Connect with us

Chikmagalur

ಪರೀಕ್ಷಾ ಪಾವಿತ್ರ್ಯತೆಯನ್ನು ಕಡ್ಡಾಯವಾಗಿ ಪಾಲಿಸಿ: ಮೀನಾ ನಾಗರಾಜ್

Published

on

ಚಿಕ್ಕಮಗಳೂರು: ಪರೀಕ್ಷಾ ಪಾವಿತ್ರ್ಯತೆಯನ್ನು ಕಡ್ಡಾಯವಾಗಿ ಪಾಲಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚನೆ ನೀಡಿದರು.

ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಿನ್ನೆ ಎಸ್.ಎಸ್.ಎಲ್.ಸಿ ಪರೀಕ್ಷೆ-೧ರ ಸಿದ್ದತೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ ೨೧ ರಿಂದ ಪ್ರಾರಂಭವಾಗಿ ಏಪ್ರಿಲ್ ೦೪ರ ವರೆಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಶಿಸ್ತು ಕ್ರಮಕ್ಕೆ ಒಳಪಡಿಸಲಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು. ಬಿಸಿಲಿನ ತಾಪ ಹೆಚ್ಚು ಇರುವುದರಿಂದ ಪ್ರಥಮ ಚಿಕಿತ್ಸಾ ವ್ಯವಸ್ಥೆಯೊಂದಿಗೆ ಹಾಜರಾಗುವಂತೆ ತಿಳಿಸಿದ ಅವರು. ಪರೀಕ್ಷೆಯು ವೆಬ್ ಕಾಸ್ಟಿಂಗ್ ಮೂಲಕ ನಡೆಯುತ್ತಿರುವುದರಿಂದ ನಿರಂತರ ವಿದ್ಯುತ್ ವ್ಯವಸ್ಥೆಗೆ ಕೆ.ಇ.ಬಿ.ಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಯು.ಪಿ.ಎಸ್ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲು ತಿಳಿಸಿದರು.

ಪರೀಕ್ಷಾ ಪೂರ್ವದಲ್ಲಿ, ಪರೀಕ್ಷೆಯಲ್ಲಿ ಜಿಲ್ಲೆಯ ಬಗ್ಗೆ ವ್ಯತಿರಿಕ್ತ ವರದಿ ಬರಬಾರದು. ಗುಣಮಟ್ದ ಫಲಿತಾಂಶದ ಮೂಲಕ ಜಿಲ್ಲೆಯು ಸುದ್ದಿಯಾಗಬೇಕು ಎಂದು ಹೇಳಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಪರೀಕ್ಷಾ ಕಾರ್ಯ ಪೂರ್ಣಗೊಳ್ಳುವವರೆಗೂ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ಪರೀಕ್ಷಾ ಪಾವಿತ್ರ್ಯತೆಯನ್ನು ಪಾಲಿಸಬೇಕು. ಜೊತೆಗೆ ಉಪನಿರ್ದೇಶಕರು[ಆಡಳಿತ] ಮತ್ತು ಉಪನಿರ್ದೇಶಕರು[ಅಭಿವೃದ್ದಿ] ರವರು ಪರೀಕ್ಷಾ ಕಾರ್ಯ ಸುವ್ಯವಸ್ಥಿತವಾಗಿ ನಿರ್ವಹಿಸಿ, ಪಾರದರ್ಶಕತೆ ಕಾಯ್ದಕೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ನಾಗರಾಜು ರವರು ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರದಲ್ಲಿ ಒಂದು ಕೊಠಡಿಗೆ ತಲಾ ೨೪ರಂತೆ, ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಚೇತನ ಮಕ್ಕಳಿಗೆ ಕೆಳಹಂತದ ಪರೀಕ್ಷಾ ಕೊಠಡಿಗಳನ್ನು ಮೀಸಲಿಡಬೇಕು. ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಕಲ್ಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ವೇಗದ ಇಂಟರ್ ನೆಟ್ ವ್ಯವಸ್ಥೆ, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ತಮ್ಮ ಲಾಗಿನ್ ನಲ್ಲಿಯೇ ಗೈರು ಹಾಜರಿ ಮಾಹಿತಿಯನ್ನು ಮತ್ತು ನಮೂನೆಯನ್ನು ಭರ್ತಿ ಮಾಡುವ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಉಪನಿರ್ದೆಶಕರು[ಆಡಳಿತ], ಉಪನಿರ್ದೇಶಕರು[ಅಭಿವೃದ್ದಿ] ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್‌ನ ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು, ಕ್ಷೇತ್ರ ಸಮನ್ವಯಾಧಿಕಾರಿಗಳು, ಬ್ಲಾಕಿನ ನೋಡಲ್ ಅಧಿಕಾರಿಗಳು,ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಕಸ್ಪೋಡಿಯನ್ನರು, ಕೆ.ಎಸ್.ಆರ್.ಟಿ.ಸಿ ವಿಭಾಗ, ಪೊಲೀಸ್ ವಿಭಾಗದ ಅಧಿಕಾರಿಗಳು ಪಾಲ್ಗೊಂಡಿದ್ದರು.

