Mandya
ಪೆಟ್ರೋಲ್ – ಡೀಸೆಲ್ ಹೆಚ್ಚಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮಂಡ್ಯ : ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲೆಯ ವಿವಿದೆಡೆ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಿದರು.

ಜಿಲ್ಲಾ ಕೇಂದ್ರ ಮಂಡ್ಯ ನಗರ ತಾಲೂಕು ಕೇಂದ್ರಗಳಲ್ಲಿ ಪಕ್ಷದ ಕಾರ್ಯಕರ್ತರು ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಪೆಟ್ರೋಲ್-ಡಿಸೇಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಅವೈಜ್ಞಾನಿಕವಾದದ್ದು. ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ, ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ರಾಜ್ಯ ಸರ್ಕಾರ ಜನರ ಜೇಬಿಗೆ ಕೈ ಹಾಕಿದೆ. ಬೆಲೆ ಏರಿಕೆಯಿಂದಾಗಿ ಮುಂಬರುವ ದಿನಗಳಲ್ಲಿ ಸಾರಿಗೆ ಹಾಗೂ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಳವಾಗಲಿದೆ. ಮಧ್ಯಮ ವರ್ಗ ಹಾಗೂ ಬಡವರ ಜೀವನ ದುಸ್ತರವಾಗಲಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ಸಹಜವಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಲಿದೆ. ಇದರಿಂದಾಗಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಇನ್ನೂ ದುಬಾರಿಯಾಗಲಿದೆ. ಹಾಗಾಗಿ ಈ ಕೂಡಲೇ ತೈಲ ಬೆಲೆ ಏರಿಕೆ ಮಾಡಿರುವುದನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು .
ಮುಖಂಡರಾದ ಅಶೋಕ್ ಜಯರಾಂ, ವಸಂತ್‌ಕುಮಾರ್, ಸಿ.ಟಿ.ಮಂಜುನಾಥ್, ಶಿವಕುಮಾರ ಆರಾಧ್ಯ, ವಿವೇಕ್, ಹೊಸಹಳ್ಳಿ ಶಿವು, ಚಾಮರಾಜು, ಸಿದ್ದರಾಜುಗೌಡ, ಭೀಮೇಶ್, ಶಂಕರ್, ಚಂದ್ರು ನೇತೃತ್ವ ವಹಿಸಿದ್ದರು.

ಪಾಂಡವಪುರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಐದು ದ್ವೀಪದ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶ್ರೀರಂಗಪಟ್ಟಣದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟಿಸಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು.
Mandya
ಫೆ.28ಕ್ಕೆ ಮೈಸೂರು ಷುಗರ್ ಕಂಪನಿಯ ಸರ್ವ ಸದಸ್ಯರ ಸಾಮಾನ್ಯ ಸಭೆ : ಸಿ.ಡಿ.ಗಂಗಾಧರ್
ಮಂಡ್ಯ: ದಿ ಮೈಸೂರು ಷುಗರ್ ಕಂಪನಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಫೆ.18 ರಂದು ಮೈಶುಗರ್ ಕಾರ್ಖಾನೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20214-15ನೇ ಸಾಲಿನಲ್ಲಿ ಅಂದಿನ ಅಧ್ಯಕ್ಷ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಆಯೋಜಿಸಿದ್ದರು. ಅಂದಿನಿಂದ ಹತ್ತು ವರ್ಷಗಳು ಯಾವುದೇ ಸಭೆ ಮಾಡಿರಲಿಲ್ಲ. ಇದೀಗ 2015-16ನೇ ಸಾಲಿನ ಸಭೆಯನ್ನು ಅಂದು ಬೆಳಿಗ್ಗೆ10 ಗಂಟೆಗೆ, 2016-17ನೇ ಸಾಲಿನ ಸಭೆಯನ್ನು ಮಧ್ಯಾಹ್ನ12ಗಂಟೆಗೆ ಆಯೋಜಿಸಲಾಗಿದೆ ಎಂದರು.

ಮೈಶುಗರ್ ಕಂಪನಿಯ82 ಹಾಗೂ83ನೇ ಸಾಲಿನ ವಾರ್ಷಿಕ ವರದಿಯನ್ನು ವಿತರಣೆ ಮಾಡಲಾಗುತ್ತಿದೆ. ಆಡಿಟ್ ವರದಿಯನ್ನು ಸದಸ್ಯರು ಕಂಪನಿಯಿಂದ ಪಡೆಯಬಹುದಾಗಿರುತ್ತದೆ. ಸದಸ್ಯರು ಯಾವುದೇ ಪ್ರಶ್ನೆ ಕೇಳುವುದಿದ್ದರೆ ಫೆ.12ನೇ ತಾರೀಖಿನೊಳಗೆ ಲಿಖಿತ ರೂಪದಲ್ಲಿ ನೀಡುವಂತೆ ಮನವಿ ಮಾಡಿದರು.
