Connect with us

Mandya

ಸಿದ್ದಗಂಗಾಶ್ರೀ ಉದ್ಯಾನವನದಲ್ಲಿ ದಾಸೋಹ ಹುಣ್ಣಿಮೆ

Published

on

ಮಂಡ್ಯ : ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಪರಮಪೂಜ್ಯ ಡಾ.ಶ್ರೀಶ್ರೀ.ಶಿವಕುಮಾರ ಮಹಾಸ್ವಮೀಜಿ ಉದ್ಯಾನವನದಲ್ಲಿ ಜು.21ನೇ ಭಾನುವಾರ ಸಂಜೆ 6ಗಂಟೆಗೆ `ದಾಸೋಹ ಹುಣ್ಣಿಮೆ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ತಿಳಿಸಿದ್ದಾರೆ.

ಸುದೀರ್ಘ 111ವರ್ಷಗಳ ಕಾಲ ಕನ್ನಡನಾಡಿನ ನೆಲದಲ್ಲಿ ಅನ್ನ, ಅಕ್ಷರ, ಆಸರೆಯಂತಹ ತ್ರಿವಿಧ ದಾಸೋಹವನ್ನು ನಡೆಸಿ ನಡೆದಾಡುವ ದೇವರೆಂದೆ ಕೋಟ್ಯಾಂತರ ಭಕ್ತರ ಭಾವಕೋಶದಲ್ಲಿ ನೆಲೆಯಾಗಿರುವ ಸಿದ್ದಗಂಗಾ ಶ್ರೀಗಳ ಸಂಸ್ಮರಣೆಯ ಅಂಗವಾಗಿ ಪ್ರತಿ ತಿಂಗಳ ಹುಣ್ಣಿಮೆಯಂದು ಉದ್ಯಾನವನದಲ್ಲಿ `ದಾಸೋಹ ಹುಣ್ಣಿಮೆ’ ಮೂಲಕ ಹಸಿದವರಿಗೆ ಅನ್ನದಾಸೋಹ ನಡೆಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ ದಾಸೋಹಕ್ಕೆ ಚಾಲನೆ ನೀಡಲಿದ್ದು, ನಗರಸಭೆ ಸದಸ್ಯರಾದ ಕೆ.ವಿದ್ಯಾಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ದಾಸೋಹದ ಮಹತ್ವ ಕುರಿತು ಮಾತನಾಡಲಿದ್ದಾರೆ. ಸಿದ್ದಗಂಗಾಶ್ರೀ ಸೇವಾ ಸಮಿತಿ ಅಧ್ಯಕ್ಷ ಎಂ.ಆರ್.ಮಂಜುನಾಥ್, ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ.ಎಸ್.ಮಂಜುನಾಥ್‌ಬೆಟ್ಟಹಳ್ಳಿ, ಆಲಕೆರೆ ಗ್ರಾ.ಪಂ.ಮಾಜಿ ಸದಸ್ಯ ತರಕಾರಿ ಮಹೇಶ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ

Continue Reading

Mandya

ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಅಗತ್ಯ ಡಾ.ಡಿ.ಟಿ.ಮಂಜುನಾಥ

Published

on

ಶ್ರೀರಂಗಪಟ್ಟಣ : ಮಳೆಗಾಲದ ಸಂದರ್ಭದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಡೆಂಗ್ಯೂ ರೋಗದ ನಿಯಂತ್ರಣಕ್ಕೆ ಸೂಕ್ತ ಮುನ್ನೆಚ್ಚರಿಕೆ ಅಗತ್ಯವಾಗಿದೆ ಎಂದು ಪ್ರಭಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಡಿ.ಟಿ.ಮಂಜುನಾಥ್ ತಿಳಿಸಿದರು.

