Connect with us

Mandya

ಕೆಆರ್ ಎಸ್ ಸುರಕ್ಷತಾ ಸಮಿತಿ ರಚಿಸಲು ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Published

on

ಮಂಡ್ಯ: ಜಿಲ್ಲೆಯ ಜೀವನಾಡಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯದ ಸುರಕ್ಷತೆ ಹಿನ್ನೆಲೆಯಲ್ಲಿ ಟ್ರಯಲ್ ಬ್ಲಾಸ್ಟ್ ಸ್ಥಗಿತಗೊಳಿಸಿ, ಅಣೆಕಟ್ಟೆ ಸುರಕ್ಷತಾ ಮಸೂದೆ ಅನ್ವಯ ಅಣೆಕಟ್ಟೆ ಸುರಕ್ಷತಾ ಸಮಿತಿ ರಚಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಗರದ ಸರ್.ಎಂ.ವಿ ಪ್ರತಿಮೆ ಬಳಿ ಧರಣಿ ನಡೆಸಿ, ಕೆಆರ್ ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾನಿರತ ರೈತರು, ಟ್ರಯಲ್ ಬ್ಲಾಸ್ಟ್ ಸ್ಥಗಿತಗೊಳಿಸಲು ಮುಂದಾಗುವಂತೆ ಒತ್ತಾಯಿಸಿದರು.

ಮಂಡ್ಯ ಜಿಲ್ಲೆಯ ಜನರ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಗೆ ನೂರು ವರ್ಷ ತುಂಬುತಿದೆ. ಇಷ್ಟೊಂದು ಹಳೆಯದಾದ ಪಾರಂಪರಿಕ ಅಣೆಕಟ್ಟೆ ಸಮೀಪದ ಬೇಬಿ ಬೆಟ್ಟ ಸುತ್ತಮುತ್ತಲ ಪ್ರದೇಶದಲ್ಲಿ ಸ್ಪೋಟಕ ಕಾಯ್ದೆ, ಅರಣ್ಯ ಸಂರಕ್ಷಣಾ ಕಾಯ್ದೆ, ಪರಿಸರ ಕಾಯ್ದೆ ಉಲ್ಲಂಘಿಸಿ ಮೆಗ್ಗರ್ ಬ್ಲಾಸ್ಟ್, ಬೋರ್ ಬ್ಲಾಸ್ಟ್ ಬಳಸಿ ಅಕ್ರಮ ಗಣಿಗಾರಿಕೆ ನಡೆಸಲಾಗಿದ್ದು, 2018ರ ಸೆಪ್ಟೆಂಬರ್ ನಲ್ಲಿ ಇಂತಹ ಸ್ಫೋಟ ದಿಂದ ಸೃಷ್ಟಿಯಾದ ಕಂಪನದ ಅಪಾಯಕಾರಿ ಅಲೆ ಕೆಆರ್‌ಎಸ್‌ನಲ್ಲಿರುವ ಭೂಕಂಪನ ಮಾಪನ ಕೇಂದ್ರ ದಾಖಲು ಮಾಡಿಕೊಂಡಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ನೀಡಿದ ನಿರ್ದೇಶನದಂತೆ ಗಣಿಗಾರಿಕೆ ನಿಷೇಧಿಸಲಾಗಿದೆ ಎಂದು ಹೇಳಿದರು.

ಅಕ್ರಮ ಗಣಿಗಾರಿಕೆ ಲಾಭದ ಮೇಲೆ ಕಣ್ಣಿಟ್ಟಿರುವ ಗಣಿ ಮಾಲೀಕರು ಪರವಾನಿಗೆ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ಮುಂದುವರೆಸಿದ್ದು, ಅಲ್ಲದೆ ಗಣಿಗಾರಿಕೆ ಸುಗಮವಾಗಿ ಮುಂದುವರಿಸಲು ನ್ಯಾಯಾಲಯದ ನೆರವು ಪಡೆಯಲು ಮುಂದಾಗಿದ್ದು ಇದರ ಪರಿಣಾಮವಾಗಿ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿದೆ ಎಂದು ಆರೋಪಿಸಿದರು.

