Sports
ಮೌನ ಮುರಿದು ಮದುವೆ ವಂದತಿಗಳಿಗೆ ಫುಲ್‌ಸ್ಟಾಪ್ ಇಟ್ಟ ಸ್ಮೃತಿ ಮಂದಾನ
ಮುಂಬೈ: ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರೊಂದಿಗಿನ ಮದುವೆ ಮುಂದೂಡಿಕೆ ಬಗ್ಗೆ ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ತೆರೆ ಎಳೆದಿದ್ದಾರೆ.
ಮದುವೆಯನ್ನು ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವರೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸ್ಮೃತಿಮಂದಾನ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಏನಿದೆ?
ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತ ಭಾವಿಸಿ ಮಾತನಾಡ್ತಿದ್ದೇನೆ. ನಾನು ತುಂಬಾ ಖಾಸಗಿ ವ್ಯಕ್ತಿ, ಅದನ್ನ ಹಾಗೆಯೇ ಇಡಲು ಬಯಸುತ್ತೇನೆ. ಆದರೆ ಮದುವೆಯನ್ನ ರದ್ದುಗೊಳಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ.
ಈ ವಿಚಾರವನ್ನು ಇಲ್ಲಿಗೆ ಮುಗಿಸಲು ನಾನು ಬಯಸುತ್ತೇನೆ, ನೀವೂ ಕೂಡ ಈ ವಿಷಯವನ್ನ ಇಲ್ಲಿಗೆ ಬಿಡಬೇಕೆಂದು ಮನವಿ ಮಾಡುತ್ತೇನೆ. ದಯವಿಟ್ಟು ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ. ನಮ್ಮದೇ ಹಾದಿಯಲ್ಲಿ ಮುಂದುವರಿಯಲು ನಮಗೆ ಅವಕಾಶ ಮಾಡಿಕೊಡಿ ಎಂದು ವಿನಂತಿಸಿಕೊಳ್ಳುತ್ತೇನೆ.
ನಮ್ಮೆಲ್ಲರನ್ನೂ ಮತ್ತು ನನ್ನನ್ನು ಮುನ್ನಡೆಸುವ ಒಂದು ಉನ್ನತ ಉದ್ದೇಶವಿದೆ ಎಂದು ನಾನು ನಂಬುತ್ತೇನೆ. ಅದು ಯಾವಾಗಲೂ ನನ್ನ ದೇಶವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸುತ್ತಿದೆ. ಸಾಧ್ಯವಾದಷ್ಟು ಕಾಲ ಭಾರತಕ್ಕಾಗಿ ಆಟವಾಡುವುದನ್ನ ಮತ್ತು ಟ್ರೋಫಿಗಳನ್ನು ಗೆಲ್ಲುವುದನ್ನು ಮುಂದುವರಿಸಬೇಕೆಂದು ನಾನು ಭಾವಿಸುತ್ತೇನೆ. ಅದರ ಕಡೆಗೆಯೇ ನನ್ನ ಗಮನ ಶಾಶ್ವತವಾಗಿರುತ್ತದೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಇದು ಮುಂದುವರಿಯುವ ಸಮಯ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಹಿಂದೆ ನಡೆದಿದ್ದು ಏನು?
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ನ.23ರಂದು ಸ್ಮೃತಿ-ಪಲಾಶ್ ಮುಚ್ಚಲ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ. ಮದುವೆಗೆ ಕೆಲ ಗಂಟೆಗಳು ಬಾಕಿಯಿರುವಾಗಲೇ ಮಂಧಾನ ತಂದೆಗೆ ಲಘು ಹೃದಯಾಘಾತವಾಗಿತ್ತು. ಅವರು ಸಂಪೂರ್ಣ ಗುಣಮುಖರಾಗುವವರೆಗೆ ಮದುವೆ ಸಮಾರಂಭ ಮುಂದೂಡಲು ಸ್ಮೃತಿ ನಿರ್ಧರಿಸಿದ್ದರು. ಈ ಬೆನ್ನಲ್ಲೇ ಸ್ಮೃತಿ ಮಂಧಾನ ತನ್ನ ಇನ್‌ಸ್ಟಾಗ್ರಾಂ ಖಾತೆಯಿಂದ ಪಲಾಶ್ ಹಾಗೂ ವಿವಾಹಕ್ಕೆ ಸಂಬಂಧಿಸಿದ ಎಲ್ಲಾ ಫೋಟೋ ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡಿದ್ದರು.
