State
ಹೆಚ್.ಡಿ. ಕುಮಾರಸ್ವಾಮಿ ಈಗ ಬಿಜೆಪಿ ವಕ್ತಾರಾರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, ಫೆಬ್ರವರಿ 16: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಅವರು ಇಂದು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ಬಸವಣ್ಣನವರು ಸಮಾನತೆಯನ್ನು ಕಂಡಿದ್ದವರು. ಸಮಸಮಾಜಕ್ಕಾಗಿ ಚಳವಳಿ ಮಾಡಿದವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಿಸಿದ್ದೇವೆ. ಕೇಂದ್ರ ಸರ್ಕಾರದ ಬಿಜೆಪಿಯ ಅವಧಿಯದ್ದು ಶೇ 5.8% ಸರ್ಕಾರ. ನಮ್ಮದು ಶೇ 2.95 % ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಇದೆ. ಒಟ್ಟಾರೆ ಜನಪರ ಬಜೆಟ್. ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ಬೆಳೆಸುವ ಕೆಲಸ ಮಾಡಲಾಗಿದೆ ಎಂದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ 1,20000 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಿದರೆ ಅದು ಅಭಿವೃದ್ಧಿಪೂರಕ ಬಜೆಟ್. 52009 ಕೋಟಿ ಬಡವರಿಗೆ ಖರ್ಚು ಮಾಡಿದೆ ಅದು ಅಭಿವೃದ್ಧಿಗೆ ಪೂರಕವಾಗಿರುವಂಥದ್ದು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ 77, 750 ಕೋಟಿ ರೂ.ಗಳ ಒಟ್ಟು ಸಾಲ , 23 ಸಾವಿರ ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳಾಗಿದೆ. ಕೇಂದ್ರ ಸರ್ಕಾರ 16.85 ಲಕ್ಷ ಕೋಟಿ ಈ ವರ್ಷಕ್ಕೆ ಸಾಲ ಮಾಡಿದೆ ಎಂದು ವಿವರಿಸಿದರು.
ಬಿಜೆಪಿಗೆ ಕಾಮಾಲೆ ರೋಗ
ಮಾಧ್ಯಮದವರ ಮತ್ತೊಂದು ಪ್ರಶ್ನಗೆ ಪ್ರತಿಕ್ರಿಯೆ ನೀಡಿ 3,71,383 ಕೋಟಿ ಗಾತ್ರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ (1%ಕ್ಕಿಂತ ಕಡಿಮೆ) ಕೊಡಲಾಗಿದೆÀ. ಎಸ್ ಸಿ ಪಿ /ಟಿಎಸ್‍ಪಿ ಯಲ್ಲಿ 2017-18 ರಲ್ಲಿ 30 ಸಾವಿರ ಕೋಟಿ ನೀಡಲಾಗಿತ್ತು. ಕಳೆದ ಜುಲೈ ಬಜೆಟ್ ನಲ್ಲಿ 34 ಸಾವಿರ ಕೋಟಿ ಕೊಡಲಾಗಿತ್ತು. ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 39 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಬಾಯಿಯಲ್ಲಿ ಮಾತ್ರ ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುತ್ತಾರೆ. ಬಿಜೆಪಿಗೆ ಕಾಮಾಲೆ ರೋಗ ಎಂದರು.
ಬೆಂಗಳೂರಿಗೆ ಹೆಚ್ಚು ಅನುದಾನ ನೀಡಿಲ್ಲ, ಹೆಚ್ಚು ಕಾರ್ಯಕ್ರಮಗಳನ್ನು ನೀಡಲಾಗಿದೆ. ಬಿಜೆಪಿ ಬೆಂಗಳೂರನ್ನು ನಿರ್ಲಕ್ಷ್ಯ ಮಾಡಿತ್ತು ಹೆಚ್ಚು ಯೋಜನೆ ಕೊಡಲಾಗಿದೆ. ನಾವು ಬ್ರ್ಯಾಂಡ್ ಬೆಂಗಳೂರು 1.50 ಕೋಟಿ ಜನರಿದ್ದು, ಅವರಿಗೆ ಮೂಲಭೂತ ಸೌಕರ್ಯಕ್ಕೆ ಅನುದಾನ ನೀಡಲಾಗಿದೆ.
