Connect with us

Hassan

ಅಯೋಧ್ಯೆ ಹೋರಾಟದಂತೆ ಮುಂದೆ ಮಸೀದಿಯಲ್ಲಿ ಈಶ್ವರನಿಗಾಗಿ ಹೋರಾಟ : ಶಿವಪ್ರಸಾದ್ ಪಾಂಡೆಯ ಮಹಾರಾಜ್

Published

on

ಹಾಸನ: ಈ ಹಿಂದೆ ಅಯೋಧ್ಯೆಗಾಗಿ ಸತತ ಹೋರಾಟ ಮಾಡಿದಂತೆ ಮುಂದಿನ ದಿನಗಳಲ್ಲಿ ಮಸೀದಿಯಲ್ಲಿ ಈಶ್ವರನಿಗಾಗಿ ಹೋರಟ ಮಾಡಲಾಗುವುದು ಎಂದು ಮೊದಲು ನ್ಯಾಯಾಲಯಕ್ಕೆ ದಾವೆ ಹೂಡಿ ಜಯಗಳಿಸಿದ ಗುರೂಜಿ ಶಿವಪ್ರಸಾದ್ ಪಾಂಡೆಯ ಮಹಾರಾಜ್ ಜಿ ಲಿಂಗಿಯಾ ಅವರು ಹಾಸನದಲ್ಲಿ ಹೇಳಿಕೆ ನೀಡಿದ್ದಾರೆ.

ನಗರದ ಪಾರ್ಕ್ ರಸ್ತೆ ಬಳಿ ಇರುವ ಶ್ರೀಸೀತಾರಾಮಾಂಜನೇಯ ದೇವಸ್ಥಾನದ ಅವರಣದಲ್ಲಿ ೧೦ ರಾಜ್ಯಗಳು ಮತ್ತು ಎರಡು ದೇಶಗಳನ್ನು ಭೇಟಿ ಮಾಡಿ ಶ್ರೀಲಂಕಾಕ್ಕೆ ತೆರಳಲಿರುವ ಶ್ರೀರಾಮ ಪಾಗ್ ಯಾತ್ರೆ ಬೆಂಗಳೂರಿನ ಮೂಲಕ ಹಾಸನಕ್ಕೆ ಬಂದಾಗ ಅದ್ಧೂರಿ ಸ್ವಾಗತ ದೊರಕಿತು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜ್ಞನವ್ಯಾಪಿಯಲ್ಲಿ ಜಯಗಳಿಸಿರುವುದು ನಮ್ಮ ಜೀವಿತಾವಧಿಯಲ್ಲಿ ತುಂಬ ಖುಷಿ ತಂದಿದೆ. ನಮ್ಮ ಜೀವಿತಾವಧಿಯಲ್ಲಿ ಇದಕ್ಕಿಂತ ದೊಡ್ಡ ಸಂತಸ ಮತ್ತೊಂದಿಲ್ಲ. ಜ್ಞನವ್ಯಾಪಿ ಮಸೀದಿಯಲ್ಲಿ ಈಶ್ವರನಿಗಾಗಿ ನಮ್ಮ ಮುಂದಿನ ಹೋರಾಟ ಮುಂದುವರೆಯುವುದು ಎಂದು ಎಚ್ಚರಿಸಿದರು. ಆ ಸ್ಥಳದಲ್ಲಿ ಈಶ್ವರ ಲಿಂಗದ ಮೇಲೆ ನೀರಿನ ಫೌಂಟೆನ್ ಮಾಡಿ ಇರಿಸಿ ನೀರು ಹಾಕಿ ಮುಚ್ಚಿದ್ದಾರೆ. ಅದೇ ಸ್ಥಳಕ್ಕೆ ಉಗಿಯುತ್ತಾರೆ ಎಂದು ಬೇಸರವ್ಯಕ್ತಪಡಿಸಿದ ಅವರು, ಮುಂದೆ ಅಲ್ಲಿನ ಶಿವಲಿಂಗಕ್ಕಾಗಿ ಹೋರಾಟ ಮಾಡುತ್ತೇವೆ. ಜ್ಞನವ್ಯಾಪಿಯಲ್ಲೂ ಅಯೋಧ್ಯೆಯಂತೆ ಶಿವಲಿಂಗಕ್ಕಾಗಿ ಹೋರಾಟ ಮಾಡುತ್ತೇವೆ. ಅಯೋಧ್ಯೆ ಹೋರಾಟವೂ ಇದೆ ರೀತಿ ಪ್ರಾರಂಭವಾಗಿ ಜಯಗಳಿಸಿದೆ ಎಂದು ಹೇಳಿದರು.