ಮೈಶುಗರ್ ಕಂಪನಿಗೆ ಸಂಬಂಧಿಸಿದಂತೆ 2017ರಿಂದ 2025ರವರೆಗಿನ ವಾಷಿರ್ಕ ವರದಿಯೂ ಸಿದ್ದವಾಗಿದೆ. ಅದನ್ನೂ ಸಂಪೂರ್ಣವಾಗಿ ಐಟಿ ಫೈಲ್ ಮಾಡಿಸಿ ಅಂತಿಮ ಮಾಡಲಾಗುವುದು. ಈ ಮೂಲಕ ಕಂಪನಿಯ ಶೇರುದಾರರಿಗೆ ಮಾಹಿತಿ ಒದಗಿಸಲಾಗುವುದು. ಕಳೆದ ಎರಡು ವರ್ಷಗಳಿಂದ ಕಾರ್ಖಾನೆಯನ್ನು ಸಬಲೀಕರಣಗೊಳಿಸು300 ಕೋಟಿ ಗೂ ಹೆಚ್ಚು ಆರ್ಥಿಕ ಶಕ್ತಿ ತುಂಬಿರುವ ಸಲುವಾಗಿ ಸಭೆಯಲ್ಲಿ ಮಾಹಿತಿ ನೀಡಲಾಗುವುದು. ಸಭೆಗೆ ಕಾರ್ಖಾನೆಯ ಸಂಸ್ಥಾಪಕ ಕೋಲ್ಮನ್ ಅವರ ಕುಟುಂಬದಿಂದ ಯಾರನ್ನಾದರೂ ಓರ್ವ ಸದಸ್ಯರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಸರಕಾರದಿಂದ113.5 ಕೋಟಿ ಸರಕಾರದಿಂದ ಆರ್ಥಿಕ ಶಕ್ತಿ ನೀಡಲಾಗಿದೆ. ಸರಕಾರೇತರವಾಗಿ2024ರ ಜುಲೈನಲ್ಲಿ ಐಟಿ ಮುಕ್ತವಾಗಿದ್ದೇವೆ. 127 ಕೋಟಿ ಜಿಓಗೆ ಸರಕಾರಿ ಆದೇಶವಾಗಿದೆ. 300 ಕೋಟಿ ಬೆಲೆ ಬಾಳುವ 27ಎಕರೆ ಭೂಮಿಯ ವಶಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಹಂಗಾಮಿಗೆ5.70 ಲಕ್ಷ ಟನ್ ಒಪ್ಪಿಗೆ ಮಾಡಿಕೊಂಡಿದ್ದು, ಎಲ್ಲವನ್ನು ನುರಿಸುವ ಪ್ರಯತ್ನ ಮಾಡಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕೌಡ್ಲೆ ಚನ್ನಪ್ಪ, ಸ್ವಾಮೀಗೌಡ, ಸುಂಡಹಳ್ಳಿ ಮಂಜುನಾಥ ಇತರರಿದ್ದರು.
Mandya
14 ಮಂದಿ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಿಸಿದ ಎಂ.ಎ.ಹಾಲಪ್ಪ
ಮದ್ದೂರು: ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ 14 ಮಂದಿ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು ಎಂದು ಯೋಜನಾಧಿಕಾರಿ ಎಂ.ಎ.ಹಾಲಪ್ಪ ತಿಳಿಸಿದರು.
ತಾಲೂಕಿನ ಆತಗೂರು ಹೋಬಳಿಯ ಯರಗನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ಗಳನ್ನು ವಿತರಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರಹೆಗ್ಗಡೆ ದಂಪತಿ ಆಶಯದಂತೆ ಆಸಹಾಯಕ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು 1 ಸಾವಿರದಿಂದ 3 ಸಾವಿರದವರೆಗೆ ಮಾಶಾಸನ ನೀಡಲಾಗುತ್ತಿದೆ ಎಂದರು.
ಇದೇ ರೀತಿ ಮೂಲ ಸೌಕರ್ಯಗಳಿಂದ ವಂಚಿತರಾದ ಕುಟುಂಬಗಳಿಗೆ ವಾತ್ಸಲ್ಯ ಮನೆ, ಶೌಚಾಗೃಹ, ಸ್ನಾನಗೃಹ, ಮನೆ ರಿಪೇರಿ, ಸೋಲಾರ್ ವ್ಯವಸ್ಥೆ ಇತ್ಯಾದಿ ವ್ಯವಸ್ಥೆಗಳನ್ನು ಶ್ರೀ ಕ್ಷೇತ್ರದ ವತಿಯಿಂದ ಒದಗಿಸಿಕೊಡಲಾಗುತ್ತಿದೆ. ತಾಲೂಕಿನಲ್ಲಿ 81 ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡಲಾಗುತ್ತಿದೆ ಎಂದ ಅವರು, ರಾಜ್ಯದಾದ್ಯಂತ ಒಂದೇ ದಿನ ವಾತ್ಸಲ್ಯ ಕಿಟ್ ವಿತರಣೆ ನಡೆಯಿತು ಎಂದು ಹೇಳಿದರು.

