Mandya
ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿದ ಸ್ಟಾರ್ ಚಂದ್ರು
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟೂರು ದೊಡ್ಡರಸಿನಕೆರೆಯಲ್ಲಿನ ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಅಂಬರೀಶ್ ಅವರು ಸಮಸ್ತ ಕನ್ನಡಿಗರ ಮನಸಲ್ಲಿ ನೆಲೆಸಿದ್ದಾರೆ. ರಾಜಕಾರಣಿ, ನಟರಾಗಿ ಅವರು ನಾಡು ನುಡಿಗಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಸಹೃದಯಿ, ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದರು. ಅವರ ನೆನಪು ಸದಾ ಅಮರ ಎಂದರು.
ಇದೇ ವೇಳೆ ಅಂಬರೀಶ್ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಡುತ್ತಿತ್ತು.
ದೊಡ್ಡರಸಿನಕೆರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಶಾಸಕ ಉದಯ್, ಸ್ಟಾರ್ ಚಂದ್ರು ಅವರ ಮೇಲೆ ಹೂವಿನ ಮಳೆ ಸುರಿಸಿ ಕಾಂಗ್ರೆಸ್ ಗೆ ಜೈಕಾರ ಕೂಗುವ ಮೂಲಕ ಸ್ಟಾರ್ ಚಂದ್ರು ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
Mandya
ಮಂಡ್ಯ ಪಾದಯಾತ್ರೆಯಲ್ಲಿ ಪ್ರೀತಂಗೌಡ; ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮುಕಿ
ಮಂಡ್ಯ : ಬಿಜೆಪಿ ಹಾಗೂ ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯಲ್ಲಿ ಹಾಸನ ಬಿಜೆಪಿ ನಾಯಕ ಪ್ರೀತಂಗೌಡ ಯಾವುದೇ ಕಾರಣಕ್ಕೂ ಭಾಗಿಯಾಗಬಾರದು ಎಂದು ನೇರವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲಿ ಇರಿಸು ಮುರಿಸು ಉಂಟು ಮಾಡಿಸಲಾಗಿದೆ.
ಬಿಜೆಪಿ-ಜೆಡಿಎಸ್ ಪಾದಯಾತ್ರೆ ವೇಳೆ ಜೆಡಿಎಸ್ ಭದ್ರಕೋಟೆ ಎಂದೇ ಖ್ಯಾತಿಯ ಮಂಡ್ಯದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಕೇಸರಿ ಶಾಲು ಧರಿಸಿಕೊಂಡು ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.
ಐದನೇ ದಿನದ ಪಾದಯಾತ್ರೆ ವೇಳೆ ಮಂಡ್ಯದಲ್ಲಿ ಕಾಣಿಸಿಕೊಂಡ ಮಾಜಿ ಶಾಸಕ ಪ್ರೀತಂಗೌಡ ಅವರನ್ನು ಬಿಜೆಪಿ ಕಾರ್ಯಕರ್ತರು ಹೆಗಲ ಮೇಲೆ ಹೊತ್ತುಕೊಂಡು ‘ಹಾಸನದ ಹುಲಿ’ ಎಂದು ಘೋಷಣೆ ಕೂಗಿ ಸಂಭ್ರಮ ವ್ಯಕ್ತಪಡಿಸಿದರು.
ಜೆಡಿಎಸ್ ಕಾರ್ಯಕರ್ತರು ಎದುರು ಬರುತ್ತಿದ್ದಂತೆ ಪ್ರೀತಂಗೌಡ ಬೆಂಬಲಿಗರು, “ಗೌಡಾ ಗೌಡಾ.. ಪ್ರೀತಂ ಗೌಡಾ” ಎಂದು ಕೂಗು ಹಾಕಿದರು. ಇದಕ್ಕೆ ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಕ್ಷಣಕಾಲ ಮಾತಿನ ಚಕಮಕಿ ನಡೆದು, ಗಲಾಟೆ ಉಂಟಾಯಿತು.
ಜೊತೆಗೆ ಮಂಡ್ಯ ನಗರ ಪ್ರವೇಶದ ಆರಂಭದಲ್ಲೇ ಪ್ರೀತಂ ಗೌಡ ಫ್ಲೆಕ್ಸ್ ಹಾಕಲಾಗಿದೆ. ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿ ಲಾರಿಗೆ ಫ್ಲೆಕ್ಸ್ ಅಳವಡಿಸಲಾಗಿದೆ. ಪ್ರೀತಂ ಗೌಡಗೆ ಸ್ವಾಗತ ಕೋರುವ ಫ್ಲೆಕ್ಸ್ಗಳನ್ನು ಮಂಡ್ಯ ನಗರ ಪ್ರವೇಶದಲ್ಲೇ ರಸ್ತೆಯ ಬದಿಗಳಲ್ಲಿ ಅಳವಡಿಕೆ ಮಾಡಲಾಗಿದ್ದು, ಪ್ರತಿ ಫ್ಲೆಕ್ಸ್‌ನಲ್ಲಿ ಪ್ರೀತಂ ಗೌಡ ಫೋಟೋ ರಾರಾಜಿಸುತ್ತಿದೆ.
“ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಕುಟುಂಬಕ್ಕೆ ವಿಷ ಹಾಕಿದವರನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡಲಾಗುತ್ತಿದೆ. ಹಾಸನದಲ್ಲಿ ಪೆನ್‌ಡ್ರೈವ್ ಹಂಚಿದವರ ಜೊತೆ ವೇದಿಕೆ ಹಂಚಿಕೊಳ್ಳಬೇಕಾ? ಪಾದಯಾತ್ರೆಗೆ ಇದಕ್ಕೆ ಜೆಡಿಎಸ್ ಬೆಂಬಲ ನೀಡಲ್ಲ” ಎಂದು ಕುಮಾರಸ್ವಾಮಿ ಪ್ರೀತಂ ಗೌಡ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈಗ ಮಂಡ್ಯದಲ್ಲಿ ಪ್ರೀತಂ ಗೌಡ ಆಗಮಿಸಿರುವುದಕ್ಕೆ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಿನ ಮಾತಿನ ಚಕಮುಕಿ ಸಂಭವಿಸಿದೆ.
ಮಂಡ್ಯದಲ್ಲಿ ಪ್ರೀತಂ ಗೌಡ ಮೆರವಣಿಗೆಯ ವಿಡಿಯೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಹಲವರು, ಹಾಸನದಲ್ಲಿ ಜೆಡಿಎಸ್ ಕಥೆ ಮುಗಿಯಿತು, ಇನ್ನೂ ಮಂಡ್ಯದ ಮೇಲೆ ಬಿಜೆಪಿಯ ಕಣ್ಣು ಬಿದ್ದಿದೆ, ಅದಕ್ಕಾಗಿಯೇ ಪ್ರೀತಂ ಗೌಡನನ್ನು ಕರೆತಂದಿದ್ದಾರೆ, ಇನ್ನು ಮುಂದೆ ಇನ್ನೇನಾಗುವುದೋ ಎಂದು ಕಮೆಂಟ್ ಮಾಡಿದ್ದಾರೆ.
Mandya
ಬಹಿರಂಗ ಸಭೆಯಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದು ವಿಜಯೇಂದ್ರ, ಅಶೋಕ್*
*ಬಹಿರಂಗ ಸಭೆಯಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದು ವಿಜಯೇಂದ್ರ, ಅಶೋಕ್*
ಮಂಡ್ಯ : ಮೈಸೂರು ಮೂಡಾ ಹಗರಣ ಖಂಡಿಸಿ ಮೈಸೂರು ಚಲೋ ಪಾದಯಾತ್ರೆ ನಡುಸುತ್ತಿರುವ ವೇಳೆ ನಗರದ ಸಂಜಯ ವೃತ್ತದಲ್ಲಿನ ಬಹಿರಂಗ ಸಭೆಯಲ್ಲಿ ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದರು.
ಬಹಿರಂಗ ಸಭೆಯಲ್ಲಿ ಬಿ.ವೈ ವಿಜಯೇಂದ್ರ ಮಾತನಾಡಿ, ಎಸ್.ಎಂ.ಕೃಷ್ಣ, ಯಡಿಯೂರಪ್ಪ ಅವರಿಗೆ ಜನ್ಮ ಕೊಟ್ಟಿರೋ ಪುಣ್ಯ ಭೂಮಿ ಮುಡ್ಯ. ಅಹಿಂದ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಸರ್ಕಾರ ಅಧಿಕಾರ ಹಿಡಿದಿದ್ದಾರೆ. ಇದೀಗ ಭ್ರಷ್ಟಾಚಾರದಲ್ಲಿ ಈ ಸರ್ಕಾರ ಮುಳುಗಿದೆ ಭ್ರಷ್ಟ ಮುಖ್ಯಮಂತ್ರಿಯಿಂದ ಜನರಿಗೆ ನ್ಯಾಯ ಸಿಗಲು ಸಾಧ್ಯವಿಲ್ಲ. ಹಗಲು ದರೋಡೆಯನ್ನು ಈ ಸರ್ಕಾರ ಮಾಡ್ತಾ ಇದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಿಗೆ ಈ ಸರ್ಕಾರ ಅನ್ಯಾಯ ಮಾಡ್ತಾ ಇದ್ದಾರೆ. ಎಸ್‌ಐಟಿ ಅಂದ್ರೆ ಸಿದ್ದರಾಮ ಇನ್ನೇಸಿಕೇಷನ್ ಟೀಂ. ಇಂತಹ ಭ್ರಷ್ಟ ಕಾಂಗ್ರೆಸ್‌ನ್ನು ಧಿಕ್ಕರಿಸಬೇಕು ನಾವು ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡ್ತಾ ಇದೀವಿ ಭ್ರಷ್ಟ ಸಿಎಂ ಸಿದ್ದರಾಮಯನ್ನು ಕೆಳಗೆ ಇಳಿಸುವವರೆಗೆ ನಮ್ಮ ಹೋರಾಟ ನಿಲ್ಲಲ್ಲ. ನಮ್ಮ ಈ ಹೋರಾಟಕ್ಕೆ ರಾಜ್ಯದ ವಿವಿಧ ಭಾಗಳಿಂದ ಬಂದಿದ್ದಾರೆ ಎಂದರು.
