Mandya
ಮಾಘ ಶುದ್ದ ಹುಣ್ಣಿಮೆ ಅಂಗವಾಗಿ ನಿಮಿಷಾಂಬ ದೇವಾಲಯದಲ್ಲಿ ವಿಶೇಷ ಪೂಜೆ
ಶ್ರೀರಂಗಪಟ್ಟಣ : ಮಾಘ ಶುದ್ದ ಹುಣ್ಣಿಮೆ ಮಹೋತ್ಸವದ ಅಂಗವಾಗಿ ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನ ಶ್ರೀ ನಿಮಿಷಾಂಬ ದೇವಾಲಯದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
ಶನಿವಾರ ಮಧ್ಯರಾತ್ರಿ ಯಿಂದಲೇ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದ್ದು, ದೇವಾಲಯದ ಪ್ರಧಾನ ಅರ್ಚಕ ಸೂರ್ಯನಾರಾಯಣ ಭಟ್ ನೇತೃತ್ವದ ವೈದಿಕರ ತಂಡ ದೇವಿಗೆ ಪಂಚಾಮೃತ ಅಭಿಷೇಕ, ಪೂರ್ವಕ ಮಹಾಭಿಷೇಕ ಸೇವೆ, ಗಣಹೋಮ, ನಕ್ಷತ್ರ ಹೋಮ, ದುರ್ಗಾ ಹೋಮ ಹಾಗೂ ಸತ್ಯನಾರಾಯಣ ಪೂಜೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ಮಾಘ ಮಾಸದ ಹುಣ್ಣಿಮೆ ಯಲ್ಲಿ ಇಲ್ಲಿನ ಕಾವೇರಿ ನದಿಯಲ್ಲಿ ಮಿಂದು ಶಕ್ತಿ ದೇವತೆ ಶ್ರೀ ನಿಮಿಷಾಂಬ ದೇವಿ ದರ್ಶನ ಪಡೆದರೆ ಒಳಿತಾಗಲಿದೆ ಎಂಬ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಸಹಸ್ರಾರು ಭಕ್ತರು ಮಾಘ ಸ್ನಾನ ಮಾಡಿ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು, ತಮ್ಮ ಕಷ್ಟ ಕಾಪ್ಣ್ಯಗಳನ್ನು ನೀಗಿಸುವಂತೆ ಪ್ರಾರ್ಥನೆ ಸಲ್ಲಿಸಿದರು.
ದೇವಾಲಯದ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳಿಂದ ಭಕ್ತಿ ಗೀತೆ, ಸಂಗೀತ ಹಾಗೂ ರಸಸಂಜೆ ಕಾರ್ಯಕ್ರಮಗಳು ನಡೆದು, ಇಡೀ ರಾತ್ರಿ ಆಗಮಿಸಿದ ಭಕ್ತರಿಗೆ ರಸದೌತಣ ನೀಡಿತು. ಬಂದ ಭಕ್ತರಿಗೆ ಮಧ್ಯ ರಾತ್ರಿಯಿಂದ ಭಾನುವಾರ ಸಂಜೆವರೆಗೂ ಪ್ರಸಾದ ರೂಪದಲ್ಲಿ ತಿಂಡಿ ಸೇರಿದಂತೆ ಅನ್ನಸಂತರ್ಪಣೆ ಯನ್ನು ಬೆಂಗಳೂರಿನ ದಾನಿಯೊಬ್ಬರು ನೆರವೇರಿಸಿದರು.

ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಯಾನಂದ್ ಸೇರಿದಂತೆ ಸಮಿತಿ ಸದಸ್ಯರು, ದೇವಾಲಯದ ಇಒ ಮಹೇಶ್ ಸೇರಿದಂತೆ ತಾಲೂಕು ಆಡಳಿತದ ಸಿಬ್ಬಂದಿ ವರ್ಗ ಇತರರು ಇದ್ದರು.
Mandya
ವಿವಿಧೆಡೆ ಚಿನ್ನಾಭರಣ ಕಳವು ಮಾಡಿದ್ದ ಖದೀಮರ ಸೆರೆ ; 35 ಲಕ್ಷ ರೂ. ಮೌಲ್ಯದ ಮಾಲುಗಳ ವಶ
ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ನಾನಾ ಭಾಗಗಳಲ್ಲಿ ಕಳವು ಪ್ರಕರಣಗಳಿಗೆ ಸಂಬಂದಿಸಿದಂತೆ ಸುಮಾರು 35 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ.ವಿ.ಜೆ.ಶೋಭರಾಣಿ ತಿಳಿಸಿದರು.
