Connect with us

Cultural

ರಂಗಬಳಗದವತಿಯಿಂದ ಅಭಿನಯಿಸಿದ ಚಾವುಂಡರಾಯ ನಾಟಕ ಪ್ರೇಕ್ಷಕರನ್ನು ಮನಸೂರೆಗೊಂಡಿತು

Published

on

ಚನ್ನರಾಯಪಟ್ಟಣ : ತಾಲೂಕಿನ ಶ್ರವಣಬೆಳಗೊಳದಲ್ಲಿ ಸಮಾಜಮುಖಿ ರಂಗಬಳಗದವತಿಯಿಂದ ಅಭಿನಯಿಸಿದ ಚಾವುಂಡರಾಯ ನಾಟಕ ಪ್ರೇಕ್ಷಕರನ್ನು ಮನಸೂರೆಗೊಂಡಿತು.

ನಾಟಕ ಗಂಗ ಅರಸರ ದೊರೆ ಮಾರಸಿಂಹನ ಸಲ್ಲೇಖನ ತೆಗೆದುಕೊಳ್ಳುವ ದೃಶ್ಯಗಳಿಂದ ಆರಂಭವಾಗಿ ನಂತರ ಅವನ ಉತ್ತರಾಧಿಕಾರಿಯ ನೇಮಕದ ವಿಷಯದಲ್ಲಿ ನಡೆಯುವ ರಾಜಕೀಯ ಗುದ್ದಾಟ ದೊಂದಿಗೆ ಆರಂಭವಾಗುತ್ತದೆ.
ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಗೌರವ ಸ್ಮರಣೆಯೊಂದಿಗೆ, ಶ್ರವಣಬೆಳಗೊಳ ದಿಗಂಬರ ಜೈನ ಸಂಘ ಹಾಗೂ ಹಾಸನ ಕನ್ನಡ ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನಾಟಕ ಏರ್ಪಡಿಸಲಾಗಿತ್ತು.

ನಾಟಕದ ಆರಂಭದಲ್ಲಿ ರನ್ನ ಕವಿಯ ಆಗಮನ ಆಗುತ್ತದೆ.
ನಾಟಕದ ಉದ್ದಕ್ಕೂ ಗಂಗ ಅರಸರ ರಾಜನಿಷ್ಠೆಯನ್ನು ಹೊಂದಿರುವ ಚಾವುಂಡರಾಯನ ಪಾತ್ರ ನಾಟಕದ ಪೂರ್ತಿ ಆವರಿಸಿಕೊಳ್ಳುತ್ತದೆ.

ನಾಟಕದ ಪ್ರಥಮದಲ್ಲಿ ಚಾವುಂಡರಾಯ ಹಾಗೂ ಆತನ ತಮ್ಮ ನಾಗವರ್ಮನ ಕತ್ತಿ ವರಸೆ ಹಾಗೂ ಕುಸ್ತಿಯ ಪ್ರದರ್ಶನದಿಂದ ಪ್ರವೇಶವಾಗುತ್ತಾರೆ ನಂತರ ರನ್ನ ಕವಿ ಬಂದು ಚಾವುಂಡರಾಯನ ಆಶ್ರಯ ಪಡೆಯುತ್ತಾರೆ.