ಇದರ ಮಧ್ಯೆ ಸ್ಮೃತಿ ಅವರ ಜೊತೆ ಮದುವೆ ನಿಶ್ಚಯವಾಗಿದ್ದರೂ ಪಲಾಶ್ ಮುಚ್ಚಲ್ ಬೇರೊಬ್ಬ ಯುವತಿ ಜೊತೆ ಚಾಟ್ ಮಾಡಿದ್ದಾರೆ ಎನ್ನಲಾದ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಬಳಿಕ ಪಲಾಶ್ ತನ್ನ ಎಕ್ಸ್ ಗರ್ಲ್‌ಫ್ರೆಂಡ್ ಪ್ಲಾಸ್ಟಿಕ್ ಸರ್ಜನ್ ಬಿರ್ವಾ ಶಾ ಅವರಿಗೆ ಪ್ರಪೋಸ್ ಮಾಡಿದ್ದ ಫೋಟೋಗಳು ಹಾಗೂ ಆಕೆಯೊಂದಿಗೆ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಬಳಿಕ ಮದುವೆ ರದ್ದಾಗಿದೆ ಎಂಬ ವಿಷಯ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಲೇ ಇತ್ತು. ಇದೀಗ ಈ ಎಲ್ಲ ವದಂತಿಗಳಿಗೆ ಖುದ್ದು ಸ್ಮೃತಿ ಮಂದಾನ ಅವರೇ ತೆರೆ ಎಳೆದಿದ್ದಾರೆ.
Sports
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಡಿಕೆಶಿ : ಬೆಂಗಳೂರಿನಲ್ಲೇ ಐಪಿಎಲ್ ಫಿಕ್ಸ್ ಡಿಸಿಎಂ ಘೋಷಣೆ
ಬೆಂಗಳೂರು : ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಒಂದನ್ನು ಡಿಕೆಶಿ ನೀಡಿದ್ದಾರೆ. ಹೌದು, ಬೆಂಗಳೂರಿನಲ್ಲೇ ಐಪಿಎಲ್ ಫಿಕ್ಸ್ ಎಂದು ಸ್ವತಃ ಡಿಸಿಎಂ ಘೋಷಣೆ ಮಾಡಿದ್ದಾರೆ.
ಹೌದು, 19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. 2026ರ ಐಪಿಎಲ್‌ಗೆ ಆರ್‌ಸಿಬಿ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಕೆಎಸ್‌ಸಿಎ ಚುನಾವಣೆಯ ಮತದಾನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಾನು ಕ್ರಿಕೆಟ್ ಲವರ್, ಆರ್‌ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೂ ನಮ್ಮಿಂದ ಐಪಿಎಲ್ ಕೈ ತಪ್ಪೋದಿಲ್ಲ. ಬೆಂಗಳೂರಿನಲ್ಲೇ ನಡೆಯುತ್ತೆ, ನಾನ್ ಎಲ್ಲಾ ಮಾತನಾಡ್ತೀನಿ ಅಂತ ತಿಳಿಸಿದ್ದಾರೆ.
Sports
IND vs SA ODI: 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ
ಆಂಧ್ರ ಪ್ರದೇಶ: ವಿಶಾಖಪಟ್ಟಣಂನಲ್ಲಿ ಇಂದು ನಡೆದ ಟೀಂ ಇಂಡಿಯಾ ಮತ್ತು ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 9 ವಿಕೆಟ್ಗಳಿಂದ ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಭರ್ಜರಿ ಗೆಲುವು ಸಾಧಿಸಿದೆ.
ಕನ್ನಡಿಗ ಕೆ.ಎಲ್. ರಾಹುಲ್ ನೇತೃತ್ವದಲ್ಲಿ ಇಂದು ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಪ್ರಿಕಾ ತಂಡ ಪೂರ್ಣ 50 ಓವರ್ಗಳನ್ನು ಆಡದೆ 47.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 270 ರನ್ ಕಲೆಹಾಕಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 1 ವಿಕೆಟ್ ಕಳೆದುಕೊಂಡು 39.5 ಓವರ್‌ಗಳಲ್ಲಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿಗೆ ಸೇಡು ತೀರಿಸಿಕೊಂಡಿದೆ.