ಹೈದರಾಬಾದ್ ಕರ್ನಾಟಕ್ಕೆ 1500 ಕೋಟಿ ರೂ.ಗಳು ಈವರೆಗ ವೆಚ್ಚವಾಗಿದ್ದು, ಈ ಬಾರಿ ಕ್ರಿಯಾ ಯೋಜನೆಯನ್ನು ಏಪ್ರಿಲ್ ನಲ್ಲಿಯೇ ತಯಾರಿಸಿ ಹೆಚ್ಚು ವೆಚ್ಚ ಮಾಡಲಾಗುವುದು ಎಂದರು.
ಎಸ್ ಸಿಪಿ ಟಿಎಸ್ ಪಿ ಯಿಂದ ಗ್ಯಾರಂಟಿಗೆ ಅನುದಾನ ತೆಗೆದುಕೊಳ್ಳಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಅಲ್ಲಿಂದ ಕೆಲವೊಮ್ಮೆ ತೆಗೆದುಕೊಳ್ಳಬೇಕಾಗುತ್ತದೆ. ಅಲ್ಲಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಬರುತ್ತಾರೆ. ಅವರ ಜನಸಂಖ್ಯೆಯಲ್ಲಿ ಆಧಾರದ ಮೇಲೆ ಪಡೆಯಲಾಗುವುದು ಎಂದರು.
ಜೆ.ಹೆಚ್ ಪಟೇಲ್ ಸರ್ಕಾರದಲ್ಲಿ ಮಾಡಿದಂತೆ ಬಾಂಡ್ ಮೂಲಕ ಸಾಲ ತೆಗೆದುಕೊಳ್ಳುವ ಕೆಲಸ ಈಗ ಮಾಡುತ್ತಿಲ್ಲ. ಆಗ ಪಡೆದಿದ್ದ ಬಾಂಡ್‍ಗಳನ್ನು ಬಡ್ಡಿ ಸಮೇತ ಹಿಂದಿರುಗಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
State
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಎ1 ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ನ ಏಕಸದಸ್ಯ ಪೀಠವೂ ಆದೇಶ ಹೊರಡಿಸಿದೆ.
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾರಾವ್ ಹಾಗೂ ಆಪ್ತ ತರುಣ್ ರಾಜ್ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್.26) ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠವೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.
ನಟಿ ರನ್ಯಾರಾವ್ ಅವರ ಜಾಮೀನು ಅರ್ಜಿ ಇಲ್ಲಿಯವರೆಗೆ 2 ಬಾರಿ ವಜಾ ಆಗಿದೆ. ಹೀಗಾಗಿ ಇನ್ನೂ ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗುತ್ತದೆ.
State
ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಅವರು ನಿಧನರಾಗಿದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ ಎಂದಿದ್ದಾರೆ.
ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.
ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
State
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ಪ್ರಕರಣ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಆರ್.ಅಶೋಕ್

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಏಪ್ರಿಲ್.23 ರಂದು, ರಾಜ್ಯಾದ್ಯಂತ ಹಲವಾರು ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಭಯಭೀತ ಧಾರ್ಮಿಕ ಚಿಹ್ನೆಗಳಾದ ಜನಿವಾರ (ಯಜ್ಞೋಪವೀತ), ಶಿವದಾರ ಇತ್ಯಾದಿಗಳನ್ನು ತೆಗೆದುಹಾಕಲು ಒತ್ತಾಯಿಸಿ ಕರ್ನಾಟಕ ಸರ್ಕಾರವು ವೈಯಕ್ತಿಕ ನಂಬಿಕೆಗಳ ಉಲ್ಲಂಘನೆಯ ಘಟನೆಗಳ ಬಗ್ಗೆ ನಾನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.
ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು ಎಂದು ನಾಗರಿಕರ, ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
-
State10 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized6 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Mysore11 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Mysore9 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Hassan5 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Hassan3 hours ago
ಜಮೀನು ವಿಚಾಕ್ಕೆ ಕೊಲೆ
-
Kodagu7 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Kodagu6 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