Connect with us

Hassan

ಹೆತ್ತೂರಿನ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳಾಧ್ಯಕ್ಷರಾಗಿ ಖ್ಯಾತ ಲೇಖಕಿ ಶೈಲಜಾ ಹಾಸನ್ ಆಯ್ಕ

Published

on

ಹಾಸನ: ಜಿಲ್ಲಾ 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಕಲೇಶಪುರ ತಾಲ್ಲೂಕು ಹೆತ್ತೂರಿನಲ್ಲಿ ಇದೇ ಮಾರ್ಚ್ 23 ಮತ್ತು 24 -2024 ರಂದು ನಡೆಯಲಿದೆ. ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಶೈಲಜಾ ಹಾಸನ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆಯನ್ನು ಘೋಷಣೆ ಮಾಡಲಾಗಿದೆ


ಸಕಲೇಶಪುರದ ಸೊಸೆಗೆ ಸಮ್ಮೇಳನಾಧ್ಯಕ್ಷರ ಪಟ್ಟ:
ಶೈಲಜಾ ಹಾಸನ್, ನಾಡಿನ ಮುಂಚೂಣಿ ಲೇಖಕಿಯರಲ್ಲಿ ಪ್ರಮುಖರು. ಹಾಸನದ ನಂಜುಂಡ ಶೆಟ್ರು ಮತ್ತು ಶಾರದಮ್ಮ ಅವರ ಏಕೈಕ ಪ್ರಿಯಾಗಿರುವ ಇವರು, 1998 ರಲ್ಲಿ ಸಕಲೇಶಪುರ ತಾಲ್ಲೂಕಿನ ಜಂಬರಡಿ ಗ್ರಾಮದ ಗಂಗಾಧರ್ ಎಂಬುವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಪ್ರಸ್ತುತ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಕಲೇಶಪುರದಲ್ಲಿ ಇಂದು ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಾಸನ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಹೆಚ್ ಎಲ್ ಮಲ್ಲೇಶ್ ಗೌಡ ವಿಷಯ ಪ್ರಕಟಿಸಿದರು.

ಪರಿಚಯ :
ಹೆಸರು: ಎನ್. ಶೈಲಜಾ ಹಾಸನ
ಶಿಕ್ಷಣ: ಎಂ.ಎ ,ಬಿಎಡ್
ವೃತ್ತಿ: ಸರ್ಕಾರಿ ಪ್ರೌಢಶಾಲಾ ಶಿಕ್ಷಕಿ, ಶಾಂತಿಗ್ರಾಮ
ಎನ್.ಶೈಲಜಾ ಹಾಸನ ರಾಜ್ಯದ ಕರುನಾಡಿನ ಪ್ರಮುಖ ಕಾದಂಬರಿ ಗಾರ್ತಿಯಾಗಿದ್ದು, ಇವರ ಅನೇಕ ಕಾದಂಬರಿಗಳು ಸುಧಾ, ತರಂಗ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ ಓದುಗರನ್ನು ಯಶಸ್ವಿಯಾಗಿ ತಲುಪಿ ಅಪಾರ ಮೆಚ್ಚುಗೆ ಪಡೆದಿವೆ. ಕಥಾಸಂಕಲನ, ಕಾದಂಬರಿ, ಲೇಖನಗಳ ಸಂಕಲನ, ಕವನ ಸಂಕಲನ ,ಪ್ರಬಂಧ ಸಂಕಲನ ಹೀಗೆ ಒಟ್ಟು 25 ಕೃತಿಗಳು ಪುಸ್ತಕ ರೂಪದಲ್ಲಿ ಹೊರಬಂದಿವೆ. ಅನೇಕ ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಸಂದಿವೆ.
ಇವರ ಸಾಹಿತ್ಯ ಸಮಾಜಮುಖಿಯಾಗಿದ್ದು, ಸಾಮಾಜಿಕ ಸಮಸ್ಯೆಗಳಾದ ವೃಧ್ಯಾಪ್ಯ, ವೃದ್ಧಾಶ್ರಮ, ರೈತರ ಆತ್ಮಹತ್ಯೆ, ಅದಕ್ಕೆ ಪರಿಹಾರ, ಸಾವಯುವ ಕೃಷಿ, ಅದರ ಮಹತ್ವ, ಶಿಕ್ಷಣದ ಜೊತೆಗೆ ವೃತ್ತಿ ಕೌಶಲ ಹದಿಹರೆಯದ ಮಕ್ಕಳ ಸಮಸ್ಯೆಗಳು, ಮಾನಸಿಕ ಅಸ್ವಸ್ಥರ ಬಗ್ಗೆ, ಹೆಣ್ಣು ಮಕ್ಕಳ ಶಿಕ್ಷಣ, ಭ್ರೂಣಹತ್ಯೆ ಯಂತಹ ಪ್ರಸ್ತುತ ವಿಚಾರದ ಬಗ್ಗೆ, ಸರಳ ವಿವಾಹ, ಹೆಣ್ಣು ಮಕ್ಕಳ ಸಬಲೀಕರಣ , ಮಂಗಳ ಮುಖಿಯರ ಬದುಕು ಹೀಗೆ ಹಲವಾರು ಗಂಭೀರ ವಿಚಾರಗಳ ಬಗ್ಗೆ ಕಾದಂಬರಿಯ ವಸ್ತುವಾಗಿಸಿ ಬರೆದಿರುವ ಶೈಲಜಾ ಹಾಸನ ಅವರ ಸಾಹಿತ್ಯ, ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ.

