Connect with us

National

 ಪಲಾಶ್ ಮುಚ್ಚಲ್‌ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್‌ ಹಂಚಿಕೆಕೊಂಡ ಸ್ಮೃತಿ ಮಂದಾನ

Published

on

ನವದೆಹಲಿ: ಪಲಾಶ್ ಮುಚ್ಚಲ್ ಅವರೊಂದಿಗೆ ಮದುವೆ ಮುಂದೂಡಿದ ಬಳಿಕ ಮಹಿಳಾ ಕ್ರಿಕೆಟ್‌ ತಂಡದ ಆಟಗಾರ್ತಿ ಸ್ಮೃತಿ ಮಂದಾನ  ಅವರು ಮೊದಲ ಪೋಸ್ಟ್‌ ಹಂಚಿಕೊಂಡಿದ್ದು, ಕೈಯಲ್ಲಿ ಎಂಗೇಜ್‌ಮೆಂಟ್‌ ರಿಂಗ್‌ ಕಾಣಿಸುತ್ತಿಲ್ಲ ಯಾಕೆ ಎಂದು ಫ್ಯಾನ್ಸ್‌ ಪ್ರಶ್ನಿಸಿದ್ದಾರೆ.

ಮಂದಾನ ಇಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೋ ಪ್ರಮುಖ ಟೂತ್‌ಪೇಸ್ಟ್‌ ಬ್ರ್ಯಾಂಡ್‌ವೊಂದರ ಜಾಹೀರಾತು ಪ್ರಚಾರವಾಗಿದೆ. ಆದರೆ, ಈ ವೀಡಿಯೋದಲ್ಲಿ ಮಂಧಾನ ಕೈ ಬೆರಳಿನಲ್ಲಿ ಉಂಗುರ ಇಲ್ಲದಿರುವುದು ಅಭಿಮಾನಿಗಳ ಗಮನ ಸೆಳೆದಿದೆ. ಜಾಹೀರಾತನ್ನು ನಿಶ್ಚಿತಾರ್ಥ ನಡೆಯುವ ಮೊದಲು ಚಿತ್ರೀಕರಿಸಲಾಗಿದೆಯೇ ಎಂಬುದು ತಿಳಿದಿಲ್ಲ. ಆದಾಗ್ಯೂ, ಜಾಹೀರಾತು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ.

12 ದಿನಗಳ ಹಿಂದೆ ಪಲಾಶ್‌ ಮುಚ್ಚಲ್‌ ಜೊತೆಗಿನ ಮದುವೆ ಮುಂದೂಡಲಾಯಿತು. ಏತನ್ಮಧ್ಯೆ, ಸ್ಮೃತಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಂದ ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ತೆಗೆದುಹಾಕಿದ್ದರು. ಇದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಯಿತು. ಎರಡೂ ಕುಟುಂಬಗಳ ಸದಸ್ಯರು ಆರೋಗ್ಯ ತುರ್ತು ಪರಿಸ್ಥಿತಿಗಳಿಂದಾಗಿ ವಿವಾಹ ಮುಂದೂಡಿಕೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನ.23 ರಂದು ಸಾಂಗ್ಲಿಯಲ್ಲಿ ಸ್ಮೃತಿ ಹಾಗೂ ಪಲಾಶ್‌ ಅವರ ಮದುವೆ ನಿಶ್ಚಯವಾಗಿತ್ತು. ಮದುವೆ ದಿನ ಸ್ಮೃತಿ ಮಂಧಾನ ತಂದೆಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಹೀಗಾಗಿ, ಮದುವೆ ಮುಂದೂಡಲಾಯಿತು. ಅದಾದ ಕೆಲ ದಿನಗಳ ಬಳಿಕ ಪಲಾಶ್‌ ಸಹ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.

