Connect with us

Mandya

ಜಿಲ್ಲೆಯಲ್ಲಿ ಎಲ್ಲೆಡೆ ಶ್ರೀರಾಮ ಜಪ, ಮೊಳಗಿದ ಜೈ ಶ್ರೀರಾಮ್‌ ಘೋಷಣೆ

Published

on

ಶ್ರೀರಾಮ ಮಂದಿರಗಳಲ್ಲಿ ಲಡ್ಡು, ಮಜ್ಜಿಗೆ, ಪಾನಕ ಸವಿದ ಭಕ್ತ ಸಮೂಹ

ಮಂಡ್ಯ: ರಾಮನೂರಿನ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪಾನಕ, ಮಜ್ಜಿಗೆ, ಕೋಸಂಬರಿ, ಲಡ್ಡು ವಿತರಣೆ ಹಾಗೂ ಅನ್ನಸಂತರ್ಪಣೆ ಮಾಡಿಸುವ ಮೂಲಕ ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಪ್ರತಿ ಗ್ರಾಮಗಳಲ್ಲಿಯೂ ರಾಮಜಪ ನಡೆಸಿ ಭಕ್ತಿ ಮೆರೆಯಲಾಯಿತು.

 

ಗ್ರಾಮಗಳಲ್ಲಿನ ರಂಗ ಮಂದಿರ ಮತ್ತು ದೇವಾಲಯಗಳ ಆವರಣದಲ್ಲಿ ಶಾಮಿಯಾನ ಹಾಕಿಕೊಂಡು ಅದರೊಳಗೆ ಶ್ರೀರಾಮನ ಭಾವಚಿತ್ರ ಇರಿಸಿ ಪೂಜೆ ನಡೆಸಲಾಯಿತು. ರಾಮನ ಕಟೌಟ್‌ ಅನ್ನು ನಿಲ್ಲಿಸುವ ಮೂಲಕ ಪೂಜೆ ಮಾಡಲಾಯಿತು. ಸ್ಥಳದಲ್ಲಿಯೇ ಅನ್ನಸಂರ್ಪಣೆಗೆಂದು ಯುವ ಸಮೂಹವೇ ನೆರೆದು ಅಣಿ ಮಾಡುತ್ತಿರುವುದು ಶ್ರೀರಾಮನ ಭಕ್ತಿಯನ್ನು ಇಮ್ಮಡಿಗೊಳಿಸಿತು. ನಂತರ ಅನ್ನಸಂತರ್ಪಣೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಶ್ರೀರಾಮನ ಕೃಪೆಗೆ ಪಾತ್ರರಾದರು.

ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿಯೇ ಭಾನುವಾರದಿಂದಲೇ ಪೂಜೆಗೆ ತಯಾರಿ ನಡೆಸಿದ್ದರು, ನಗರದ ಲೇಬರ್ ಕಾಲೊನಿಯಲ್ಲಿ ಅಯೋಧ್ಯೆಯ ರಾಮಲಲ್ಲಾ ಮೂರ್ತಿಯನ್ನು ಕೆತ್ತನೆ ಮಾಡಿರುವ ಮೈಸೂರಿನ ಅರುಣ್ ಯೋಗಿರಾಜ್ ಅವರಿಂದಲೇ ಕೆತ್ತನೆಯಾಗಿರುವ ಶ್ರೀ ಸೀತಾ ರಾಮ, ಲಕ್ಷ್ಮಣ, ಆಂಜನೇಯಸ್ವಾಮಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ರಾಮಂದಿರ ಲೋಕಾರ್ಪಣೆ ಮಾಡಲಾಯಿತು.

ನೆಹರು ನಗರದ ಶ್ರೀರಾಮ ಮಂದಿರದ ಆವರಣದಲ್ಲಿ ನಿರ್ಮಿಸಿರುವ 18 ಅಡಿ ಎತ್ತರದ ಶ್ರೀ ಅಭಯ ಆಂಜನೇಯ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಯಿತು. ತಾಲೂಕಿನ ಮಾರಗೌಡನಹಳ್ಳಿ ಗ್ರಾಮದಲ್ಲಿ ತಿರುಮಲ ದೇವಸ್ಥಾನ ಉದ್ಘಾಟನೆ ಮಾಡಲಾಯಿತು. ಅದೇ ರೀತಿ ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ಶ್ರೀ ಮಂದಿರಗಳನ್ನು ಉದ್ಘಾಟಿಸಲಾಯಿತು.
ಶ್ರೀರಾಮ ಹಾಗೂ ವಿಷ್ಣು ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಕೋಸಂಬರಿ, ಬೆಲ್ಲದ ಪಾನಕ, ಮಜ್ಜಿಗೆ ಹಾಗೂ ಲಡ್ಡು ವಿತರಣೆ ಭಕ್ತರ ಗಮನ ಸೆಳೆಯಿತು.

