Connect with us

Hassan

ನವದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಬೆಂಬಲಿಸಿ ನಗರದಲ್ಲಿ ಸಿಪಿಐಎಂ ಪ್ರತಿಭಟನೆ

Published

on

ಹಾಸನ: ಕೇಂದ್ರ ಸರ್ಕಾರದ ಕಿರುಕುಳ ಮತ್ತು ತಾರತಮ್ಯ ನೀತಿಗಳ ವಿರುದ್ಧ ಕರ್ನಾಟಕ ಸರ್ಕಾರ ಮತ್ತು ಕೇರಳದ ಎಲ್.ಡಿ.ಎಫ್. ಸರ್ಕಾರದಿಂದ ನವದೆಹಲಿಯಲ್ಲಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ಹಾಸನ ನಗರದ ಹೇಮಾವತಿ ಪ್ರತಿಮೆ ಮುಂಬಾಗ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಮಾಧ್ಯಮದೊಂದಿಗೆ ಮಾತನಾಡಿ, ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು, ರಾಜ್ಯಗಳ ಮೇಲೆ ಒಕ್ಕೂಟ ಸರಕಾರದ ಹಸ್ತಕ್ಷೇಪಗಳನ್ನು ನಿಲ್ಲಿಸಲು ಮತ್ತು ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಬೇಕೆಂದು ಒತ್ತಾಯಿಸಿದರು. ಭಾರತ ಸಂವಿಧಾನದಂತೆ ದೇಶದಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು ಈಗ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಈ ಕೂಡಲೆ ನಿಲ್ಲಿಸುವಂತೆ ಹಾಗೂ ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಿ ರಾಜ್ಯಗಳಿಗೆ ನ್ಯಾಯ ಒದಗಿಸುವಂತೆ ಈ ಮೂಲಕ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐ(ಎಂ) ಹಾಸನ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಮತ್ತು ಕರ್ನಾಟಕ ಹಾಗೂ ಕೇರಳ ಸರಕಾರಗಳು, ಒಕ್ಕೂಟ ಸರಕಾರದ ಕಿರುಕುಳ ಹಾಗೂ ತಾರತಮ್ಯ ನೀತಿಯ ವಿರುದ್ದ ಇದೇ ಫೆಬ್ರವರಿ ೭ ಮತ್ತು ೮ ರಂದು ನವದೆಹಲಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದರು.

ಹಕ್ಕೊತ್ತಾಯಗಳೆಂದರೇ, ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರಕಾರ ಅಡ್ಡಿಯಾಗಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಈ ಕೂಡಲೆ ಬಿಡುಗಡೆ ಮಾಡಬೇಕು. ಒಕ್ಕೂಟ ಸರಕಾರ ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರಕಾರಗಳು ಸಾಲ ಪಡೆಯುವಂತೆ ಮಾಡುವುದನ್ನು ನಿಲ್ಲಿಸಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂದಿಸಿದ ವಿಷಯಗಳಲ್ಲಿ ಒಕ್ಕೂಟ ಸರಕಾರದ ಮದ್ಯಪ್ರವೇಶ ಮಾಡಬಾರದು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರಕಾರ ಇಆ, ಅಃI ಹಾಗೂ ಆದಾಯ ತೆರಿಗೆ ವಿಭಾಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯ ಸರಕಾರಗಳ ವಿಷಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗು ಅವರ ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು. ರಾಜ್ಯದ ವಿಶ್ವ ವಿದ್ಯಾಲಯಗಳ ವಿಷಯದಲ್ಲಿ ಕುಲಪತಿಗಳಾಗಿ ರಾಜ್ಯಪಾಲರ ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು ಹಾಗೂ ರಾಜ್ಯ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು ಮತ್ತು ವಿಳಂಬ ಮಾಡದೆ ಸಹಿ ಮಾಡುವಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಸ್ಥಳೀಯ ಸಮಿತಿ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ಜಿಲ್ಲಾ ಸಂಘಟನಾ ಸಮಿತಿ ಸದಸ್ಯರು ಜಿ.ಪಿ. ಸತ್ಯನಾರಾಯಣ, ಎಚ್.ಆರ್. ನವೀನ್ ಕುಮಾರ್, ಅರವಿಂದ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Crime

