Hassan
ಶ್ರೀ ಸೋಮೇಶ್ವರ ದೇವಸ್ಥಾನ ಉದ್ಘಾಟನಾ ಮಹೋತ್ಸವ
ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ವತಿಯಿಂದ ನೂತನವಾಗಿ ನಿರ್ಮಿಸಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮ ದಿನಾಂಕ 18-2-2024 ರಂದು ಬಾನುವಾರ ಮಧ್ಯಾಹ್ನ 3-00 ಘಂಟೆಗೆ ಗಂಗಾ ಪೂಜೆ, ವೀರಗಾಸೆ ಮಂಗಳವಾದ್ಯ ದೊಂದಿಗೆ ಗೋಮಾತೆ ನೂತನ ವಿಗ್ರಹ, ಶಿಖರ ಕಳಸದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ಕಾರ್ಯಕ್ರಮ ನಡೆಯಲಿದೆ. ಸಂಜೆ 6-00 ಘಂಟೆಗೆ ದೇವಸ್ಥಾನದ ಪ್ರವೇಶ, ಗಣಪತಿ ಪೂಜೆಯೊಂದಿಗೆ ಪುಣ್ಯಾಹ, ನಾಂದಿ, ನವಗ್ರಹ, ಮೃತ್ಯುಂಜಯ ಏಕಾದಶ ರುದ್ರ ಅಷ್ಟದಿಕ್ಪಾಲಕ, ಅಷ್ಟ ಲಕ್ಷ್ಮಿ, ಲಕ್ಷ್ಮೀ ನಾರಾಯಣ, ಉಮಾ ಮಹೇಶ್ವರಿ ಹೋಮ ಹವನಾದಿಗಳು ಪ್ರಾಣ ಪ್ರತಿಷ್ಠಾಪನೆಯ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ರಾತ್ರಿ 7-00 ಘಂಟೆಗೆ ಪಾದಪೂಜೆ ಹಾಗೂ ಧಾರ್ಮಿಕ ಸಂದೇಶವನ್ನು ಪರಮ ಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮಠಾಧೀಶರು, ಸುತ್ತೂರು ಮಠ ಮೈಸೂರು. ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುವರು.

ದಿನಾಂಕ 19-2-2024 ರಂದು ಸೋಮವಾರ ಬೆಳಗ್ಗೆ 6-00 ಘಂಟೆಗೆ ಅಭಿಷೇಕ ಅರ್ಚನೆ, ನೇತ್ರೋನ್ಮಿಲನ, ಪ್ರಾಣ ಪ್ರತಿಷ್ಠಾಪನೆ, ಶಿಖರ ಕಳಸ ಸ್ಥಾಪನೆ , ಪೂರ್ಣಾಹುತಿ ಹಾಗೂ ಮಹಾಮಂಗಳಾರತಿ ಅರಕಲಗೂಡು ದೊಡ್ಡ ಮಠದ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ರವರ ನೇತೃತ್ವದಲ್ಲಿ ಹಾಗೂ ವೇ ಗಿರೀಶ್ ಸ್ವಾಮಿ, ವೇ ಮಹಾದೇವ ಸ್ವಾಮೀ ಹಾವೇರಿ, ಶ್ರೀ ಸೋಮೇಶ್ವರ ದೇವಸ್ಥಾನದ ಅರ್ಚಕರಾದ ಶ್ರೀ ಶಿವಲಿಂಗಯ್ಯ ಹಾಗೂ ನಮೋ ಸೋಮಶೇಖರ್ ಬ್ಯಾಡರಹಳ್ಳಿ ಇವರ ನೇತೃತ್ವದಲ್ಲಿ ಗ್ರಾಮಸ್ಥರೊಂದಿಗೆ ಕಳಸರೋಹಣ ನಡೆಯುವುದು. ನಂತರ
ಬೆಳಿಗ್ಗೆ 11-00 ಘಂಟೆಗೆ ಧಾರ್ಮಿಕ ಸಮಾರಂಭ ನಡೆಯಲಿದೆ.