ದೊರೆ ಮಾರಸಿಂಹನ ಉತ್ತರಾಧಿಕಾರಿಯಾಗಿ ಆತನ ಹಿರಿಯ ಪುತ್ರ ರಾಚಮಲ್ಲ ಅಧಿಕಾರ ವಹಿಸಿಕೊಳ್ಳಬೇಕೆಂಬುದು ಚಾವುಂಡರಾಯನ ನಿಲುವು ಆಗಿರುತ್ತದೆ.
ಅದಕ್ಕೆ ಪಾಂಚಾಲರಾಜ ಹಾಗೂ ಇತರೆ ಸಾಮಂತರ ವಿರೋಧ ಇರುತ್ತದೆ.
ಇಂತಹ ಸಂದರ್ಭದಲ್ಲಿ ರಾಜಮಲನನ್ನೇ ರಾಜನನ್ನಾಗಿ ಮಾಡಬೇಕೆಂದು ಚಾವುಂಡರಾಯ ಹೋರಾಟ ನಡೆಸುತ್ತಾನೆ. ರಾಜ ದ್ರೋಹ ಎಸಗಿದ ಆರೋಪದ ಮೇಲೆ ರಾಜ ಮಾರಸಿಂಹನ ತಮ್ಮನನ್ನು ಕೂಡ ಕೊಲ್ಲಲಾಗುತ್ತದೆ.
ಕೆಲವು ಸಾಮಂತರು ಚಾವುಂಡರಾಯನನ್ನೇ ರಾಜ್ಯಭಾರ ಮಾಡು ಎಂದು ಹೇಳಿದಾಗ ಅದಕ್ಕೆ ಚಾವುಂಡರಾಯ ನಯವಾಗಿ ತಿರಸ್ಕಾರ ಮಾಡುತ್ತಾನೆ.
ನಾಟಕದ ದ್ವಿತೀಯಾರ್ಧದಲ್ಲಿ ಕಳವಪ್ಪು ಅಂದರೆ ಈಗಿನ ಶ್ರವಣಬೆಳಗೊಳಕ್ಕೆ ಚಾವುಂಡರಾಯ ಕುಟುಂಬ ಸಮೇತ ಆಗಮಿಸಿ ಇಲ್ಲಿಯೇ ನೆಲೆಯೂರಿ ಬಾಹುಬಲಿ ಮೂರ್ತಿಯ ಸ್ಥಾಪನೆಗೆ ಮುಂದಾಗುತ್ತಾನೆ.

ನಾಟಕದಲ್ಲಿ ರನ್ನ ಕವಿಯ ಪದ್ಯಗಳು ರನ್ನ ಹಾಗೂ ಚಾವುಂಡರಾಯನ ಕವಿತ್ವವನ್ನ ತೋರಿಸಲಾಗಿದೆ. ಜೈನ ಧರ್ಮದ ಸಲ್ಲೇಖನ ವ್ರತ, ಜೈನ ಧರ್ಮದ ತತ್ವಗಳು ಹಾಗೂ ಮೋಕ್ಷ ಸಾಧನೆಯನ್ನು ಕೂಡ ವಿವರಿಸಲಾಗಿದೆ.
ನಾಟಕದ ಮಧ್ಯದಲ್ಲಿ ಹಾಸ್ಯದ ಮೇಳ ತರಲಾಗುತ್ತದೆ ಆಗ ಚಾವುಂಡರಾಯ ಪಾಂಚಾಲ ರಾಜ ವೇಷಮರಸಿ ಹಾಸ್ಯಗಾರನ ಪಾತ್ರ ಧರಿಸಿ ಬಂದಿರುವುದನ್ನು ಕಂಡುಹಿಡಿದು ಪಾಂಚಾಲ ರಾಜನನ್ನು ತಡೆಯುತ್ತಾನೆ.
ಆಗಲೂ ಕೂಡ ಪಾಂಚಾಲರಾಜ ಚಾವುಂಡರಾಯ ನೀನೇ ರಾಜ್ಯಭಾರ ವಹಿಸಿಕೊಳ್ಳುವಂತೆ ಕರೆ ನೀಡುತ್ತಾನೆ, ನಿನ್ನ ತಮ್ಮ ನಾಗವರ್ಮನನ್ನು ರಾಜನೇ ಕೊಲ್ಲಿಸಿರುವುದಾಗಿಯೂ ತಿಳಿಸುತ್ತಾನೆ. ಆಗಲೂ ಕೂಡ ಚಾವುಂಡರಾಯ ರಾಜ್ಯಭಾರ ವಹಿಸಿಕೊಳ್ಳುವುದನ್ನು ನಿರಾಕರಿಸುವುದನ್ನು ಕಾಣಬಹುದು.

ಸಮಾಜಮುಖಿ ರಂಗಬಳಗದ ನುರಿತ ಕಲಾವಿದರು ನಾಟಕವನ್ನು ಮನೋಜ್ಞವಾಗಿ ಅಭಿನಯಿಸಿದರು ಪ್ರೇಕ್ಷಕರು ಕೂಡ ಶಾಂತ ರೀತಿಯಲ್ಲಿ ಕುಳಿತು ನಾಟಕವನ್ನು ವೀಕ್ಷಿಸಿದರು.
ನಾಟಕವನ್ನು ಜಯರಾಮ್ ರಾಯಪುರ ರಚಿಸಿದರೆ ಹುಲಗಪ್ಪ ಕಟ್ಟಿಮನಿ ವಿನ್ಯಾಸ ಹಾಗೂ ನಿರ್ದೇಶನವನ್ನು ಮಾಡಿದ್ದಾರೆ.