Sports
IPL 2026; RCB ಖರೀದಿಗೆ ಪೈಪೋಟಿ; ರೇಸ್‌ನಲ್ಲಿ ಎಸ್‌ಐಐ, ಹೊಂಬಾಳೆ ಫಿಲ್ಮ್ಸ್ ಜೊತೆ ಇಂಗ್ಲೆಂಡ್‌ನ ಹಂಡ್ರೆಡ್ ಫ್ರಾಂಚೈಸಿ!
ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಯನ್ನು 2 ಬಿಲಿಯನ್ ಡಾಲರ್ (ಸುಮಾರು 17,775 ಕೋಟಿ ರೂ.) ಗೆ ಮಾರಾಟ ಮಾಡಲು ಡಿಯಾಜಿಯೊ ಯೋಜಿಸುತ್ತಿದೆ ಎಂದು ವರದಿಯಾಗಿದೆ.
ಐಪಿಎಲ್ 2026 ಕ್ಕೂ ಮುನ್ನ ಐಪಿಎಲ್ ಫ್ರಾಂಚೈಸಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಖರೀದಿಸಲು ಆಧಾರ್ ಪೂನಾವಾಲಾ ಮತ್ತು ಹೊಂಬಾಳೆ ಫಿಲ್ಮ್ಸ್ ಬಳಿಕ ಮತ್ತೊಂದು ಸಂಸ್ಥೆ ಆಸಕ್ತಿ ತೋರಿಸಿದೆ. ಸದ್ಯ ಡಯಾಜಿಯೊ (Diageo) ಒಡೆತನದ ಈ ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದ್ದು, ಈ ಪ್ರಕ್ರಿಯೆಯು 2026ರ ಮಾರ್ಚ್ 31 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈಗ, ದಿ ಹಂಡ್ರೆಡ್ ಫ್ರಾಂಚೈಸಿಯಾದ ವೆಲ್ಶ್ ಫೈರ್ ಆರ್‌ಸಿಬಿಯನ್ನು ಸ್ವಾಧೀನಪಡಿಸಿಕೊಳ್ಳಲು ಆಸಕ್ತಿ ತೋರಿಸಿದೆ ಎಂದು ಬೆಳಕಿಗೆ ಬಂದಿದೆ.
ದಿ ಟೆಲಿಗ್ರಾಫ್ ಯುಕೆ ಪ್ರಕಾರ, ಗ್ಲಾಮೋರ್ಗನ್ ಕ್ರಿಕೆಟ್ ಕ್ಲಬ್ ಮತ್ತು ಅಮೆರಿಕನ್ ಟೆಕ್ ಬಿಲಿಯನೇರ್ ಸಂಜಯ್ ಗೋವಿಲ್ ಒಡೆತನದ ಕ್ರಿಕೆಟ್ ತಂಡವಾದ ವೆಲ್ಷ್ ಫೈರ್, ಬಿಗ್ ಬ್ಯಾಷ್ ಲೀಗ್ (ಬಿಬಿಎಲ್) ನಲ್ಲಿ ಮುಂಬರುವ ತಂಡಗಳ ಮಾರಾಟದ ಮೇಲೆ ತೀವ್ರ ನಿಗಾ ಇಟ್ಟಿದ್ದು, ಆರ್‌ಸಿಬಿ ಫ್ರಾಂಚೈಸಿಯನ್ನು ಖರೀದಿಸಲು ಸಹ ಸಹ ಆಸಕ್ತಿ ಹೊಂದಿದೆ. ಐಪಿಎಲ್ ತಂಡವನ್ನು ಖರೀದಿಸಲು ತಮ್ಮ ಬಳಿ ಸಾಕಷ್ಟು ಹಣವನ್ನು ಹೊಂದಿದೆ ಎಂದು ವರದಿಯಾಗಿದೆ. ಈ ಹಿಂದೆ, ಆರ್‌ಸಿಬಿಯನ್ನು $2 ಬಿಲಿಯನ್‌ಗೆ ಮಾರಾಟ ಮಾಡಬಹುದು ಎಂದು ವರದಿಗಳು ತಿಳಿಸಿವೆ.