ಯಾವ ತಪ್ಫಿಗಾಗಿ ಈ ಕೃತ್ಯ, ಬಿಜೆಪಿ ಮಾಧ್ಯಮ ವಕ್ತಾರ ವಿಜಯ್ ಕುಮಾರ್ ಮೇಲಿನ ಹಲ್ಲೆಗೆ ಕಳವಳ ವ್ಯಕ್ತಪಡಿಸಿದ ಮಾಜಿ ಪ್ರದಾನಿ ದೇವೇಗೌಡರು

Published

on

ಹಾಸನ: ಯಾವ ತಪ್ಫಿಗಾಗಿ ಈ ಕೃತ್ಯ, ಬಿಜೆಪಿ ಮಾಧ್ಯಮ ವಕ್ತಾರ ವಿಜಯ್ ಕುಮಾರ್ ಮೇಲಿನ ಹಲ್ಲೆಗೆ ಕಳವಳ ವ್ಯಕ್ತಪಡಿಸಿದ ಮಾಜಿ ಪ್ರದಾನಿ ದೇವೇಗೌಡರು
ಆರ್ ಎಎಸ್ ಎಸ್ ನವರು ನಿಸ್ವಾರ್ಥವಾಗಿ ಕೆಲಸ ಮಾಡೋರು, ದೇಶದ ತುರ್ತು ಪರಿಸ್ಥಿತಿ ವೇಳೆಯಲ್ಲೂ ಕೂಡ ದೇಶಕ್ಕಾಗಿ ಕೆಲಸ ಮಾಡಿದವರು, ನನಗೆ ಎಲ್ಲವೂ ಗೊತ್ತಿದೆ ತಿಳಿದು ಕೊಂಡಿದ್ದೇನೆ.
ನೀವು ಏನು ಮಾತಾಡಿದ್ರಿ ನಂದೂ ಒಂದು ಮತ ಅವರದು ಒಂದು ಮತ ಎಂದಿದ್ದೀರಿ,
ನೀವು ಜನರಲ್ ಆಗಿ ಮಾತಾಡಿದ್ರಿ ಅದ್ರಲ್ಲಿ ಏನು ತಪ್ಪಿದೆ, ಪ್ರೀತಂಗೌಡ ಹೆಸರು ಹೇಳದೆ ಘಟನೆ ಖಂಡಿಸಿದ ದೇವೇಗೌಡರು.
ನಾನು ಈ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳೋದಿಲ್ಲ. ಈಗ ಏನೂ ಮಾತನಾಡಲ್ಲ
ನೀವೆಲ್ಲಾ ವಾಸ್ತವಾಂಶವನ್ನು ವರದಿ ಮಾಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ ದೇವೇಗೌಡರು.
ಹಿಮ್ಸ್ ನಲ್ಲಿ ಗಾಯಾಳು ವಿಜಯಕುಮಾರ್ ಅರೋಗ್ಯ ವಿಚಾರಿಸಿ ನಂತರ ಮಾತನಾಡಿದ ಮಾಜಿ ಪ್ರಧಾನಿ

ನಾನು ನಿಮ್ಮ ಜೊತೆ ಇರ್ತೇನೆ ಎಂದು ವಿಜಯಕುಮಾರ್ಗೆ ಭರವಸೆ, ನಾಳೆ ಸಂಜೆ ಮತ್ತೆ ಬರ್ತೇನೆ ಪೊಲೀಸರು ಏನು ಕ್ರಮ ಕೈಗೊಳ್ತಾರೆ ತಿಳಿದುಕೊಳ್ತೇನೆ. ಕೆಲವರಿಗೆ ಜೀವ ಬೆದರಿಕೆ ಇದೆ ಎಂದು ದೇವೇಗೌಡ ರಿಗೆ ಮಾಹಿತಿ ನೀಡಿದ ಬಿಜೆಪಿ ಕಾರ್ಯಕರ್ತರು
ಇದಕ್ಕೆ ನಾನು ನಿಮ್ಮ ಜೊತೆ ಇದ್ದೇನೆ ಎಂದ ಗೌಡರು.