ಯುಗಳ ಮುನಿಗಳಾದ ಅಮೋಘ ಕೀರ್ತಿ ಮಹಾರಾಜರು, ಅಮರ ಕೀರ್ತಿ ಮಹಾರಾಜರು, ಅಭಿನವ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು, ಕಂಬದ ಭಾನು ಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನಾಟಕವನ್ನು ವೀಕ್ಷಿಸಿದರು.

ವರದಿ : ದಯಾನಂದ್ ಶೆಟ್ಟಿಹಳ್ಳಿ.

 

Continue Reading
Click to comment

Leave a Reply

Your email address will not be published. Required fields are marked *

Cultural

ಶ್ರೀರಾಮನ ಚರಿತ್ರೆ ವಿಶ್ವಕ್ಕೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ — ಶಾಸಕ ದರ್ಶನ್ ಧ್ರುವನಾರಾಯಣ್

Published

on

ನಂಜನಗೂಡು ನ.15

ಶ್ರೀ ರಾಮನ ಚರಿತ್ರೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ನಾಯಕ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳು ಪ್ರಜಾಪ್ರಭುತ್ವಕ್ಕೆ ಬಹು ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಪಡೆದುಕೊಳ್ಳುವ ಮೂಲಕ ಆರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುತ್ತೆನೆ ಎಂದರು.
ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಜಾತಿಭೇದ ಮಾಡಬೇಡಿ ಸಮಾಜಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ವಾಲ್ಮೀಕಿ ಸಮುದಾಯ ಸಾರಬೇಕು.ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಗ್ರಾಮದ ಎಲ್ಲ ನಾಯಕ ಸಮಾಜದವರನ್ನು ಒಟ್ಟಾಗಿ ಕರೆದೊಯ್ಯುವ ಜವಾಬ್ದಾರಿ ಇರಬೇಕು.ಶ್ರೀ ಮಹರ್ಷಿ ವಾಲ್ಮೀಕಿ ಅವರ ರಾಮಾಯಣದಲ್ಲಿ ಹೆಚ್ಚು ರೂಪಕ ಅಲಂಕಾರ ಬಳಕೆಯಾಗಿರುವುದ್ದರಿಂದ ಕಾಳಿದಾಸ ಕವಿ ಮಹರ್ಷಿ ವಾಲ್ಮೀಕಿ ಅವರನ್ನು ಕವಿಕುಲ ಚಕ್ರವರ್ತಿ ಎಂಬುದಾಗಿಯೋ ವರ್ಣಿಸಿದ್ದಾರೆ ಅಲ್ಲದೇ ಜಗತ್ತಿನ ಶ್ರೇಷ್ಠ ವಿಮಾರ್ಶಕ ಥಾಮಸ್ ಪ್ರಕಾರ ವಾಲ್ಮೀಕಿ ರಾಮಾಯಣ ಜಗತ್ತಿನ ಶ್ರೇಷ್ಠ ಕಾವ್ಯ ಸಂಪತ್ತು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀ ಕಂಠನಾಯಕ,ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ನಾಯಕ ಸಂಘದ ತಾಲ್ಲೂಕು ಅದ್ಯಕ್ಷ ಬಂಗಾರನಾಯಕ, ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ ದೇಬೂರು ಆಶೋಕ್,ಗ್ರಾ ಪಂ ಅದ್ಯಕ್ಷೆ ತಾಯಮ್ಮ,
ದೊರೆಸ್ವಾಮಿನಾಯಕ,ಅಭಿನಂದನ್ ಪಾಟೀಲ್,ಗ್ರಾ ಪಂ ಸದಸ್ಯದೇವನಾಯಕ,ನಾಗನಾಯ್ಕ,ಶ್ರೀಕಂಠಸ್ವಾಮಿ,ಶಿವರಾಜು,ಪ್ರಕಾಶ್,ನಂಜುಂಡಸ್ವಾಮಿ, ಸಿದ್ದು,ಮಹೇಶ್, ಮಹೇಂದ್ರ, ಹಾಗೂ ಕಿಚ್ಚಿನ ಅಭಿಮಾನಿ ಬಳಗದವರು ಹಾಜರಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading

Cultural

ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ

Published

on

ಆಲೂರು : ನೂರಾರು ವರ್ಷಗಳ ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.ತಾಲ್ಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಗಿ ವಿವಿಧ ಅಭಿಷೇಕ ಸೇರಿದಂತೆ ಅಲಂಕಾರ ಮಹಾ ಮಂಗಳಾರತಿ ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.

