Connect with us

Mandya

ರಾಜ್ಯದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಅಲೆ: ವೆಂಕಟರಮಣೇಗೌಡ (ಸ್ಟಾರ್ ಚಂದ್ರು)

Published

on

ಶ್ರೀರಂಗಪಟ್ಟಣ: ಬಡವರಿಗೆ ಬದುಕು ಕಟ್ಟಿಕೊಟ್ಟ ಪಕ್ಷ ಕಾಂಗ್ರೆಸ್. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬಿದ ಪಕ್ಷ ಕಾಂಗ್ರೆಸ್. ಗ್ಯಾರಂಟಿ ಯೋಜನೆಗಳಿಗೆ ರಾಜ್ಯದೆಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಸರ್ಕಾರ ಅಸ್ತಿತ್ವಕ್ಕೆ ಬಂದಂತೆ ಕೇಂದ್ರಲ್ಲೂ ಗ್ಯಾರಂಟಿ ಸರ್ಕಾರ ರಚನೆಯಾಗಲಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತಿಗಳಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರೊಂದಿಗೆ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.

ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಮತದಾರರು ಕಾಂಗ್ರೆಸ್ ಗೆ ಬೆಂಬಲ ನೀಡಬೇಕು. ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾಂಗ್ರೆಸ್ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಈಗಾಗಲೇ ರಾಜ್ಯದ ಜನತೆಯ ಮನೆಬಾಗಿಲಿಗೆ ಗೃಹಲಕ್ಷ್ಮಿ ಕಾಲಿಟ್ಟಿದ್ದು ಮುಂದೆ ಮಹಾಲಕ್ಷ್ಮಿ ಕೂಡ ಬರಲಿದ್ದಾಳೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಅಲೆ ಜೋರಾಗಿದೆ. ಗ್ಯಾರಂಟಿ ಅಲೆ ಮುಂದೆ ಯಾವ ಅಲೆಯೂ ಇಲ್ಲ. ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳು ಜನರ ವಿಶ್ವಾಸ, ನಂಬಿಕೆಯನ್ನು ಹೆಚ್ಚಿಸಿದೆ. ಈ ಚುನಾವಣೆಯಲ್ಲಿ ಅವುಗಳೆಲ್ಲಾ ನನಗೆ ವರದಾನವಾಗಲಿದೆ ಎಂದು ಹೇಳಿದರು.

ಕೃಷಿಕರ ನಂತರ ಕಾರ್ಮಿಕ ವರ್ಗ ದೇಶದ ಅರ್ಥವ್ಯವಸ್ಥೆಗೆ ಅಡಿಪಾಯ. ಶ್ರಮಿಕ ವರ್ಗದ ಹಕ್ಕುಗಳನ್ನು ಮರಳಿಸಿ ಅವರ ಭವಿಷ್ಯ ರೂಪಿಸಬೇಕಿದೆ.  ಸಂವಿಧಾನ ರಕ್ಷಣೆಗಾಗಿ, ಪ್ರಜಾಪ್ರಭುತ್ವದ ಉಳುವಿಗಾಗಿ ಈ ಜಿಲ್ಲೆಯ ಸ್ವಾಭಿಮಾನದ ಅಸ್ತಿತ್ವಕ್ಕಾಗಿ ಮತದಾರರು ಕಾಂಗ್ರೆಸ್ ಬೆಂಬಲಿಸುವ ಮೂಲಕ ಜನಶಕ್ತಿ ನೀಡಬೇಕೆಂದು ಮನವಿ ಮಾಡಿದರು.