ಅವರು ತಾಲೂಕಿನ ಚಂದಗಾಲು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಡೆಂಗ್ಯೂ ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಾರ್ವಜನಿಕರು ತಮ್ಮ ಮನೆಯ ಸುತ್ತ ಮುತ್ತ ಬಿಸಾಡುವ ಘನ ತ್ಯಾಜ್ಯಗಳಲ್ಲಿ ನೀರು ನಿಂತಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದ ಘನ ತ್ಯಾಜ್ಯಗಳನ್ನು ಸರಿಯಾಗಿ ವಿಲೇವಾರಿ ಮಾಡಿ. ಮನೆಯಲ್ಲಿಯ ನೀರು ಸಂಗ್ರಹಿಸುವ ಪರಿಕರಗಳನ್ನು ವಾರಕ್ಕೊಂದು ಸಾರಿ ಸ್ವಚ್ಛವಾಗಿ ಉಜ್ಜಿ ತೊಳೆದು ನೀರನ್ನು ಭರ್ತಿ ಮಾಡಿಕೊಳ್ಳುವುದು. ಹಾಗೆಯೆ ವಾರಕ್ಕೊಂದು ದಿನ ಒಣ ದಿನ ಆಚರಿಸಿ ಡೆಂಗ್ಯೂ ಜ್ವರದ ಲಕ್ಷಣ ಕಂಡ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಡೆಂಗ್ಯೂ ಜ್ವರ ನಿಯಂತ್ರಣ ಎಲ್ಲರ ಜವಾಬ್ದಾರಿ ಆಗಿದೆ ಎಂದು ಸಲಹೆ ನೀಡಿದರು.

ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಜವರಪ್ಪ, ಸದಸ್ಯರಾದ ರಮೇಶ್, ಕುಮಾರ್, ಮುಖ್ಯ ಶಿಕ್ಷಕಿ ಭಾರತಿ, ಪಿಡಿಒ ಶಿಲ್ಪ , ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣೇಗೌಡ, ಸಮುದಾಯ ಆರೋಗ್ಯ ಅಧಿಕಾರಿ ಸಹನಾ, ಮೌಲ್ಯ,ಪ್ರಾಥಮಿಕ ಆರೋಗ್ಯ

 

ಸುರಕ್ಷಾಧಿಕಾರಿ ವಿನಯಾ ಹಾಗೂ ಶಾಲಾ ಶಿಕ್ಷಕರು, ಮಕ್ಕಳು, ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮುಖ್ಯ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

 

Continue Reading

Chamarajanagar

ನದಿ ಪಾತ್ರದಲ್ಲಿ ಬರುವ ಎಲ್ಲಾ ಗ್ರಾಮಗಳ ಜನತೆ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ

Published

on

ಕೆ.ಆರ್.ಪೇಟೆ
ಹೇಮಾವತಿ ಡ್ಯಾಂನಿಂದ ನದಿಗೆ 30ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟಿರುವ ಕಾರಣ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಮತ್ತು ಮಂದಗೆರೆ ಅಣೆಕಟ್ಟೆಗಳಲ್ಲಿ ನದಿಯು ಉಕ್ಕಿ ಹರಿಯುತ್ತಿದೆ.

ಹಾಗಾಗಿಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಹೇಮಾವತಿ ನದಿಯು 46ಕಿ.ಮೀ ದೂರ ಹರಿಯಲಿದ್ದು ನದಿ ಪಾತ್ರದಲ್ಲಿ ಬರುವ ಎಲ್ಲಾ ಗ್ರಾಮಗಳ ಜನತೆ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಜನಜಾನುವಾರುಗಳನ್ನು ನದಿಗೆ ಇಳಿಸಬಾರದು. ಬಟ್ಟೆ ಪಾತ್ರೆ, ತೊಳೆಯಲು ನದಿ ಬಳಿ ಹೋಗಬಾರದು. ನದಿಯಲ್ಲಿ ಸ್ನಾನಮಾಡುವುದಾಗಲಿ, ಈಜುವುದಾಗಲಿ‌ ಮಾಡಬಾರದು. ಮೀನುಗಾರರು ನದಿಯಲ್ಲಿ