ರಾಮಜನ್ಮಭೂಮಿ ಅಯೋಧ್ಯೆಯಿಂದ ಶ್ರೀಲಂಕಾವರೆಗೆ, ರಾಮ್ ಬನ್ ಗಮನ್ ಯಾತ್ರೆ ಪ್ರಾರಂಭವಾಗಿ ಅಯೋಧ್ಯೆ ಮಣ್ಣಿನೊಂದಿಗೆ ೧೫೦೦೦ಕಿ.ಮೀ ಯಾತ್ರೆ ಹೊರಟಿರುವ ಮಹಾರಾಜ್ ಲಿಂಗಿಯಾ ಗುರುಗಳು. ಈ ವೇಳೆ ಹಾಸನಕ್ಕೆ ಭೇಟಿ ನೀಡಿರೋ ಲಿಂಗಿಯಾಶ್ರೀ. ಅಯೋಧ್ಯೆಯಿಂದ ಲಂಕೆವರೆಗೆ ಶ್ರೀ ರಾಮ ಕ್ರಮಿಸಿದ ಒಟ್ಟು ೨೦೦ ಸ್ಥಳಗಳ ಭೇಟಿ ನೀಡಿದ್ದು, ಈ ವೇಳೆ ಜ್ಙಾನವ್ಯಾಪಿ ವಿಚಾರದಲ್ಲಿ ಲಿಂಗಿಯಾ ಗುರೂಜಿ ಮಾತನಾಡಿದರು.

ಇದೆ ವೇಳೆ ಯಾತ್ರೆಯ ಮುಖ್ಯ ಆಯೋಜಕರು ಡಾ. ಸಚಿನ್ ಸನಾತನಿ ಜಿ ಮಾಧ್ಯಮದೊಂದಿಗೆ ಮಾತನಾಡಿ, ಇಂದು ೧೦ ರಾಜ್ಯಗಳು ಮತ್ತು ಎರಡು ದೇಶಗಳನ್ನು ಭೇಟಿ ಮಾಡಿ ಶ್ರೀಲಂಕಾಕ್ಕೆ ತೆರಳಲಿರುವ ಶ್ರೀರಾಮ ಪಾಗ್ ಯಾತ್ರೆ ಬೆಂಗಳೂರಿನ ಮೂಲಕ ಹಾಸನ ತಲುಪಿದೆ. ಕಾಶಿಯ ಸನಾತನಿ ಸಂಸ್ಥೆ ಬ್ರಹ್ಮರಾಷ್ಟ್ರ ಏಕಂ ಅಯೋಧ್ಯೆಯಲ್ಲಿ ಶ್ರೀರಾಮ ಲಾಲನ ಪ್ರತಿಷ್ಠಾಪನೆಯ ಸ್ಮರಣಾರ್ಥ ೪೫ ದಿನಗಳ ಶ್ರೀರಾಮ ಪಾಗ್ ಯಾತ್ರೆಯನ್ನು ಆಯೋಜಿಸುತ್ತಿದೆ. ಈ ೪೫ ದಿನಗಳ ಯಾತ್ರೆಯು ಶ್ರೀರಾಮನು ತನ್ನ ವನವಾಸದ ದಿನಗಳಲ್ಲಿ ಹೋದ ಎಲ್ಲಾ ಸ್ಥಳಗಳ ಮೂಲಕ ಹಾದುಹೋಗುತ್ತದೆ. ಈ ಯಾತ್ರೆಯು ಭಗವಾನ್ ರಾಮನ ಆದರ್ಶಗಳು ಮತ್ತು ಮೌಲ್ಯಗಳನ್ನು ಅದು ಹಾದುಹೋಗುವ ಎಲ್ಲಾ ಸ್ಥಳಗಳಲ್ಲಿ ಪ್ರಚಾರ ಮಾಡುತ್ತದೆ, ಇದರಿಂದ ನಾವು ವಿಶ್ವ ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬಹುದು ಎಂದರು. ದೇಶದಲ್ಲಿ ಏಕತೆ, ಸಮಗ್ರತೆ ಮತ್ತು ಸಮಾನತೆ ಕಾಪಾಡುವುದು ಇದರ ಉದ್ದೇಶವಾಗಿದೆ.