ಹೋದ ಕಡೆಯಲೆಲ್ಲ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬಿಸಿಲಿನಲ್ಲೂ ಜನರು ನನ್ನನ್ನು ನೋಡಲು ಸೇರುತ್ತಿದ್ದಾರೆ. ಮಹಿಳೆಯರು, ವೃದ್ಧರು, ಯುವಕರು ಕಾಂಗ್ರೆಸ್ ನತ್ತ ಒಲವು ವ್ಯಕ್ತಪಡಿಸುತ್ತಿದ್ದಾರೆ. ನೂರಕ್ಕೆ ನೂರು ಗೆಲುವು ನಿಮ್ಮದೆ ಎಂದು ಹೇಳುತ್ತಿರುವುದನ್ನು ಕೇಳಿದರೆ ನನ್ನ ಗೆಲುವಿನ ಆತ್ಮವಿಶ್ವಾಸ ಡಬಲ್ ಆಗಿದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Mandya

ದಿನ ನಿತ್ಯ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ : ಎಸ್ಪೀ ಎನ್.ಯತೀಶ್

Published

on

ಮಂಡ್ಯ: ಪ್ರತಿದಿನ ಯೋಗಾಭ್ಯಾಸವನ್ನು ಮಾಡುವುದರಿಂದ ಉತ್ತಮ ಆರೋಗ್ಯವನ್ನು ರೂಪಿಸಿಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ತಿಳಿಸಿದರು.

ಅವರು ಮಂಡ್ಯ ನಗರದ ಪೊಲೀಸ್ ಪೆರೆಡ್ ಮೈದಾನದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಆಚರಣೆಯ ಸಂಬಂಧ ಇಂದು ಪೊಲೀಸ್ ಇಲಾಖೆಯ ಪೆರೆಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗೋತ್ಸವದಲ್ಲಿ ಸುಮಾರು 300 ಜನ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಭ್ಯಾಸ ಮಾಡಿದ್ದು ಬಹಳ ಖುಷಿಯಾಯಿತು ಇದೇ ರೀತಿ ಪ್ರತಿದಿನ ಕೂಡ ಯೋಗಾಭ್ಯಾಸವನ್ನು ಮಾಡಿ ಎಂದು ಹೇಳಿದರು.

ಆರೋಗ್ಯದ ಕಡೆಗೆ ಹೆಚ್ಚಿನ ಒಲವು ಕೊಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಸಾರ್ವಜನಿಕರು ಯೋಗಾಭ್ಯಾಸವನ್ನು ಮಾಡಿ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ ಎಂದು ಹೇಳಿದರು.

ಮನುಷ್ಯನಿಗೆ ನೀರು ಅತಿ ಮುಖ್ಯವಾದ ಅಂಶ ಎಂದು ಡಾ.ಸೀತಾಲಕ್ಷ್ಮಿ ಹೇಳಿದರು.
ದಿನ ನಿತ್ಯ ಜೀವನದಲ್ಲಿ ಸುಮಾರು ಜನರು ನೀರನ್ನು ಬಹಳ ಕಮ್ಮಿ ಕುಡಿಯುತ್ತಾರೆ ಇದರಿಂದ ಆರೋಗ್ಯದ ಸಮಸ್ಯೆ ಗಳು ಹೆಚ್ಚಾಗಿ ಕಾಡುತ್ತವೆ. ನೀರು ಕಡಿಮೆ ಕುಡಿಯುವುದರಿಂದ ಕಿಡ್ನಿಯಲ್ಲಿ ಸ್ಟೋನ್ ತೊಂದರೆ, ಸುಸ್ತು, ಆಯಾಸ ಮತ್ತು ಚರ್ಮದ ತೊಂದರೆಗಳು ಉಂಟಾಗುತ್ತದೆ.

ಆದ್ದರಿಂದ ಒಂದು ಹೊತ್ತು ಊಟ ಕಡಿಮೆ ಮಾಡಿದರು ಕೂಡ ನೀರು ಕುಡಿಯುವುದನ್ನು ಕಮ್ಮಿ ಮಾಡಬಾರದು ನೀರು ಆರೋಗ್ಯಕ್ಕೆ ಬಹಳ ಮುಖ್ಯ ಎಂದು ಹೇಳಿದರು.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದರೆ ನಮ್ಮ ದಿನ ನಿತ್ಯ ಆಹಾರದ ಪದ್ದತಿಯಲ್ಲಿ ಹೆಚ್ಚಾಗಿ ನೀರು ಕುಡಿಯುವ ಅಭ್ಯಾಸ, ಹಸಿ ತರಕಾರಿ ಗಳು, ಹಣ್ಣು ಹಂಪಲು, ಮೊಳಕೆ ಕಟ್ಟಿದ ಕಾಳುಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು ಎಂದರು.

