Connect with us

State

ನಾವೇಲ್ಲಾರೂ ಒಂದೇ ಜಾತಿ ಮತ ಪಂಥ ಬಿಟ್ಟು ಒಂದೇ ಎಂಬ ಭಾವನೆ ಬದುಕ ಬೇಕು: ಸೋಮಶೇಖರ್

Published

on

ಮದ್ದೂರು: ಪಟ್ಟಣದ ತಾಲೂಕು ಆಡಳಿತ ವತಿಯಿಂದ ತಾಲೂಕು ಕಛೇರಿಯ ಸಭಾಂಗಣದಲ್ಲಿ ಸಾಮಾಜಿಕ ಚಳವಳಿ ನೇತಾರ ಶ್ರೀ ನಾರಾಯಣ ಗುರು ರವರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರೇಟ್ 2 ತಹಸಿಲ್ದಾರ್ ಸೋಮಶೇಖರ್ ಶ್ರೀನಾರಾಯಣ ಗುರು ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಡಿದರು ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂದು ಪ್ರತಿಪಾದಿಸಿದ ಅವರು ನಾವೇಲ್ಲಾರೂ ಒಂದೇ ಜಾತಿ ಮತ ಪಂಥ ಬಿಟ್ಟು ಒಂದೇ ಎಂಬ ಭಾವನೆ ಬದುಕ ಬೇಕು ಎಂದು ತಿಳಿಸಿದರು .

ದಲಿತ ಸಾಹಿತ್ಯ ಪರಿಷತ್ ತಾಲೂಕು ಘಟಕ ಅಧ್ಯಕ್ಷ ಕೆ. ಟಿ. ಶಿವಕುಮಾರ್ ಮಾತನಾಡಿ, ಶ್ರೀ ನಾರಾಯಣ ಗುರು ಕೇರಳದಲ್ಲಿ ಈಳವ ಜಾತಿಯಲ್ಲಿ ಹುಟ್ಟಿದ ಇವರು ಶೂದ್ರರ ಮೇಲೆ ನಡೆಯುತ್ತಿದ್ದ ದೌರ್ಜನ್ಯದ ವಿರುದ್ಧ ಹೋರಾಡಿದ ಮಹಾ ಪುರುಷ ಇವರು ಕೇರಳದಲ್ಲಿ ಜಾತಿ ಮತ ಬೇಧ ಹೆಚ್ಚಾಗಿರುವುದನ್ನು ಕಂಡು ಅದರ ವಿರುದ್ಧ ಹೋರಾಡಿದ ಸಮಾಜ ಸುಧಾರಕರು ಎಲ್ಲಾರೂ ವಿದ್ಯಾವಂತರಾದರೆ ಸಮಾಜ ಬದಲಾವಣೆ ಸಾಧ್ಯ ಎಂದು ಸಾರಿದರು ಇವರ ಆಶಯದಂತೆ ಅಂಬೇಡ್ಕರ್ ರವರು ಸಂವಿಧಾನದ ಪೀಠಿಕೆಯಲ್ಲಿ ಸಮಾನತೆ, ಸಹೋದರತ್ವ, ಸಹಬಾಳ್ವೆಯು ಸಂದೇಶವನ್ನು ಅಳವಡಿಸಿದ್ದಾರೆ ಎಂದು ತಿಳಿಸಿದರು .