ಆಧುನಿಕ ಶಿಕ್ಷಣದೊಂದಿಗೆ ಸಾಂಪ್ರದಾಯಿಕ ಮೌಲ್ಯಗಳಲ್ಲಿ ಗುರುಕುಲವನ್ನು ನಿರ್ಮಿಸಲು ಮತ್ತು ಸ್ಥಾಪಿಸಲು ವಾರಣಾಸಿಯ ವಿಂಧ್ಯವಾಸಿನಿ ಧಾಮದಲ್ಲಿ ’ಶ್ರೀರಾಮ ವೈದಿಕ ಸಪ್ತಋಷಿ ಗುರುಕುಲ’ ಹೆಸರಿನಲ್ಲಿ ನಮ್ಮ ಮುಂಬರುವ ಶೈಕ್ಷಣಿಕ ಯೋಜನೆಗೆ ಈ ಯಾತ್ರೆ ಸಮರ್ಪಿಸುತ್ತದೆ. ಗುರುಕುಲ ಪದ್ಧತಿಯು ಭಾರತದ ಪ್ರಾಚೀನ ಶಿಕ್ಷಣ ವ್ಯವಸ್ಥೆಗೆ ಅಮೂಲ್ಯವಾದ ಕೊಡುಗೆಯನ್ನು ಹೊಂದಿದೆ. ಬ್ರಹ್ಮ ರಾಷ್ಟ್ರ ಏಕಂ ಜಾಗತಿಕವಾಗಿ ಏಕೀಕೃತ ಮತ್ತು ಬಲಿಷ್ಠ ಭಾರತಕ್ಕಾಗಿ ಪ್ರಾಚೀನ ಸಾಂಸ್ಕೃತಿಕ ಪರಂಪರೆಯಲ್ಲಿ ಬೇರೂರಿರುವ ಪ್ರಬಲ ನಾಯಕರನ್ನು ರೂಪಿಸುವ ಗುರಿ ಹೊಂದಿದೆ. ಶ್ರೀರಾಮ ಪಾಗ್ ಯಾತ್ರೆಯು ಇಂದು ಅಯೋಧ್ಯೆ, ಶೃಂಗವೇರಪುರ, ಪ್ರಯಾಗರಾಜ್, ಚಿತ್ರಕೂಟ, ಸತ್ನಾ (ಮ.ಪಂ.), ನಾಗ್ಪುರ, ನಾಸಿಕ್ ಮತ್ತು ಲೇಪಾಕ್ಷಿ ಮತ್ತು ಬೆಂಗಳೂರು ಮೂಲಕ ಹಾಸನ ತಲುಪಿದೆ. ಇಲ್ಲಿ ರಾಮ್ ಪಾಗ್ ಯಾತ್ರಿಗಳಿಗೆ ಭವ್ಯ ಸ್ವಾಗತ ನೀಡಿರುವುದಕ್ಕೆ ಸಂತೋಷವ್ಯಕ್ತಪಡಿಸಿದರು. ಯಾತ್ರೆಯಲ್ಲಿ ನೂರಾರು ರಾಮಭಕ್ತರು ಉಪಸ್ಥಿತರಿದ್ದರು.

ಸನಾತನ ಧರ್ಮ ಪ್ರಚಾರದ ಜತೆಗೆ ನಾಡಿನ ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸ ಮಾಡುತ್ತಿರುವ ಈ ಸಂಸ್ಥೆಯಿಂದ ನಿರಂತರವಾಗಿ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಗಳು ನಡೆಯುತ್ತಿವೆ. ಈ ಯಾತ್ರೆಯು ಸಂಪೂರ್ಣವಾಗಿ ಧಾರ್ಮಿಕವಾಗಿದೆ ಮತ್ತು ಭಗವಾನ್ ಶ್ರೀರಾಮನ ಮೇಲಿನ ನಂಬಿಕೆ ಮತ್ತು ಭಕ್ತಿಯ ಸಂಕೇತವಾಗಿದೆ ಮತ್ತು ಲಕ್ಷಾಂತರ ಭಕ್ತರು ಈ ಐತಿಹಾಸಿಕ ಯಾತ್ರೆಗೆ ಭಾರತದಾದ್ಯಂತ ಸ್ಥಳದಿಂದ ಸ್ಥಳಕ್ಕೆ ಸೇರುತ್ತಿದ್ದಾರೆ.