ಸ್ಮೃತಿ ಮಂದಾನ ಮದುವೆ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು. ಇದುವರೆಗೂ ಮಂದಾನ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

Continue Reading

National

ಲೋಕಸಭೆಯಲ್ಲಿ Right to Disconnect Bill ಮಂಡಿಸಿದ ಸಂಸದೆ ಸುಪ್ರಿಯಾ ಸುಳೆ

Published

on

ನವದೆಹಲಿ: ಆಫೀಸ್‌ ಕೆಲಸದ ನಂತರವೂ ಉದ್ಯೋಗಿಗಳು ಕರೆ, ಇಮೇಲ್‌ಗಳಿಗೆ ಹಾಜರಾಗುವುದನ್ನು ತಡೆಯಲು ಅವಕಾಶ ನೀಡುವ ರೈಟ್‌ ಟು ಡಿಸ್‌ಕನೆಕ್ಟ್‌ ಬಿಲ್‌ ಲೋಕಸಭೆಯಲ್ಲಿ ಮಂಡನೆಯಾಗಿದೆ.

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರು ಈ ಖಾಸಗಿ ಮಸೂದೆಯನ್ನು ಮಂಡಿಸಿದ್ದಾರೆ. ಅಧಿಕೃತ ಕೆಲಸದ ಅವಧಿ ಮೀರಿ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು ಮತ್ತು ಇಮೇಲ್‌ಗಳಿಂದ ಸಂಪರ್ಕ ಕಡಿತಗೊಳಿಸುವ ಹಕ್ಕನ್ನು ಪ್ರತಿ ಉದ್ಯೋಗಿಗೆ ಈ ಮಸೂದೆ ನೀಡುತ್ತದೆ. ಇದರೊಂದಿಗೆ ನೌಕರರ ಕಲ್ಯಾಣ ಪ್ರಾಧಿಕಾರವನ್ನು ಸ್ಥಾಪಿಸಬೇಕೆಂಬ ಅಂಶ ಈ ಮಸೂದೆಯಲ್ಲಿದೆ.

ಸರ್ಕಾರ ಈ ಮಸೂದೆಯನ್ನು ಅಂಗೀಕರಿಸುವ ಸಾಧ್ಯತೆ ಬಹಳ ಕಡಿಮೆಯಿದೆ. ಹೆಚ್ಚಿನ ಸಂದರ್ಭಗಳಲ್ಲಿ ಸರ್ಕಾರವು ಪ್ರಸ್ತಾವಿತ ಮಸೂದೆಗೆ ಪ್ರತಿಕ್ರಿಯಿಸಿದ ನಂತರ ಖಾಸಗಿ ಸದಸ್ಯರ ಮಸೂದೆಗಳನ್ನು ಹಿಂಪಡೆಯಲಾಗುತ್ತದೆ.

ಏನಿದು ಖಾಸಗಿ ಮಸೂದೆ?

ಸಚಿವರಲ್ಲದ ಸಂಸತ್ ಸದಸ್ಯರು ಮಂಡಿಸುವ ಮಸೂದೆ ಇದಾಗಿದ್ದನ್ನು ಇದನ್ನು ಸರ್ಕಾರೇತರ ಮಸೂದೆ ಎಂದು ಕರೆಯುತ್ತಾರೆ. ಇದು ಸಾರ್ವಜನಿಕ ಮಸೂದೆಯ ವಿರುದ್ಧವಾಗಿದ್ದು, ಇದು ಒಬ್ಬ ವ್ಯಕ್ತಿ, ಗುಂಪು ಅಥವಾ ಪ್ರದೇಶದ ಮೇಲೆ ಪರಿಣಾಮ ಬೀರುವ ಕಾನೂನಿನ ಪ್ರಸ್ತಾವನೆಯಾಗಿರುತ್ತದೆ. ಸಂಸತ್ತಿನ ಖಾಸಗಿ ಸದಸ್ಯರು ಮಂಡಿಸುವ ಈ ಮಸೂದೆಯನ್ನು ಅಂಗೀಕರಿಸುವ ಪ್ರಕ್ರಿಯೆಯಲ್ಲಿ ಸರ್ಕಾರಿ ಮಸೂದೆಯಂತೆಯೇ ಅಂಗೀಕರಿಸಬೇಕಾಗುತ್ತದೆ.