Continue Reading

Hassan

ಭಯೋತ್ಪಾದಕರನ್ನ ರಕ್ಷಿಸುವ ಕಾಂಗ್ರೆಸ್‌: ಆರ್‌.ಅಶೋಕ್‌ ವಾಗ್ದಾಳಿ

Published

on

ಮಂಡ್ಯ: ಕಾಂಗ್ರೆಸ್ ಭ್ರಷ್ಟಾಚಾರದ ಕೂಪವಾಗಿದ್ದು, ಭಯೋತ್ಪಾದಕರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ನಗರದ ಹೊರ ವಲಯದ ಅಮರಾವತಿ ಹೊಟೇಲ್‌ನಲ್ಲಿ ಶುಕ್ರವಾರ ನಡೆದ ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿ ಕಾರ್ಯಕರ್ತರ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನ ರಾಮೇಶ್ವರಂ ಕಫೆ ಬ್ಲಾಸ್ಟ್ ಪ್ರಕರಣದಲ್ಲಿ ಭಾಗಿಯಾಗಿದವರನ್ನು ಸಹೋದರರ ಹೆಸರಿನಲ್ಲಿ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ರಕ್ಷಣೆ ಮಾಡಲು ಮುಂದಾಗಿದ್ದರು ಎಂದು ಆಕ್ರೊಶ ವ್ಯಕ್ತಪಡಿಸಿದರು.

ರಾಮೇಶ್ವರಂ ಹೊಟೇಲ್ನಲ್ಲಿ ನಡೆದ ಬ್ಲಾಸ್ಟ್ ಪ್ರಕರಣವನ್ನು ವ್ಯವಹಾರಿಕ ಈರ್ಷೆಯಿಂದ ಬೇರೆ ಹೊಟೇಲ್‌ನವರು ಕೃತ್ಯ ಮಾಡಿರಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದ್ದರು, ಸ್ಪರ್ಧಾತ್ಮಕ ಪೈಪೋಟಿಯಿಂದ ಬೇರೆ ಹೊಟೇಲ್‌ನವರು ಮಾಡಲು ಸಾಧ್ಯವೇ? ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಪ್ರಕರಣ ನಡೆದಾಗಲೂ ಭಯೋತ್ಪಾದಕರನ್ನು ರಕ್ಷಿಸುವ ಕೆಲಸ ಮಾಡಿದರು. ಬೆಂಗಳೂರಿನ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ನಾವು ಒತ್ತಾಯಿಸಿದ್ದೆವು. ಆದರೂ ಸರ್ಕಾರ ವಹಿಸಲು ಹಿಂದೇಟು ಹಾಕಿತು ಎಂದು ಆರೋಪಿಸಿದರು.

ವಿಷಯ ತಿಳಿದು ಎನ್ಐಎ ಸ್ವತಃ ಧಾವಿಸಿ ತನಿಖೆ ಆರಂಭಿಸಿತ್ತು. ಮೂರು ದಿನಗಳ ಬಳಿಕ ಸರ್ಕಾರ ಎನ್ಐಗೆ ವಹಿಸುವ ಕೆಲಸ ಮಾಡಿತು, ಬೆಂಗಳೂರಿನ ಜನ ಭಯಭೀತರಾಗಿದ್ದಾರೆ. ರಾಜ್ಯದಲ್ಲೂ ಒಂದು ರೀತಿಯಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿದೆ. ರಾಮೇಶ್ವರಂ ಹೊಟೇಲ್ ಬಾಂಬ್ ಬ್ಲಾಸ್ಟ್‌ನಿಂದಾಗಿ ಇಡೀ ಬೆಂಗಳೂರೇ ತಲ್ಲಣವಾಗಿದೆ, ಭಯೋತ್ಪಾದಕರನ್ನು ಸಹೋದರರು ಎನ್ನುವ ಕಾಂಗ್ರೆಸ್ಸಿಗರು ಮೃಧು ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕುಟುಕಿದರು.