ಮೀನು ಹಿಡಿಯಲು ಹೋಗಬಾರದು ಎಂದು ಕೆ.ಆರ್.ಪೇಟೆ ಹೇಮಾವತಿ ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಆನಂದ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಇಓ ಸತೀಶ್, ಕಿಕ್ಕೇರಿ ಪೊಲೀಸ್ ಇನ್ಸ್ ಪೆಕ್ಟರ್ ರೇವತಿ, ದಬ್ಬೇಘಟ್ಟ ಪಿಡಿಓ ಉಮಾಶಂಕರ್, ಮಂದಗೆರೆ ಪಿಡಿಓ ಸುವರ್ಣ, ಸಹಾಯಕ ಸಬ್ ಇನ್ಸ್ ಪೆಕ್ಟರ್

ಶಿವಲಿಂಗಯ್ಯ, ಹೇಮಾವತಿ ನಂ.20 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯವರಾದ ವಿಶ್ವನಾಥ್, ಸಹಾಯಕ ಇಂಜಿನಿಯರ್ ರವರಾದ ರಾಘವೇಂದ್ರ, ಮೋಹನ್ ಕುಮಾರ್, ಹೆಚ್.ಡಿ. ನಾಯಕ್ ಸೇರಿದಂತೆ ಹಲವು ನೀರಾವರಿ ಅಧಿಕಾರಿಗಳು ಉಪಸ್ಥಿತರಿದ್ದರು.

 

Continue Reading

Mandya

ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬಾರದು

Published

on

ಮಂಡ್ಯ : ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಮೈಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ.ವೇಣುಗೋಪಾಲ್ ತಾಕೀತು ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ತೀರ್ಮಾನದಿಂದ ಕನ್ನಡಿಗರಿಗೆ ಉದ್ಯೋಗ ಪಡೆಯಲು ಅನುಕೂಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ತೆಗೆದುಕೊಂಡಿರುವ ನಿರ್ಣಯದಿಂದ ಹಿಂದೆ ಸರಿಯಬಾರದು ಎಂದು ಆಗ್ರಹ ಪಡಿಸಿದರು.

ದಶಕಗಳಿಂದ ಖಾಸಗಿ ವಲಯದ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು . ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವಲಯಗಳಲ್ಲಿ ಶೇಕಡ 70ರಷ್ಟು ಹಾಗೂ ಎ ಮತ್ತು ಬಿ ಹುದ್ದೆಗಳಿಗೆ ಶೇಕಡ 50 ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನ ಸಮಂಜಸವಾಗಿದೆ ಎಂದರು.

ಆದರೆ ಕಾರಣಾಂತರಗಳಿಂದ ಈ ತೀರ್ಮಾನದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿರುವುದು ಕಂಡುಬಂದಿದ್ದು , ಹಾಗಾಗಿ ಯಾವುದೇ ಕಾರಣಕ್ಕೂ ಈ ದಿಟ್ಟ ಕ್ರಮದಿಂದ ಸರ್ಕಾರ ಹಿಂದೆ ಸರಿಯಬಾರದು ಎಂದು ಒತ್ತಾಯಿಸಿದರು.

ಅಪ್ರೆಂಟಿಸ್ ಮತ್ತು ಇಂಟರ್ಶಿಪ್ ತರಬೇತಿ ನೀಡಬೇಕು ಅನ್ನುತ್ತಿದ್ದಾರೆ ಆದರೆ ಕಂಪನಿಗಳೇ ನೀಡಬಹುದು ಎಂದು ತಿಳಿಸಿದರು.

ನಮ್ಮ ನೆಲ ನಮ್ಮ ಜಲ ಬಳಕೆ ಮಾಡಿಕೊಂಡು ಕೆಲಸ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸುತ್ತಿರುವುದು ಸರಿಯಲ್ಲ. ಕನ್ನಡಿಗರಿಗೆ ಸಿಗುವ ಸೌಲಭ್ಯವನ್ನು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಕಾರ್ಯರೂಪಕ್ಕೆ ತರಬೇಕು ಎಂದು ತಾಕೀತು ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಎಸ್ ಕೃಷ್ಣ, ಶಿವಲಿಂಗಯ್ಯ , ಎಂ ಸಿ ರಮೇಶ್, ಮಂಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!