ಕೃತಿಗಳು:
1.ಚಿಲ್ಲರೆ ಪುರಾಣ (ಹಾಸ್ಯ ಸಂಕಲನ)
2. ಮತ್ತೊಂದು ಅಂಗಳ (ಕಥಾ ಸಂಕಲನ
3. ಬೊಗಸೆಯೊಳಗಿನ ಬಿಂದು (ಕವನ ಸಂಕಲನ)
4. ಮಂಥನ (ಕಾದಂಬರಿ)
5.ಶಿಕ್ಷಣದತ್ತ ಒಂದು ನೋಟ( ಲೇಖನಗಳು)
6.ಮುಸ್ಸಂಜೆಯ ಮಿಂಚು (ತರಂಗ ಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಕಟವಾದ ಕಾದಂಬರಿ)
7.ಇಳಾ (ಸುಧಾಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಕಟವಾದ ಕಾದಂಬರಿ)
9. ದರ್ಪಣ (ಕಥಾಸಂಕಲನ)
10.ಮೌನ ಮೀರಿದ ಹೊತ್ತು( ಅಂಕಣ ಬರಹಗಳ ಸಂಕಲನಗಳು)
11.ಮೋಹ (ಸುಧಾಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಸಾರವಾದ ಕಾದಂಬರಿ)
12. ಮಕ್ಕಳ ಕಥಾಗುಚ್ಛ (ಸಂಪಾದಿತ ಸಂಕಲನ)
13.ಹಿಂದಿನ ಬೆಂಚಿನ ಹುಡುಗಿಯರು (ಕಥಾ ಸಂಕಲನ)
14. ಏನೊದಾಹ ಏನೊಮೋಹ( ಸುಧಾ ಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಸಾರವಾದ ಕಾದಂಬರಿ)
15.ಬದುಕಿನ ಬೊಗಸೆಯೊಳಗೆ(ಅಂಕಣ ಬರಹಗಳ ಸಂಗ್ರಹ)
16.ಅಂತರ (ಕಾದಂಬರಿ)
17.ಸಿನಿಮಾ ಟಾಕೀಸು (ಪ್ರಬಂಧಗಳ ಸಂಕಲನ)
18.ಸವಾರಿಗಳು (ಪ್ರಬಂಧಗಳ ಸಂಕಲನ)
19. ನಕ್ಸಲೈಟ್ (ಕಥಾಸಂಕಲನ)
20. ಹೋರಾಟದ ಹಾದಿಯಲ್ಲಿ ಬೆಳ್ಳಿಹೆಜ್ಜೆ (ಸಂಪಾದಿತ ಕೃತಿ)
22.ಮಕ್ಕಳ ಸಾಹಿತ್ಯ (ಸಂಪಾದಿತ ಕೃತಿ)
23.ನೆರೆಹೊರೆ(ಲೇಖನಗಳು ಸಂಗ್ರಹ)
24. ಗಂಗೆಯ ದಡದಲಿ (ಪ್ರವಾಸ ಕಥನ)
25. ನಿಲ್ಲುನಿಲ್ಲೆ ಪತಂಗ( ಕಥಾ ಸಂಕಲನ)
26.ಹೊಸಬೆಳಗು (ಸುಧಾ ವಾರ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟ ಗೊಂಡ ಕಾದಂಬರಿ) ಅಚ್ಚಿನಲ್ಲಿ