ಧಾರ್ಮಿಕ ಸಮಾರಂಭದ ಸಾನ್ನಿಧ್ಯವನ್ನು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಠಾಧೀಶರು ದೊಡ್ಡ ಮಠ ಅರಕಲಗೂಡು ಹಾಗೂ ಸರ್ಪಭೂಷಣ ಮಠ ಬೆಂಗಳೂರು ವಹಿಸುವರು. ಕಾರ್ಯಕ್ರಮದಲ್ಲಿ ಪರಮ ಪೂಜ್ಯರಾದ ಶ್ರೀ ಕಲ್ಯಾಣ ಮಹಾ ಸ್ವಾಮೀಜಿ ಸಿದ್ದರಾಮೇಶ್ವರ ಮಠ ತೇಜೂರು.ಶ್ರೀ ಸದಾಶಿವ ಸ್ವಾಮೀಜಿ. ಕಿರಿಕೋಡ್ಲಿ ಮಠ. ಶ್ರೀ ಮಹಾಂತ ಮಹಾ ಸ್ವಾಮೀಜಿ ಕಲ್ಲಮಠ.ಶ್ರೀ ಸಂಗಮೇಶ್ವರ ಸ್ವಾಮೀಜಿ ಜವನಹಳ್ಳಿ ಮಠ.ಶ್ರೀ ವಿಜಯ ಕುಮಾರ್ ಸ್ವಾಮೀಜಿ ತಣ್ಣೀರು ಹಳ್ಳ ಮಠ.ಶ್ರೀ ಸದಾಶಿವಚಾರ್ಯ ಸ್ವಾಮೀಜಿ ಕಾರ್ಜುವಳ್ಳಿ. ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಟಿ. ಮಹಾಗೌಡನಹಳ್ಳಿ. ಶ್ರೀ ಬಸವ ಮಹಾಂತ ಮಹಾಸ್ವಾಮೀಜಿ ಚಂಗಡಹಳ್ಳಿ ಮಠದ ಸ್ವಾಮೀಜಿ ರವರು ಸಾನಿಧ್ಯ ವಹಿಸಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು ನೆರವೇರಿಸುವರು.ಕಾರ್ಯಕ್ರಮದ ನೇತೃತ್ವ ವನ್ನು ಹೆಚ್ ಡಿ ರೇವಣ್ಣ ವಹಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಕಟ್ಟಾಯ ಆಲೂರು ಸಕಲೇಶಪುರ ಕ್ಷೇತ್ರದ ಶಾಸಕ ರಾದ ಸಿಮೆಂಟ್ ಮಂಜು ವಹಿಸುವರು.ಮುಖ್ಯ ಅಥಿತಿ ಗಳಾಗಿ ಹಾಸನ ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ.ವಿಧಾನಪರಿಷತ್ ಸದಸ್ಯರಾದ ಸೂರಜ್ ರೇವಣ್ಣ.ಶಾಸಕರಾದ ಹೆಚ್ ಪಿ ಸ್ವರೂಪ್. ಹುಲ್ಲ ಹಳ್ಳಿ ಸುರೇಶ್. ಮಾಜಿ ಶಾಸಕರಾದ ಹೆಚ್ ಕೆ ಕುಮಾರ್ ಸ್ವಾಮಿ. ಪ್ರೀತಮ್ ಗೌಡರು. ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸಿದ್ದೇಶ್ ನಾಗೇಂದ್ರ. ಹಾಸನ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ರಾದ ಎಸ್ ದ್ಯಾವೇಗೌಡರು. ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರಾದ ರವಿನಾಕಲಗೂಡ್. ಹಾಸನ ತಾಲ್ಲೂಕು ತಹಶೀಲ್ದಾರ್ ಶ್ರೀಮತಿ ಶ್ವೇತಾ ರವೀಂದ್ರ್. ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಕಟ್ಟಾಯ ಶಿವಕುಮಾರ್. ಹಾಸನ ಆಕಾಶವಾಣಿ ಮುಖ್ಯಸ್ಥ ರಾದ ಡಾ ವೀಜಯ ಅಂಗಡಿ. ಶಿವಬಸಪ್ಪ ಅಧ್ಯಕ್ಷರು ಬ್ಯಾಡರಹಳ್ಳಿ ನಾಗರಿಕ ಕ್ಷೇಮಾಭಿವೃದ್ಧಿ ಸಂಘ. ಬಿ. ಅರ್.ಶಿವಪ್ಪ.ಉಪಾದ್ಯಾಕ್ಷರು ನಾಗರಿಕ ಕ್ಷೇಮಾಭಿವೃದ್ಧಿ ಸಂಘ ಬ್ಯಾಡರಹಳ್ಳಿ. ಕೆ.ಸಿ ಹೇಮಚಂದ್ರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೆಸ್ಕಾಂ. ಡಾ. ದಿನೇಶ್ ಬೈರೇಗೌಡ ಮಕ್ಕಳ ತಜ್ಞರು ಅರಕ,ಗೂಡು.ರಾಜಶೇಖರ್ ಶಿವಗಂಗಾ ಗ್ರಾನೈಟ್ಸ್ ಹಾಸನ . ಶ್ರೀ ಮಧುಸೂದನ್ ಗ್ರಾಮ ಪಂಚಾಯಿತಿ ಸದಸ್ಯರು ಬ್ಯಾಡರಹಳ್ಳಿ. ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳು. ದೇವಸ್ಥಾನದ ದಾನಿಗಳು. ಬ್ಯಾಡರಹಳ್ಳಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸುವರು

ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಸುತ್ತ ಮುತ್ತಲಿನ ಗ್ರಾಮಸ್ಥರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಬ್ಯಾಡರಹಳ್ಳಿ ಗ್ರಾಮಸ್ಥರು ಕೋರಿದ್ದಾರೆ.