ಮಳವಳ್ಳಿ ತಾಲೂಕಿನ ಪಟ್ಟಣ ವ್ಯಾಪ್ತಿಯ ಮನೆಗಳ್ಳತನ, ಸಾಗ್ಯ ಸರಗೂರು ಗ್ರಾಮದ ಪಟ್ಟಲದಮ್ಮ ದೇವಾಸ್ಥಾನದಲ್ಲಿ ಕಳ್ಳತನ ಪೈಕಿ 168 ಗ್ರಾಂ ಚಿನ್ನ, 291 ಗ್ರಾಂ ಬೆಳ್ಳಿ ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರರಕಣದಲ್ಲಿ 19 ಬೈಕ್‌ಗಳನ್ನು ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ಮಳವಳ್ಳಿ ಟೌನ್‌ನ ಗಂಗಾಧರ್ ಅವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ 16 ವರ್ಷದ ಬಾಲಕ ಹಾಗು ಆತನ ತಂದೆ ಬಾಬ್‌ಜಾನನ್ನು ಬಂಧಿಸಲಾಗಿದೆ. ತನಿಖೆಯ ವೇಳೆ ಮಳವಳ್ಳಿ ಪುರ ಪೊಲೀಸ್ ಠಾಣೆಯಲ್ಲಿ 3 ಹಲಗೂರು ಹಾಗೂ ಬನ್ನೂರು ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣದ ಪೈಕಿ ಒಟ್ಟು 20 ಲಕ್ಷ ರೂ ಮೌಲ್ಯದ 144 ಗ್ರಾಂ ಚಿನ್ನ, 46 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಪಿಎಸ್‌ಐಗಳಾದ ಶಿವಲಿಂಗ ದಳವಾಯಿ ಲೋಕೇಶ್, ಎಎಸ್‌ಐಗಳಾದ ಎಂ.ಬಿ.ಸುರೇಶ್, ರಮೇಶ್, ಸಿಬ್ಬಂದಿಗಳಾದ ಮಾದೇಶ್, ಹರ್ಷವರ್ಧನ್, ವಿಖಾಶ್, ಸಿದ್ದರಾಜು, ರಫೀಕ್ ನಧಾಫ್, ಮಂಜು ಕಾರ‍್ಯನಿರ್ವಹಿಸಿದ್ದಾರೆ ಎಂದರು.
ಸಾಗ್ಯ ಸರಗೂರು ಗ್ರಾಮದ ಶ್ರೀಪಟ್ಟಲದಮ್ಮ ದೇವಸ್ಥಾನದ ಬಾಗಿಲು ಒಡೆದು ಕಳ್ಳತನ ಪ್ರಕರಣದಲ್ಲಿ ತಮಿಳುನಾಡಿನ ವಿಜಯ್, ಮಣಿ, ಮಂಡ್ಯದ ಮಧುರ, ಭರತ್, ರಾಮನಗರದ ನವೀನ್, ಮೈಸೂರಿನ ಶಬ್ಬೀರ್ ಎನ್ನುವವರನ್ನು ಬಂಧಿಸಲಾಗಿದೆ. ಎಲ್ಲರ ವೃತ್ತಿ ಚಿಂದಿ ಆಯುವುದು, ಪಾತ್ರೆ ರಿಪೇರಿ ಮಾಡುವುದಾಗಿದೆ. ಆರೋಪಿಗಳ ಮೇಲೆ ಹಲಗೂರು ಠಾಣಾ ವ್ಯಾಪ್ತಿಯಲ್ಲಿ 4 ಪ್ರಕರಣಗಳಿವೆ. ಅವುಗಳಿಂದ ಮೌಲ್ಯದ 24 ಗ್ರಾಂ ಚಿನ್ನ, 245 ಗ್ರಾಂ ಬೆಳ್ಳಿ, 5094 ರೂ ಹುಂಡಿ ಹಣ, ಎರಡು ಜತೆ ದೀಪಾಲೆ ಕಂಬ, ಎರಡು ಪೂಜಾ ತಟ್ಟೆ, 5 ಗಂಟೆ, ಬೈಕ್ ಮತ್ತು ಗೂಟ್ಸ್ ಆಟೋ ಹಾಗೂ ಎರಡು ಮೇಕೆಗಳ ಮಾರಾಟದ ಹಣ ಸೇರಿ ಒಟ್ಟು 7,17,844 ರೂ. ವಶಕ್ಕೆ ಪಡೆಯುವಲ್ಲಿ ಠಾಣೆಯ ಪಿಎಸ್‌ಐ ಲೋಕೇಶ್, ರಿಯಾಜ್ ಪಾಷ, ಪ್ರಭುಸ್ವಾಮಿ, ರವಿಕಿರಣ್, ಲೋಕೇಶ್, ಸಿದ್ದರಾಜು, ಮೋಹನ್‌ಕುಮಾರ್, ರಫಿಕ್ ನಧಾಫ್ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಮಳವಳ್ಳಿ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಬಳಿ ಬೈಕ್ ಕಳ್ಳತನ ಬೇದಿಸಿರುವ ಟೌನ್ ಪೊಲೀಸರು ಮೈಸೂರಿನ ಕೆ.ಕಾರ್ತಿಕ್ ಮಳವಳ್ಳಿಯ ಎಸ್.ಎಸ್.ಸಾಗರ್ ಮತ್ತು ಎಂ.ಸಿ.ಪ್ರಜ್ವಲ್ ಎಂಬ ರೋಪಿಗಳನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಬನ್ನೂರು ಠಾಣಾ ವ್ಯಾಪ್ತಿಯಲ್ಲಿ 10, ಕೊಳ್ಳೇಗಾಲ ಟೌನ್‌ನಲ್ಲಿ 2, ಕೊಳ್ಳೇಗಾಲ ಗ್ರಾಮಾಂತರ, ಮಂಡ್ಯ ಪಶ್ಚಿಮ ವ್ಯಾಪ್ತಿಯಲ್ಲಿ ತಲಾ 2, ಮೈಸೂರು ನಗರ, ಮಳವಳ್ಳಿ, ಕಿರುಗಾವಲು ಠಾಣಾ ವ್ಯಾಪ್ತಿಯಲ್ಲಿ ತಲಾ 1 ಪ್ರಕರಣಗಳಿಂದ 19 ಬೈಕ್ ವಶಕ್ಕೆ ಪಡೆಯಲಾಗಿದೆ. ಕರ‍್ಯಾಚರಣೆಯಲ್ಲಿ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಶಿವಲಿಂಗ ದಳವಾಯಿ, ಎಎಸ್‌ಐಗಳಾದ ಸುರೇಶ್, ಗೋಪಾಲ್, ಸಿಬ್ಬಂದಿಗಳಾದ ಮಾದೇಶ್, ಮಹದೇವಸ್ವಾಮಿ, ಹರ್ಷವರ್ಧನ್, ಪ್ರಭುಸ್ವಾಮಿ, ರಿಯಾಜ್ ಪಾಷಾ, ವಿಕಾಶ್, ಶ್ರೀನಿವಾಸ್, ಮಧುಕಿರಣ್ ಭಾಗವಹಿಸಿದ್ದರು. ಎಲ್ಲ ಪ್ರಕರಣಗಳನ್ನು ಡಿವೈಎಸ್‌ಪಿ ಎಸ್.ಬಿ.ಯಶವಂತ್‌ಕುಮಾರ್, ಸಿಐ ಬಿ.ಎಸ್.ಶ್ರೀಧರ್ ಮಾರ್ಗದರ್ಶನದಲ್ಲಿ ಬೇದಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಸಿಬ್ಬಂದಿ ವರ್ಗದ ಕಾರ್ಯವನ್ನು ಅವರು ಶ್ಲಾಘಿಸಿದರು.
Mandya
ಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
ಪಾಂಡವಪುರ : ಪುಸ್ತಕ ಮನೆ ಸ್ಥಾಪನೆ ಮಾಡಿ ಇಪ್ಪತ್ತು ಭಾಷೆಯ ಇಪ್ಪತ್ತು ಲಕ್ಷಕ್ಕೂ ಅಧಿಕ ಪುಸ್ತಕಗಳನ್ನು ಸಂಗ್ರಹಿಸಿ ವಿಶಿಷ್ಟ ಸಾಧನೆ ಮಾಡಿರುವ ಅಂಕೇಗೌಡ ಅವರ ಪುಸ್ತಕ ಪ್ರೀತಿ ಇಂದಿನ ಯುವಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು.