ಪ್ರಶಸ್ತಿಗಳು:
1. ತ್ರೀವೇಣಿ ಸಾಹಿತ್ಯ ಪ್ರಶಸ್ತಿ ಮೋಹ ಕಾದಂಬರಿಗೆ ಕರ್ನಾಟಕ ಲೇಖಕಿಯರ ಸಂಘ, ಬೆಂಗಳೂರು.
1.ಭಾರತಿ ರಾಜರಾವ್ಮಧ್ಯಸ್ತ ದತ್ತಿ ಪ್ರಶಸ್ತಿ( ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು)
2. ಅತ್ತಿಮಬ್ಬೆ ಸಾಹಿತ್ಯ ಪ್ರಶಸ್ತಿ, ಬೆಂಗಳೂರು.
3.ಮಾಳಗಿ ಮಾಲತೇಶ್ವರ ಪ್ರಶಸ್ತಿ, ಹಾವೇರಿ.
4.ರುಕ್ಮಿಣಿಬಾಯಿ ಸ್ಮಾರಕ ಸಾಹಿತ್ಯ ಪ್ರಶಸ್ತಿ, ಬೆಂಗಳೂರು.
5.ಗೌರಿ ರಾಮಯ್ಯ ದತ್ತಿಪ್ರಶಸ್ತಿ (ಭಾರತೀಯ ಕರ್ನಾಟಕ ಸಂಘ, ಬೆಂಗಳೂರು)
6.ಉಮಾದೇವಿ ಶಂಕರರಾವ್ ದತ್ತಿ ಬಹುಮಾನ( ಕರ್ನಾಟಕ ಲೇಖಕಿಯರ ಸಂಘ, ಬೆಂಗಳೂರು)
7. ರಾಘವೇಂದ್ರ ಪ್ರಕಾಶನ, ಅಂಕೋಲ ರಾಜ್ಯಮಟ್ಟದ ಕಥಾಸ್ಪರ್ಧೆಯಲ್ಲಿ ಬಹುಮಾನ.
8. ಮಲ್ಲಿಗೆ ಕಥಾ ಬಹುಮಾನ.
9. ಈ ಭಾನುವಾರ ಪತ್ರಿಕೆಯ ರಾಜ್ಯಮಟ್ಟದ ಕಥಾಸ್ಪರ್ಧೆಯಲ್ಲಿ ಬಹುಮಾನ.
10. ಲೇಖಕಿಯರ ಟ್ರಸ್ಟ್‍ ಮೈಸೂರು, ರಾಜ್ಯಮಟ್ಟದ ಕಥಾಸ್ಪರ್ಧೆಯಲ್ಲಿ ಪ್ರಥಮ ಬಹುಮಾನ.
11. ಕರ್ನಾಟಕ ಲೇಖಕಿಯರ ಸಂಘದ ಉಮಾದೇವಿ ಶಂಕರರಾವ್‍ ದತ್ತಿ ಬಹುಮಾನ ನಕ್ಸಲೈಟ್ ಕಥೆಗೆ.
12.ರಾಮಸ್ವಾಮಿಅಯ್ಯಂಗಾರ್ ಸಾಹಿತ್ಯಪ್ರಶಸ್ತಿ, ಸಾಹಿತ್ಯ ಪರಿಷತ್ತು, ಹಾಸನ.
13. ವಿಶ್ವೇಶ್ವರಯ್ಯ ಸಾಹಿತ್ಯ ಪ್ರಶಸ್ತಿ, ಬೆಂಗಳೂರು. ಮೌನಮೀರಿದ ಹೊತ್ತು ಕೃತಿಗೆ
14.ಅನನ್ಯ ಪ್ರಕಾಶನ ಪುಸ್ತಕ ಪ್ರಶಸ್ತಿ, ಬೆಂಗಳೂರು. ಏನುಮೋಹ ಯಾವದಾಹ ಕೃತಿಗೆ.
15.ಡಾ:ಕರೀಂಖಾನ್ ಸಾಹಿತ್ಯಪ್ರಶಸ್ತಿ, ಕೇಂದ್ರ ಸಾಹಿತ್ಯ ವೇದಿಕೆ , ಬೆಂಗಳೂರು.
16. ಗೊರೂರು ರಾಮಸ್ವಾಮಿ ಅಯ್ಯಂಗಾರ್‍ ಸಾಹಿತ್ಯ ಪ್ರಶಸ್ತಿ, ಸಾಹಿತ್ಯ ಪರಿಷತ್ತು, ಹಾಸನ.
17.ಬಂದಮ್ಮ ಸಿದ್ದರಾಮಯ್ಯ ಸಾಹಿತ್ಯದತ್ತಿ ಪ್ರಶಸ್ತಿ, ಜಿಲ್ಲಾ ಲೇಖಕಿಯರ ಬಳಗ, ಹಾಸನ.
18. ಕನ್ನಡರತ್ನ ಪ್ರಶಸ್ತಿ ,ವಚನ ಸಾಹಿತ್ಯ ಪರಿಷತ್ತು, ಬೆಂಗಳೂರು.
19. ವಿಶಿಷ್ಟಲೇಖಕಿ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘ, ಬೆಂಗಳೂರು.
20.ಸಾಹಿತ್ಯ ಶ್ರೀ ಪ್ರಶಸ್ತಿ, ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ, ರಾಯಚೂರು.
21.ಸಂಜೆ ಸಾಹಿತ್ಯ ಪ್ರಶಸ್ತಿ, ಜಿವಾಜಿ ಮೆಹಂದಳೆ, ಬೆಂಗಳೂರು ನಿಲ್ಲು ನಿಲ್ಲೆ ಪತಂಗ ಕೃತಿಗೆ