ಆಲೂರು ತಾಲೂಕು ಸೇರಿದಂತೆ ಹಲವೆಡೆಗಳಿಂದ ನೂರಾರು ಭಕ್ತರ ದಂಡು ಅಗಮಿಸಿ ಪೂಜಾ ಕಾರ‍್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.ವಿಶೇಷ ಎಂದರೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಕೋರಿಕೆಗಾಗಿ ಹರಕೆ ಹೊರುತ್ತಿದ್ದು. ಕೋರಿಕೆಗಳು ಈಡೇರಿದ ನಂತರ ಭಕ್ತರು ಪ್ರತಿ ಸೋಮವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಾಧಿಗಳೇ ಸ್ವಯಂ ಪ್ರೇರಿತರಾಗಿ ಹಮ್ಮಿಕೊಳ್ಳುತ್ತ ಬಂದಿದ್ದಾರೆ ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಈರಣ್ಣಯ್ಯ ತಿಳಿಸಿದ್ದಾರೆ.

Continue Reading

Cultural

ಬ್ರಹ್ಮ ಕುಮಾರೀಸ್ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ರಕ್ಷಾಬಂಧನ

Published

on

ಮಂಡ್ಯ: ನಗರದ ಬನ್ನೂರು ರಸ್ತೆಯಲ್ಲಿರುವ ಬ್ರಹ್ಮ ಕುಮಾರೀಸ್ ಈಶ್ವರಿಯ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ಸೋಮವಾರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು .ಪತ್ರಕರ್ತರಿಗೆ ರಾಕಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಬಿ.ಕೆ.ಶ್ವೇತ ಚಾಲನೆ ನೀಡಿದರು.ನಂತರ ಬಿ.ಕೆ.ಶಾರದಾ ಅವರು ಮಾತನಾಡಿ, ನನ್ನ ಕರ್ಮ ನನ್ನನ್ನು ರಕ್ಷಣೆ ಮಾಡುತ್ತದೆ. ಪರಮಾತ್ಮನು ರಕ್ಷಿಸುತ್ತಾನೆ ಎಂದರು.ಸಮಾಜದಲ್ಲಿ ಕಾಮ, ಕ್ರೋಧ, ಮದ, ಮತ್ಸರಗಳು ಅತಿಯಾಗಿದೆ. ಹಾಗಾಗಿ ಪಂಚಕರ್ಮಗಳಿಂದ ನಮಗೆ ರಕ್ಷಣೆ ಬೇಕಿದೆ ಎಂದು ತಿಳಿಸಿದರು.

ಎಲ್ಲಾ ಆತ್ಮಗಳು ಒಳ್ಳೆಯ ಆತ್ಮಗಳಾಗಿದೆ. ಆದರೆ ಆತ್ಮದಲ್ಲಿನ ನಕರಾತ್ಮಕ ಭಾವನೆ ಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆ ಶಕ್ತಿಯನ್ನು ಪಡೆದುಕೊಳ್ಳಬೇಕು ಎಂದರು. ವಿದ್ಯಾದೇವತೆ ಸರಸ್ವತಿಗೆ ಪರಮಾತ್ಮನ ಜ್ಞಾನವಿದೆ. ಹಾಗಾಗಿ ಆಕೆಯನ್ನು ವಿದ್ಯಾದೇವಿ ಎಂದು ಪೂಜಿಸುತ್ತೇವೆ ಎಂದು ತಿಳಿಸಿದ ಅವರು, ಆಧ್ಯಾತ್ಮಿಕ ಜ್ಞಾನವಿಲ್ಲದೆ ನಾವು ಏನನ್ನು ಸಾಧಿಸಲು ಆಗುವುದಿಲ್ಲ. ಈ ಜ್ಞಾನವಿದ್ದಲ್ಲಿ ವಿಕಾರಗಳಿಂದ ಮುಕ್ತಿ ಪಡೆಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಬಿಕೆ ಗೀತಾಂಜಲಿ, ಬಿಕೆ ಯಶೋಧ, ಬಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.

Continue Reading

Trending

error: Content is protected !!