ತಾಲೂಕಿನ ಹರಳಹಳ್ಳಿಯಲ್ಲಿರುವ ಪುಸ್ತಕ ಮನೆಯಲ್ಲಿ 2026 ನೇ ಸಾಲಿನ ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಎಂ..ಅಂಕೇಗೌಡ ಅವರನ್ನು ಪುಸ್ತಕ ಪ್ರಾಧಿಕಾರದ ವತಿಯಿಂದ ಗೌರವ ಸಮರ್ಪಣೆ ಮಾಡಿ ಅವರು ಮಾತನಾಡುತಿದ್ದರು.
ನಾವು ಪುಸ್ತಕ ಪ್ರೀತಿಯನ್ನು ಉತ್ತೇಜಿಸುವ ಸಲುವಾಗಿ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆ ಆರಂಭಿಸಿದ್ದೇವೆ. ಆದರೆ ಅಂಕೇಗೌಡರ ಮನೆಯ ಈ ಗ್ರಂಥಾಲಯ ನಿಬ್ಬೆರಗಾಗಿಸುವಂತಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಪುಸ್ತಕಗಳನ್ನು ಒಬ್ಬ ವ್ಯಕ್ತಿ ತನ್ನ ಸ್ವಂತ ಪರಿಶ್ರಮ ಮತ್ತು ಆಸಕ್ತಿಯಿಂದ ಸಂಗ್ರಹ ಮಾಡಿರುವುದು ಅತ್ಯಂತ ಅಚ್ಚರಿಯ ಸಂಗತಿ. ಅವರ ಈ ಸಾಧನೆ ಶಾಶ್ವತವಾಗಿ ಉಳಿಯುತ್ತದೆ. ಇದರ ಮೂಲಕ ಜ್ಞಾನದ ತಳಹದಿಯ ಮೇಲೆ ದೇವಾಲಯ ಕಟ್ಟುವುದು ಹೇಗೆ ಎಂಬುದನ್ನು ಅಂಕೇಗೌಡರು ತೋರಿಸಿಕೊಟ್ಟಿದ್ದಾರೆ. ಜನ ದೇವಾಲಯಗಳಿಗೆ ಮತ್ತು ತಮ್ಮ ಭಕ್ತಿಯ ಕಾಣಿಕೆಗಾಗಿ ಖರ್ಚು ಮಾಡುವ ಶೇಕಡಾ 10%ರಷ್ಟನ್ನಾದರು ಪುಸ್ತಕ ಕೊಂಡುಕೊಳ್ಳಲು ಉಪಯೋಗಿಸಿದ್ದಲ್ಲಿ ಪುಸ್ತಕ ಲೋಕದ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಅಂಕೇಗೌಡರ ಅಂತಿಮ ಕಾಲದಲ್ಲಿ ಯಾರು ಬರಲಿ, ಬಿಡಲಿ, ಸರ್ಕಾರ ಅವರ ಮನೆ ಮುಂದೆ ಇರುತ್ತದೆ. ಅವರ ಸಾಧನೆಗೆ ಸಂದಗೌರವ ಇದಾಗಿದೆ ಎಂದು ಅವರು ತಿಳಿಸಿದರು. ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಅಂಕೇಗೌಡರು, ತಮ್ಮ ಹಿಂದಿನ ದಿನಗಳನ್ನು ನೆನೆದು ಭಾವುಕರಾದರು. ತಾವು ಬಸ್ ಕಂಡೆಕ್ಟರ್ ಆಗಿ ಕೆಲಸ ಮಾಡುತಿದ್ದ ದಿನಗಳಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಂಡ ಅವರು ನಂತರ ಆ ಕೆಲಸ ತೊರೆದು ಪಾಂಡವಪುರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕೆ ಸೇರಿ ಪುಸ್ತಕ ಮನೆ ಸ್ಥಾಪಿಸಿದ ಸಂದರ್ಭವನ್ನು ಕುರಿತು ವಿವರಿಸಿದರು.