ಮಾಂಸಹಾರ ಸೇವನೆ ಮಾಡುವುದು ತಪ್ಪಲ್ಲ ಆದರೆ ಪ್ರತಿದಿನ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ ಆದ್ದರಿಂದ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎ.ಎಸ್‌.ಪಿ ತಿಮ್ಮಯ್ಯ, ಡಿ.ವೈ.ಎಸ್.ಪಿ.ಗಂಗಾಧರ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading

Mandya

ಸಹಭಾಗಿತ್ವದ ನೀರಾವರಿ ಆಡಳಿತ ನಡೆಸಲು ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಅತ್ಯಗತ್ಯ

Published

on

ಮಂಡ್ಯ: ಸಹಭಾಗಿತ್ವದ ನೀರಾವರಿ ಆಡಳಿತ ನಡೆಸಲು ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಅತ್ಯಗತ್ಯ ಎಂದು ಮಂಗಲ ನೀರು ಬಳಕೆದಾರರ ಸಹಕಾರ ಸಂಘದ ನಿರ್ದೇಶಕ ಮಂಗಲ ಯೋಗೇಶ್ ಆಗ್ರಹ ಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಭಾಗಿತ್ವದಲ್ಲಿ ನೀರಾವರಿ ಆಡಳಿತವನ್ನು ಪ್ರಾರಂಭಿಸಿ ಆ ಮೂಲಕ ರೈತರಲ್ಲಿ ನೀರು ನಿರ್ವಹಣೆ, ನೀರಿನ ಮಿತ ಬಳಕೆ ಮತ್ತು ಸದ್ಬಳಕೆ ಮಾಡುವ ಮಹತ್ವಾಕಾಂಕ್ಷೆಯೊಡನೆ ಪ್ರಾರಂಭಿಸಿದ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆ ಅವಶ್ಯಕವಾಗಿದೆ. ಹಾಗಾಗಿ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಕಳೆದ ಮೂರು ದಶಕಗಳಿಂದಲೂ ನೀರು ಬಳಕೆದಾರರ ಸಹಕಾರ ಸಂಘಗಳು ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಸಾಧಿಸಿಲ್ಲ .ಈ ಸಂಬಂಧ ನೀರು ಬಳಕೆದಾರರ ಸಹಕಾರ ಸಂಘ ,ವಿತರಣಾ ವ್ಯಾಪ್ತಿಯ ಒಕ್ಕೂಟ, ಅಣೆಕಟ್ಟೆ ವ್ಯಾಪ್ತಿಯಲ್ಲಿ ಯೋಜನಾ ಮಟ್ಟದ ಮಹಾಮಂಡಳ, ರಾಜ್ಯಮಟ್ಟದಲ್ಲಿ ಶೃಂಗ ಮಹಾ ಮಂಡಳಗಳ ರಚನೆಯನ್ನು ಜರೂರಾಗಿ ಮಾಡಬೇಕಿದೆ ಎಂದರು.

