Chamarajanagar
ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ: ಸಿ.ಎಂ.ಸಿದ್ದರಾಮಯ್ಯ
ರಾಚಯ್ಯ ಅವರು ನಿರಂತರವಾಗಿ ಬಡವರು, ಶೋಷಿತರ ಪರವಾಗಿದ್ದರು
ನಾನು ರಾಚಯ್ಯನವರ ಪ್ರಾಡಕ್ಟು: ಸಿ.ಎಂ
ಚಾಮರಾಜನಗರ : ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು.
ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು ಮಾತಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು ಎಂದರು.

ರಾಮಕೃಷ್ಣ ಹೆಗಡೆ ಅವರ ಮಂತ್ರಿ ಮಂಡಲದಲ್ಲಿ ಪ್ರಭಾವಿ ಆಗಿದ್ದ ರಾಚಯ್ಯನವರಿಗೆ, ಪ್ರತಿಭಾವಂತ, ಜನಪರ ಕಾಳಜಿಯುಳ್ಳ ರಾಜಕಾರಣಿಗಳನ್ನು ಹತ್ತಿರಕ್ಕೆ ಕರೆದು ಬೆಳೆಸುವ ಗುಣ ಇತ್ತು. ಹೆಗಡೆ ಮತ್ತು ರಾಚಯ್ಯ ಅವರು ನನ್ನನ್ನು ಕರೆದು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದರು. ಬಳಿಕ ನನ್ನನ್ನು ಮಂತ್ರಿ ಮಾಡಿದರು ಎಂದು ಇತಿಹಾಸ ಸ್ಮರಿಸಿಕೊಂಡರು.
ಅವತ್ತು ನಾನು ಮಂತ್ರಿ ಆಗದೇ ಹೋಗಿದ್ದರೆ ನಾನು ಇವತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಇದೇ ಕೆಲವರಿಗೆ ಹೊಟ್ಟೆಯುರಿ ಎಂದು ತಮ್ಮ ಮೇಲೆ ಆರೋಪಿಸಿರುವವರಿಗೆ ಟೀಕಿಸಿದರು.
ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್ ಗಳು. ನಾನೂ ರಾಚಯ್ಯನವರ ಪ್ರಾಡಕ್ಟು ಎಂದರು.
ರಾಚಯ್ಯನವರು ನಡೆದಂತ ದಾರಿಯಲ್ಲೇ ನಡೆಯಪ್ಪಾ ಎಂದು ಅವರ ಪುತ್ರ ಶಾಸಕ ಕೃಷ್ಣಮೂರ್ತಿ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಕಿವಿ ಮಾತು ಹೇಳಿ, ಸದಾ ಬಡವರ ಪರವಾಗಿ ಇರಬೇಕು. ಯಾರನ್ನೂ ದ್ವೇಷಿಸಬಾರದು ಎಂದರು.
ಇವತ್ತು ನಾವೆಲ್ಲಾ ಶಾಸಕರಾಗಿರುವುದು, ಮಂತ್ರಿಗಳಾಗಿರುವುದು, ಮುಖ್ಯಮಂತ್ರಿಗಳಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ. ರಾಚಯ್ಯನವರು ಸಂವಿಧಾನದ ಮಾರ್ಗದಲ್ಲಿ ನಡೆದರು. ಇವರು ಇವತ್ತಿನ ಯುವ ಪೀಳಿಗೆಗೂ ಮಾದರಿ ಎಂದರು.

