Connect with us

State

ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅರೆಸ್ಟ್….!

Published

on

ಸೋಶಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅರೆಸ್ಟ್ ಆಗಿದ್ದಾರೆ. ಸೋನುಗೌಡ ಇತ್ತೀಚೆಗೆ ಸೇವಂತಿ ಎಂಬ ಏಳು ವರ್ಷದ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದರು. ಕಾನೂನತ್ಮಕವಾಗಿ ಮಗುವನ್ನು ದತ್ತು ಪಡೆದಿಲ್ಲ ಎಂದು ಮಕ್ಕಳ ಕಲ್ಯಾಣ ಸಮಿತಿಯಿಂದ ಸೋನು ವಿರುದ್ಧ ದೂರು ನೀಡಿದ್ದಾರೆ. ಸೋನುಗೆ ಸಾಥ್‌ ನೀಡಿದ ಮಗುವಿನ ತಂದೆ ತಾಯಿಗೂ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಏಳು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಿಗ್ ಬಾಸ್ ಕನ್ನಡ ಒಟಿಟಿ’ (Bigg Boss OTT) ಸೀಸನ್ ಮೂಲಕ ಸೋನುಗೌಡ ಫೇಮಸ್ ಆಗಿದ್ದರು.

Continue Reading
Click to comment

Leave a Reply

Your email address will not be published. Required fields are marked *

State

ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕುರುಬೂರು ಶಾಂತಕುಮಾರ್‌ ಶಿಫ್ಟ್‌

Published

on

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದು ಶಾಂತಕುಮಾರ್ ಅವರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುವುದು.

ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಶಾಂತಕುಮಾರ್ ಅವರಿಗೆ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

Continue Reading

State

ಜಲಜೀವನ್‌ ಮಿಷನ್‌ಗೆ ಅನುದಾನವಿಲ್ಲ: ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ ಎಂದ ಸಿಎಂ

Published

on

ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿದ್ದ ಕೇಂದ್ರ ಸಚಿವ ಸೋಮಣ್ಣ ಇವರು ಈ ದ್ರೋಹವನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಜಲಜೀವನ್‌ ಮಿಷನ್‌ ಅನ್ನು ಹಾಳುಗೆಡವಲು ಬಿಜೆಪಿ ಉದ್ದೇಶಪೂರಿತ ಸಂಚು ರೂಪಿಸಿದೆ. ಆ ಮೂಲಕ ಕರ್ನಾಟಕದ ಹಿತಾಶಕ್ತಿಗೆ ದ್ರೋಹ ಬೆಗೆದಿದೆ ಎಂದು ದೂರಿದ್ದಾರೆ.

https://x.com/siddaramaiah/status/1890706784882671833

ಟ್ವಿಟ್ಟರ್‌ನಲ್ಲೇನಿದೆ?

ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು!

ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಳ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಗಮನಿಸಿದರೆ ಉದ್ದೇಶಪೂರ್ವಕವಾಗಿ ಈ ಯೋಜನೆಯನ್ನು ಹಾಳುಗೆಡವಲು ಮುಂದಾಗಿರುವಂತಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿದ್ದ ಕೇಂದ್ರ ಸಚಿವ ಸೋಮಣ್ಣ ಇವರು ಈ ದ್ರೋಹವನ್ನು ಮುಚ್ಚಿಹಾಕಲು ಸುಳ್ಳು ಹೇಳುತ್ತಿದ್ದಾರೆ.