ಆರ್ಯ ಈಡಿಗರ ಸಂಘ ಅಧ್ಯಕ್ಷ ಎ.ಹೆಚ್. ನಾರಾಯಣ ಸ್ವಾಮಿ, ಗೋವಿಂದ ರಾಜ್ ಮಾತನಾಡಿದರು
ಕಾರ್ಯಕ್ರಮದಲ್ಲಿ ಅರ್ಯ ಈಡಿಗರ ಸಂಘ ಗೌರವಾಧ್ಯಕ್ಷ ತಮ್ಮಣ್ಣ ಉಪಾಧ್ಯಕ್ಷ ಓಬಳರಂಗ, ಅರೆಕಲ್ಲುದೋಡ್ಡಿ ನಾರಾಯಣ ಸ್ವಾಮಿ, ಕಾರ್ಯದರ್ಶಿ ಶ್ರೀನಿವಾಸ ,ಸೌಮ್ಯ, ಶಿವಪ್ಪ, ನಾಗರಾಜ್, ಸುರೇಶ್, ಅಹಿಂದ ಸಂರಕ್ಷಣಾ ವೇದಿಕೆಯ ಶ್ರೀನಿವಾಸ ಶೆಟ್ಟಿ, ಶಶಿಕುಮಾರ್, ಪಿ. ಆನಂದ ಚಾರ್,
ಬೂದಗುಪ್ಪೆ ಪುಟ್ಟಲಿಂಗಯ್ಯ, ಮಹದೇವ ,ನಾಗರಾಜ್ ಸೇರಿದಂತೆ ಇತರರು ಹಾಜರಿದ್ದರು.

Continue Reading

Politics

ಭಾರತವನ್ನು ಮುನ್ನಡೆಸುವುದಕ್ಕೆ ಪ್ರಧಾನಿ ಮೋದಿ ಅವರಿಂದ ಸಾಧ್ಯ: ಬಿ.ವೈ. ವಿಜಯೇಂದ್ರ

Published

on

ಬೆಂಗಳೂರು: ಪ್ರಧಾನಿ ಮೋದಿ ಅವರಿಂದ ಮಾತ್ರ ಭಾರತವನ್ನು ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಸಾರ್ವಜನಿಕರು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ. ವಿಜಯೇಂದ್ರ ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದ ಜನತೆ ಕಾಂಗ್ರೆಸ್ ಪಕ್ಷದ  ಬಗ್ಗೆ ಏಕೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಚರ್ಚಿಸಬೇಕು ಅಥವಾ ಚಿಂತನೇ ಮಾಡಬೇಕೆ ವಿನಾಃ ಇವಿಎಂ ಬಗ್ಗೆ ಪ್ರಶ್ನೆ ಮಾಡುತ್ತಿರುವುದು ಮುರ್ಖತನದ ಪರಮಾವಧಿ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಜೀ ಅವರಿಂದ ಮಾತ್ರ ಭಾರತವನ್ನ ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಜನ ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ  ಅವರು ಇದನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದೆ ಪ್ರಸ್ತುತ ಇವಿಎಂ  ಮೇಲೆ ದೂರುವುದು ಮತ್ತು ದೋಷಪೂರಿತ ಎಂದು ಕಾಂಗ್ರೆಸ್ ಹೇಳುತ್ತಿರುವುದು ಹುಚ್ಚುತನದ ಪರಮಾವಧಿ ಎಂದು ಲೇವಡಿ ಮಾಡಿದರು.

ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರಿಗೆ ಇವಿಎಂ ಮೇಲೆ ಏಕೆ ವಿಶ್ವಾಸ ಕಡಿಮೆ ಆಗಿದೆ? ರಾಹುಲ್ ಗಾಂಧಿಯವರು ಸತತವಾಗಿ 3 ಬಾರಿ ಕೇಂದ್ರ ಲೋಕಸಭಾ ಚುನಾವಣೆಯ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದರು.

ಬ್ಯಾಲೆಟ್ ಪೇಪರ್ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯು ಬ್ಯಾಲೆಟ್ ಪೇಪರ್‌ಗೆ ಹೆದರುವುದಿಲ್ಲ, ನಾವು ಏಕೆ ಹೆದರಬೇಕು? ಎಂದು ಕೇಳಿದರಲ್ಲದೇ ಕೇಂದ್ರದಲ್ಲಿ ಸತತವಾಗಿ 3 ಬಾರಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಇದೆ. ಬಿಜೆಪಿ ಬ್ಯಾಲೆಟ್ ಪೇಪರ್‌ಗೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಇವಿಎಂ ಬಗ್ಗೆಯೂ ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