‘ಫೈರ್ ಮತ್ತು ಫ್ರೀಡಂ ನಿರ್ದಿಷ್ಟ ಪ್ರಕರಣಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದಾಗ್ಯೂ, ನಾವು ಜಾಗತಿಕ ಕ್ರಿಕೆಟ್ ಫ್ರಾಂಚೈಸಿಗಳನ್ನು ಖರೀದಿಸುವ, ನಿರ್ವಹಿಸುವ ಮತ್ತು ಅಭಿವೃದ್ಧಿಪಡಿಸುವ ವ್ಯವಹಾರದಲ್ಲಿದ್ದೇವೆ. ಜಾಗತಿಕ ಕ್ರಿಕೆಟ್ ಸ್ವತ್ತುಗಳಲ್ಲಿ ಏಕೀಕರಣದ ಕಡೆಗೆ ಪ್ರಸ್ತುತ ರಚನಾತ್ಮಕ ಪ್ರವೃತ್ತಿಗಳನ್ನು ನಾವು ಗಮನಿಸುತ್ತೇವೆ ಮತ್ತು ನಮ್ಮ ಷೇರುದಾರರಿಗೆ ಮೌಲ್ಯವನ್ನು ಸೃಷ್ಟಿಸುವಾಗ ಆ ಪ್ರಕ್ರಿಯೆಯಲ್ಲಿ ಸಂಪೂರ್ಣವಾಗಿ ಭಾಗವಹಿಸಲು ಉದ್ದೇಶಿಸಿದ್ದೇವೆ’ ಎಂದು ಗ್ಲಾಮೋರ್ಗನ್ ಅಧ್ಯಕ್ಷ ಮಾರ್ಕ್ ರೈಡರ್ಚ್-ರಾಬರ್ಟ್ಸ್ ಪ್ರಕಟಣೆಗೆ ತಿಳಿಸಿದ್ದಾರೆ.
ಈ ಹಿಂದೆ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಧಾರ್ ಪೂನವಾಲಾ ಮತ್ತು ಬ್ರೋಕರೇಜ್ ಪ್ಲಾಟ್‌ಫಾರ್ಮ್ ಜೆರೋಧಾದ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಗುಂಪಿನ (ಎಂಇಎಂಜಿ) ಅಧ್ಯಕ್ಷ ರಂಜನ್ ಪೈ ಅವರು ಆರ್‌ಸಿಬಿಯನ್ನು ಖರೀದಿಸಲು ಎದುರು ನೋಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಯನ್ನು 2 ಬಿಲಿಯನ್ ಡಾಲರ್ (ಸುಮಾರು 17,775 ಕೋಟಿ ರೂ.) ಗೆ ಮಾರಾಟ ಮಾಡಲು ಡಿಯಾಜಿಯೊ ಯೋಜಿಸುತ್ತಿದೆ ಎಂದು ವರದಿಯಾಗಿದೆ.
-
Mandya24 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Mysore23 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Kodagu23 hours agoಕ್ರಿಸ್ಮಸ್ ಗಾನ ತರಂಗ ಜಿಲ್ಲಾ ಮಟ್ಟದ ಗಾಯನ ಹಾಗೂ ಚಿತ್ರಕಲೆ ಸ್ಪರ್ಧೆ
-
Mysore22 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Hassan23 hours agoನಾವು ತೆರೆದ ಪುಸ್ತಕ ಎಲ್ಲವನ್ನೂ ಎದುರಿಸೋದಕ್ಕೆ ಸಿದ್ಧರಿದ್ದೇವೆ: ಸಿಎಂ ಸಿದ್ದರಾಮಯ್ಯ
-
Chamarajanagar22 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Kodagu22 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
-
Mandya22 hours agoಡಿ.7 ರಂದು ದೆಹಲಿಯಲ್ಲಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ವಿಚಾರ ಸಂಕಿರಣ: ಎಚ್.ಕೆ.ರಾಮು