ಕೃಷ್ಣರಾಜಸಾಗರ ರಕ್ಷಣೆಗೆ ಜಿಲ್ಲಾಡಳಿತ ನಿರ್ಲಕ್ಷ ತೋರಿದ್ದು ಮುಂದಾಗುವ ಅನಾಹುತ ತಪ್ಪಿಸಲು ಅಣೆಕಟ್ಟೆ ಸುರಕ್ಷತಾ ಮಸೂದೆ 2021ರ ಪ್ರಕಾರ ಕೂಡಲೇ ಅಣೆಕಟ್ಟು ಸುರಕ್ಷತಾ ಸಮಿತಿ ರಚಿಸಬೇಕು. ಪಾರಂಪರಿಕ ಅಣೆಕಟ್ಟೆ ಉಳಿಸಿಕೊಳ್ಳಲು ಟ್ರಯಲ್ ಬ್ಲಾಸ್ಟ್ ಅನ್ನು ಸ್ಥಗಿತಗೊಳಿಸಬೇಕು, ಕಾಯಿದೆ ಉಲ್ಲಂಘಿಸಿ ಅಕ್ರಮ ಗಣಿಗಾರಿಕೆ ನಡೆಸಿರುವ ಗಣಿ ಮಾಲೀಕರಿಂದ ಬಾಕಿ ಇರುವ ರಾಜಧನವನ್ನು ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಮುಖಂಡರಾದ ಸುನೀತಾ ಪುಟ್ಟಣ್ಣಯ್ಯ, ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ಚಂದ್ರಶೇಖರ್, ಜಿ.ಎಸ್ಲಿಂಗಪ್ಪಾಜಿ, ತುಮಕೂರು ಜಿಲ್ಲೆಯ ರೈತ ಮುಖಂಡ ಶಂಕರ್, ಮೈಸೂರು ಜಿಲ್ಲೆಯ ಹೊಸಕೋಟೆ ಬಸವರಾಜ್, ಸಿಐಟಿಯು ಸಂಘಟನೆಯ ಸಿ.ಕುಮಾರಿ, ಕರ್ನಾಟಕ ಜನಶಕ್ತಿ ಸಂಘಟನೆಯ ಪೂರ್ಣಿಮಾ, ಸಾಮಾಜಿಕ ಕಾರ್ಯಕರ್ತ ಕೆ.ಸಿ.ರವೀಂದ್ರ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಬೃಹತ್ ಜನಜಾಗೃತಿ ಜಾಥಾ, ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿ, ಎಸ್‌ಪಿ

Published

on

ಮದ್ದೂರು: ಅಜ್ಞಾನ, ಅರಿವಿನ ಕೊರತೆಯಿಂದ ತಮ್ಮ ಮೇಲಿರುವ ಭಾರ ಕಳೆದುಕೊಳ್ಳಬೇಕೆಂಬ ಉದ್ದೇಶದಿಂದ 18 ವರ್ಷಕ್ಕೂ ಮೊದಲೇ ಹೆಣ್ಣು ಮಕ್ಕಳ ಮದುವೆ ಮಾಡಿಸುವ ಮೂಲಕ ಪಾಲಕರು ಅವರ ಬದುಕನ್ನು ಬಲಿ ಕೊಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶಾನಲಯ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯ ವಿವಾಹ ಮುಕ್ತ ಮಂಡ್ಯ ಜಿಲ್ಲಾ ಅಭಿಯಾನದ ಅಂಗವಾಗಿ ಬಾಲ್ಯ ವಿವಾಹ ವಿರೋಧಿಸಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬೃಹತ್ ಜನಜಾಗೃತಿ ಜಾಥಾ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಲವು ಅನಿಷ್ಠ ಪದ್ಧತಿಗಳ ಪೈಕಿ ಬಾಲ್ಯ ವಿವಾಹವೂ ಒಂದಾಗಿದ್ದು, ಹೆಣ್ಣು ಮಕ್ಕಳ ಬದುಕಿಗೆ ಮಾರಕವಾಗಿ ಪರಿಣಮಿಸಿದೆ ಇಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯವಾಗಲಿದೆ ಎಂದರು.

ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು, ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಸಹ ಸಾರ್ವಜನಿಕರ ಹೊಣೆಯಾಗಿದ್ದು, ಜಿಲ್ಲೆಯಲ್ಲಿ ಬಾಲ್ಯ ವಿವಾಹವು ಕಳೆದ ಮೂರು ವರ್ಷಗಳಿಗೆ ಹೊಲಿಸಿದರೆ ಈ ವರ್ಷ 14 ಪ್ರಕರಣಗಳಿಗೆ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ನಾವೆಲ್ಲರು ಜಾಗೃತರಾಗಬೇಕೆಂದು ಕಿವಿ ಮಾತು ಹೇಳಿದರು.

ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಲವಾರು ಅನಿಷ್ಠ ಪದ್ಧತಿಗಳ ಪೈಕಿ ಬಾಲ್ಯ ವಿವಾಹವೂ ಒಂದು. ಇದು ಪ್ರಮುಖವಾಗಿ ಹೆಣ್ಣು ಮಕ್ಕಳ ಬದುಕಿಗೆ ಮಾರಕವಾಗಿ ಪರಿಣಮಿಸಿದೆ ಇಂತಹ ಪಿಡುಗಿಗೆ ಹಲವಾರು ಹೆಣ್ಣುಮಕ್ಕಳು ತುತ್ತಾಗಿದ್ದಾರೆ ಎಂದರು.