Continue Reading
Click to comment

Leave a Reply

Your email address will not be published. Required fields are marked *

Hassan

ವಿಧಾನಸೌಧದಲ್ಲಿ ಕಾರ್ಯಕಲಾಪ ವೀಕ್ಷಿಸಿದ ಎನ್.ಕೆ. ಗಣಪಯ್ಯ ಕಿವುಡ, ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು

Published

on

ಹಾಸನ: ಸಕಲೇಶಪುರದ ಕೌಡಹಳ್ಳಿಯಲ್ಲಿರುವ ಎನ್.ಕೆ. ಗಣಪಯ್ಯ ಕಿವುಡ ಮತ್ತು ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸದನದ ಕಾರ್ಯಕಲಾಪ ವೀಕ್ಷಿಸಿದರು.


ಈ ಸಂದರ್ಭದಲ್ಲಿ  ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ ಸದನದ ವೀಕ್ಷಣೆಗೆ ಅನುವು ಮಾಡಿಕೊಟ್ಟರು.

Continue Reading

Hassan

ಹಾಸನ ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡಣೆ: ಕರಡು ಪ್ರಕಟ

Published

on

ಹಾಸನ: ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಪ್ರಕಾರ, 2011 ರ ಜನಗಣತಿ ಆಧಾರದ ಮೇರೆಗೆ ಹಾಸನ ಮಹಾನಗರ ಪಾಲಿಕೆಗೆ ವಾರ್ಡ್‌ಗಳನ್ನು ಪುನರ್ ವಿಂಗಡಣೆ ನಿಗದಿ ಪಡಿಸಿ ರಾಜ್ಯ ಸರ್ಕಾರ ಕರಡನ್ನು ಪ್ರಕಟಿಸಿದೆ.