ನಮ್ಮೊಂದಿಗೆ ಯಾತ್ರೆಯ ಪ್ರತಿಜ್ಞೆ ಸ್ವೀಕರಿಸುವ ಜನರು ಮುಖ್ಯವಾಗಿ ಗೌರವಾನ್ವಿತ ಗುರು ಜಿ ಶ್ರೀ ದಿವಾಕರ್ ದ್ವಿವೇದಿ ಜಿ, ಆದಿ ವಿಶ್ವೇಶ್ವರ ಜ್ಯೋತಿರ್ಲಿಂಗದ ಮಹಂತ್ ಶ್ರೀಲಿಂಗ ಮಹಾರಾಜ್ ಜಿ, ಶ್ರೀಮತಿ ಪ್ರಿಯಾ ಮಿಶ್ರಾ, ಎಂಆರ್. .ಮೋಹನ್, ಬಾಲಾಜಿ, ದಿನೇಶ್, ಮಹೇಶ್, ರಘುನಂದನ್, ವ್ಯಾಂಕೆಟ್, ಪವನ್, ಅರುಣ್, ಜಿ.ಓ. ಮಹಾಂತಪ, ಮುಕ್ತುರಾಜ್, ಪೂಜೆ, ಶ್ರೀ. ಕುಶಾಗ್ರ ಮಿಶ್ರಾ ಮತ್ತು ಇನ್ನೂ ಅನೇಕರನ್ನು ಪ್ರಸ್ತುತಪಡಿಸಲಾಯಿತು. ಈ ಪ್ರಯಾಣವು ರಾಜಕೀಯವಲ್ಲ ಆದರೆ ಸ್ವಾಯತ್ತ ಮತ್ತು ಧಾರ್ಮಿಕ ವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಯಾತ್ರೆಯ ನಿರ್ಣಯವು ರಾಷ್ಟ್ರವನ್ನು ಏಕತೆ, ಸಮಗ್ರತೆ ಮತ್ತು ಸಮಾನತೆಯ ಎಳೆಯಲ್ಲಿ ಬಂಧಿಸುವ ಪ್ರಯತ್ನವಾಗಿದೆ. ಎಲ್ಲಾ ಜಾತಿ, ವರ್ಗದ ಜನರನ್ನು ಬಂಧಿಸಲು ನಿರಂತರ ಪ್ರಯತ್ನ ನಡೆಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು. ಎಲ್ಲಾ ಸನಾತನಿಗಳು ಮತ್ತು ಶ್ರೀರಾಮನ ಭಕ್ತರು ಈ ಯಾತ್ರೆಗೆ ಸೇರಲು ಮತ್ತು ಅವರ ಸನಾತನ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವಲ್ಲಿ ಸಹಕರಿಸಲು ವಿನಂತಿಸಲಾಗಿದೆ, ಇದರಿಂದಾಗಿ ಭಾರತವು ಅತ್ಯುತ್ತಮ ಮತ್ತು ಶಕ್ತಿಯುತ ವಿಶ್ವ ನಾಯಕನಾಗಿ ಸ್ಥಾಪನೆಯಾಗುತ್ತದೆ ಎಂದು ಕರೆ ನೀಡಿದರು

Continue Reading
Click to comment

Leave a Reply

Your email address will not be published. Required fields are marked *

Hassan

ಮುಂದಿನ ದಿನಗಳಲ್ಲಿ ಚೊಂಬು-ಜಾಗಟೆ ಗ್ಯಾರಂಟಿ

Published

on

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ರೇವಣ್ಣ ವಾಗ್ದಾಳಿ

ಹಾಸನ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಬಿಕ್ಷೆ ಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಚೊಂಬು ಮತ್ತು ಜಾಗಟೆ ಕೊಡುವುದು ಗ್ಯಾರಂಟಿ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಭವಿಷ್ಯ ನುಡಿದರು.

ನಗರದಲ್ಲಿ ಆಪ್ತರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯ ಲೂಟಿ ಕೋರರ ಕೈಯಲ್ಲಿ ಸಿಲುಕಿಕೊಂಡಿದೆ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಬಿಕ್ಷೆ ಹಾಕುತ್ತಿದೆ ಮುಂದಿನ ದಿನಗಳಲ್ಲಿ ಕೈಯಲ್ಲಿ ಚೊಂಬು ಹಾಗೂ ಜಾಗಟೆ ಕೊಡುವುದು ಗ್ಯಾರಂಟಿ ಎಂದರು.

ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರರ ಬದಲಾವಣೆ ಆಗಿದೆ. ಶಾಲಾ ಕಾಲೇಜು ಕಟ್ಟಡಗಳು, ಗುಣಮಟ್ಟದ ಶಿಕ್ಷಣದ ಮೂಲಕ ಹಾಸನ ಜಿಲ್ಲೆ ಎಸ್.ಎಸ್.ಎಲ್.ಸಿ. ಯಲ್ಲಿ ಕೂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಗೆ ಕೊಡುಗೆ ಶೂನ್ಯ ಎಂದು ದೂರಿದರು. ನಂಬಿದವರಿಗೆ ಟೋಪಿ ಹಾಕಿ ನಿಷ್ಕಲ್ಮಶ ರಾಜಕಾರಿಣಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಕಿಡಿಕಾರಿದರು.

ಹಿಂದಿನಿಂದಲೂ ನಮ್ಮ ಕುಟುಂಬದ ಬಗ್ಗೆ ಅನೇಕರು ಒಂದಲ್ಲ, ಒಂದು ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ದೇವೇಗೌಡರ ಕಾಲದಿಂದಲೂ ಇದು ನಡೆಯುತ್ತಿದೆ. ಇದಕ್ಕೆಲ್ಲಾ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವುದು ಮಾಮೂಲಿ. ಇದನ್ನೆಲ್ಲ ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ೨೮ಕ್ಕೆ ೨೮ ಸ್ಥಾನವನ್ನೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗ್ಯಾರಂಟಿ ಆಯ್ತು ಈಗ ಪೊಳ್ಳು ಗ್ಯಾರಂಟಿ ಶುರುವಾಗಿದೆ. ಬಾಂಡ್ ಪೇಪರ್‌ನಲ್ಲಿ ಸಿಎಂ ಹಾಗೂ ಡಿಸಿಎಂ ಒಂದು ಲಕ್ಷ ಕೊಡುವುದಾಗಿ ಕರಪತ್ರ ಹಂಚುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಗಮನಿಸಬೇಕು ಎಂದು ಆಗ್ರಹಿಸಿದರು. ಒಂದು ಕಡೆ ಪ್ರಜ್ವಲ್, ದೇವೇಗೌಡರು ಏನು ಮಾಡಿದ್ದಾರೆ ಅಂತಾರೆ. ಆದರೆ ಅವರು ಈ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತು. ೧೧ ತಿಂಗಳಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಖಾಲಿ ಚೊಂಬು ಕೊಟ್ಟಿದ್ದಾರೆ. ಒಂದೇ ಒಂದು ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಗಂಬೀರವಾಗಿ ಆರೋಪಿಸಿದರು.

ಹಾಸನ ಫ್ಲೈ ಓವರ್ ಮಾಡಲು ನಾನು ಬರಬೇಕಾಯ್ತಾ, ಹಾಸನದ ಬಸ್ ನಿಲ್ದಾಣಕ್ಕೆ ನಿತ್ಯ ನಾಲ್ಕು ಸಾವಿರ ಬಸ್ ಬರ್ತವೆ. ಆದರೆ ಇವರು ಕೇವಲ ಎರಡು ಪಥದ ರಸ್ತೆಯ ಫ್ಲೈ ಓವರ್ ಮಾಡಿದ್ದಾರೆ. ಹಾಸನದ ಮೆಡಿಕಲ್ ಕಾಲೇಜು ಉಳಿಸಲು ಇವರ ಕೊಡುಗೆ ಏನು? ನಮ್ಮ ಕೊಡುಗೆ ಏನು ಅಂತಾರೆ, ಇವರ ಕೊಡುಗೆ ಏನು ಹೇಳಲಿ? ಎಂದು ಸವಾಲು ಹಾಕಿದರು. ಅರವತ್ತು ವರ್ಷ ಆದರೂ ಈ ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ. ಶೇಕಡಾ ೪೦ ರಷ್ಡು ಶಿಕ್ಷಕರ ಹುದ್ದೆ ಖಾಲಿ ಇದೆ. ಬಡ ಜನರಿಗೆ ಮೋದಿಯವರು ಐದು ಕೆಜಿ ಅಕ್ಕಿ ಕೊಡ್ತಾರೆ ಇವರು ಅದನ್ನ ಹೇಳ್ತಾರಾ! ಇವರು ಗ್ಯಾರಂಟಿ ಗಾಗಿ ಲಕ್ಷಾಂತರ ಕೋಟಿ ಸಾಲ ಮಾಡಿದ್ದಾರೆ.

ಇವರು ಬಿಜೆಪಿಯನ್ನ ಪರ್ಸೆಂಟೇಜ್ ಎನ್ನೋರು ಇವರು ರೈತರಿಂದಲು ಪರ್ಸೆಂಡೇಜ್ ತಗೊತಾರಲ್ಲ ಸ್ವಾಮಿ ಎಂದು ಆರೋಪ ಮಾಡಿದರು.