ಭಯೋತ್ಪಾದಕ ಘಟನೆ ಎಂದು ಬಟಾ ಬಯಲಾಗಿದ್ದರೂ ಸಹ ಅವರ ಬಗ್ಗೆ ಸಾಫ್ಟ್ ಆಗಿ ಪ್ರತಿಕ್ರಿಯಿಸುತ್ತಿದ್ದಾರೆ. ವಿಧಾನ ಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದರೂ ಏನೂ ಮಾಡಲಿಲ್ಲ. ದೇಶದ್ರೋಹಿಗಳಿಗೆ ಕಾಂಗ್ರೆಸ್ ಬೆಂಬಲವಾಗಿ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ.14 ರಂದು ಮೈಸೂರಿಗೆ ಭೇಟಿ ನೀಡಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡುವರು, ಅಂದಿನ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಲ್ಕೂ ಜಿಲ್ಲೆಗಳ ಎನ್‌ಡಿಎ ಅಭ್ಯರ್ಥಿಗಳಾದ ಮೈಸೂರಿನ ಯಧುವೀರ್, ಮಂಡ್ಯದ ಎಚ್.ಡಿ.ಕುಮಾರಸ್ವಾಮಿ, ಚಾಮರಾಜನಗರದ ಬಾಲರಾಜು, ಹಾಸನದ ಪ್ರಜ್ವಲ್ ರೇವಣ್ಣ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸುವರು ಎಂದು ವಿವರಿಸಿದರು.

ಮೋದಿ ಆಗಮನದ ಹಿನ್ನಲೆಯಲ್ಲಿಯೇ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಕಾರ್ಯಕರ್ತರ ಸಭೆ ನಡೆಸಲಾಗಿದೆ. ನಾಲ್ಕೂ ಜಿಲ್ಲೆಗಳಿಂದ ಹೆಚ್ಚಿನ ಜನರು ಆಗಮಿಸುವರು, ದೊಡ್ಡ ಮಟ್ಟದ ಕಾರ್ಯಕ್ರಮನ್ನು ರೂಪಿಸಲಾಗುವುದು. ಮಂಡ್ಯಗೆ ಕುಮಾರಣ್ಣ, ಇಂಡಿಯಾಗೆ ನರೇಂದ್ರಮೋದಿ ಎಂದು ನಾವು ಹೇಳುತ್ತೇವೆ. ಕಾಂಗ್ರೆಸ್ಸಿಗರು ಮಂಡ್ಯಕ್ಕೆ ಕಂಟ್ರಾಕ್ಟರ್, ಇಂಡಿಯಾಗೆ ರಾಹುಲ ಎನ್ನುತ್ತಾರೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಭ್ರಷ್ಟಾಚಾರದ ಕೂಪವಾಗಿದೆ. ಕಳೆದ 10 ವರ್ಷಗಳಿಂದ ರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉತ್ತಮ ಸಾಧನೆ ಮಾಡಿದ್ದಾರೆ. 10 ವರ್ಷಗಳಿಂದ ಭ್ರಷ್ಟಾಚಾರ ಮಾಡಿದ್ದಾರೆ ಎನ್ನುವ ಕಾಂಗ್ರೆಸ್ಸಿಗರು 50 ವರ್ಷ ಏನು ಮಾಡಿದ್ದಾರೆ? ಗರೀಬಿ ಹಠಾವೋ, 3ಜಿ, 4ಜಿ, ಭೂಮಿಯೊಳಗೆ, ಆಕಾಶದಲ್ಲಿ ಎಲ್ಲಕಡೆ ಕಾಂಗ್ರೆಸ್ಸಿಗರು ಭ್ರಷ್ಟಾಚಾರ ನಡೆಸಿರುವುದು ಜಗಜ್ಜಾಹೀರಾಗಿದೆ. ಪ್ರಧಾನಿ ಮೋದಿಯವರು ದೇಶ ಕಾಯುವ ಕಾವಲುಗಾರನಾಗಿ ಕೆಲಸ ಮಾಡಿದ್ದಾರೆ. ಅದರಿಂದಾಗಿ ನಾವು ರಾಜ್ಯದ 28 ಕ್ಕೆ 28 ಕ್ಷೇತ್ರದಲ್ಲೂ ಗೆಲುವು ಸಾಧಿಸಲು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ನಮ್ಮ ಪಕ್ಷದ ಸ್ಟಾರ್ ಕ್ಯಾಂಪೇನರ್ ಸುಮಲತಾ ಅಂಬರೀಷ್‌ ಆಗಿದ್ದಾರೆ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾವಾಗ ದಿನಾಂಕ ಗೊತ್ತುಪಡಿಸುತ್ತಾರೋ ಅಂದು ಸುಮಲತಾ ಮಂಡ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ, ಕೇವಲ ಮಂಡ್ಯ ಮಾತ್ರವಲ್ಲದೆ, ಮೈಸೂರು, ಬೆಂಗಳೂರು, ಚಾಮರಾಜನಗರ ಸೇರಿದಂತೆ ಹಲವೆಡೆ ಶುದ್ಧ ಮನಸ್ಸಿನಿಂದ ಪ್ರಚಾರ ಮಾಡಲಿದ್ದಾರೆ. ಜೊತೆಗೆ ಮೋದಿಯವರ ಸಮಾವೇಶದಲ್ಲೂ ವೇದಿಕೆ ಮೇಲೆ ಇರಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಖಂಡರಾದ ಸಿ.ಎಸ್.ಪುಟ್ಟರಾಜು, ಪ್ರತಾಪಸಿಂಹ, ಮೈ.ವಿ.ರವಿಶಂಕರ್, ಡಾ.ಎನ್.ಎಸ್.ಇಂದ್ರೇಶ್, ವಿದ್ಯಾನಾಗೇಂದ್ರ, ರೂಪ, ಎಂ.ಎಸ್.ರಘುನಂದನ್, ಬಿ.ಆರ್.ರಾಮಚಂದ್ರ, ಮುನಿರಾಜು, ವಿವೇಕ್, ಪ.ನಾ.ಸುರೇಶ್, ಅಶೋಕ್‌ಕುಮಾರ್, ಪ್ರಸನ್ನಕುಮಾರ್, ಚಾಮರಾಜು, ಕೆರಗೋಡು ಮಹೇಶ ಇದ್ದರು.