Continue Reading

National

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸುವಂತೆ ಧರ್ಮೇಂದ್ರ ಪ್ರಧಾನ್‌ಗೆ ಪತ್ರ ಬರೆದ ಎಚ್‌ಡಿಕೆ

Published

on

ನವದೆಹಲಿ: ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು  ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಈ ಬಗ್ಗೆ ಸಚಿವ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು, ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುವ ಸಲುವಾಗಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುದೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ. ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮ ಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಹಾಗೂ ಸಮರ್ಪಣೆಯೊಂದಿಗೆ ಪ್ರತಿಯೊಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಅಪಾರ ಪ್ರಸ್ತುತತೆಯನ್ನು ಹೊಂದಿವೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಪ್ರಧಾನ ಮಂತ್ರಿಗಳು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಿಂದೂ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ವಸುದೈವ ಕುಟುಂಬ ಪರಿಕಲ್ಪನೆಯ ಬಗ್ಗೆ ಒತ್ತಿ ಹೇಳಿದರು. ಆ ಪವಿತ್ರ ಗ್ರಂಥ ಹೊಂದಿರುವ ಕಾಲಾತೀತ ಮೌಲ್ಯಗಳನ್ನು ಪುನರುಚ್ಚರಿಸಿದರು ಎಂಬುದನ್ನು ಶಿಕ್ಷಣ ಸಚಿವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮಕ್ಕೆ ಹಾಜರಾಗುವ ಸೌಭಾಗ್ಯ ನನಗೂ ಸಿಕ್ಕಿತ್ತು. ಅದೊಂದು ಸ್ಫೂರ್ತಿದಾಯಕ ಕಾರ್ಯಕ್ರಮವಾಗಿತ್ತು. ಗೀತೆಯನ್ನು ಪಠಿಸಲು ಮತ್ತು ಅದಕ್ಕೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಇದು ಅದ್ಭುತ ಅವಕಾಶವನ್ನು ನೀಡಿತು. ಹಲವಾರು ಸ್ಥಳೀಯ ನಾಯಕರು ಮತ್ತು ಪೋಷಕರು ಭಗವದ್ಗೀತೆಯ ಬೋಧನೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕೆಂದು ವಿನಂತಿಸಿದರು ಎಂಬ ಅಂಶದ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೌಲ್ಯಾಧರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ. ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶವನ್ನು ಬಲಪಡಿಸುತ್ತದೆ. ನಮ್ಮ ಯುವಕರು ಜಾಗತಿಕವಾಗಿ ಶ್ರೇಷ್ಠರಾಗಲು ಪ್ರೇರಕವಾಗುತ್ತದೆ. ಆದ್ದರಿಂದ, ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಶಿಕ್ಷಣ ಸಚಿವರನ್ನು  ಕೋರಿದ್ದಾರೆ.

ಪುಟಿನ್ ಅವರಿಗೆ ಭಗವದ್ಗೀತೆ: ಪ್ರಧಾನಿ ಮೋದಿಗೆ ಅಭಿನಂದನೆ

ಭಾರತ ಪ್ರವಾಸಕ್ಕೆ ಭೇಟಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿದ್ದಾರೆ. ಪುಟಿನ್ ಅವರಿಗೆ ಪ್ರಧಾನಿ ಮೋದಿ ಅವರು ಪವಿತ್ರ ಗ್ರಂಥ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿರುವುದು ಅತ್ಯಂತ ಶ್ಲಾಘನೀಯ.

ಭಾರತದ ಶ್ರೇಷ್ಠ ಪರಂಪರೆ ಮತ್ತು ನಮ್ಮ ಪುರಾಣದ ಹೆಗ್ಗುರುತುಗಳನ್ನು ಮತ್ತಷ್ಟು ಎತ್ತರಕ್ಕೇರಿಸಿ ಸಾರ್ವಕಾಲಿಕಗೊಳಿಸುವ ನಿಟ್ಟಿನಲ್ಲಿ ಪ್ರಧಾನಿಗಳ ದೃಷ್ಟಿಕೋನವು ನಮಗೆಲ್ಲರಿಗೂ ಅನುಕರಣೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನುಕುಲದ ದಾರಿದೀಪ, ಅರಿವಿನ ಬೆಳಕಾಗಿರುವ ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ, ಶಿಕ್ಷಣದ ಪ್ರತಿ ಹಂತದಲ್ಲಿಯೂ ಪಠ್ಯವಾಗಬೇಕು ಎಂಬುದು ನನ್ನ ಆಶಯ. ಈ ಬಗ್ಗೆ ಅಗತ್ಯ ಕ್ರಮ ವಹಿಸುವ ಬಗ್ಗೆ ನಾನು ಕೇಂದ್ರದ ಶಿಕ್ಷಣ ಮಂತ್ರಿಗಳಾದ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ವಿನಂತಿಸಿದ್ದೇನೆ. ಹಾಗೆಯೇ ನಮ್ಮ ನೆಲದ ಅನರ್ಘ್ಯ ಸಂಪತ್ತು ಶ್ರೀ ವಾಲ್ಮೀಕಿ ವಿರಚಿತ ರಾಮಾಯಣ ಮತ್ತು ಶ್ರೀ ವ್ಯಾಸ ವಿರಚಿತ ಮಹಾಭಾರತ ಮಹಾಕಾವ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡುವುದು ಅಗತ್ಯ ಎಂದು ಹೇಳಿದ್ದಾರೆ.

