Connect with us

Chikmagalur

ವಿಶ್ವಕ್ಕೆ ಉತ್ತಮ ಸಂದೇಶ ಸಾರಿದವರು: ಶ್ರೀ ಯೋಗಿ ನಾರೇಯಣ ಯತೀಂದ್ರರು

Published

on

ಚಿಕ್ಕಮಗಳೂರು: ಮಾ. ೧೪: ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ಗ್ರೇಡ್- ೨ ಉಪತಹಸೀಲ್ದಾರ್ ರಾಮ್ ರಾವ್ ದೇಸಾಯ್ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಯೋಗಿನಾರೇಯಣ ಯತ್ರೀಂದ್ರರ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು .

ಜಾತಿ-ಮತ ಕುಲಗೋತ್ರಗಳ ವರ್ಣಭೇದವನ್ನು ಖಂಡಿಸುತ್ತಾ ದೀನ-ದಲಿತರ-ಶೋಷಿತರ ಉದ್ಧಾರಕ್ಕಾಗಿ ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶ ಗುಣಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಜಿಗಣೇಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಶ್ರೀನಿವಾಸ. ಪಾ. ನಾಯ್ಡು ಉಪನ್ಯಾಸ ನೀಡಿ ’ಕೈವಾರ ತಾತಯ್ಯ ಎಂದೇ ಪ್ರಸಿದ್ಧಿಯಾಗಿರುವ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರು ಪದ್ಯ, ಕೀರ್ತನೆ ಹಾಗೂ ಸ್ತೋತ್ರಗಳ ಮೂಲಕ ಸಾಹಿತ್ಯ ರೂಪದಲ್ಲಿ ಜನತೆಗೆ ತಿಳಿಸಿಕೊಟ್ಟ ಮಹಾನ್ ಯೋಗಿ. ಪ್ರಪಂಚದಲ್ಲಿಯೇ ಮುಂದೊಂದು ದಿನ ನಡೆಯಬಹುದಾದ ಪಾಪ ಕೃತ್ಯಗಳ ಪ್ರಾಬಲ್ಯ, ಪ್ರಳಯ ಸಂಪತ್ತಿನ ವಿನಾಶ, ಘೋರ ವೈಪರಿತ್ಯಗಳು, ಭ್ರಷ್ಟಾಚಾರ, ದೌರ್ಜನ್ಯ, ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಧಾರ್ಮಿಕವಾಗಿ ನಡೆಯುವ ಅನ್ಯಾಯದ ಘಟನೆಗಳನ್ನು ಶ್ರೀ ಯೋಗಿ ನಾರೇಯಣ ಯತೀಂದ್ರ ಅವರು ಕಾಲಜ್ಞಾನದಲ್ಲಿ ತಿಳಿಸಿದ್ದಾರೆ ಎಂದರು.

ಅನೇಕ ಪವಾಡಗಳನ್ನು ಮಾಡಿದ ಕೈವಾರ ತಾತಯ್ಯನವರು ಸಮಾಜ ಸುಧಾರಕರಾಗಿದ್ದು, ಅವರು ತೋರಿದ ಮಾರ್ಗದಲ್ಲಿ ಪ್ರತಿಯೊಬ್ಬರೂ ಸಾಗಬೇಕಿದೆ. ಅವರು ರಚಿಸಿದ ಕಾಲಜ್ಞಾನದಲ್ಲಿ ಜಗತ್ತು ಅರಿಯಬೇಕಾದ ಅನೇಕ ಅಂಶಗಳಿವೆ. ಅವರ ತತ್ವ, ತೋರಿದ ಮಾರ್ಗದರ್ಶನ ಪಾಲಿಸಿದರೆ ಎಲ್ಲೆಡೆ ಶಾಂತಿ ನೆಲೆಸುವುದರಲ್ಲಿ ಸಂಶಯವಿಲ್ಲ. ತಮ್ಮ ಜೀವಮಾನದುದ್ದಕ್ಕೂ ಆಧ್ಯಾತ್ಮಿಕ ಬೋಧನೆ ಮತ್ತು ಕೀರ್ತನೆಗಳಿಂದ ಉತ್ತಮ ಬದುಕಿನ ಅರ್ಥಗಳನ್ನು ತಿಳಿಸುತ್ತಿದ್ದ ಯೋಗಿ ನಾರೇಯಣರು ಜಗತ್ತಿನ ಭವಿಷ್ಯವಾಣಿ ಎಂದೇ ಕರೆಯಲ್ಪಡುವ ತಾಳೆ ಗರಿಗಳ ಲಿಪಿ ಬದ್ದ ಸಂಗ್ರಹವನ್ನು ಕಾಲಜ್ಞಾನ ಗ್ರಂಥವಾಗಿ ರಚಿಸಿ, ಜಗತ್ತಿನ ಗಮನ ಸೆಳೆದ ಮೇರು ಸಂತರಾಗಿದ್ದಾರೆ ಎಂದು ಹೇಳಿದರು.

ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ತಾತಯ್ಯನವರು ಜನ್ಮತಾಳಿದ್ದು ನಮ್ಮೆಲ್ಲರ ಪುಣ್ಯ. ಅಂತಹ ಮಹಾನುಭಾವರ ಜಯಂತ್ಯೋತ್ಸವವನ್ನು ಜಾತಿ, ಮತ, ಭೇದವಿಲ್ಲದೆ ಎಲ್ಲರೂ ಅದ್ದೂರಿಯಾಗಿ ಆಚರಿಸುವಂತಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಆನಂದ್ ಶೆಟ್ಟಿ ಮಾತನಾಡಿ ಶ್ರೀ ಯೋಗಿ ನಾರಾಯಣ ಅವರು ಜನರಿಗೆ ಅವರದೇ ಆದ ಶೈಲಿಯಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಿದರು. ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರದೆ ಸಮಾಜದ ಸಮಗ್ರ ಅಭಿವೃದ್ಧಿ ಬಯಸಿದವರು. ಶ್ರೀ ಯೋಗಿ ನಾರಾಯಣ ಅವರು ವಚನಗಳ ಮೂಲಕ ಸರಳ ರೀತಿಯಲ್ಲಿ ಅವರ ವಿಚಾರ ಮತ್ತು ತತ್ವಾದರ್ಶಗಳನ್ನು ಎಲ್ಲರಿಗೂ ಮನ ಮುಟ್ಟುವಂತೆ ತಿಳಿಸಿದ್ದಾರೆ. ಹಾಗೇ ನಾವು ಕೂಡಾ ಅವರ ಇತಿಹಾಸ ಅವರ ವಚನ ಸಂದೇಶ, ಬೋಧನೆ ಹಾಗೂ ಅವರ ತತ್ವವಾದರ್ಶಗಳನ್ನು ಮೈಗೂಡಿಸಿಕೊಂಡು ನಮ್ಮ ಜೀವನದಲ್ಲಿ ಅಳಡಿಸಿಕೊಳ್ಳೋಣ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಸಮಿತಿಯ ಸದಸ್ಯ ಲಕ್ಷ್ಮಣ್, ಬಲಿಜ ಸಮಾಜದ ಹಿರಿಯ ಮುಖಂಡ ಮರಿ ಶೆಟ್ಟರು, ಬಲಿಜಾ ಸಮಾಜದ ಪ್ರಧಾನ ಕಾರ್ಯದರ್ಶಿ ಕುಮಾರ್, ಜಿಲ್ಲಾ ಬಲಿಜ ಸಮಾಜದ ಖಜಾಂಚಿ ಮಂಜುನಾಥ್, ಚಿಕ್ಕಮಗಳೂರು ತಾಲ್ಲೂಕು ಬಲಿಜ ಸಮಾಜದ ಖಜಾಂಚಿ ವಾಸುದೇವ್ ಹಾಗೂ ಬಲಿಜ ಸಮಾಜದ ಹಲವಾರು ಮುಖಂಡರು ಉಪಸ್ಥಿತರಿದ್ದರು.

Continue Reading

Chikmagalur

ಜನಸಂಪರ್ಕ ಸಭೆ: ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಬಗ್ಗೆ ಸಚಿವರ ಭರವಸೆ

Published

on

ಚಿಕ್ಕಮಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ಆಯೋಜಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ರಾಜಧಾನಿಗೆ ಬರುವ ಬದಲು ಆಯಾ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದು, ಅವೆಲ್ಲಕ್ಕೂ ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಂಡು ಪರಿಹಾರ ಒದಗಿಸಲಾಗುವುದು ಎಂದರು.

ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬಳಿಗೆ ಸರ್ಕಾರವೇ ತೆರಳಿ ಜನರ ಸಮಸ್ಯೆಗಳನ್ನು ಅರಿತು ಬಗೆಹರಿಸಬೇಕು ಎಂಬ ಪರಿಕಲ್ಪನೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಸಭೆ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈಗಾಗಲೇ 4 ರಿಂದ 6 ಬಾರಿ ಜನಸಂಪರ್ಕ ಸಭೆಗಳನ್ನು ಯಶಸ್ವಿಯಾಗಿ ನಡೆಸಿರುವ ಕೀರ್ತಿ ನಮ್ಮ ಉಸ್ತುವಾರಿ ಸಚಿವರಿಗೆ ಸಲ್ಲುತ್ತದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ರಾಜ್ಯದಲ್ಲೇ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸುಮಾರು 2,012 ಕೋಟಿ ರೂ. ಈ ಐದು ಗ್ಯಾರಂಟಿ ಯೋಜನೆಗಳಿಗೆ ಈ ಜಿಲ್ಲೆಯಲ್ಲಿ ವಿನಿಯೋಗವಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ಕಳೆದ ಎರಡೂವರೆ ವರ್ಷದಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಅದರಲ್ಲಿ ಒಟ್ಟು ನಾವು ೮೨೯ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವುಗಳಲ್ಲಿ 496 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಆ ಪೈಕಿ ಶೇ.27 ರಷ್ಟು ಅರ್ಜಿಗಳನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ಜನತಾದರ್ಶನ ಕಾರ್ಯಕ್ರಮದಲ್ಲೂ ಈ ಜಿಲ್ಲೆಯ 49 ಅರ್ಜಿಗಳು ಸ್ವೀಕೃತಿಯಾಗಿವೆ. ಉಳಿದಂತೆ ಶಾಸಕರುಗಳು ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನತಾ ದರ್ಶನ ಮತ್ತು ಸಮ್ಮೇಳನಗಳನ್ನು ನಡೆಸಿದ್ದಾರೆ. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಗ್ರಾ.ಪಂ. ಮಟ್ಟದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಳೆದ ಒಂದು ವರ್ಷದಲ್ಲಿ ನಮ್ಮ ಜಿಲ್ಲೆಯಲ್ಲಿ 8,92,290 ಅರ್ಜಿಗಳು ಸ್ವೀಕೃತಿಯಾಗಿವೆ. ಸುಮಾರು ಶೇ.10 ರಿಂದ 12 ರಷ್ಟು ಅರ್ಜಿಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಇದಕ್ಕೆ ತಂತ್ರಾಂಶದಲ್ಲಿನ ಸಮಸ್ಯೆಗಳು ಕಾರಣವಾಗಿದೆ. ಅದನ್ನು ಸರಿಪಡಿಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮಲ್ಲಿ 94 ಸಾವಿರ ಪೌತಿ ಖಾತೆಗಳಿದ್ದವು. ಅವುಗಳಲ್ಲಿ ಇದುವರೆಗೆ 22 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಇತ್ಯರ್ಥಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಇದಲ್ಲದೆ ತಂತ್ರಾಂಶಗಳನ್ನು ಸದ್ಭಳಕೆ ಮಾಡಿಕೊಂಡು ಪ್ರತಿಯೊಂದು ಅರ್ಜಿಯನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಲ್ಲಿ ಶೇ.58 ರಷ್ಟು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಅವುಗಳಲ್ಲಿ ಪೋಡಿ ಪ್ರಕರಣಗಳು, ದಾರಿಗೆ ಸಂಬಂಧಿಸಿದ ಅರ್ಜಿಗಳು, ಆರ್‌ಟಿಸಿ ಸರಿಪಡಿಸುವಿಕೆ ಪ್ರಕರಣಗಳು ಪ್ರಮುಖವಾದವು ಎಂದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ, ಶಾಸಕ ಜಿ.ಹೆಚ್.ಶ್ರೀನಿವಾಸ್, ಮೆಸ್ಕಾಂ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಹರೀಶ್ ಕುಮಾರ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

Continue Reading

Chikmagalur

‘ಮಾದರಿ ಗ್ರಾಮ’ ಪಿ.ಹೊಸಹಳ್ಳಿಯಲ್ಲಿ 50 ಲಕ್ಷ ವೆಚ್ಚದ ವಿದ್ಯುತ್ ಉನ್ನತೀಕರಣಕ್ಕೆ ಚಾಲನೆ

Published

on

ಶ್ರೀರಂಗಪಟ್ಟಣ : ತಾಲೂಕಿನ ವ್ಯಾಪ್ತಿಯಲ್ಲಿ ‘ಮಾದರಿ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಿ.ಹೊಸಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ವಿದ್ಯುತ್ ಮೂಲ ಉನ್ನತೀಕರಣಕ್ಕೆ ಚಾಲನೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭೂಮಿಪೂಜೆ ಮೂಲಕ ಚಾಲನೆ ನೀಡಿದರು.

