಪಕ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳ ಹಿಂದೆಯೇ ಭೂಮಿ ಮತ್ತು ವಸತಿ ರಹಿತರ ಸಮಸ್ಯೆ ಕೈಗೆತ್ತಿಕೊಂಡು ಹೋರಾಟ ನಡೆಸಿದ್ದು, ಈಗ ಇದನ್ನು ರಾಜ್ಯಕ್ಕೂ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಪಕ್ಷದ ರಾಷ್ಟ್ರೀಯ ಸಮ್ಮೇಳನ ಈ ಬಾರಿ ಪಂಜಾಬಿನ ಚಂಡಿಗಡದಲ್ಲಿ ನಡೆಯಲಿದ್ದು, ಬಹುತೇಕ ದಕ್ಷಿಣ ರಾಜ್ಯಗಳಲ್ಲಿಯೇ ನಡೆಯುತ್ತಿದ್ದ ಸಮ್ಮೇಳನವನ್ನು ಈ ಬಾರಿ ಉತ್ತರ ರಾಜ್ಯಕ್ಕೆ ವಿಸ್ತರಿಸಲಾಗಿದೆ ಎಂದರು.

ಪಂಜಾಬ್ , ಬಿಹಾರ,ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜಾತಿ ಧ್ರುವೀಕರಣ ಇತರೆ ಕಾರಣಗಳಿಂದ ಪಕ್ಷ ಹಿನ್ನಡೆ ಅನುಭವಿಸಿದ್ದು, ರಾಷ್ಟ್ರೀಯ ಸಮ್ಮೇಳನ ಪಕ್ಷವನ್ನು ಪುನಶ್ಚೇತನ ಗೊಳಿಸುವ ನಿಟ್ಟಿನಲ್ಲಿ ವಿಶೇಷ ಗಮನ ನೀಡಲಿದೆ ಎಂದು ಹೇಳಿದರು.

ಇತ್ತೀಚೆಗೆ ಗುಲ್ಬರ್ಗದಲ್ಲಿ ನಡೆದ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ಆರ್ಥಿಕ ಅಸಮಾನತೆಯ ,ಸಾಮಾಜಿಕ ನ್ಯಾಯ, ಕುಸಿದಿರುವ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ಜನಪರ ದಿಕ್ಕಿಗೆ ತರುವ ನಿಟ್ಟಿನಲ್ಲಿ ಹೋರಾಟ ರೂಪಿಸಲು ಚರ್ಚಿಸಿದೆ ಎಂದರು .

ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ, ರಾಜ್ಯದ ಯುವಜನರ ಉದ್ಯೋಗ ಭದ್ರತೆಗೆ ಆಗ್ರಹಿಸಲು, ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣ ಖಾತ್ರಿಪಡಿಸಲು, ದಲಿತ ಆದಿವಾಸಿಗಳ ಹಕ್ಕುಗಳನ್ನು ರಕ್ಷಿಸಲು, ಕಾರ್ಮಿಕ ವರ್ಗದ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಹೋರಾಟ ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದರು.

Continue Reading

Trending

error: Content is protected !!