Continue Reading

Special

ಮಕ್ಕಳ ಸಾಹಿತ್ಯ ರಚನೆ ಉತ್ತೇಜಿಸಲು 10 ಸಾವಿರ ರೂ. ಸಹಾಯಧನ : ಬೇಗ ಅರ್ಜಿ ಸಲ್ಲಿಸಿ

Published

on

ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಮಕ್ಕಳ ಸಾಹಿತ್ಯ ರಚನೆಯನ್ನು ಉತ್ತೇಜಿಸುವ ಸಲುವಾಗಿ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಸಾಹಿತ್ಯ ಅಷ್ಟೇ ಅಲ್ಲದೆ ಉದಯೋನ್ಮುಖ ಬರಹಗಾರರಿಂದ, ಕಥೆ, ನಾಟಕ, ಜೀವನ ಚರಿತ್ರೆ, ಪ್ರವಾಸ ಕಥನ, ಕವಿತೆ ಹಾಗೂ ಕಾದಂಬರಿ ಬರೆಯುವಂತ ಸಾಹಿತಿಗಳಿಂದಲೂ ಕೂಡ ಮೂಲ ಬರಹಗಳನ್ನು ಆಹ್ವಾನಿಸಿದೆ.

ಇಂತಹ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವಂತಹ ಸಾಹಿತಿಗಳು ಒಂದು ಮಾದರಿ ಮತ್ತು ಇತರೆ ವಿವರಗಳೊಂದಿಗೆ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾಗುವಂತಹ ಸಾಹಿತಿಗಳಿಗೆ ಗರಿಷ್ಟ ಹತ್ತು ಸಾವಿರ ರೂಪಾಯಿಯವರೆಗ ಫೆಲೋಷಿಪ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಮಾಹಿತಿ :

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಗೂಗಲ್ ಫಾರ್ಮ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು.
ಗೂಗಲ್ ಫಾರಂ ಲಿಂಕ್ – https://forms.gle/zdy9nKeboxB2kuAm7

ಅರ್ಜಿ ಸಲ್ಲಿಸುವವರು ನವೆಂಬರ್ 30ನೇ ತಾರೀಖಿನ ಒಳಗಾಗಿ ಸಲ್ಲಿಸಬೇಕು.

Continue Reading

Hassan

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಈಗ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್‌

Published

on

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಅತ್ಯಾಚಾರ ಪ್ರಕರಣದಲ್ಲಿ  ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು,  ಪರಪ್ಪನ ಅಗ್ರಹಾರದಲ್ಲಿ  ಸಾಮಾನ್ಯ ಕೈದಿಗಳಂತೆ ತಮ್ಮ ತಪ್ಪಿಗೆ ಶಿಕ್ಷೆಯನ್ನ ಅನುಭವಿಸುತ್ತಿದ್ದಾರೆ.

ಜೈಲಾಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ನೀಡುವುದು ಹಾಗೂ ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಪ್ರಜ್ವಲ್‌ ಸದ್ಯ ಒಂದು ದಿನದ ಮಟ್ಟಿಗೆ  ಕೆಲಸ ಮಾಡಿದ್ದು, ದಿನಗೂಲಿಯಾಗಿ ದಿನಕ್ಕೆ 522 ರೂ. ಗಳನ್ನು ನೀಡಲಾಗುತ್ತದೆ.  ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ.

ಇನ್ನೂ ಟ್ರಯಲ್ ಕೋರ್ಟ್‌ಗೆ ಆಗಾಗ ಬರಬೇಕಾಗಿರುವುದರಿಂದ ಹಾಗೂ ವಕೀಲರ ಜೊತೆ ಇತರೆ ಪ್ರಕರಣಗಳ ಸಂಬಂಧ ಚರ್ಚೆ ಮಾಡಬೇಕಾಗಿರುವ ಕಾರಣ ಪ್ರಜ್ವಲ್‌  ಅವರನ್ನು ಪೂರ್ತಿ ಕೆಲಸಕ್ಕೆ ನಿಯೋಜಿಸಿಲ್ಲ.

Continue Reading

Trending

error: Content is protected !!