Continue Reading

Chikmagalur

ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.

Published

on

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ದ್ವಿಚಕ್ರ KA18 EC2707 ಸಂಖ್ಯೆಯ ಸ್ಕೂಟಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿದರು.

 

ಬಾಲಕನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರು ತೀರ್ಪು ನೀಡಿತು.

Continue Reading

Chikmagalur

ಜನಿವಾರ ತೆಗೆಸಿರುವುದು ಖಂಡನೀಯ

Published

on

ಜಯಪುರ : ಎರಡು ದಿನಗಳ ಹಿಂದೆ ರಾಜ್ಯದಾದ್ಯಂತ ನಡೆದ ವೃತ್ತಿಪರ ಕೋರ್ಸ್ ಗಳ ಸಿ ಇ ಟಿ ಪರೀಕ್ಷೆಯ ದಿನದಂದು ಪರೀಕ್ಷಾ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಲ್ಲದೆ ತೆಗೆಯಲು ಒಪ್ಪದ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನೇ ನೀಡದ ಘಟನೆ ನಡೆದಿರುತ್ತದೆ. ಕೆಲವು ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಹಾಕಿದ ಕೃತ್ಯವೂ ನಡೆದಿರುತ್ತದೆ. ಇಂತಹ ಅಮಾನವೀಯ ಕೃತ್ಯವನ್ನು ನಮ್ಮ ಸಮಾಜ ವಿರೋಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾಸಭಾ (ರಿ.)ದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯರಂಗ ಕೋಟೆತೋಟ ಪತ್ರಿಕೆಗೆ ತಿಳಿಸಿದರು.

ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಇರುತ್ತದೆ, ಬ್ರಾಹ್ಮಣ್ಯದ ಸಂಕೇತವಾಗಿರುವ ಜನಿವಾರವನ್ನು ಉಪನಯನದ ಸಂದರ್ಭದಲ್ಲಿ ಧರಿಸಿದ ನಂತರ ಸಾಯುವವರೆಗೂ ಇಟ್ಟುಕೊಳ್ಳಬೇಕಾಗುತ್ತದೆ. ಬೇರೆ ಬೇರೆ ಕಾರಣಗಳಿಗೆ ಮಧ್ಯದಲ್ಲಿ ಬದಲಾಯಿಸಬಹುದು ಅಷ್ಟೇ, ಜನಿವಾರವನ್ನು ತೆಗೆಸಿರುವ ಈ ಕೃತ್ಯ ಅತ್ಯಂತ ಹೀನಾಯ ಮತ್ತು ಬ್ರಾಹ್ಮಣರ ಮೇಲೆ ನಡೆದಿರುವ ದೌರ್ಜನ್ಯ ಎಂದೇ ಪರಿಗಣಿಸಬೇಕಾಗುತ್ತದೆ.

ಸರಕಾರ ಮತ್ತು ಸಂಬಂಧಪಟ್ಟ ಇಲಾಖೆ ಈ ಕೂಡಲೇ ಇಂತಹ ದೌರ್ಜನ್ಯವನ್ನು ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವುದಲ್ಲದೆ ಶಿಕ್ಷಣ ಇಲಾಖೆಯು ಬ್ರಾಹ್ಮಣ ಸಮಾಜದ ಕ್ಷಮಾಪಣೆಯನ್ನು ಕೇಳಬೇಕಾಗಿ ಆಗ್ರಹಿಸುತ್ತೇವೆ. ಇಂತಹ ಕೃತ್ಯ ಮುಂದೆ ಯಾವತ್ತೂ ನಡೆಯದಂತೆ ಬಂದೋಬಸ್ತ್ ಮಾಡಬೇಕಾಗಿ ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದರು.

 

ವರದಿ :-ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.

Continue Reading

Chikmagalur

ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಒಂಟಿ ಸಲಗ

Published

on

ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಕಾಣಿಸಿಕೊಳ್ಳದೊಡಗಿದೆ


ಮೂರು ದಿನದ ಹಿಂದೆ ಎಂಟನೇ ತಿರುವು ಬಳಿ ಸಂಜೆ ವೇಳೆ ಕಾಣಿಸಿದ್ದ ಆನೆ ಕಳೆದ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ನಿಂತಿದೆ.
ಸಂಜೆಯೂ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಒಂಟಿ ಸಲಗ ನಿಂತಲ್ಲೇ ನಿಂತಿದ್ದು, ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.
ಚಾರ್ಮಾಡಿ ಘಾಟ್ ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತ ಇದ್ದು,ಆನೆ ದಾಳಿಗೆ ಮುಂದಾದರೆ ತಪ್ಪಿಸಿಕೊಳ್ಳೋದು ಕಷ್ಟ.
ನಿನ್ನೆ ಸಂಜೆ ಕಾರು ಚಾಲಕ ಆನೆಯಿಂದ ಜಸ್ಟ್ ಮಿಸ್ ಆಗಿದ್ದು ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳಿಯರು, ಪ್ರವಾಸಿಗರು ಒತ್ತಾಯಿಸಿದ್ದಾರೆ.

Continue Reading

Trending

error: Content is protected !!