ನಗರದ ಪೇಟೆಬೀದಿಯಲ್ಲಿರುವ ಶ್ರೀರಾಮ ಸಭಾ ವತಿಯಿಂದ ಶ್ರೀರಾಮ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗಿನಿಂದಲೇ ಶ್ರೀ ಕೋದಂಡರಾಮನಿಗೆ ವಿಶೇಷ ಅಭಿಷೇಕ, ಅಲಂಕಾರ, ಪೂಜೆಗಳು ನಡೆದವು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಿತು. ಬಳಿಕ ಭಕ್ತಾದಿಗಳಿಗೆ ವಿಶೇಷ ಪ್ರಸಾದ ವಿತರಿಸಲಾಯಿತು.

ಗಾಂಧಿ ನಗರದಲ್ಲಿರುವ ಶ್ರೀರಾಮ ದೇವಸ್ಥಾನ ಮಂಡಳಿ ವತಿಯಿಂದ ರಾಮೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ದೇವರಿಗೆ ವಿಶೇಷ ಪೂಜೆ, ಹೋಮ ಹವನಗಳನ್ನು ನಡೆಸಿ ಸಾರ್ವಜನಿಕರಿಗೆ ಪಾನಕ ಮಜ್ಜಿಗೆಯನ್ನು ವಿತರಿಸಲಾಯಿತು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ವಸತಿಗೃಹದ ಆವರಣದಲ್ಲಿರುವ ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.

ನಗರದ ಬನ್ನೂರು ರಸ್ತೆಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ನಿನ್ನೆಯಿಂದಲೇ ಹೋಮ, ಹವನಗಳನ್ನು ನಡೆಸಲಾಯಿತು. ಬಳಿಕ ವಿವಿಧ ಜಾನಪದ ಕಲಾತಂಡಗಳೊಂದಿಗೆ ದೇವರ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳು ಶ್ರೀರಾಮ, ಸೀತೆ, ಲಕ್ಷ್ಮಣ ಹಾಗೂ ಆಂಜನೇಯ ವೇಷ ಧರಿಸಿ ಮಕ್ಕಳು ಗಮನ ಸೆಳೆದರು. ಕೆಇಬಿ ಕ್ವಾಟ್ರಸ್‌ನಲ್ಲಿ ಶ್ರೀರಾಮ ಸೇವಾ ಭಕ್ತರು ಶ್ರೀರಾಮ ಭಕ್ತಿ ಗೀತೆಗೆ ನೃತ್ಯ ಮಾಡಿದರು.

ಬಂದೀಗೌಡ ಬಡಾವಣೆ, ಕಲ್ಲಹಳ್ಳಿ ಶ್ರೀ ಆಂಜನೇಯಸ್ವಾಮಿ ದೇವಾಲಯ, ಬಿಸಿಲುಮಾರಮ್ಮನ ದೇವಾಲಯ, ಸುಭಾಷ್‌ ನಗರ 3ನೇ ಕ್ರಾಸ್, ಗ್ರಂಥಾಲಯ ಮುಂಭಾಗ ಸೇರಿದಂತೆ ಕೆಲವು ಟೀ ಅಂಗಡಿಗಳಲ್ಲಿ ಶ್ರೀರಾಮನ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ ಬಂದಂತಹ ಭಕ್ತರಿಗೆ ಪಾನಕ, ಮಜ್ಜಿಗೆ ವಿತರಿಸಲಾಯಿತು. ನಗರದ ವಿ.ವಿ.ರಸ್ತೆ, ಆಟೋ ನಿಲ್ದಾಣಗಳು, ಸಿಲ್ವರ್ ಜ್ಯೂಬಿಲಿ ಉದ್ಯಾನ, ಗುತ್ತಲು ರಸ್ತೆ, ಉದಯಗಿರಿ ಶ್ರೀರಾಮನ ಪೂಜೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು.

ಗ್ರಾಮೀಣ ಭಾಗದಲ್ಲಿಯೂ ಅಂದರೆ ತೂಬಿನಕೆರೆ, ಕಾಳೇನಹಳ್ಳಿ, ರಾಗಿಮುದ್ದನಹಳ್ಳಿ, ಎಲೆಚಾಕನಹಳ್ಳಿ, ಪಣಕನಹಳ್ಳಿ, ಸಿದ್ದಯ್ಯನಕೊಪ್ಪಲು, ಯಲಿಯೂರು, ಅವ್ವೇರಹಳ್ಳಿ, ಬೂದನೂರು, ಸೂನಗಹಳ್ಳಿ, ಮಂಗಲ, ಹೆಬ್ಬಕವಾಡಿ, ಕೀಲಾರ, ಉಮ್ಮಡಹಳ್ಳಿ, ಆಲಕೆರೆ, ಹೊಳಲು, ಶಿವಳ್ಳಿ, ದುದ್ದ, ಗಾಣದಾಳು ಸೇರಿದಂತೆ ಪ್ರತಿ ಗ್ರಾಮಗಳಲ್ಲಿಯೂ ರಾಮ ಜಪ ಹಾಗೂ ಪೂಜೆ ಪುನಸ್ಕಾರ, ಅನ್ನಸಂತರ್ಪಣೆ ಸರಾಗವಾಗಿ ನಡೆಯಿತು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!