Continue Reading

Hassan

ಹೋಮ್ ಓಟಿಂಗ್ ಕಾರ್ಯ ನಿರ್ವಹಿಸುವ ಪೋಲಿಂಗ್ ಅಧಿಕಾರಿಗಳಿಗೆ ತರಬೇತಿ ಡಿಸಿ ಸಿ. ಸತ್ಯಭಾಮ ಕಟ್ಟುನಿಟ್ಟಿನ ಸೂಚನೆ

Published

on

ಹಾಸನ: ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಗಳಂತೆ ೮೫ ವರ್ಷ ಮೇಲ್ಪಟ್ಟ ವೃದ್ಧರು, ಅಂಗವಿಕಲರು, ಅಂಧರುಗಳ ಮತದಾರರ ಮನೆಗಳಿಗೆ ಹೋಗಿ ಡಿ ಅರ್ಜಿಗಳನ್ನು ವಿತರಿಸಿ ಅಂಚೆ ಮತ ಪತ್ರ ಮೂಲಕ ಮತದಾನ ಮಾಡಿಸುವ ಅಧಿಕಾರಿಗಳು ಎಚ್ಚರದಿಂದ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹಾಗೂ ಅಪರ ಜಿಲ್ಲಾಧಿಕಾರಿ ಶಾಂತಲಾ ಸಲಹೆ ನೀಡಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶುಕ್ರವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯಲ್ಲಿ ಹೋಮ್ ಓಟಿಂಗ್ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪೋಲಿಂಗ್ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಗಳಂತೆ ೮೫ ವರ್ಷ ಮೇಲ್ಪಟ್ಟ (ಂಗಿSಅ) ಮತ್ತು ದಿವ್ಯಾಂಗ (ಂಗಿPಆ) ಮತದಾರರಿಗೆ ನಮೂನೆ ೧೨ಡಿ ಅರ್ಜಿಗಳನ್ನು ವಿತರಿಸಿ, ಅಂಚೆ ಮತ ಪತ್ರದ ಮೂಲಕ ಮತದಾನ ಮಾಡಲು ಇಚ್ಚಿಸಿದ ಮತದಾರರಿಗೆ ಅವರುಗಳ ವಾಸ ಸ್ಥಳಕ್ಕೆ ಮತಗಟ್ಟೆ ಅಧಿಕಾರಿಗಳ ತಂಡ ಭೇಟಿ ನೀಡಿ ಅಂಚೆ ಮತ ಪತ್ರ ಮೂಲಕ ಮತದಾನ ಮಾಡಿಸುವ ವಿಧಾನವನ್ನು ಊome voಣiಟಿg ಎಂದು ಕರೆಯಲಾಗುವುದು. ಹಾಸನ ಲೋಕಸಭಾ ಕ್ಷೇತ್ರದಲ್ಲಿ ೦೮ ವಿಧಾನಸಭಾ ಕ್ಷೇತ್ರಗಳಿದ್ದು, ಈ ಎಲ್ಲಾ ಕ್ಷೇತ್ರಗಳಿಂದ ೮೫ಕ್ಕಿಂತ ಹೆಚ್ಚು ವಯಸ್ಸು ಆಗಿರುವವರು ೧೫,೦೯೨ ದಿವ್ಯಾಂಗ ೧೮,೭೭೬ ಓಟು ಸೇರಿ ೩೩,೮೬೮ ಮತದಾರರಿಗೆ ೧೨ ಡಿ ಅರ್ಜಿಗಳನ್ನು ವಿತರಿಸಲಾಗಿರುತ್ತದೆ. ಎರಡು ವರ್ಗದ ಮತದಾರರ ಪೈಕಿ ೮೫ ವರ್ಷ ಮೇಲ್ಪಟ್ಟ ೨೬೩೫ ಮತ್ತು ದಿವ್ಯಾಂಗ ೧೩೭೩ ಸೇರಿ ಒಟ್ಟು ೪೦೦೯ ಮತದಾರರು ಅಂಚೆ ಮತ ಪತ್ರ ಮೂಲಕ ಮತದಾನ ಮಾಡಲು ಇಚ್ಚಿಸಿರುವುದರಿಂದ ಇವರುಗಳಿಗೆ ಅಂಚೆ ಮತ ಪತ್ರ ನೀಡಿ ಮತದಾನ ಮಾಡಿಸುವ ಕುರಿತು ವಿಧಾನದಂತೆ ಮತಗಟ್ಟೆ ಅಧಿಕಾರಿಗಳ ತಂಡ ಕಾರ್ಯ ನಿರ್ವಹಿಸಲಿದೆ ಎಂದರು.