Hassan
2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
ಬೆಂಗಳೂರು/ಹಾಸನ: ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಏತ್ತಿನಹೊಳೆ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲು ಈ ಮೂರು ಜಿಲ್ಲೆಗಳ ನೀರಿನ ಸಮಸ್ಯೆಗೆ ಪರಿಹಾರ ನೀಡುವುದೇ ಮುಖ್ಯ ಉದ್ದೇಶ. ಈ ಉದ್ದೇಶ ಈಡೇರಬೇಕಾದರೆ ಬಾಕಿ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಲಾಯಿತು.
ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕೋಲಾರ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಎಂಸಿ ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಭಾಗಿಯಾಗಿದ್ದರು. ಈ ಸಭೆಯಲ್ಲಿ, “2027ರಲ್ಲಿ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರು ಹರಿಯುವುದನ್ನು ಖಚಿತಪಡಿಸುವಂತೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಲಾಯಿತು.

ಸಚಿವರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೆಶಕರಾದ ರಾಜೇಶ್ ಅಮ್ಮಿನಭಾವಿ ಹಾಗೂ 3 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಓಗಳು, ಎಸ್ಎಲ್ಓ ಗಳು ಉಪಸ್ಥಿತರಿದ್ದು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ.
ಪ್ರಮುಖವಾಗಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಯ ಗಡಿಯವರೆಗೆ ತರಲು ಕಾಮಗಾರಿ ಪ್ರಗತಿಯಲ್ಲಿದೆ. ಮುಂದೆ ದೊಡ್ಡಬಳ್ಳಾಪುರದಿಂದ ಕುಂದಾಣ ಮಾರ್ಗವಾಗಿ ಒಂದು ಪೈಪ್ ಲೈನ್ ಕೋಲಾರ ಹಾಗೂ ಬಂಗಾರಪೇಟೆ ಕಡೆಗೆ, ಮತ್ತೊಂದು ಪೈಪ್ ಲೈನ್ ಚಿಂತಾಮಣಿ ಶ್ರೀನಿವಾಸಪುರ ಮಾರ್ಗವಾಗಿ ಮುಳಬಾಗಿಲು ಕಡೆಗೆ ಅಳವಡಿಸಲು ಕೂಡಲೇ ಕಾಮಗಾರಿ ಆರಂಭಿಸಲು ಸಭೆಯಲ್ಲಿ ಸೂಚಿಸಲಾಯಿತು.

ಈ ಪೈಪ್ ಲೈನ್‌ಗಳು ಒಟ್ಟು 261.90 ಕಿ.ಮೀ. ದೂರು ಅಳವಡಿಸಬೇಕಿದೆ. ಪೈಪ್ ಲೈನ್ ಅಳವಡಿಸಲು ಅಗತ್ಯವಿರುವ ಭೂ ಸ್ವಾಧೀನವನ್ನು ಕೂಡಲೇ ಮಾಡಲು ಭೂ ಸ್ವಾಧೀನ ಅಧಿಕಾರಿಗಳಿಗೆ ಸೂಚಿಸಲಾಯಿತು. ಭೂ ಸ್ವಾಧೀನ ಆದೇಶ ಹೊರಡಿಸಿದ ಭಾಗದಲ್ಲಿ ಪೈಪ್ ಲೈನ್ ಅಳವಡಿಕೆಯನ್ನು ಕೂಡಲೇ ಆರಂಭಿಸಲು ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮುಂದುವರೆದು, ಕುಡಿಯುವ ನೀರು ಒದಗಿಸಬೇಕಾದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀರು ಶುದ್ದೀಕರಣ ಘಟಕ ಹಾಗೂ ಗ್ರಾಮಗಳಿಗೆ ನೀರು ತಲುಪಿಸುವ ಪೈಪ್ ಲೈನ್ಗಳನ್ನು ಅಳವಡಿಸಲು ಅಂದಾಜು ಪಟ್ಟಿ ಹಾಗೂ ಪ್ರಸ್ತಾವನೆಗಳನ್ನು ಕೂಡಲೇ ತಯಾರಿಸಿ ಅನುಮೋದನೆಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಒಟ್ಟಾರೆ 2027ರ ಅಂತ್ಯಕ್ಕೆ ನೀರನ್ನು ಈ ಮೂರೂ ಜಿಲ್ಲೆಗಳಿಗೆ ತಲುಪಿಸಲು ಮತ್ತು ನೀರನ್ನು ಶುದ್ದೀಕರಿಸಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸಂಬಂಧಿತ ಎಲ್ಲಾ ಇಲಾಖೆಗಳು ಸಮನ್ವಯದಿಂದ ಮತ್ತು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತೀರ್ಮಾನಿಸಲಾಯಿತು.