Continue Reading

National

ಸಂಚಾರ್ ಸಾಥಿ ಆ್ಯಪ್ ಇನ್ಸ್‌ಸ್ಟಾಲ್‌ ಕಡ್ಡಾಯವಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ

Published

on

ನವದೆಹಲಿ: ವಿರೋಧ ಪಕ್ಷಗಳಿಂದ ತೀವ್ರ ವಿರೋಧದ ನಂತರ ಕೇಂದ್ರ ಸರ್ಕಾರದಿಂದ ಸಂಚಾರ್ ಸಾಥಿ ಆ್ಯಪ್  ಪೂರ್ವ-ಸ್ಥಾಪನೆ  ಕಡ್ಡಾಯವಲ್ಲ ಎಂದು ದೂರ ಸಂಪರ್ಕ ಇಲಾಖೆ ತಿಳಿಸಿತ್ತು.

ಈ ಹಿಂದೆ ಕೇಂದ್ರ ಸರ್ಕಾರ ಮೊಬೈಲ್‌ಗಳಲ್ಲಿ ಸಂಚಾರ್ ಸಾಥಿ ಆ್ಯಪ್ ಪ್ರಿ-ಇನ್ಸ್‌ಸ್ಟಾಲ್‌ ಮಾಡಲು ಸ್ಮಾರ್ಟ್‌ಫೋನ್‌ ಕಂಪನಿಗಳಿಗೆ ಆದೇಶ ನೀಡಿತ್ತು. ಇದು ಜನತೆ ಮೇಲೆ ನಿರಂತರ ನಿಗಾ ವಹಿಸಲಿದೆ, ಸರ್ಕಾರ ಜನರ ಮೇಲೆ ಗೂಢಚಾರಿಕೆ ಮಾಡುತ್ತಿದೆ ಎಂದು ವಿಪಕ್ಷಗಳಿಂದ ತೀವ್ರ ವಿರೋಧದ ಬಳಿಕ ಕಡ್ಡಾಯ ರದ್ದುಗೊಳಿಸಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಎಲ್ಲಾ ನಾಗರಿಕರಿಗೆ ಸೈಬರ್ ಭದ್ರತೆಗೆ ಪ್ರವೇಶವನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ಎಲ್ಲಾ ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ್ ಸಾಥಿ ಆ್ಯಪ್‌ನ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸಿತ್ತು. ಈ ಆ್ಯಪ್ ಸುರಕ್ಷಿತವಾಗಿದೆ ಹಾಗೂ ಸೈಬರ್ ಜಗತ್ತಿನ ದುಷ್ಟ ಶಕ್ತಿಗಳಿಂದ ನಾಗರಿಕರಿಗೆ ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ. ಸಂಚಾರ್ ಸಾಥಿಯ ಹೆಚ್ಚುತ್ತಿರುವ ಸ್ವೀಕಾರವನ್ನು ಗಮನದಲ್ಲಿಟ್ಟುಕೊಂಡು, ಮೊಬೈಲ್ ತಯಾರಕರಿಗೆ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸದಿರಲು ಸರ್ಕಾರ ನಿರ್ಧರಿಸಿದೆ ಎಂದು ದೂರ ಸಂಪರ್ಕ ಇಲಾಖೆ ತಿಳಿಸಿದೆ.

Continue Reading

Trending

error: Content is protected !!