ಗ್ರಾಮವನ್ನು ಉನ್ನತೀಕರಿಸಿ, ಉನ್ನತೀಕರಿಸಿದ ಗ್ರಾಮವನ್ನಾಗಿಸಲು ಈ ಗ್ರಾಮದ ಜೊತೆಗೆ ಐದು ಗ್ರಾಮಗಳ ಮೂಲಭೂತ ಸೌಲಭ್ಯಗಳನ್ನು ಉನ್ನತೀಕರಿಸುತ್ತಿರುವುದಾಗಿ ಅವರು ತಿಳಿಸಿದರು.

ಪ್ರತೀ ಗ್ರಾಮಗಳಿಗೆ ತಲಾ 50 ಲಕ್ಷ ರೂ.ಗಳಂತೆ ತುರ್ತಾಗಿ ಅವಶ್ಯಕತೆಯಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದ ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಈ ಯೋಜನೆಯಲ್ಲಿ ಶಿಥಿಲವಾಗಿರುವ ಶಿಥಿಲವಾಗಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸುವುದು, ಅಗತ್ಯವಿರುವ ಕಡೆಗೆ ಹೊಸ ಕಂಬಗಳನ್ನು ಹಾಗೂ ಪರಿವರ್ತಕಗಳನ್ನು ಅಳವಡಿಸಲು, ವೋಲ್ಟೇಜ್ ಗುಣಮಟ್ಟವನ್ನು ಹೆಚ್ಚಿಸುವುದು, ವಿದ್ಯುತ್ ಅಡಚಣೆಯನ್ನು ಆದಷ್ಟು ಕನಿಷ್ಠ ಮಟ್ಟಕ್ಕೆ ಇಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಜೊತೆಗೆ ಶ್ರೀರಂಗಪಟ್ಟಣ ವ್ಯಾಪ್ತಿಯ ರೈತರಿಗೆ ಉತ್ಕ್ರುಷ್ಟ ಗುಣಮಟ್ಟದ ಹಾಗೂ ಅಡಚಣೆ ರಹಿತ 3 – ಫೇಸ್ ವಿದ್ಯುತ್ ಸರಬರಾಜು ನೀಡಲು ಅನುಕೂಲವಾಗುವಂತೆ ಒಟ್ಟು 55 ಕೋಟಿ ವೆಚ್ಚದಲ್ಲಿ ತಲಾ 2 ಪಂಪ್ ಸೆಟ್ ಗಳಿಗೆ ಪ್ರತ್ಯೇಕ 25kva ಅಳವಡಿಸುವ ಪ್ರಗತಿಯಲ್ಲಿರುವುದಾಗಿ ತಿಳಿಸಿದರು.

ಈ ವೇಳೆ ಚೆಸ್ಕಾಂ ಎಇಇ ಮಂಜುನಾಥ ಪ್ರಸಾದ್, ಗುತ್ತಿಗೆದಾರ ಐ ಕಾಂ ಇನ್ಫ್ರಾ ಪ್ರೈ ಲಿ. ನ ಅರುಣ್ ಕುಮಾರ್, ಗ್ರಾ.ಪಂ.ಅಧ್ಯಕ್ಷ ಚಲುಚರಾಜು, ಪಿಡಿಓ ಶಶಿಕಲಾ, ಸದಸ್ಯ ಸಾಗರ್, ಮುಖಂಡರಾದ ಪುಟ್ಟರಾಮಣ್ಣ, ಕೃಷ್ಣಮೂರ್ತಿ ಸೇರಿದಂತೆ ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

Continue Reading

Chikmagalur

ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ

Published

on

ಚಿಕ್ಕಮಗಳೂರು : ಜಿಲ್ಲೆ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನು ಕಳೆದ ರಾತ್ರಿ ಹತ್ಯೆ ಮಾಡಲಾಗಿದೆ.
ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.
ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಂಜಯ್ ದಾಖಲಾಗಿದ್ದು, ಮಿಧುನ್ ವರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ನಲರಾಯಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ದತ್ತ ಜಯಂತಿ ಮುಗಿದ ಹಿನ್ನೆಲೆ ಸಖರಾಯಪಟ್ಟಣ ಬಸ್ ನಿಲ್ದಾಣ ಬಳಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮ್ಮೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ದುಷ್ಕರ್ಮಿಗಳು ಗಣೇಶ್ ಗೌಡ ಎಂಬುವವರನ್ನು ಹತ್ಯೆ ಮಾಡಿದ್ದಾರೆ.
ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗಲಾಟೆಯಲ್ಲಿ ಭಾಗಿಯಾದ ಒಬ್ಬರು ಜಿಲ್ಲಾಪತ್ರೆಗೆ ದಾಖಲಾಗಿದ್ದಾರೆ.

Continue Reading

Trending

error: Content is protected !!