ರಾಚಯ್ಯ ಸ್ಮಾರಕದಲ್ಲಿ IAS-IPS ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಚಾಮರಾಜನಗರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಲೂರು ಗ್ರಾಮದಲ್ಲಿ ಸ್ಮಾರಕ ಭವನ ನಿರ್ಮಿಸಲಾಗಿದೆ.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಚಪ್ಪ ಅವರ ಪತ್ನಿ ಗೌರಮ್ಮ, ಸಂಸದರಾದ ಸುನಿಲ್ ಬೋಸ್, ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ನಮಗೆ ತಂಗಳು ಇರ್ತಿತ್ತು. ಇಡ್ಲಿ, ದೋಸೆ ಇರ್ತಿಲಿಲ್ಲ
ನಮಗೆ ಮನೆಯಲ್ಲಿ ತಂಗಳು ಇರ್ತಿತ್ತೇ ಹೊರತು, ಇಡ್ಲಿ, ದೋಸೆ, ಉಪ್ಪಿಟ್ಟು ಏನೂ ಇರ್ತಾ ಇರ್ಲಿಲ್ಲ. ರಾತ್ರಿ ಉಳಿದ ಮುದ್ದೆಗೆ ಮಜ್ಜಿಗೆ ಬೆರೆಸಿ ತಂಗಳು ತಿಂತಾ ಇದ್ವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆ ದಿನಗಳನ್ನು ಸ್ಮರಿಸಿದರು.
ರಾಯಚ್ಯನವರ ಸ್ಮಾರಕ ಉದ್ಘಾಟನಾ ಭಾಷಣ ಶುರು ಮಾಡುವ ವೇಳೆಗೆ ಸಂಜೆ 4 ಗಂಟೆ ಆಗಿತ್ತು. ಊಟದ ಸಮಯ ತಡವಾದದ್ದನ್ನು ಪ್ರಸ್ತಾಪಿಸಿ ಕ್ಷಮೆ ಕೋರಿ ಭಾಷಣ ಆರಂಭಿಸಿದ ಮುಖ್ಯಮಂತ್ರಿಗಳು ಮೇಲಿನ ಪ್ರಸಂಗ ನೆನಪಿಸಿಕೊಂಡರು.
ರಾಚಯ್ಯ ಅವರ ಮನೆಯಲ್ಲೂ ಇಡ್ಲಿ ದೋಸೆ ಇರ್ತಿಲಿಲ್ಲ ಅಂತ ಕಾಣ್ತದೆ. ಅವರೂ ನನ್ನಂಗೆ ತಂಗಳು ತಿಂದು ಗಟ್ಟಿಯಾದರು ಎಂದರು.

Chamarajanagar
ಡಿ. 9, 10 ರಂದು ನಗರದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಡಿ.9 ಮತ್ತು 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಘನ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ.ಮಾದೇಗೌಡ, ಕೆ. ವಿವೇಕಾನಂದ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Chamarajanagar
ಮಹಾಪರಿನಿರ್ವಾಣ ದಿನ: ಮೊಂಬತ್ತಿ ಮೆರವಣಿಗೆ
ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮೊಂಬತ್ತಿ ಮೆರವಣಿಗೆ ನಡೆಯಿತು.
ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ರಾಜಗಿರಿ ಬುದ್ಧವಿಹಾರ, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಸಹಯೋಗದಲ್ಲಿ ಹಾಗೂ ಗ್ರಾಮದ ಯಜಮಾನರುಗಳ ಮಾರ್ಗದರ್ಶನದಲ್ಲಿ ಇಂದು ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇಣದ ಬತ್ತಿ ಮೆರವಣಿಗೆ ನಡೆಸಲಾಯಿತು.

ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೊಂಬತ್ತಿ ಮೆರವಣಿಗೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮ ಪಂಚಾಯಿತಿ ಸದಸ್ಯರು, ರಾಜಗಿರಿ ಬೌದ್ಧವಿಹಾರದ ಉಪಾಸಕರು, ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.
Chamarajanagar
ಅಪರಿಚಿತ ಶವ : ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ
ಚಾಮರಾಜನಗರ: ಬೇಡರಪುರ ಗ್ರಾಮದ ಬಳಿಯಿರುವ ಪ್ರೇಸ್ಟೀಜ್ ಫ್ಯಾಕ್ಟರಿಯ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ವಾರಸುದಾರರ ಸುಳಿವಿಗೆ ಸಹಕರಿಸಲು ಕೋರಲಾಗಿದೆ.
ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, 158 ಸೆಂ.ಮೀ ಎತ್ತರ, ಕೋಲು ಮುಖ, ತೆಳ್ಳನೆ ಶರೀರ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ, ಕಪ್ಪು ಮೀಸೆ ಹಾಗೂ ಕಪ್ಪು, ಬಿಳಿ ಮಿಶ್ರಿತ ತಲೆ ಕೂದಲು ಇರುತ್ತದೆ. ಕಪ್ಪು, ಹಸಿರು ಮತ್ತು ಬಿಳಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದು, ಎದೆಯ ಭಾಗದಲ್ಲಿ ಎಸು ಎಂಬ ಹಚ್ಚೆ ಇರುತ್ತದೆ.

ಇವರ ವಾರಸದಾರರು ಇದ್ದಲ್ಲಿ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
-
State14 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan11 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan14 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya9 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Chikmagalur17 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan15 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore14 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Mysore8 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