ವಿಕೇಂದ್ರಿತ ಸಂಘಗಳ ಕಾರ್ಯ ಚಟುವಟಿಕೆಗಳು ಪ್ರಸಕ್ತ ಪರಿಣಾಮಕಾರಿಯಾಗಿ ನಡೆಯಬೇಕಾದರೆ ಈ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಿದೆ. ಯೋಜನೆಗಿಂತ ಮುನ್ನ 2000ನೇ ಇಸವಿಯಲ್ಲಿ ಕರ್ನಾಟಕ ಸರ್ಕಾರ ನೀರಾವರಿ ಕಾಯಿದೆಗೆ ತಿದ್ದುಪಡಿ ತಂದಿರುವುದು ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗೆ ಸಹಕಾರಿಯಾಗಿದ್ದು, ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ರಾಷ್ಟ್ರೀಯ ಬ್ಯಾಂಕುಗಳು ರೈತರಿಗೆ ಸಾಲ ವಿತರಿಸುವಾಗ ನೀರು ಬಳಕೆದಾರರ ಸಹಕಾರ ಸಂಘಗಳಿಂದಲೇ ಬಾಕಿ ಪ್ರಮಾಣಪತ್ರವನ್ನು ಪಡೆದುಕೊಳ್ಳುವಂತೆ ಸೂಚಿಸಬೇಕು. ಕೇಂದ್ರ ಸರ್ಕಾರದ ಧನಸಹಾಯದ ಕಾರ್ಯಕ್ರಮದಲ್ಲಿ ನೀರು ಬಳಕೆದಾರರ ಸಂಘಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ವಾರ್ಷಿಕ ಕಾರ್ಯ ಧನವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಬೇಕು. ವಿಸಿ ನಾಲಾ ಆಧುನಿಕರಣ ಕಾಮಗಾರಿಯನ್ನು ನಿಲ್ಲಿಸಿ ಮುಂಗಾರಿನಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಮಹಾಮಂಡಲಗಳಿಗೆ ಶೇರುಧನವಾಗಿ ಒಂದು ಕೋಟಿ ರೂಪಾಯಿಗಳನ್ನು ಸರ್ಕಾರ ನೀಡಿ ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊತ್ತತ್ತಿ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಕೆ ಎಸ್ ರವಿ, ಎಂ ಬಿ ಸುರೇಶ, ಚನ್ನಪ್ಪ, ಚಂದ್ರಶೇಖರ ಸೇರಿದಂತೆ ಇತರರು ಉಪಸ್ಥಿತರಿದ್ದರು

Continue Reading

Mandya

ಆರೋಗ್ಯಯುತವಾದ ಜೀವನಕ್ಕಾಗಿ 1 ಗಂಟೆ ಸಮಯವನ್ನು ಮೀಸಲಿಡಿ: ಡಾ: ಸೀತಾಲಕ್ಷ್ಮಿ

Published

on

ಮಂಡ್ಯ: ಆರೋಗ್ಯಯುತ ಜೀವನಕ್ಕಾಗಿ ಪ್ರತಿದಿನ ಯೋಗ, ವ್ಯಾಯಮ, ವಾಕ್ ಯಾವುದಾದರೂ ದೈಹಿಕ ಚಟುವಟಿಕೆಗೆ ಒಂದು ಗಂಟೆ ಮೀಸಲಿಡಿ ಎಂದು ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಸೀತಾ ಲಕ್ಷ್ಮಿ ಅವರು ಹೇಳಿದರು.

ಅವರು ಮಿಮ್ಸ್ ಇಲಾಖೆಯಲ್ಲಿ ಹಮ್ಮಿಕೊಂಡಿದ್ದ ಯೋಗೋತ್ಸವ ಕಾರ್ಯಕ್ರಮವನ್ನು ಕುರಿತು ಮಾತನಾಡಿ, 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಂಬಂಧ ಯೋಗೋತ್ಸವ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯ ಮಿಮ್ಸ್ ಇಲಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವ ಎಲ್ಲಾ ವಿದ್ಯರ್ಥಿಗಳಿಗೂ ಡಿಜಿಟಲ್ ಪ್ರಮಾಣಪತ್ರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಎಸ್.ಪಿ.ವೈ.ಎಸ್ ಎಸ್.ನ ಜಿಲ್ಲಾ ಸಂಚಾರಕರಾದ ಶಂಕರ ನಾರಾಯಣ ಶಾಸ್ತ್ರೀ, ಯೋಗ ತರಬೇತುದಾರ ಶಿವರುದ್ರ ಸ್ವಾಮಿ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮುಖ್ಯಸ್ಥರಾದ ರವಿ, ಮಿಮ್ಸ್ ನಿರ್ದೇಶಕ ಹಾಗೂ ಡೀನ್ ಡಾ.ಪಿ ನರಸಿಂಹಮೂರ್ತಿ, ಮಿಮ್ಸ್ ವೈದ್ಯಕೀಯ ಅಧೀಕ್ಷಕರು ಡಾ.ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Continue Reading

Trending

error: Content is protected !!