ವಿಪಕ್ಷ ನಾಯಕ ಆರ್
ಅಶೋಕ್ ಮಾತನಾಡಿ, ಇದು ಪಾದಯಾತ್ರೆ ಅಲ್ಲ. ಜನಯಾತ್ರೆ ಸಿದ್ಧರಾಮಯ್ಯ ಅವರಿಗೆ ಮಹೂರ್ತ ಫಿಕ್ಸ್ ಆಗಿದೆ. ರಾಜೀನಾಮೆ ನೀಡಲು ಮಹೂರ್ತ ಫಿಕ್ಸ್ ಆಗಿದೆ. ಕುಂಕುಮಕ್ಕೆ 7. ಅರಶಿಣಕ್ಕೆ 7 ಸೈಟ್ ಕೊಟ್ಟಿದ್ದಾರೆ. ನಿಮಗೆ ನಡೆಸಿದರು. H ಬಂದಿತ್ತಾ..? ನಿಮಗೆ ಜ್ಞಾನ ಬೇಡವೇ ? ಎಂದು ಸಿದ್ದರಾಮಯ್ಯ ವಿರುದ್ಧ ವಿರುದ್ಧ ವಾಗ್ದಾಳಿ
ಮುಖ್ಯಮುತ್ರಿಯಾಗಿ ನಿಮಗೆ ಜ್ಞಾನ ಇರಬೇಕಲ್ವಾ.? ಗಬ್ಬು ಹಿಡಿದಿರುವ ಮೂಡದಲ್ಲಿ ಯಾಕೆ ಸೈಟ್ ಬರಿಸಿಕೊಂಡಿರೀ..? ದಲಿತ ಕುಟುಂಬದಿಂದ ಹೇಗೆ ಸೈಟ್ ಬರಿಸಿಕೊಂಡಿರಿ..? ಅವರ ಅಸ್ತಿ ಕಬಳಿಸಿದ್ದೀರಿ. ಇದು ನ್ಯಾಯಾನಾ..? ನೀನು ಸಿಎಂ ಆಗಿ ಜಮೀನು ಕಬಳಿಸಿದ್ದೀಯಾ ನ್ಯಾಯನಾ ? ಸತ್ತಿರುವವನ ಹೆಸರಿಗೆ ಡಿನೋಟಿಫಿಕೇಷನ್ ಮಾಡಿಸಿದ್ದಾರೆ. ಪ್ರತಿ ಹಂತದಲ್ಲೂ ಸಿದ್ದರಾಮಯ್ಯ ಅವರ ಪಾತ್ರ ಇದೆ. ಜಮೀನು ಐದು ಲಕ್ಷಕ್ಕೆ ಪಡೆದು ಇದೀಗ 62 ಕೋಟಿ ಕೇಳುತ್ತಿದ್ದಾರೆ. ಇದು ಲೂಟಿನಾ ? ಭಷ್ಟಚಾರದ ಕೂಪನಾ.? ಎಂದು ಪ್ರಶ್ನಿಸಿದರು.
ಸಿದ್ದರಾಮುಖ್ಯ ಅವರಿಗೆ ಬೆನ್ನಿಗೆ ಚೂರಿ ಹಾಕುವವರು ಪಕ್ಕದಲ್ಲೇ ಕುಳಿತಿದ್ದಾರೆ. ಕಾಂಗ್ರೆಸ್ ನಲ್ಲೆ ಬೆನ್ನಿಗೆ ಚೂರಿ ಹಾಕುವವರು ಇದ್ದಾರೆ. ವಿರೋಧ ಪಕ್ಷದಲ್ಲಿ ಇದ್ದಾಗ ಮಣ್ಣು ತಿನ್ನುತ್ತಿದ್ದೀರಾ..? ಅವಾಗ ಯಾಕೆ ಹಗರಣದ ಬಗ್ಗೆ ತಕ್ಕೆ ಮಾಡಲಿಲ್ಲ. ? ಈ ಹೋರಾಟ ಸಿದ್ದರಾಮಯ್ಯ ಲೂಟಿ ಮಾಡಿರುವ ಬಗ್ಗೆ. ಈ ಸೈಟ್ ಗಳು ವಾಪಾಸ್ ಬರಬೇಕು. ಈ ಪಾದಯಾತ್ರೆಯನ್ನ ದಾರಿ ತಪ್ಪಿಸಬೇಡಿ ಡಿ.ಕೆ.ಶಿವಕುಮಾರ್ ಎಂದು ಗುಡುಗಿದರು.
Mandya
ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ
ಮಂಡ್ಯ: ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಸದರಿ ಹುದ್ದೆಗೆ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆಗಸ್ಟ್ 22 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸುವುದು, .
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು,
ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು.
ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.