ಈ ಅನಿಷ್ಟ ಪದ್ದತಿ ಹಾಗೂ ಸಾಮಾಜಿಕ ಪಿಡುಗು ಎಂದು ಕೇಂದ್ರ ಸರ್ಕಾರ ಗುರುತಿಸಿ ಅದಕ್ಕಾಗಿಯೇ ಜಾರಿಗೆ ತಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಪ್ರಕಾರ 18 ವರ್ಷದೊಳಗಿನ ಹೆಣ್ಣು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ಮದುವೆ ಶಿಕ್ಷಾರ್ಹ ಅಪರಾಧವಾಗಿದೆ. ಈ ಕಾಯಿದೆ ಪ್ರಕಾರ ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವ ಮೊದಲೇ ಬಾಲ್ಯ ವಿವಾಹ ಮಾಡಿದರೆ ಪಾಲಕರಿಗೆ 2 ವರ್ಷಗಳ ಕಠಿಣ ಜೈಲುವಾಸ, 1 ಲಕ್ಷ ದಂಡ ಇದೆ. ಇದು ಜಾಮೀನು ರಹಿತ ಹಾಗೂ ವಿಚಾರಣಾರ್ಹ ಅಪರಾಧವಾಗಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಆನಂದ್ ಮಾತನಾಡಿ, ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಸಾಕಷ್ಟು ಪ್ರಕರಣಗಳು ದಾಖಲಾಗಿದ್ದವು. ಆದರೆ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಕ್ಕಳ ರಕ್ಷಣಾ ನಿದರ್ೇಶನಾಲಯ, ಅಧಿಕಾರಿಗಳ ಜತೆಗೆ ಸಾಕಷ್ಟು ಜಾಥಾ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷ 14 ಪ್ರಕರಣಗಳಿಗೆ ಇಳಿಕೆಯಾಗಿದ್ದು, ಇನ್ನು ಮುಂದಿನ ದಿನಗಳಲ್ಲಿ ಶೂನ್ಯಕ್ಕೆ ತರಲು ಎಲ್ಲರು ಮುಂದಾಗಬೇಕೆಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ತಾಲೂಕು ಕ್ರೀಡಾಂಗಣದವರೆಗೂ ವಿವಿಧ ಶಾಲಾ, ಕಾಲೇಜು ವಿದ್ಯಾಥರ್ಿಗಳು, ಅಂಗನವಾಡಿ ಕಾರ್ಯಕತರ್ೆಯರು, ಸಹಾಯಕಿರು, ಆಶಾ ಕಾರ್ಯಕತರ್ೆಯರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಹರಿಣಿ, ಎನ್.ಸಿ ನಳಿನಿ, ಶಾಲಾ ಶಿಕ್ಷಣ ಇಲಾಖೆ ಉಪ ನಿದರ್ೇಶಕ ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಆಶಾ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಡಿವೈಎಸ್‌ಪಿ ಯಶವಂತ್ ಕುಮಾರ್, ನಗರಸಭೆ ಪೌರಾಯುಕ್ತೆ ಎಸ್.ಎನ್.ರಾಧಿಕಾ, ಬಿಇಓ ಎಸ್.ಬಿ.ಧನಂಜಯ, ಸಿಡಿಪಿಓ ಅರುಣ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದಶರ್ಿ ಎಂ.ಜೆ.ಸುಮಂತ್, ಸಿಪಿಐ ನವೀನ್ ಕುಮಾರ್ ಮತ್ತಿತರರು ಇದ್ದರು.

Continue Reading

Mandya

ನಾಳೆ ಜೂನಿಯರ್ ಟೋಸ್ ಇಂಟರ್‌ನ್ಯಾಷನಲ್ ಪ್ರೀಸ್ಕೂಲ್‌ನ ಮಂಡ್ಯ ಶಾಖೆ ಲೋಕಾರ್ಪಣೆ : ಚಿರಾಗ್

Published

on

ಮಂಡ್ಯ: ಅಶ್ವಿನಿ ಪುನಿತ್ ರಾಜ್‌ಕುಮಾರ್ ಅವರ ಸಂಸ್ಥಾಪಕ ಸಹಭಾಗಿತ್ವದ ಜೂನಿಯರ್ ಟೋಸ್ ಇಂಟರ್‌ನ್ಯಾಷನಲ್ ಪ್ರೀಸ್ಕೂಲ್‌ನ ಮಂಡ್ಯ ಶಾಖೆಯನ್ನು ಫೆ.5 ರಂದು ಮಧ್ಯಾಹ್ನ 12 ಗಂಟೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ ಶಾಖೆಯ ಪಾಲುದಾರ ಚಿರಾಗ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜೂನಿಯರ್ ಟೋಸ್ ಪ್ರೀಸ್ಕೂಲ್‌ನ 15ಕ್ಕೂ ಹೆಚ್ಚು ಶಾಖೆಗಳಿವೆ. ಮೈಸೂರಿನ ನಂತರ ಮಂಡ್ಯದಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗುತ್ತಿದೆ ಎಂದರು.