Hassan
ವಿಧಾನಸೌಧದಲ್ಲಿ ಕಾರ್ಯಕಲಾಪ ವೀಕ್ಷಿಸಿದ ಎನ್.ಕೆ. ಗಣಪಯ್ಯ ಕಿವುಡ, ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು
ಹಾಸನ: ಸಕಲೇಶಪುರದ ಕೌಡಹಳ್ಳಿಯಲ್ಲಿರುವ ಎನ್.ಕೆ. ಗಣಪಯ್ಯ ಕಿವುಡ ಮತ್ತು ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸದನದ ಕಾರ್ಯಕಲಾಪ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ ಸದನದ ವೀಕ್ಷಣೆಗೆ ಅನುವು ಮಾಡಿಕೊಟ್ಟರು.
Hassan
ಹಾಸನ ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡಣೆ: ಕರಡು ಪ್ರಕಟ
ಹಾಸನ: ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಪ್ರಕಾರ, 2011 ರ ಜನಗಣತಿ ಆಧಾರದ ಮೇರೆಗೆ ಹಾಸನ ಮಹಾನಗರ ಪಾಲಿಕೆಗೆ ವಾರ್ಡ್‌ಗಳನ್ನು ಪುನರ್ ವಿಂಗಡಣೆ ನಿಗದಿ ಪಡಿಸಿ ರಾಜ್ಯ ಸರ್ಕಾರ ಕರಡನ್ನು ಪ್ರಕಟಿಸಿದೆ.
ವಾರ್ಡ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಹಿಂದೆ ನಗರಸಭೆ ಅವಧಿಯಲ್ಲಿ ಇದ್ದಷ್ಟೇ ಅಂದರೆ 35 ವಾರ್ಡ್‌ಗಳೇ ಈಗಲೂ ಮುಂದುವರಿದಿವೆ.
ಆದರೆ ಹಾಸನ ಮಹಾನಗರ ಪಾಲಿಕೆಯಾದ ನಂತರ ಎಲ್ಲ 35 ವಾರ್ಡ್‌ಗಳ ವ್ಯಾಪ್ತಿ ಮತ್ತು ವಿಸ್ತೀರ್ಣ ಹಿಗ್ಗಿದೆ.

ಇದೀಗ ಆಯಾ ವಾರ್ಡ್‌ಗಳಿಗೆ ಸಂಬಂಧಿಸಿದ ಗಡಿ ವ್ಯಾಖ್ಯಾನ(ಚೆಕ್ಕುಬಂದಿ) ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಹಾಸನ ಮಹಾನಗರ ಪಾಲಿಕೆಯ ಕರಡು ವಾರ್ಡ್‌ವಾರು ಕ್ಷೇತ್ರ ಪುನರ್‌ವಿಂಗಡಣಾ ಮಾಹಿತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ.

ಈ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ೧೫ ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
ಈ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು, ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು ಹಾಸನ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಬೇಕೆಂದು ಮಂಜುನಾಥ್ ಅವರು ಸೂಚಿಸಿದ್ದಾರೆ.
-
Kodagu7 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu6 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
Politics46 minutes agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
National2 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Hassan22 hours agoಎಸ್ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್ಡಿಪಿಐ ಮುಖಂಡ
-
Special22 hours agoಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ
-
Hassan3 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
State23 hours agoಕಮಿಷನ್ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