Continue Reading

Hassan

ಪೆನ್ ಡ್ರೈವ್ ಪ್ರಕರಣ ಸಮಗ್ರ ತನಿಖೆ ಆಗಲಿ ಅನುಪಮ ಆಗ್ರಹ

Published

on

ಹಾಸನ: ಈಗಾಗಲೇ ಎಲ್ಲಾ ಕಡೆ ಮಾತಾಗಿರುವ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಗ್ರ ತನಿಖೆ ಆಗಬೇಕಾಗಿದೆ. ಬೇರೆ ಹೆಣ್ಣು ಮಕ್ಕಳ ಬಗ್ಗೆ ಮಾತನಾಡುವರ ಕುರಿತು ಕಾಂಗ್ರೆಸ್ ಅಭ್ಯರ್ಥಿ ತಾಯಿ ಅನುಪಮ ಅಸಮಧಾನವ್ಯಕ್ತಪಡಿಸಿದರು. ಈ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಶ್ರೇಯಸ್ ಪಟೇಲ್ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಈ ವಿಚಾರ ಎತ್ತಿರುವುದೆ ಜಿ. ದೇವರಾಜೇಗೌಡರು ಆಗಿರುವುದರಿಂದ ಪೆನ್ ಡ್ರೈವ್ ಇದೆ ಎಂದು ಹೇಳಿಕೆ ನೀಡುವ ಜಿ. ದೇವರಾಜೇಗೌಡರು ಏಕೆ ಮಾಡಿರಬಾರದು ಎಂದು ಗಂಭೀರವಾಗಿ ಆರೋಪಿಸಿ ಟಾಂಗ್ ನೀಡಿದರು.

ಈ ಚುನಾವಣೆಯಲ್ಲಿ ಜಿಲ್ಲೆಯ ಜನ ಬದಲಾವಣೆ ಬಯಸಿದ್ದು, ಎಲ್ಲಾ ಕಡೆ ಶ್ರೇಯಸ್ ಪಟೇಲ್‌ಗೆ ಉತ್ತಮವಾದ ವಾತಾವರಣ ಇದೆ. ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಹಾಗೂ ಪುಟ್ಟಸ್ವಾಮಿಗೌಡರ ಮೊಮ್ಮಗ ಎಂಬುದು ಸೇರಿ ಗೆಲುವಿಗೆ ಪೂರಕ ಆಗಲಿದೆ ಎಂದರು. ನಮ್ಮ ಮಾವ ೧೯೯೯ ರಲ್ಲಿ ಎಂಪಿ ಆಗಿದ್ದಾಗ ಆಸ್ಪತ್ರೆ, ನೀರಾವರಿ ಯೋಜನೆ ಮಾಡಿದ್ದಾರೆ. ನಾನು ಎರಡು ಎಲೆಕ್ಷನ್‌ನಲ್ಲಿ ಅವರ ಮುಂದೆ ಮಂಡಿಯೂರಿದ್ದೇನೆ. ನನ್ನ ಮಗ ೩ನೇ ಚುನಾವಣೆ ಎದುರಿಸುತ್ತಿದ್ದು, ಜಿಲ್ಲೆಯ ಜನ ನಮಗೆ ಆಶೀರ್ವಾದ ಮಾಡಬೇಕು ಎಂದು ಕೋರಿದರು. ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲ್ಲಿಸಲು ಎಷ್ಟೆ ಹಣ ಹಂಚಿಕೆ ಮಾಡಿದರೂ ಈ ಬಾರಿ ಶ್ರೇಯಸ್ ಪಟೆಲ್ ಗೆಲ್ಲುವುದು ನಿಶ್ಚಿತ. ಕುಟುಂಬದ ವಿರುದ್ಧ ಹೋರಾಟ ನಡೆಸುವುದು ಅಷ್ಟು ಸುಲಭವಲ್ಲ. ಈಗ ಈ ಕುಟುಂಬಕ್ಕೆ ಶಕ್ತಿ ಇಲ್ಲ. ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶ್ರೇಯಸ್ ಪಟೇಲ್ ಬೆನ್ನ ಹಿಂದೆ ನಿಂತಿರುವುದರಿಂದ ಇಡೀ ಕಾಂಗ್ರೆಸ್ ಪಕ್ಷ ಒಟ್ಟಾಗಿ ಕಸಲೆ ಮಾಡಿದ್ದು ಶ್ರೀರಕ್ಷೆ ಆಗಲಿದೆ. ಜಿಲ್ಲೆಯ ಜನತೆ ನಮ್ಮ ಮಗನಿಗೆ ಮತ ಹಾಕುವಂತೆ ಇದೆ ವೇಳೆ ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡರಾದ ಹೆಚ್.ಕೆ. ಜವರೇಗೌಡ ಮಾತನಾಡಿ, ಈ ಲೋಕಸಭಾ ಚುನಾವಣೆಯಲ್ಲಿ ವಾತವರಣ ಕಾಂಗ್ರೆಸ್ ಪರವಾಗಿದ್ದು, ಸ್ವಯಂ ಪ್ರೇರಿತವಾಗಿ ಶ್ರೇಯಸ್ ಪಟೇಲ್ ಗೆ ಮತ ಹಾಕಬೇಕು ಎನ್ನುವ ವಾತವರಣ ಬಂದಿದೆ. ಕಾಂಗ್ರೆಸ್ ಕಾರ್ಯಕ್ರಮದ ಕಾರ್ಯಕ್ರಮಗಳು ಶ್ರೀರಕ್ಷೆ ಆಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಮುಖಂಡರಾದ ಹೆಚ್.ಕೆ. ಜವರೇಗೌಡ, ಬನವಾಸೆ ರಂಗಸ್ವಾಮಿ, ಮುರುಳಿಮೋಹನ್, ಜಾವಗಲ್ ಮಂಜುನಾಥ್ ಇತರರು ಉಪಸ್ಥಿತರಿದ್ದರು.