ಇಲ್ಲಿದೆ ನೋಡಿ ಸತ್ಯ:

ಜೆಜೆಎಂ ( ಜಲಜೀವನ್ ಮಿಷನ್)ಗೆ ಒಟ್ಟು ಹಂಚಿಕೆ – ₹49,262 ಕೋಟಿ (ಕೇಂದ್ರದ ಪಾಲು – ₹26,119 ಕೋಟಿ, ರಾಜ್ಯದ ಪಾಲು – ₹23,142 ಕೋಟಿ)

ಬಿಡುಗಡೆಯಾದ ಒಟ್ಟು ಅನುದಾನ – ₹32,202 ಕೋಟಿ (ಕೇಂದ್ರದ ಪಾಲು – ₹11,760 ಕೋಟಿ, ರಾಜ್ಯದ ಪಾಲು – ₹20,442 ಕೋಟಿ)

ಕರ್ನಾಟಕದ ಒಟ್ಟು ಖರ್ಚು – ₹29,413 ಕೋಟಿ

ಕೇಂದ್ರದ ಪಾಲು
₹26,119 ಕೋಟಿ ಹಂಚಿಕೆ
ಕೇವಲ ₹11,760 ಕೋಟಿ ಬಿಡುಗಡೆಯಾಗಿದೆ – ಶೇ. 45ರಷ್ಟು ಮಾತ್ರ ಬದ್ಧತೆಯನ್ನು ಹೊಂದಿದೆ.

ರಾಜ್ಯದ ಪಾಲು
₹23,142 ಕೋಟಿ ಹಂಚಿಕೆ
₹20,442 ಕೋಟಿ ಬಿಡುಗಡೆ – ಶೇ. 88.3ರಷ್ಟು ಹೆಚ್ಚಿನ ಮೊತ್ತ!

ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ ಪ್ರತಿಯೊಂದು ರೂಪಾಯಿಯನ್ನು ರಾಜ್ಯ ಸರ್ಕಾರವು ಉದ್ದೇಶಿತ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನದ ಪಾಲನ್ನು ನೀಡಲು ನಿರಾಕರಿಸುತ್ತಾ ಬಂದಿದೆ.

2024-25ನೇ ಸಾಲಿನ ಬಜೆಟ್‌ನಲ್ಲಿ – ಕೇಂದ್ರದ ನಿರ್ಲಕ್ಷ್ಯ ಧೋರಣೆ ಮುಂದುವರೆದಿದೆ

ಕೇಂದ್ರ ಸರ್ಕಾರವು ಜೆಜೆಎಮ್ ಗೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ₹570 ಕೋಟಿ ಮಾತ್ರ ಬಿಡುಗಡೆಯಾಗಿರುತ್ತದೆ. ಈ ವಿಚಾರವಾಗಿ ಹಲವಾರು ಪತ್ರಗಳನ್ನು ಬರೆದು ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ. ಮತ್ತೊಂದೆಡೆ, ಕರ್ನಾಟಕವು ತನ್ನ ಬಜೆಟ್ ನಲ್ಲಿ ₹7,652 ಕೋಟಿ ಹಂಚಿಕೆ ಮಾಡಿದ್ದು, ₹4,977 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.

ಇದು ಕೇವಲ ಕರ್ನಾಟಕಕ್ಕೆ ಸಂಬಂಧಿಸಿದ್ದು ಮಾತ್ರ ಅಲ್ಲ – ಇದು ದೇಶದ ಎಲ್ಲಾ ರಾಜ್ಯಗಳಿಗೆ ಮಾಡುತ್ತಿರುವ ಅನ್ಯಾಯ.
ಜೆಜೆಎಂ (2024-25) ಗಾಗಿ ಅಂದಾಜು ಬಜೆಟ್ – ₹70,163 ಕೋಟಿ
ಪರಿಷ್ಕೃತ ಅಂದಾಜು ಮೊತ್ತವನ್ನು ಕೇವಲ ₹22,694 ಕೋಟಿಗೆ ಇಳಿಸಲಾಗಿದೆ.

ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಜೆಟ್ ನಲ್ಲಿ ಅಗತ್ಯ ಪ್ರಮಾಣದ ಅನುದಾನ ನೀಡದೆ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಕೊಲ್ಲುತ್ತಿದೆ. ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅನ್ಯಾಯವನ್ನು ಪ್ರಶ್ನಿಸಬೇಕಿದ್ದ ಸಚಿವ ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಿರ್ಲಜ್ಜರಾಗಿ ತಪ್ಪು ಮಾಹಿತಿಯನ್ನು ಹರಡಿ ಕನ್ನಡಿಗರಿಗೆ ದ್ರೋಹ ಎಸಗುತ್ತಿದ್ದಾರೆ.

ಈ ರೀತಿ ಜನರನ್ನು ದಾರಿ ತಪ್ಪಿಸುವ ಬದಲು, 2024-25 ಸಾಲಿನ ಬಜೆಟ್‌ನಲ್ಲಿ ಜೆಜೆಎಂಗೆ ಹಂಚಿಕೆಯಾಗಿದ್ದ ಪೂರ್ಣ ಅನುದಾನವನ್ನು ಯಾಕೆ ನೀಡಿಲ್ಲ ಎಂದು ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು.

ಬಿಜೆಪಿಯ ಇಂತಹ ಕೃತ್ಯಗಳ ಹೊರತಾಗಿಯೂ ಕರ್ನಾಟಕದಲ್ಲಿ ನಮ್ಮ ಸರ್ಕಾರವು ನುಡಿದಂತೆ ನಡೆದು ಉತ್ತಮ ಸಾಧನೆ ಮಾಡಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿದ್ದರೂ, ಜಲ ಜೀವನ್‌ ಮಿಷನ್‌ ಯೋಜನೆಯ ಮುಖಾಂತರ ಪ್ರತಿ ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ನೀಡಲು ಬದ್ಧವಾಗಿದ್ದೇವೆ ಎಂದು ಸುದೀರ್ಘವಾಗಿ ಬರೆದುಕೊಂಡು ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ

Continue Reading

State

ಅಂಚೆ ಇಲಾಖೆಯಲ್ಲಿ SSLC ಪಾಸಾದವರಿಗೆ ಬೃಹತ್ ನೇಮಕಾತಿ : ಪರೀಕ್ಷೆ ಇಲ್ಲದೆ ನೇರ ನೇಮಕಾತಿ

Published

on

Post office jobs for 10th Pass : ಭಾರತೀಯ ಅಂಚೆ ಇಲಾಖೆಯಲ್ಲಿ 10ನೇ ತರಗತಿ ಪಾಸಾಗಿರುವಂತಹ ಅಭ್ಯರ್ಥಿಗಳಿಗೆ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದಾರೆ.

ಭಾರತ ದೇಶಾದ್ಯಂತ ಒಟ್ಟು 21,413 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಅದರಲ್ಲಿ ಕರ್ನಾಟಕ ರಾಜ್ಯಕ್ಕೆ 1,135 ಹುದ್ದೆಗಳನ್ನು ಮಿಸಲೀಡಲಾಗಿದೆ. ವಿಶೇಷವೇನೆಂದರೆ ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ನೇರವಾಗಿ ಅವರು 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಆದ್ದರಿಂದ ಇದೊಂದು ಉತ್ತಮ ಅವಕಾಶವಾಗಿದೆ.

ಯಾರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ?

ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಅರ್ಹರಿರುತ್ತಾರೆ.

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳು :

• ಗ್ರಾಮೀಣ ಡಾಕ್ ಸೇವಕ
• ಬ್ರಾಂಚ್ ಪೋಸ್ಟ್ ಮಾಸ್ಟರ್

ಆನ್ಲೈನ್ ಮುಕಾಂತರ ಅರ್ಜಿ ಸಲ್ಲಿಕೆಯ ಅವಧಿ:
10 ಫೆಬ್ರವರಿ 2025 ರಿಂದ 03 ಮಾರ್ಚ್ 2025 ರ ವರೆಗೆ

• ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ರಾಜ್ಯವಾರು & ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ:
https://indiapostgdsonline.gov.in/

Continue Reading

Trending

error: Content is protected !!