ಮುಖಂಡರಾದ ರಾಮಕೃಷ್ಣ ಯರಗನಹಳ್ಳಿ, ಸಚಿನ್ ಯರಗನಹಳ್ಳಿ, ಪ್ರೀತಂ ಕದಲೂರು, ಮಂಜು ತಗ್ಗಳ್ಳಿ, ಸುಕನ್ಯಾ ಹೊಸಳ್ಳಿ, ಕೃಷ್ಣ ಕಿಳಘಟ್ಟ, ನಾಗರಾಜ್ ದೊಡ್ಡರಸಿನಕೆರೆ, ಚಿಕ್ಕೋನು ದೊಡ್ಡರಸಿನಕೆರೆ, ವೆಂಕಟೇಶ್ ಇದ್ದರು.
Mandya
ಅರ್ಹ ಮಕ್ಕಳು ಜಂತು ನಿವಾರಕ ಮಾತ್ರೆಯಿಂದ ವಂಚಿತರಾಗದಿರಲಿ: ಡಾ. ಶ್ರೀಧರ್
ಶ್ರೀರಂಗಪಟ್ಟಣ: ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದಡಿಯಲ್ಲಿ ಯಾವುದೇ ಮಗು ಜಂತು ನಿವಾರಕ ಮಾತ್ರೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕೆಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ್ ಸಿ ಎಂ ಹೇಳಿದರು.
ಅವರು ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದ ಅಂಗವಾಗಿ ಅಧಿಕಾರಿಗಳಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳು ಮತ್ತು ಹದಿಹರೆಯದವರಲ್ಲಿ ಕಂಡುಬರುವ ಜಂತು ಬಾಧೆ, ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟುವ ಸಲುವಾಗಿ ರಾಜ್ಯಾದ್ಯಂತ ಫೆ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣ ದಿನ ಹಮ್ಮಿಕೊಳ್ಳಲಾಗಿದ್ದು 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತು ನಿವಾರಣ ಅಲ್ಬಂಡಾಜೋಲ್ ಮಾತ್ರೆಗಳನ್ನು ಅಂಗನವಾಡಿ ಕೇಂದ್ರದ ಮಕ್ಕಳಿಗೆ,ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತಪ್ಪದೆ ನೀಡಬೇಕು ಜತೆಗೆ ಈ ಬಗ್ಗೆ ಪೋಷಕರಿಗೆ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಂತುಹುಳು ನಿವಾರಣ ಕಾರ್ಯಕ್ರಮದ ಬಿತ್ತಿ ಪತ್ರ ಬಿಡುಗಡೆಗೊಳಿಸಿದರು. ತರಬೇತಿ ಕಾರ್ಯಗಾರದಲ್ಲಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್,ಜಿ ಬಿ ಹೇಮಣ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯರಾಮ್ ಟಿ ಬಿ,ಚಿಕ್ಕ ಬೋರಯ್ಯ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್,ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪುಣ್ಯವತಿ, ಶಾಂತರಾಮ,ನರ್ಸಿಂಗ್ ಅಧಿಕಾರಿ ಕುಸುಮ,ವಸತಿ ಶಾಲಾ ನರ್ಸಿಂಗ್ ಅಧಿಕಾರಿ ಶಿವಮ್ಮ,ತ್ರಿವೇಣಿ,ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತಾ,ಲಲಿತಾ ಹಾಗೂ ಎಲ್ಲಾ ಶಾಲೆಯ ವಿಜ್ಞಾನ ಶಿಕ್ಷಕರು,ಕ್ಷೇತ್ರ ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Chikmagalur10 hours agoವೈದ್ಯಕೀಯ ವಿಭಾಗದ ಕ್ಯಾಪ್ಟನ್ ಡಾ.ಸಾತ್ವಿಕ್ ಅರುಣ್ಗೆ ಅದ್ದೂರಿ ಸ್ವಾಗತ ಕೋರಿದ ಗ್ರಾಮಸ್ಥರು
-
Hassan6 hours agoಅಸಹಾಯಕ ಮಹಿಳೆಗೆ ಧಮ್ಕಿ ಹಾಕಿದ ಎಎಸ್ಐ ದೇವರಾಜ್
-
Special17 hours agoಪಿ ಎಂ ಆವಾಸ್ ಯೋಜನೆಯಿಂದ ಮನೆಕಟ್ಟಲು ಸಬ್ಸಿಡಿ!
-
Hassan8 hours agoರಾಷ್ಟ್ರೀಯ ಚಿಂತನೆ ಮೈಗೂಡಿಸಿಕೊಳ್ಳಿ : ಶಾಸಕ ಸಿಮೆಂಟ್ ಮಂಜು
-
Chamarajanagar13 hours agoಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ: ಹನೂರಿನ ಶಾಲೆಗಳಲ್ಲಿ ಅರಿವು ಮೂಡಿಸಿದ ರೈತ ದಂಪತಿ
-
Kodagu6 hours agoಕುಂದಚೇರಿ ಗ್ರಾ.ಪಂ. ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ
-
State10 hours agoಉಳಿತಾಯದ ಹೂಡಿಕೆಗಳು MSIL ಸಂಸ್ಥೆಯಲ್ಲಿ ಸುಭದ್ರ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
-
Hassan7 hours agoಮನೆಗಳ್ಳನ ಬಂಧನ : 140 ಗ್ರಾಂ.ಚಿನ್ನ ವಶ