Continue Reading

Hassan

ಹಾಸನದಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು, ಮಂಡ್ಯದಲ್ಲಿ ಸುಮಲತಾ ನಮಗೆ ಸಹಕರಿಸುತ್ತಿಲ್ಲ

Published

on

ಕಾವೇರಿ ನೀರನ್ನು ಉಳಿಸಲು ಶತಸಿದ್ಧ : ಹೆಚ್.ಡಿ. ದೇವೇಗೌಡ

ಹಾಸನ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು ಹಾಸನದಲ್ಲಿ ಮತ್ತು ಮಂಡ್ಯದಲ್ಲಿ ಸುಮಲತಾ ಅವರು ನಮಗೆ ಸಹಕರಿಸುತ್ತಿಲ್ಲ ಎಂದು ಬೇಸರವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನಮ್ಮ ಮೂರು ಕ್ಷೇತ್ರದಲ್ಲೂ ಜಯಗಳಿಸುವುದಾಗಿ ವಿಶ್ವಾಸವ್ಯಕ್ತಪಡಿಸಿ, ಕಾವೇರಿ ನೀರನ್ನು ಉಳಿಸಲು ಶತಸಿದ್ಧ ಎಂದು ಶಪತ ಮಾಡಿದರು.

ನಗರದ ಹೊರವಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಸಂಪತ್ತನ್ನು ಹಂಚುತ್ತೇವೆ ಎಂದು ಕಾಂಗ್ರೆಸ್‌ನವರು ಜಗಳವಾಡುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಕ್ತಿನೇ ಇಲ್ಲ. ಆದರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಭೂಮಿ, ಸಂಪತ್ತನ್ನು ಹಂಚುತ್ತೇವೆ ಎಂದು ರಾಹುಲ್ ಗಾಂಧಿ ಹೇಳ್ತಾರೆ. ಕಾವೇರಿ ಬೇಸಿನ್‌ಗೆ ಸಂಬಂಧಪಟ್ಟ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಪ್ರಧಾನ ಮಂತ್ರಿಗಳ ಜೊತೆ ಎರಡು ಸಭೆ ಮಾಡಿದ್ದೇನೆ. ಎರಡನೇ ಹಂತದ ಚುನಾವಣೆ ಹೈದರಾಬಾದ್, ಕರ್ನಾಟಕ, ಮುಂಬೈ ಕರ್ನಾಟಕ ಮೇ.೭ ರಂದು ನಡೆಯಲಿದೆ. ಶಿವಮೊಗ್ಗ ಸೇರಿ ಎರಡನೇ ಹಂತದ ಚುನಾವಣೆ ನಡೆಯುತ್ತದೆ ಎಂದರು.

ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧ ಮಾಡ್ತಾರೆ ಅಂತ ನೀವು ಕೇಳಬಹುದು, ನಾನೇ ಹೇಳ್ತಿನಿ! ಇವತ್ತು ಕಾವೇರಿ ಬೇಸಿನ್‌ನಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯ ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋ-ಆಪರೇಟ್ ಮಾಡ್ತಿಲ್ಲ. ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿಗೆ ಕೋಆಪರೇಟ್ ಮಾಡ್ತಿಲ್ಲ.

ಅದರಿಂದ ಕುಮಾರಸ್ವಾಮಿ ಏನೋ ಅಪಾಯ ಆಗುತ್ತೆ ಅಂತ, ಏನು ಆಗಲ್ಲ. ಪ್ರಮುಖವಾಗಿ ಕಾವೇರಿ ಸಮಸ್ಯೆ ಇದೆ, ಅದು ಜೀವನ್ಮರಣದ ಪ್ರಶ್ನೆ.

ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು ೧೨೫ ಕೋಟಿ ಎನ್‌ಓಸಿ ರಿಲೀಸ್ ಮಾಡಿದ್ದಾರೆ. ರಾಜ್ಯದಲ್ಲಿ ೨೮ ಕ್ಕೆ ೨೮ ಸ್ಥಾನ ಗೆಲ್ಲುಬೇಕು. ಯಾರೇ ಪ್ರಚಾರ, ಅಪಪ್ರಚಾರ ಏನೇ ಮಾಡಲಿ ಈ ದೇವೇಗೌಡ ೯೧ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದಾನೆ ಅದು ಎಲ್ಲರ ಮನಸ್ಸಿಗೆ ನಾಟಿದೆ. ಮೋದಿಯವರು ಡಿಎಂಕೆಯ ಹಂಗಿನಿಂದ ಈ ದೇಶ ಆಳುವ ಪರಿಸ್ಥಿತಿ ಬರುವುದಿಲ್ಲ. ಮೇಕೆದಾಟು ಯೋಜನೆ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಹಾಕಿದೆ. ಒಬ್ಬ ಪೊಲೀಸ್ ಅಧಿಕಾರಿ ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹೋರಾಡುತ್ತಿದ್ದಾರೆ. ಅಣ್ಣಾ ಡಿಎಂಕೆಯಲ್ಲಿ ಪಕ್ಷದಲ್ಲಿ ಕೆಲವರು ಪರಸ್ಪರ ಭಿನ್ನಾಭಿಪ್ರಾಯಗೊಂಡು ಅವರು ಕೂಡ ಬಿಜೆಪಿ ಜೊತೆ ಅಧಿಕಾರ ಹಂಚಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಅಕೌಂಟ್ ಓಪನ್ ಮಾಡುತ್ತೆ ಯಾವುದೇ ಸಂಶಯವಿಲ್ಲ. ಚಿಕ್ಕಬಳ್ಳಾಪುರದಲ್ಲಿ ನೀರಿನ ಸಮಸ್ಯೆ ಅರ್ಥ ಆಗಿದೆ.

ನಾನು ಗಮನ ಹರಿಸುತ್ತೇನೆ ಎಂದು ಪ್ರಧಾನಮಂತ್ರಿಗೂ ಹೇಳಿದ್ದೇನೆ. ಮೇಕೆದಾಟು, ಕಾವೇರಿ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರ ಜೊತೆ ಮಾಡುತ್ತಿದ್ದೇನೆ.

ಅವರು ಏನು ಹೇಳಿದ್ದಾರೆ ಎನ್ನುವುದನ್ನು ಮಾಧ್ಯಮದ ಮುಂದೆ ಹೇಳಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೋದಲೆಲ್ಲ ಜನಕ್ಕೆ ಅವರು ಹಣದ ಹೊಳೆಯನ್ನು ಹರಿಸುತ್ತಿದ್ದಾರೆ. ಮೂವರು ಇದ್ದರೂ ಆದರೇ ಡಾ. ಮಂಜುನಾಥ್ ಅವರನ್ನು ನಿಲ್ಲಿಸಿದ್ದಾರೆ. ಆದರೂ ಡಾ.ಮಂಜುನಾಥ್ ಗೆಲ್ತಾರೆ. ಅವರು ಅಧಿಕಾರ ಎಷ್ಟು ದುರುಪಯೋಗ ಮಾಡಬೇಕು ಮಾಡಿದ್ದಾರೆ.ಏನೇ ಸಮಸ್ಯೆ ಇಲ್ಲ, ಡಾ.ಮಂಜುನಾಥ್ ಗೆಲ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಯಾವ ಕಾವೇರಿ ನೀರನ್ನು ಉಳಿಸುತ್ತೇನೆ ಎಂದು ಹೇಳಿದ್ದೇನೋ ಅದನ್ನು ಮಾಡುತ್ತೇನೆ, ಅದು ಶತಸಿದ್ದ. ಆದರೆ ಭತ್ತದ ಬೆಳೆಯಿರಿ ಎಂದು ಹೇಳಲು ಹೋಗಲ್ಲ ಎಂದು ಹೇಳಿದರು.

ಇದೆ ವೇಳೆ ಹುಡಾ ಮಾಜಿ ಅಧ್ಯಕ್ಷ ಕೆ.ಎಂ. ರಾಜೇಗೌಡ, ಮಾಜಿ ಶಾಸಕ ಬಿ.ವಿ. ಕರೀಗೌಡ, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಸುಮುಖ ರಘು, ಒಕ್ಕಲಿಗರ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಇತರರು ಉಪಸ್ಥಿತರಿದ್ದರು.

 

Continue Reading

Trending

error: Content is protected !!