ನೂತನ ಶಾಖೆಯನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಮಾಜಿ ಮಂತ್ರಿ ಕೆ.ಗೋಪಾಲಯ್ಯ, ಶಾಕರಾದ ಪಿ.ರವಿಕುಮಾರ್ ಗೌಡ, ಮಧು ಜಿ.ಮಾದೇಗೌಡ, ಎಂ.ಜಿ.ದಿನೇಶ್ ಗೂಳೀಗೌಡ, ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಸಿ.ಭಗವಾನ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಎಡಿಸಿಸಿ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಬಿಬಿಎಂಪಿಯ ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ, ಡಿಐಜಿ ಎನ್.ವಿಷ್ಣುವರ್ಧನ, ಮಂಡ್ಯ ಎಸ್‌ಪಿ ಡಾ.ವಿ.ಜೆ.ಶೋಭರಾಣಿ, ಬೆಂಗಳೂರು ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ರಘುವೀರ್ ಗೌಡ ಹಾಗೂ ಸಂಸ್ಥೆಯ ಸಹ ಸಂಸ್ಥಾಪಕಿ ಅಶ್ವಿನಿ ಪುನಿತ್ ರಾಜ್‌ಕುಮಾರ್ ಭಾಗವಹಿಸುವರು ಎಂದು ಹೇಳಿದರು.

Continue Reading

Mandya

ಫೆ.7ಕ್ಕೆ ನಾನು ಕಾಫಿರ ಪುಸ್ತಕ ಬಿಡುಗಡೆ : ಡಾ.ಸುಧಾಕರ್ ಹೊಸಳ್ಳಿ

Published

on

ಮಂಡ್ಯ: ಅಖಿಲ ಭಾರತ ಸಾಹಿತ್ಯ ಪರಿಷದ್ ಮತ್ತು ಸ್ವರಾಷ್ಟ್ರ ಪ್ರಕಾಶನ ಸಹಯೋಗದಲ್ಲಿ ನಾನು ಕಾಫಿರ ಪುಸ್ತಕ ಬಿಡುಗಡೆ ಸಮಾರಮಭವನ್ನು ಫೆ.7ರಂದು ಬೆಳಿಗ್ಗೆ 10.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕೃತಿಯ ಕತೃ ಡಾ.ಸುಧಾಕರ್ ಹೊಸಳ್ಳಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಭಜಿಸಲು ಅಂಬೇಡ್ಕರ್‌ರನ್ನು ಹಿಂದೂ ಧರ್ಮದ ವಿರುದ್ಧ ಗುರಾಣೀಯಾಗಿ ಬಳಸಲಾಗುತ್ತಿದೆ. ಈ ಸಂಬಂಧ ಹಿಂದೂ ಸಮಾಜದ ಜಾಗೃತಿ ಭಾಗವಹಿsi `ನಾನೂ ಕಾಫಿರ’ ಕೃತಿ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್‍ಯದರ್ಶಿ ಬಿ.ಎಲ್.ಸಂತೋಷ್ ಕಾರ್‍ಯಕ್ರಮ ಉದ್ಘಾಟಿಸಿ, ಪುಸ್ತಕ ಬಿಡುಗಡೆ ಮಾಡುವರು. ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಧ್ಯಕ್ಷತೆ ವಹಿಸುವರು. ಎಸ್‌ಬಿಇಟಿ ಕಾರ್‍ಯದರ್ಶಿ ಡಾ.ಮೀರಾಶಿವಲಿಂಗಯ್ಯ ಹಾಗೂ ಸ್ವರಾಷ್ಟ್ರ ಪ್ರಕಾಶನದ ಮಹಾಪೋಷಕ ಚಂದ್ರಶೇಖರ್ ದಡದಪುರ ಭಾಗವಹಿಸಲಿದ್ದಾರೆ. ಸಂವಿಧಾನ ತಜ್ಞ, ಲೇಖಕ ಡಾ.ಸುಧಾಕರ ಹೊಸಳ್ಳಿ ಉಪಸ್ಥಿತರಿರುವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಪುಸ್ತಕ ಪ್ರೇಮಿ ಎಂ.ಅಂಕೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಇದೇ ವೇಳೆ ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷದ್‌ನ ಜಿಲ್ಲಾಧ್ಯಕ್ಷ ಎಚ್.ಪದ್ಮನಾಭ, ವಿಭಾಗ ಪ್ರಭಾರಿ ಬಿ.ಎಸ್.ಅನುಪಮ ಇದ್ದರು.

Continue Reading

Trending

error: Content is protected !!