Connect with us

State

ಜೀವನವು ಯಾವಾಗಲೂ ಸುಲಭವಲ್ಲ, ಹಾಗಂತ ನೀವು ನಿಮಗಾಗಿ ಹೋರಾಡುವುದನ್ನು ನಿಲ್ಲಿಸಬೇಕು ಎಂದಲ್ಲ.

Published

on

ಬೆಂಗಳೂರು: ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಬಗ್ಗೆ ಚರ್ಚಿಸಿದರು.

ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು.

ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ , ಎಸ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

State

ವಿಧಾನಸೌಧದ ಗುಮ್ಮಟದಲ್ಲಿ ಬಿರುಕು – ಸಿಎಂ ಗಮನಕ್ಕೆ ತರ್ತೀನಿ ಎಂದ ಸ್ಪೀಕರ್‌

Published

on

ಬೆಂಗಳೂರು: ವಿಧಾನಸೌಧದ ಪೂರ್ವ ಭಾಗದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಾಹಿತಿ ಪಡೆದ ಸ್ಪೀಕರ್ ಯುಟಿ ಖಾದರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಿಎಂ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ.

ಗುಮ್ಮಟದಲ್ಲಿ ಸಣ್ಣ ಮಟ್ಟದ ಬಿರುಕು ಕಾಣಿಸಿದ್ದು. ಜೋರು ಮಳೆ ಬಂದಾಗ ನೀರು ಸಹ ಲೀಕೇಜ್ ಆಗುತ್ತಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಖುದ್ದು ಸ್ಪೀಕರ್ ಯು.ಟಿ ಖಾದರ್ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಸೌಧ ರಾಜಕೀಯ ನಾಯಕರ ಕಟ್ಟಡವಾಗಿರದೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವೂ ಆಗಿದೆ. ಆದ್ರೆ ದೊಡ್ಡ ಕಟ್ಟಡಗಳನ್ನು ಸರಿಪಡಿಸುವಾಗ ಮತ್ತೊಂದು ಕಡೆ ಸ್ವಲ್ಪ ಹೆಚ್ಚು-ಕಡಿಮೆ ಆಗಬಹುದು. ಗುಮ್ಮಟ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಫ್ಲೋರ್‌ಗಳು ಮಾತ್ರ ವ್ಯಾಪ್ತಿಗೆ ಬರುತ್ತದೆ. ಆದರೂ ಈ ವಿಚಾರವನ್ನ ಸಿಎಂ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.

ನಮ್ಮ ವ್ಯಾಪ್ತಿಯಲ್ಲಿನ ಫ್ಲೋರ್‌ಗಳನ್ನು ಸರಿಪಡಿಸಿದ್ದೇನೆ. ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ವ್ಯಾಪ್ತಿಗೆ ಗುಮ್ಮಟ ಬರುತ್ತದೆ. ಅವರ ಗಮನಕ್ಕೆ ತಂದು ಸರಿಪಡಿಸಲು ಹೇಳುತ್ತೇನೆ. ಇದು ಬಹಳ ವರ್ಷಗಳ ಹಳೆಯ ಕಟ್ಟಡ. ಕೆಲವೊಂದು ಲೋಪದೋಷ ಆಗಿರಬಹುದು, ಆದಷ್ಟು ಬೇಗ ಸಿಎಂಗೆ ವಿಚಾರ ತಿಳಿಸುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.

Continue Reading

State

ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತ

Published

on

ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಐವರು ಅದರಡಿ ಸಿಲುಕಿರುವ ಶಂಕೆ ಇದೆ. ಈ ವೇಳೆ ಹೆದ್ದಾರಿ ಬದಿಯಲ್ಲಿ ಕ್ಯಾಂಟೀನ್ ವೊಂದರ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಮಣ್ಣಿನ ರಭಸಕ್ಕೆ ಗಂಗಾವಳಿ ನದಿಗೆ ಕೊಚ್ಚಿಹೋಗಿದೆ. ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸಹ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.

Continue Reading

State

ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ

Published

on

ಬೆಂಗಳೂರು:
ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನರಾದರು. ಅವರು ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ.
ಪ್ರಜಾವಾಣಿಗೆ ಸೇರಿದ್ದ ಅವರು ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು.
ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೆಯುಡಬ್ಲ್ಯೂಜೆ ಒಡನಾಡಿಯಾಗಿಯೂ ಇದ್ದರು.
ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು.

 

ಕೆಯುಡಬ್ಲ್ಯೂಜೆ ಸಂತಾಪ:

ಹಿರಿಯ ಪತ್ರಕರ್ತರ ವೇದಿಕೆ ಸಂಘಟನೆಯಲ್ಲಿ ಸಕ್ರೀಯವಾಗಿದ್ದ ಕೃಷ್ಣಪ್ಪ ಅವರ ನಿಧನ ನೋವಿನ ಸಂಗತಿ ಎಂದು ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದ.
ಕೃಷ್ಣಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.

Continue Reading

Trending

error: Content is protected !!