ಈ ಪುಸ್ತಕಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಿಡುವುದೇ ನನ್ನ ದೊಡ್ಡ ಕನಸು ಎಂದ ಅವರು, ಇಲ್ಲಿಗೆ ಬರುವ ಸಂಶೋಧನಾ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಹಾಗೂ ತಂಗಲು ಕಟ್ಟಡವೊಂದರ ಅವಶ್ಯಕತೆ ಇದೆ ಎಂದು ಹೇಳಿದರು.
ಈ ವೇಳೆ ಸಾರ್ವಜನಿಕ ಗ್ರಂಥಾಲಯ ಆಯುಕ್ತ ಹೆಚ್. ಬಸವರಾಜೇಂದ್ರ, ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಹಾಗೂ ಖ್ಯಾತ ಪತ್ರಕರ್ತ, ಬರಹಗಾರ ರಾಜಶೇಖರ ಕದಂಬ, ರಾಮಣ್ಣ, ತಿಪ್ಪಣ್ಣ ಹಾಗೂ ಶ್ರೀನಿವಾಸ ಕರಿಯಪ್ಪ ಅವರು ಉಪಸ್ಥಿತರಿದ್ದರು.
Mandya
ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅನ್ನ ದಾಸೋಹ
ಮಂಡ್ಯ: ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಮಮತೆಯ ಮಡಿಲು ನಿತ್ಯ ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂದಿಕರಿಗೆ ಮೈಸೂರಿನ ಯಶಸ್ವಿನಿ ಗೃಹ ನಿರ್ಮಾಣ ಸಹಕಾರ ಸಂಘದ ಉಪಾಧ್ಯಕ್ಷ ಹಾಗೂ ಎಂ.ಶ್ರೀನಿ ವಾಸ್ ಪ್ರತಿಷ್ಠಾನದ ನಿರ್ದೇಶಕ ಬಿ.ಗೌಡಗೆರೆ ಮಹೇಂದ್ರ ಅವರ ನೇತೃತ್ವದಲ್ಲಿ ಅನ್ನ ದಾಸೋಹ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಎಂ. ಶ್ರೀನಿವಾಸ್ ಅವರು ಮೂರು ಬಾರಿ ಶಾಸಕರಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಜನಮನ್ನಣೆ ಗಳಿಸಿರುವ ಅವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು ಇನ್ನು ಹೆಚ್ಚಿನ ಶಕ್ತಿ ಕೊಡಲಿ ಎಂದು ಶುಭ ಹಾರೈಸಿದರು.

ಪರಿಸರ ಸಂಸ್ಥೆಯ ಮಂಗಲ ಯೋಗೇಶ್ ಮಾತನಾಡಿ, ಎಂ.ಶ್ರೀನಿವಾಸ್ ಅವರು ಮೂರು ಬಾರಿ ಶಾಸಕರಾಗಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾಗಿ, ಹನಕೆರೆಯಲ್ಲಿ ವಿದ್ಯಾಸಂಸ್ಥೆ ಪ್ರಾರಂಭಿಸುವ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವ ಮೂಲಕ 40 ವರ್ಷಗಳಿಂದ ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಎಂ.ಶ್ರೀನಿವಾಸ್ ಅವರ ಹುಟ್ಟು ಹಬ್ಬದ ಅಂಗವಾಗಿ ಗೌಡಗೆರೆ ಮಹೇಂದ್ರ ಅವರು ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಗಂಜಿ ಹಾಗೂ ಉಪಹಾರ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ತಿಳಿಸಿದರು.
ಈ ವೇಳೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ.ರಘು, ಕೆರಗೋಡು ವಿದ್ಯಾ ಸಂಸ್ಥೆ ಉಪಾಧ್ಯಕ್ಷ ವಿಜಯ ಭಾಸ್ಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
-
Cinema21 hours ago17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
-
Hassan1 hour agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Mandya6 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Hassan1 hour agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
State4 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
National3 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
Manglore28 minutes agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan23 hours agoವಿಜೃಂಭಣೆಯಿಂದ ಜರುಗಿದ ಡೆಕ್ಕನ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ 7ನೇ ವರ್ಷದ ವಾರ್ಷಿಕೋತ್ಸವ