ಅಂಚೆ ಮತಪತ್ರ ಮತದಾರರ ಸಂಖ್ಯೆ ಮತ್ತು ಸೆಕ್ಟರ್ ಆಧಾರದ ಮೇಲೆ ಮಾರ್ಗ ನಕ್ಷೆಗಳನ್ನು ಸಿದ್ಧಪಡಿಸುವುದು. ಮತಗಟ್ಟೆಗಳಿಗೆ ಭೇಟಿ ನೀಡುವ ದಿನಾಂಕ ಮತ್ತು ಸಮಯವನ್ನು ಮೊದಲೇ ನಿಗಧಿ ಪಡಿಸುವುದು. ಮತಗಟ್ಟೆಗಳಿಗೆ ಭೇಟಿ ನೀಡುವ ದಿನಾಂಕ ಮತ್ತು ಸಮಯವನ್ನು ನಿಗಧಿಪಡಿಸಿರುವ ಅನುಮೋದಿತ ಸೆಕ್ಟರ್ ಮಾರ್ಗ ನಕ್ಷೆಯನ್ನು ಅಭ್ಯರ್ಥಿಗಳೊಂದಿಗೆ ಹಂಚಿಕೊಳ್ಳಬೇಕು. ಮತಗಟ್ಟೆಗೆ ತೆರಳುವ ತಂಡದ ಜೊತೆ ಒಬ್ಬರೂ ಪಿ.ಆರ್.ಓ. ಪಿಓ, ಒಬ್ಬರು ಮೈಕ್ರೋ ಅಬ್ಸರ್ವರ್, ಓರ್ವ ಪೊಲೀಸ್ ಸಿಬ್ಬಂದಿ, ಒಬ್ಬ ವಿಡಿಯೋ ಗ್ರಾಫರ್ ಇರುತ್ತಾರೆ. ಮತದಾರರಿಂದ ಮತದಾನದ ಪ್ರಕ್ರಿಯೆಯನ್ನು ಮೇಲೆ ನೀಡಿರುವ ಸೂಚನೆಗಳಂತೆ ಹಾಗೂ ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಗಳಂತೆ ಕಟ್ಟು ನಿಟ್ಟಾಗಿ ನಿರ್ವಹಿಸಲು ಸೂಚಿಸಿದೆ ಎಂದು ಹೇಳಿದರು.

Continue Reading

Trending

error: Content is protected !!