Connect with us

Politics

ಚೆನ್ನಮ್ಮ ದೇವೇಗೌಡ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರ ಸಂತಾಪ

Published

on

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವa ಅವರ ಪತ್ನಿ ಚೆನ್ನಮ್ಮ ದೇವೇಗೌಡ  ಅವರ ನಿಧನಕ್ಕೆ  ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಹಾಗೂ ವಿವಿಧ ಪಕ್ಷಗಳ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ
ಚೆನ್ನಮ್ಮ ದೇವೇಗೌಡ ಅವರ ನಿಧನದ ಸುದ್ದಿ ತೀವ್ರ ಆಘಾತ ಮತ್ತು ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಮಾಜ ಸೇವೆಯ ಮೇಲಿದ್ದ ಅವರ ಅಪಾರ ಕಾಳಜಿ ಹಾಗೂ ವಿನಮ್ರ ಸ್ವಭಾವ ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು. ಈ ದುಃಖದ ಸಮಯದಲ್ಲಿ ದೇವೇಗೌಡರ ಕುಟುಂಬದ ನೋವಿನಲ್ಲಿ ತಾವೂ ಭಾಗಿಯಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂತಾಪ
ಚೆನ್ನಮ್ಮ ಅವರು ಅಪಾರ ದೈವಭಕ್ತೆಯಾಗಿ, ತುಂಬು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿಯಾಗಿದ್ದರು. ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಕುಟುಂಬದ ಏಳ್ಗೆಯ ಹಿಂದೆ ಅವರ ಪರಿಶ್ರಮ ಅಡಗಿತ್ತು. ರಾಜಕೀಯದ ಏಳು-ಬೀಳುಗಳಲ್ಲಿ ದೇವೇಗೌಡರಿಗೆ ಬೆನ್ನೆಲುಬಾಗಿ ನಿಂತ ಅವರು, ಯಾವುದೇ ಪ್ರಚಾರ ಬಯಸದೆ ಮೌನವಾಗಿ ಕುಟುಂಬವನ್ನು ಮುನ್ನಡೆಸಿದ ನಿಜವಾದ ಶಕ್ತಿಯಾಗಿದ್ದರು ಎಂದು ಶಿವಕುಮಾರ್ ಸ್ಮರಿಸಿದರು.

ಮಾಜಿ ಸಿಎಂ  ಸಿದ್ದರಾಮಯ್ಯ ಸಂತಾಪ
ಜನತಾ ಪರಿವಾರದಲ್ಲಿದ್ದ ಕಾರಣ ದೇವೇಗೌಡರ ಕುಟುಂಬದೊಂದಿಗೆ ನಿಕಟ ಒಡನಾಟವಿದ್ದುದನ್ನು ಸ್ಮರಿಸಿದ ಸಿದ್ದರಾಮಯ್ಯ, ಚೆನ್ನಮ್ಮ ಅವರು ಕಷ್ಟ-ನೋವುಗಳನ್ನು ಧೈರ್ಯದಿಂದ ಎದುರಿಸಿದ ಗಟ್ಟಿಗಿತ್ತಿ ಎಂದು ಬಣ್ಣಿಸಿದರು. ದೇವೇಗೌಡರ ರಾಜಕೀಯ ಜೀವನದ ಏಳು-ಬೀಳುಗಳ ನಡುವೆ ದೊಡ್ಡ ಕುಟುಂಬವನ್ನು ಸಮರ್ಥವಾಗಿ ಮುನ್ನಡೆಸಿದ ಆದರ್ಶ ಗೃಹಿಣಿಯಾಗಿದ್ದರು. ದೇವೇಗೌಡರಿಗೆ ಈ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ದೊರೆಯಲಿ ಎಂದು ಸಂತಾಪ ಸೂಚಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಾಪ
ಚೆನ್ನಮ್ಮ ಅವರು ಸರಳತೆ ಮತ್ತು ತಾಳ್ಮೆಯ ಸಾಕಾರಮೂರ್ತಿಯಾಗಿದ್ದರು. ದೇವೇಗೌಡರ ಸುದೀರ್ಘ ಸಾರ್ವಜನಿಕ ಜೀವನಕ್ಕೆ ಭದ್ರ ಬುನಾದಿಯಾಗಿ ನಿಂತು ಇಡೀ ಕುಟುಂಬವನ್ನು ಮಮತೆಯಿಂದ ಮುನ್ನಡೆಸಿದ ಆದರ್ಶ ಮಾತೃಶಕ್ತಿಯಾಗಿದ್ದರು ಎಂದು ಪ್ರಲ್ಹಾದ ಜೋಶಿ ಸ್ಮರಿಸಿದರು.