ವಾರ್ಡ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಹಿಂದೆ ನಗರಸಭೆ ಅವಧಿಯಲ್ಲಿ ಇದ್ದಷ್ಟೇ ಅಂದರೆ 35 ವಾರ್ಡ್‌ಗಳೇ ಈಗಲೂ ಮುಂದುವರಿದಿವೆ.
ಆದರೆ ಹಾಸನ ಮಹಾನಗರ ಪಾಲಿಕೆಯಾದ ನಂತರ ಎಲ್ಲ 35 ವಾರ್ಡ್‌ಗಳ ವ್ಯಾಪ್ತಿ ಮತ್ತು ವಿಸ್ತೀರ್ಣ ಹಿಗ್ಗಿದೆ.

ಇದೀಗ ಆಯಾ ವಾರ್ಡ್‌ಗಳಿಗೆ ಸಂಬಂಧಿಸಿದ ಗಡಿ ವ್ಯಾಖ್ಯಾನ(ಚೆಕ್ಕುಬಂದಿ) ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಹಾಸನ ಮಹಾನಗರ ಪಾಲಿಕೆಯ ಕರಡು ವಾರ್ಡ್‌ವಾರು ಕ್ಷೇತ್ರ ಪುನರ್‌ವಿಂಗಡಣಾ ಮಾಹಿತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ.


ಈ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ೧೫ ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
ಈ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು, ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು ಹಾಸನ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಬೇಕೆಂದು ಮಂಜುನಾಥ್ ಅವರು ಸೂಚಿಸಿದ್ದಾರೆ.

Continue Reading

Hassan

ಎಸ್‌ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್‌ಡಿಪಿಐ ಮುಖಂಡ

Published

on

ಆಲೂರು: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆಂಚಮ್ಮನಹೊಸಕೋಟೆ ಗ್ರಾಮದಲ್ಲಿ ಯುವಕರ ಗುಂಪೊಂದು ಎಸ್‌ಡಿಪಿಐ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಘಟನೆ  ನಡೆದಿದೆ.

ಮುನೀರ್ ಹಲ್ಲೆಗೊಳಗಾದ ಎಸ್‌ಡಿಪಿಐ ಮುಖಂಡನಾಗಿದ್ದು ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ನಡೆಸಿದ ಯುವಕರು.

ಇಂದು ಬೆಳಿಗ್ಗೆ ಕೆಂಚಮ್ಮನ ಹೊಸಕೋಟೆ ಗ್ರಾಮದಲ್ಲಿ ಹಾಸಿಗೆ ರಿಪೇರಿ ಮಾಡುವ ಕಾರ್ಮಿಕ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆತನನ್ನು ಅಡ್ಡಗಟ್ಟಿದ ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ನಡೆಸುತ್ತಿದ್ದಾರೆ. ಇದನ್ನು ಕಂಡ ಮುನೀರ್ ಹಾಸಿಗೆ ರಿಪೇರಿ ಮಾಡುವವರ ರಕ್ಷಣೆಗೆ ಬಂದಿದ್ದು ಮುನೀರ್ ಮೇಲೂ ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮುನೀರ್ ಕೆಂಚಮ್ಮನ ಹೊಸಕೋಟೆ ಉಪಪೊಲೀಸ್ ಠಾಣೆಗೆ ದೂರು ಕೊಡಲು ಹೋಗಿದ್ದು ಅಲ್ಲಿ ಯಾರು ಇಲ್ಲದ‌ ಕಾರಣ ಕಾಯುತ್ತಾ ನಿಂತಿದ್ದ ವೇಳೆ ಅಲ್ಲಿಗೆ ಬಂದ ಭುವನೇಶ್ ಹಾಗೂ ಅಕ್ಷಯ್ ಉಪಪೊಲೀಸ್ ಠಾಣೆಯಿಂದ ಹೊರಗೆಳೆದು ಪುನಃ ಮುನೀರ್ ಮೇಲೆ ಹಲ್ಲೆ ನಡೆಸಿದ್ದಾರೆ.‌

ಹಲ್ಲೆಗೊಳಗಾದ ಮುನೀರ್ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಲೂರು ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

Continue Reading

Trending

error: Content is protected !!