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಂತಾಪ
ಚೆನ್ನಮ್ಮ ಅವರ ಸರಳತೆ, ಸಹನೆ ಹಾಗೂ ಕುಟುಂಬಕ್ಕೆ ನೀಡಿದ ಅಚಲ ಬೆಂಬಲ ಸದಾ ಸ್ಮರಣೀಯ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು.

ವಿಪಕ್ಷ ನಾಯಕ ಆರ್‌.ಅಶೋಕ್‌ ಸಂತಾಪ
ಒಬ್ಬ ಕುಟುಂಬದ ಮಾತೃಮೂರ್ತಿಯ ಅಗಲಿಕೆ ತುಂಬಲಾರದ ನಷ್ಟವಾಗಿದೆ. ದೇವೇಗೌಡರು, ಕುಮಾರಸ್ವಾಮಿ ಹಾಗೂ ಕುಟುಂಬದ ಎಲ್ಲ ಸದಸ್ಯರಿಗೆ ತಮ್ಮ ಸಂತಾಪಗಳನ್ನು ಸಲ್ಲಿಸುತ್ತೇನೆ ಎಂದು ಆರ್. ಅಶೋಕ್ ಹೇಳಿದರು.

ಎಂಎಲ್‌ಸಿ ಸಿ.ಟಿ.ರವಿ ಸಂತಾಪ
ದೇವೇಗೌಡರ ರಾಜಕೀಯ ಏಳು-ಬೀಳುಗಳಲ್ಲಿ ಚೆನ್ನಮ್ಮ ಅವರು ಸದಾ ಬೆನ್ನೆಲುಬಾಗಿ ನಿಂತಿದ್ದರು. ಮನೆಗೆ ಬಂದ ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದರು. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.

ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ  ಬಿ.ಎಸ್‌.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಸಚಿವ ಈಶ್ವರ್‌ ಖಂಡ್ರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿ, ದೇವೇಗೌಡರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡುವಂತೆ ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

Politics

ಕುಟುಂಬದ ಆಧಾರಸ್ತಂಭ ಕಳೆದುಕೊಂಡೆವು: ನಿಖಿಲ್ ಕುಮಾರಸ್ವಾಮಿ ಭಾವುಕ ನುಡಿ

Published

on

ಬೆಂಗಳೂರು: “ನಮ್ಮ ಹೆಮ್ಮೆಯ ಅಜ್ಜಿ, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡ ಸಾಹೇಬರ ಧರ್ಮಪತ್ನಿ ಚೆನ್ನಮ್ಮನವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆ ಇಡೀ ಕುಟುಂಬಕ್ಕೆ ಮತ್ತು ನನಗೆ ತುಂಬಲಾರದ ನಷ್ಟ ತಂದಿದೆ” ಎಂದು  ಮೊಮ್ಮಗ  ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದು ಹೇಳಿದ್ದಾರೆ.

 

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು,  ನಮ್ಮ ಹೆಮ್ಮೆಯ ಅಜ್ಜಿ, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡ ಸಾಹೇಬರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆ ಇಡೀ ಕುಟುಂಬಕ್ಕೆ ಮತ್ತು ನನಗೆ ತುಂಬಲಾರದ ನಷ್ಟ ತಂದಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಅಜ್ಜಿ ಕೇವಲ ನಮಗೆ ಅಜ್ಜಿಯಾಗಿರಲಿಲ್ಲ; ಇಡೀ ಕುಟುಂಬವನ್ನು ಒಟ್ಟಾಗಿ ಹಿಡಿದಿಟ್ಟಿದ್ದ ಗಟ್ಟಿ ನೆಲೆ ಅವರು. ನಮ್ಮ ಮನೆಯ ದೊಡ್ಡ ಆಧಾರಸ್ತಂಭ. ಮನೆಗೆ ಬಂದ ಯಾರೊಬ್ಬರನ್ನೂ ಅವರು ಹಸಿದ ಹೊಟ್ಟೆಯಲ್ಲಿ ಕಳುಹಿಸುತ್ತಿರಲಿಲ್ಲ; ಬಂದವರೆಲ್ಲರಿಗೂ ಪ್ರೀತಿಯಿಂದ ಉಣಬಡಿಸುತ್ತಿದ್ದ ಅವರ ಆ ಕೈಗಳು ಸಾಕ್ಷಾತ್ ಅನ್ನಪೂರ್ಣೇಶ್ವರಿಯ ಸ್ವರೂಪವಾಗಿತ್ತು. ಅವರ ಆತಿಥ್ಯ, ಸರಳತೆ ಮತ್ತು ಮಮತೆಯ ಮಾತುಗಳು ನನ್ನ ಜೀವನದ ದೊಡ್ಡ ಸ್ಪೂರ್ತಿ. ಅವರು ಕಲಿಸಿದ ಬದುಕಿನ ಪಾಠಗಳು, ತೋರಿದ ಪ್ರೀತಿ ನನ್ನಲ್ಲಿ ಶಾಶ್ವತವಾಗಿ ಜೀವಂತವಾಗಿರುತ್ತದೆ ಎಂದು ಭಾವುಕವಾಗಿ ಪೋಸ್ಟ್‌ ಮಾಡಿದ್ದಾರೆ.

ನಮ್ಮ ಇಡೀ ಕುಟುಂಬದ ದಾರಿದೀಪವಾಗಿದ್ದ ಅಜ್ಜಿಯ ಆತ್ಮಕ್ಕೆ ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ. ಅವರ ಅಗಲಿಕೆಯ ಈ ತೀವ್ರ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ನಮ್ಮ ಇಡೀ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Continue Reading

Politics

ಚೆನ್ನಮ್ಮ ನಿಧನ| ಕಳೆದ ಒಂದು ವರ್ಷದಿಂದ ಉಸಿರಾಟದ ಸಮಸ್ಯೆ ಇತ್ತು: ಡಾ.ಸಿ.ಎನ್. ಮಂಜುನಾಥ್

Published

on

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು, ರಾಜಕೀಯ ನಾಯಕರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

 ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ ಬಳಿ ಮಾತನಾಡಿದ  ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು, ಚೆನ್ನಮ್ಮ ಅವರಿಗೆ ಕಳೆದ ಒಂದು ವರ್ಷದಿಂದ ಉಸಿರಾಟದ ಸಮಸ್ಯೆ ಇತ್ತು. ಆರು ತಿಂಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ 10 ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿತ್ತು ಎಂದು  ತಿಳಿಸಿದ್ದಾರೆ.

ದೇವೇಗೌಡರು ಹಾಗೂ ಚೆನ್ನಮ್ಮ ಅವರದ್ದು ಅನನ್ಯವಾದ ದಾಂಪತ್ಯ ಸಂಬಂಧವಾಗಿತ್ತು ಎಂದು ಅವರು ಸ್ಮರಿಸಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ನಿಧನದಿಂದ ಕುಟುಂಬಸ್ಥರಿಗೆ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೇರಿದಂತೆ ಮುಂದಿನ ಕಾರ್ಯಕ್ರಮಗಳ ಬಗ್ಗೆ ಕುಟುಂಬಸ್ಥರು ಚರ್ಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Continue Reading

Politics

ಬಿಡದಿ ಟೌನ್‌ಶಿಪ್‌: ಅನಿತಾ ಕುಮಾರಸ್ವಾಮಿ, ನಿಖಿಲ್‌ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ

Published

on

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್‌ಗೂ ಸಂಬಂಧಿಸಿದ ಭೂಮಿಗೂ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಬಿಡದಿ ಹೋಬಳಿಯ ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳಲ್ಲಿರುವ ಒಟ್ಟು 35 ಎಕರೆ ಭೂಮಿ ಭೂಸ್ವಾಧೀನ ವ್ಯಾಪ್ತಿಗೆ ಬಂದಿದೆ. ಇದರಲ್ಲಿಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ 31 ಎಕರೆ ಹಾಗೂ ನಿಖಿಲ್‌ ಅವರ ಹೆಸರಿನಲ್ಲಿರುವ 4 ಎಕರೆ ಜಮೀನು ಸೇರಿದೆ.

ಈ ಬೆಳವಣಿಗೆಯನ್ನು ಆಧರಿಸಿ ಕಾಂಗ್ರೆಸ್ ಕಾರ್ಯಕರ್ತರು ಭೂ ದಾಖಲೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜೆಡಿಎಸ್ ವಿರುದ್ಧ ಟೀಕಿಸಿದ್ದಾರೆ. ಜೆಡಿಎಸ್ ಕುಟುಂಬ ರೈತರ ಹೋರಾಟದ ಹೆಸರಿನಲ್ಲಿ ಯೋಜನೆಯನ್ನು ವಿರೋಧಿಸುತ್ತಿದ್ದರೂ, ತಮ್ಮ ಕುಟುಂಬದ ಭೂಮಿ ಭೂಸ್ವಾಧೀನವಾಗುವುದನ್ನು ತಪ್ಪಿಸಿಕೊಳ್ಳುವ ಉದ್ದೇಶವೇ ಇದರ ಹಿಂದೆ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇನ್ನೊಂದೆಡೆ, ಜೆಡಿಎಸ್ ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ರೈತರ ಹಿತಾಸಕ್ತಿಗಾಗಿ ಹೋರಾಟ ನಡೆಸುತ್ತಿರುವುದಾಗಿ ಹೇಳಿದೆ. ಈ ಕುರಿತು ಎರಡೂ ಪಕ್ಷಗಳ ನಡುವೆ ರಾಜಕೀಯ ವಾಗ್ವಾದ ಮುಂದುವರಿದಿದೆ.

Continue Reading

Trending

error: Content is protected !!